ಬೆಂಗಳೂರು: ರಾಜ್ಯವೇ ಬೆಚ್ಚಿಬೀಳುವ ವಿದ್ಯಮಾನವೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಹೈಸ್ಕೂಲ್ ವಿದ್ಯಾರ್ಥಿ/ವಿದ್ಯಾರ್ಥಿನಿಯರ ಸ್ಕೂಲ್ ಬ್ಯಾಗಲ್ಲಿ ಕಾಂಡೊಮ್, ಸಿಗರೇಟ್ ಮತ್ತಿತರ ವಸ್ತುಗಳು ಪತ್ತೆಯಾಗಿರುವುದು ಆತಂಕ ಮೂಡಿಸಿದೆ. ಉಗ್ರ ಚಟುವಟಿಕೆಗಳನ್ನು ನಡೆಸುತ್ತಿರುವ ಆರೋಪದಲ್ಲಿ ಕೇಂದ್ರ ಸರಕಾರ ಪಿಎಫ್‌ಐ ಸಂಘಟನೆಯನ್ನು ನಿಷೇಧಿಸಿದ್ದನ್ನು ಹೈಕೋರ್ಟ್ ಎತ್ತಿಹಿಡಿದಿದೆ. ರಾಜ್ಯದಲ್ಲಿ ೧೦ ಮುಸ್ಲಿಂ ಮಹಿಳಾ ಕಾಲೇಜು ಸ್ಥಾಪನೆಗೆ ವಿರೋಧ ವ್ಯಕ್ತವಾಗಿದೆ. ಬೆಂಗಳೂರಿನ ಚಿಲುಮೆ ಮಾದರಿಯಲ್ಲಿ ವಿಜಯಪುರದಲ್ಲೂ ಗೋಲ್ ಮಾಲ್ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಹಾವೇರಿಯಲ್ಲಿರುವ ಕರ್ನಾಟಕ ಜಾನಪದ ವಿವಿಯ 100 ಎಕರೆಗೂ ಹೆಚ್ಚು ಭೂಮಿ ಒತ್ತುವರಿ ಮಾಡಿದ್ದನ್ನು ವಿಸ್ತಾರ ನ್ಯೂಸ್ ವರದಿ ಮಾಡಿದೆ. ಇದರ ಬೆನ್ನಿಗೇ ಅದನ್ನು ತೆರವು ಮಾಡುವ ಭರವಸೆಯನ್ನು ಉನ್ನತ ಶಿಕ್ಷಣ ಸಚಿವರು ನೀಡಿದ್ದಾರೆ. ಹೀಗೆ ಎಲ್ಲ ವಲಯಗಳ ಮಹತ್ವದ ಸುದ್ದಿಗಳನ್ನು ಒಳಗೊಂಡ ವಿಸ್ತಾರ TOP 10 NEWS bulletin ಇಲ್ಲಿದೆ.
೧. ಬೆಂಗಳೂರು ಹೈಸ್ಕೂಲ್ ಮಕ್ಕಳ ಬ್ಯಾಗ್‌ಗಳಲ್ಲಿ ಕಾಂಡೋಮ್ಸ್, ಸಿಗರೇಟ್ಸ್, ಗರ್ಭನಿರೋಧಕ ಮಾತ್ರೆ!
ವಿದ್ಯಾರ್ಥಿಗಳ ಸ್ಕೂಲ್ ಬ್ಯಾಗ್‌ನಲ್ಲಿ ಪುಸ್ತಕಗಳು, ನೋಟ್‌ಬುಕ್ ಬಿಟ್ಟು ಬೇರೆ ಇನ್ನೇನು ಇರಲು ಸಾಧ್ಯ? ನಿಮ್ಮ ಊಹೆ ತಪ್ಪು, ಬೆಂಗಳೂರಿನ ಕೆಲವು ಶಾಲೆಗಳ 8, 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳ ಬ್ಯಾಗಿನಲ್ಲಿ(School Bag) ಕಾಂಡೋಮ್ಸ್, ಗರ್ಭ ನಿರೋಧಕಗಳು, ಲೈಟರ್ಸ್, ಸಿಗರೇಟ್ಸ್, ವೈಟ್ನರ್ ಮತ್ತು ಹಣ ದೊರೆತಿದೆ. ಇನ್ನೂ ಕೆಲವು ಮಕ್ಕಳ ನೀರಿನ ಬಾಟಲಿಯಲ್ಲಿ ಮದ್ಯ ಕೂಡ ಸಿಕ್ಕಿದೆ. ಸ್ಕೂಲ್ ಮಕ್ಕಳ ಬ್ಯಾಗಿನಲ್ಲಿ ದೊರೆತ ಈ ವಸ್ತುಗಳನ್ನ ಕಂಡು ಅಧಿಕಾರಿಗಳೇ ಹೌಹಾರಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
2. ಪಿಎಫ್‌ಐ ನಿಷೇಧ: ಕೇಂದ್ರ ಸರಕಾರದ ಆದೇಶ ಎತ್ತಿ ಹಿಡಿದ ರಾಜ್ಯ ಹೈಕೋರ್ಟ್
ದೇಶವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ, ಯುವಜನತೆಗೆ ಉಗ್ರ ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿರುವ ಆರೋಪದೊಂದಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶವನ್ನು ಕರ್ನಾಟಕ ಹೈಕೋರ್ಟ್ ಬುಧವಾರ ಎತ್ತಿ ಹಿಡಿದಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
3. ರಾಜ್ಯದಲ್ಲಿ 10 ಮುಸ್ಲಿಂ ಕಾಲೇಜು ಸ್ಥಾಪನೆಗೆ ವಿರೋಧ: ಬಲಿದಾನವಾದ್ರೂ ಸರಿ ತಡೀತೀವಿ ಎಂದ ಮುತಾಲಿಕ್
ರಾಜ್ಯದಲ್ಲಿ ಮುಸ್ಲಿಂ ಹೆಣ್ಮಕ್ಕಳಿಗಾಗಿಯೇ ಪ್ರತ್ಯೇಕ 10 ಕಾಲೇಜುಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ಕೆಲವು ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ವಕ್ಫ್ ಬೋರ್ಡ್ ಸರಕಾರ ನೀಡುವ ಅನುದಾನದಲ್ಲಿ ಪ್ರತಿ ಕಾಲೇಜಿಗೆ ೨.೫ ಕೋಟಿ ರೂ. ನೀಡುವ ಬಗ್ಗೆ ನಿರ್ಧಾರ ಮಾಡಲಾಗಿದೆ. ವಕ್ಫ್ ಬೋರ್ಡ್ ಮತ್ತು ಸರಕಾರದ ನಡುವಿನ ಚರ್ಚೆಯ ವೇಳೆ ಈ ತೀರ್ಮಾನಕ್ಕೆ ಬರಲಾಗಿದ್ದು, ಸದ್ಯವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾಲೇಜಿಗೆ ಶಿಲಾನ್ಯಾಸ ನೆರವೇರಿಸುವ ನಿರೀಕ್ಷೆ ಇದೆ. ಇದನ್ನು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ತೀವ್ರವಾಗಿ ವಿರೋಧಿಸಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
೪. ಚಿಲುಮೆ ಮಾದರಿಯಲ್ಲೇ ವಿಜಯಪುರದಲ್ಲೂ ಗೋಲ್‌ಮಾಲ್: ಸಿಕ್ಕಿಬಿದ್ದವನ ಹಿಂದಿದ್ದಾರಾ ಯತ್ನಾಳ್?
ರಾಷ್ಟ್ರಾದ್ಯಂತ ಸುದ್ದಿ ಮಾಡಿದ ಬೆಂಗಳೂರಿನ ಮತದಾರರ ಮಾಹಿತಿ ಕಳವು ಪ್ರಕರಣದ ಮಾದರಿಯಲ್ಲೇ ವಿಜಯಪುರದಲ್ಲೂ ದೊಡ್ಡ ಮಟ್ಟದ ಗೋಲ್‌ಮಾಲ್ ನಡೆದಿದೆ ಎಂಬ ಆರೋಪ ಗಂಭೀರವಾಗಿ ಕೇಳಿಬಂದಿದೆ. ವಿಜಯಪುರ ನಗರದಲ್ಲಿ ಮನೆ ಮನೆಗೆ ಹೋಗಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡುವ ಹೆಸರಿನಲ್ಲಿ ಮಾಹಿತಿ ಸಂಗ್ರಹಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ. ಹೀಗೆ ಸಿಕ್ಕಿಬಿದ್ದವನನ್ನು ಮಹಾಂತೇಶ ಪೂಜಾರಿ ಎಂದು ಗುರುತಿಸಲಾಗಿದ್ದು, ಈತನನ್ನು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಕಡೆಯವನು ಎಂಬ ಮಾತು ಕೇಳಿಬರುತ್ತಿದೆ. ಪೂರ್ಣ ವರದಿಗೆ ಕ್ಲಿಕ್ ಮಾಡಿ
೫. ಕ್ರಿಮಿನಲ್ ಹಿನ್ನೆಲೆ ಬಗ್ಗೆ ಫೈಟರ್ ರವಿಯಿಂದ ಮಾಹಿತಿ ಕೇಳಿದ ನಳಿನ್ ಕುಮಾರ್ ಕಟೀಲ್
ಬೆಂಗಳೂರು: ರೌಡಿಸಂ ಮತ್ತು ಗೂಂಡಾ ಹಿನ್ನೆಲೆಯ (Criminal politics) ವ್ಯಕ್ತಿಗಳು ಪಕ್ಷ ಸೇರುತ್ತಿದ್ದಾರೆ ಎಂಬ ಆಕ್ಷೇಪಗಳನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಬಿಜೆಪಿ ಈ ಬಗ್ಗೆ ಪರಿಶೀಲನೆ ಮುಂದಾಗಿದೆ. ಯಾವ ಕಾರಣಕ್ಕೂ ಸೈಲೆಂಟ್ ಸುನಿಲ್‌ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಈಗಾಗಲೇ ಪಕ್ಷ ಸೇರಿರುವ ನೆಲಮಂಗಲದ ಫೈಟರ್ ರವಿ ಅಲಿಯಾಸ್ ಮಲ್ಲಿಕಾರ್ಜುನ್‌ನಿಂದ ಕ್ರಿಮಿನಲ್ ಹಿನ್ನೆಲೆಯ ಬಗ್ಗೆ ಮಾಹಿತಿ ಕೇಳಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
೬. ಮುಸ್ಲಿಮರನ್ನು ಬೆದರುಗೊಂಬೆ ಆಗಿಟ್ಟುಕೊಂಡು ದೇಶ ಒಡೆಯುತ್ತಿರುವ ಆರೆಸ್ಸೆಸ್: ಸಿದ್ದರಾಮಯ್ಯ
ನಮ್ಮಲ್ಲಿ ಜಾತಿ ವ್ಯವಸ್ಥೆ ಇನ್ನೂ ಹಾಗೆಯೇ ಇದೆ. ಆರ್‌ಎಸ್‌ಎಸ್‌ನವರು ಬದಲಾವಣೆ ಬೇಡ ಎಂದು ಹೇಳುವವರು. ಅವರಿಗೆ ದೌರ್ಜನ್ಯ ಮಾಡಲು, ಶೋಷಣೆ ಮಾಡಲು ಅಸಮಾನತೆ ಇರಬೇಕು. ಮುಸ್ಲಿಂರನ್ನು ಬೆದರುಗೊಂಬೆಯಾಗಿಟ್ಟುಕೊಂಡು ದೇಶ ಒಡೆಯುವ ಕೆಲಸ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
೭. ಕರ್ನಾಟಕ ಜಾನಪದ ವಿವಿಯ 100 ಎಕರೆಗೂ ಹೆಚ್ಚು ಭೂಮಿ ಒತ್ತುವರಿ; ಜಿಲ್ಲಾಡಳಿತಕ್ಕೆ ಮೊರೆ
ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಗೊಟಗೋಡಿಯಲ್ಲಿರುವ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ (Janapada University) ೧66 ಎಕರೆ ಜಮೀನಿನಲ್ಲಿ 1೧೩ ಎಕರೆಗೂ ಹೆಚ್ಚಿನ ಭೂಮಿ ಒತ್ತುವರಿಯಾಗಿದೆ. ಪ್ರಸ್ತುತ ವಿವಿ ಇರುವ ಪ್ರದೇಶದ ಹೊರತಾಗಿ ಉಳಿದ ಎಲ್ಲ ಕಡೆಯೂ ಒತ್ತುವರಿಯನ್ನು ಮಾಡಿಕೊಳ್ಳಲಾಗಿದೆ ಎಂದು ವಿವಿ ಆಡಳಿತ ಮಂಡಳಿ ಈಗ ಜಿಲ್ಲಾಡಳಿತದ ಕದ ತಟ್ಟಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ವಿಸ್ತಾರ ವರವಿ ಇಂಪ್ಯಾಕ್ಟ್: ಒತ್ತುವರಿ ಸಂಬಂಧ ಪೊಲೀಸ್ ದೂರು ಕೊಟ್ಟರೆ ತೆರವು: ಅಶ್ವತ್ಥನಾರಾಯಣ
8. ಗುಜರಾತ್‌ನಲ್ಲಿ ನಾಳೆ ಮೊದಲ ಹಂತದ ಮತದಾನ, ಹೇಗಿದೆ ಚುನಾವಣೆ ಹವಾಮಾನ?
ದೇಶದ ಗಮನ ಸೆಳೆದಿರುವ, ೨೦೨೪ರ ಲೋಕಸಭೆ ಚುನಾವಣೆ ದೃಷ್ಟಿಯಿಂದ ಪ್ರಾಮುಖ್ಯತೆ ಪಡೆದಿರುವ, ಪ್ರತಿಷ್ಠೆಯ ಕಣವೂ ಆಗಿರುವ ಗುಜರಾತ್ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ (Gujarat Election) ಗುರುವಾರ (ಡಿಸೆಂಬರ್ ೧) ನಡೆಯಲಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷವು ಗೆಲುವಿಗೆ ಇನ್ನಿಲ್ಲದ ಕಸರತ್ತು ನಡೆಸಿದ್ದು, ಮೊದಲ ಹಂತದ ಮತದಾನದ ಮೇಲೆ ಎಲ್ಲರ ಗಮನ ಇದೆ. ಹಾಗಾದರೆ, ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ? ಸಮೀಕ್ಷೆಗಳು ಏನು ಹೇಳುತ್ತವೆ? ಪಕ್ಷಗಳ ಬಲಾಬಲ ಹೇಗಿದೆ ಎಂಬುದರ ಮಾಹಿತಿ ಇಲ್ಲಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
೯. ಮಂಗಳೂರು ಸ್ಫೋಟ | ಶಂಕಿತ ಉಗ್ರ ಶಾರಿಕ್‌ಗೆ ಮತ್ತೊಬ್ಬ ಸಾಥ್ ಕೊಟ್ಟಿದ್ದು ಖಚಿತ, ಯಾರವನು?
ಮಂಗಳೂರು: ನವೆಂಬರ್ ೧೯ರಂದು ಸಂಜೆ ೪.೧೯ಕ್ಕೆ ಮಂಗಳೂರಿನ ನಾಗುರಿಯಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಾಯಗೊಂಡ ಶಾರಿಕ್‌ಗೆ ಇನ್ನೊಬ್ಬ ಸಾಥ್ ನೀಡಿರುವುದು ನಿಜ ಎನ್ನುವುದು ಬಹುತೇಕ ಸ್ಪಷ್ಟವಾಗಿದೆ. ಶಾರಿಕ್ ಐಸಿಸ್ ಮಾದರಿಯಲ್ಲಿ ದಿರಸು ಧರಿಸಿ ಕುಕ್ಕರ್‌ನ್ನು ಕೈಯಲ್ಲಿ ಹಿಡಿದುಕೊಂಡಿರುವ ಫೋಟೊವನ್ನು ಅನಾಲಿಸಿಸ್‌ಗೆ ಒಳಪಡಿಸಿದಾಗ ಕೆಲವೊಂದು ಮಹತ್ವದ ಮಾಹಿತಿಗಳು ಸಿಕ್ಕಿವೆ. ಪೂರ್ಣ ವರದಿಗೆ ಲಿಂಕ್ ಕ್ಲಿಕ್ ಮಾಡಿ
೧೦. ದತ್ತಪೀಠ ವಿವಾದ | ಡಿ.6ರಿಂದ ಮೂರು ದಿನ ದತ್ತ ಜಯಂತಿ ಆಚರಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ಚಿಕ್ಕಮಗಳೂರು ತಾಲ್ಲೂಕಿನ ಬಾಬಾಬುಡನ್ಗಿರಿಯ ಶ್ರೀಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಇನಾಂ ದತ್ತಪೀಠದಲ್ಲಿ (ದತ್ತ ಪೀಠ ವಿವಾದ) ಡಿಸೆಂಬರ್ ೬,೭ ಮತ್ತು ೮ರಂದು ದತ್ತ ಜಯಂತಿ ಆಚರಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ರಾಜ್ಯ ಸರಕಾರ ಇತ್ತೀಚೆಗೆ ದತ್ತ ಪೀಠ ಪೂಜೆಗೆ ಅರ್ಚಕರನ್ನು ನೇಮಿಸಲು ನಿರ್ವಹಣಾ ಸಮಿತಿ ರಚಿಸಿ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಅರ್ಚಕರ ನೇಮಕ ಪ್ರಶ್ನಿಸಿ ಗೌಸ್ ಮೌಸಿನ್ ಶಾ ಖಾದ್ರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ದತ್ತ ಜಯಂತಿ ಆಚರಣೆಗೆ ಅವಕಾಶವನ್ನು ನೀಡಿದೆ. ಪೂರ್ಣ ವರದಿಗೆ ಕ್ಲಿಕ್ ಮಾಡಿ
ಇತರ ಪ್ರಮುಖ ಸುದ್ದಿಗಳು
೧. ಮೊದಲ ಬಾರಿಗೆ 63,099 ಅಂಕಗಳ ಎತ್ತರಕ್ಕೇರಿ ದಿನದ ವಹಿವಾಟು ಮುಕ್ತಾಯಗೊಳಿಸಿದ ಸೆನ್ಸೆಕ್ಸ್
೨. Cristiano Ronaldo | ಸೌದಿ ಅರೇಬಿಯಾದ ಫುಟ್ಬಾಲ್ ಕ್ಲಬ್ ಸೇರಿದರೇ ಕ್ರಿಸ್ಟಿಯಾನೋ ರೊನಾಲ್ಡೊ!
೩. ಅಮೆರಿಕ-ಬೆಂಗಳೂರು ನಡುವೆ ಡಿಸೆಂಬರ್ 2ರಿಂದ ಏರ್ ಇಂಡಿಯಾ ನಾನ್‌ಸ್ಟಾಪ್ ಹಾರಾಟ
೪. ಮಾತಿನ ಮಲ್ಲ, ಯಕ್ಷಗಾನ ಕಲಾವಿದ ಕುಂಬಳೆ ಸುಂದರ ರಾವ್ ಇನ್ನಿಲ್ಲ
೫. ಬಿಜೆಪಿ ಮುಖಂಡನ ಪುತ್ರನಿಂದ ರೆಸ್ಟೋರೆಂಟ್‌ನಲ್ಲಿ ದಾಂಧಲೆ; 10 ದಿನವಾದ್ರೂ ಆಗಿಲ್ಲ ಅರೆಸ್ಟ್