ವಿಸ್ತಾರ TOP 10 NEWS | ʼಖರ್ಗೆ ಯುಗʼ ಆರಂಭದಿಂದ T20 ವಿಶ್ವಕಪ್‌ನಲ್ಲಿ ತಂಗಳು ಆಹಾರದವರೆಗಿನ ಪ್ರಮುಖ ಸುದ್ದಿಗಳಿವು - Vistara News

ಕರ್ನಾಟಕ

ವಿಸ್ತಾರ TOP 10 NEWS | ʼಖರ್ಗೆ ಯುಗʼ ಆರಂಭದಿಂದ T20 ವಿಶ್ವಕಪ್‌ನಲ್ಲಿ ತಂಗಳು ಆಹಾರದವರೆಗಿನ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

TOP 10 NEWS 26102022
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಎಐಸಿಸಿ ಅಧ್ಯಕ್ಷರಾಗಿ ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ವಹಿಸಿಕೊಂಡಿದ್ದು, 22 ವರ್ಷದ ನಂತರ ಗಾಂಧಿ ಕುಟುಂಬ ಅಧಿಕಾರ ಕೇಂದ್ರದಿಂದ ಪಕ್ಕಕ್ಕೆ ಸರಿದಿದೆ. ಜೆಡಿಎಸ್‌ನಿಂದ ಮುನಿಸಿಕೊಂಡು ಸಮಾಧಾನವಾಗಿದ್ದ ಜಿ.ಟಿ. ದೇವೇಗೌಡ ಮತ್ತಷ್ಟು ಹತ್ತಿರವಾಗಿದ್ದಾರೆ, ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡಕ್ಕೆ ತಂಗಳು ಆಹಾರ ನೀಡಿದ ವಿಚಾರ ಚರ್ಚೆಯಾಗುತ್ತಿದೆ, ರಾಜ್ಯದ ವಿವಿಧೆಡೆ ಕಲುಷಿತ ನೀರಿನ ಸಮಸ್ಯೆ ಉಲ್ಬಣಿಸಿದೆ. ಉಕ್ರೇನ್‌ ಮೇಲೆ ಅಣ್ವಸ್ತ್ರ ಪ್ರಯೋಗ ಮಾಡದಂತೆ ಭಾರತವು ರಷ್ಯಾವನ್ನು ಆಗ್ರಹಿಸಿದೆ ಎನ್ನುವುದೂ ಸೇರಿ ದಿನದ ಪ್ರಮುಖ ಸುದ್ದಿಗಳ ಗುಚ್ಛ ವಿಸ್ತಾರ TOP 10 NEWS.

1. ಕಾಂಗ್ರೆಸ್‌ನಲ್ಲಿ ಖರ್ಗೆ ಯುಗಾರಂಭ: ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ

ಅಖಿಲ ಭಾರತ ಕಾಂಗ್ರೆಸ್ ಕಮಿಟಿ(ಎಐಸಿಸಿ) ಅಧ್ಯಕ್ಷರಾಗಿ (Congress President) ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಬೆಳಗ್ಗೆ ಅಧಿಕಾರ ಸ್ವೀಕರಿಸಿದರು. 22 ವರ್ಷದಲ್ಲಿ ಇದೇ ಮೊದಲ ಬಾರಿ ಗಾಂಧಿ ಮನೆತನದ ಹೊರತಾದ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಹಾಗೆಯೇ, ಕರ್ನಾಟಕದಿಂದ ಕಾಂಗ್ರೆಸ್ ಅಧ್ಯಕ್ಷರಾಗುತ್ತಿರುವ ಎರಡನೇ ವ್ಯಕ್ತಿ ಮಲ್ಲಿಕಾರ್ಜುನ ಖರ್ಗೆ ಅವರಾಗಿದ್ದಾರೆ. ಅಕ್ಟೋಬರ್ 17ರಂದು ನಡೆದ ಎಐಸಿಸಿ ಅಧ್ಯಕ್ಷ ಹುದ್ದೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು, ತಿರುವನಂತಪುರ ಕ್ಷೇತ್ರ ಸಂಸದ ಶಶಿ ತರೂರ್ ಅವರನ್ನು ಸೋಲಿಸಿದ್ದರು. ಈ ನಡುವೆ, ಖರ್ಗೆ ಅವರು ಸಂಚಾಲನಾ ಸಮಿತಿಯನ್ನು ರಚಿಸಿದ್ದಾರೆ. ಇದರಲ್ಲಿ ರಾಜ್ಯದ ಮೂವರಿದ್ದಾರೆ. I ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ವಿಸ್ತಾರ TOP 10 NEWS

2. ಮಲ್ಲಿಕಾರ್ಜುನ ಖರ್ಗೆ ನೆಲಮೂಲದ ನಾಯಕ ಎಂದು ಬಣ್ಣಿಸಿದ ಸೋನಿಯಾ ಗಾಂಧಿ

ನನಗೆ ಈಗ ತುಂಬ ಸಂತೋಷವಾಗಿದೆ. ಎಲ್ಲಕ್ಕಿಂತ ಹೆಚ್ಚಾಗಿ ನಿಮ್ಮ ನಿಮ್ಮ ವಿವೇಕದಿಂದ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಿದ್ದೀರಿ. ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ತಳಸ್ಪರ್ಶಿ, ನೆಲಮೂಲದ ನಾಯಕರಾಗಿದ್ದಾರೆ. ಸಾಧಾರಣ ಕಾರ್ಯಕರ್ತರಾಗಿ ಇಂದು ಈ ಮಟ್ಟಕ್ಕೆ ಬೆಳೆದಿದ್ದಾರೆ. ಅವರ ನಾಯಕತ್ವದಲ್ಲಿ ಪಕ್ಷಕ್ಕೆ ಪ್ರೇರಣೆ ಸಿಗಲಿದೆ, ಸಂದೇಶ ರವಾನೆಯಾಗಲಿದೆ ಎಂಬ ವಿಶ್ವಾಸ ನನಗೆ ಇದೆ ಎಂದು ಸೋನಿಯಾ ಗಾಂಧಿ ಅವರು ಹೇಳಿದರು. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧಿಕಾರ ಹಸ್ತಾಂತರ ಸಂದರ್ಭದಲ್ಲಿ ಮಾತನಾಡಿದ ಸೋನಿಯಾ ಗಾಂಧಿ ಅವರು, ನನಗೆ ಇಷ್ಟು ದಿನ ಪ್ರೀತಿ, ಗೌರವವಗಳನ್ನು ನೀವು ನೀಡಿದ್ದೀರಿ. ಇದು ನನಗೆ ಗೌರವದ ವಿಷಯವಾಗಿದೆ. ನನ್ನ ಕೊನೆಯ ಉಸಿರು ಇರೋವರೆಗೆ ಕಾಪಿಟ್ಟುಕೊಳ್ಳುತ್ತೇನೆ. ನನ್ನನ್ನು ನಂಬಿ ಬಹುದೊಡ್ಡ ಜವಾಬ್ದಾರಿಯನ್ನು ಈ ಹಿಂದೆ ನೀಡಿದ್ದೀರಿ. ಅದನ್ನು ನಿರ್ವಹಿಸಿದ್ದೇನೆ. ಆ ಜವಾಬ್ದಾರಿಯಿಂದ ನಾನೀಗ ಮುಕ್ತನಾಗಿದ್ದೇನೆ. ಈ ಸಂದರ್ಭವನ್ನು ಬಳಸಿಕೊಂಡು ಎಲ್ಲರಿಗೂ ಧನ್ಯವಾದ ಹೇಳುತ್ತೇನೆ ಎಂದಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ವಿಸ್ತಾರ TOP 10 NEWS

3. Election 2023 | ಮೂರೂವರೆ ವರ್ಷದ ಬಳಿಕ ಜೆಡಿಎಸ್‌ ಕಚೇರಿಗೆ ಜಿಟಿಡಿ; ಸಿಹಿ ತಿನ್ನಿಸಿದ ಎಚ್‌ಡಿಕೆ

ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಬರೋಬ್ಬರಿ ಮೂರೂವರೆ ವರ್ಷಗಳ ಬಳಿಕ ಬೆಂಗಳೂರಿನಲ್ಲಿರುವ ಜೆಡಿಎಸ್‌ ಕಚೇರಿಯ ಮೆಟ್ಟಿಲು ಹತ್ತಿದ್ದಾರೆ. ಈ ಮೂಲಕ ಜೆಡಿಎಸ್‌ ಪರವಾಗಿ ಚುನಾವಣಾ (Election 2023) ಅಖಾಡಕ್ಕಿಳಿಯುವ ಸೂಚನೆಯನ್ನೂ ನೀಡಿದ್ದಾರೆ. ಇದೇ ವೇಳೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಜಿಟಿಡಿಗೆ ಸಿಹಿ ತಿನ್ನಿಸಿ ಬರಮಾಡಿಕೊಂಡಿದ್ದಾರೆ. ವೈಮನಸ್ಸಿನ ಕಾರಣ ಜಿ.ಟಿ. ದೇವೇಗೌಡ ಅವರು ಮೂರೂವರೆ ವರ್ಷದಿಂದ ಬೆಂಗಳೂರಿನ ಜೆಡಿಎಸ್‌ ಕಚೇರಿಯ ಜೆಪಿ ಭವನಕ್ಕೆ ಭೇಟಿ ನೀಡಿದರು. ಜತೆಗೆ ಸಿಹಿತಿಂಡಿಯ ಬಾಕ್ಸ್‌ ಅನ್ನೂ ಹೊತ್ತು ತಂದಿದ್ದರು. ಕಚೇರಿಗೆ ಬರುತ್ತಿದ್ದಂತೆ ಎದುರುಗೊಂಡ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಸಿಹಿ ತಿನ್ನಿಸಿ ಶುಭ ಕೋರಿದರು. ಇದಕ್ಕೂ ಮೊದಲು ಜಿಟಿಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ತೆರಳಿ ಸಿಹಿ ತಿನ್ನಿಸಿ ಬಂದಿದ್ದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

Blank Blue

4. ಅಕ್ಷತಾ ಮೂರ್ತಿ-ರಿಷಿ ಸುನಕ್ ಲವ್‌ ಸ್ಟೋರಿ ಶುರುವಾಗಿದ್ದು ಎಲ್ಲಿ? ಇದು ಮಿಲಿಯನ್‌ ಡಾಲರ್‌ ಪ್ರಶ್ನೆಯಲ್ಲ!

ಇನ್ಫೋಸಿಸ್‌ ಸಂಸ್ಥಾಪಕ ನಾರಾಯಣ ಮೂರ್ತಿ ಹಾಗೂ ಸುಧಾ ಮೂರ್ತಿ ಅವರ ಅಳಿಯ ರಿಷಿ ಸುನಕ್‌ ( Rishi Sunak) ಬ್ರಿಟನ್‌ನ ನೂತನ ಪ್ರಧಾನಿಯಾದ ಬಳಿಕ, ಸುನಕ್‌ ಹಾಗೂ ಅಕ್ಷತಾ ಮೂರ್ತಿಯವರ ಲವ್‌ ಸ್ಟೋರಿ, ಮದುವೆ ಬಗ್ಗೆ ಕುತೂಹಲದಿಂದ ಇಂಟರ್‌ನೆಟ್‌ನಲ್ಲಿ ಜಾಲಾಡುವವರ ಸಂಖ್ಯೆ ಹೆಚ್ಚಳವಾಗಿದೆ. ಹಾಗಾದರೆ, ವಿಶ್ವದ ಗಮನ ಸೆಳೆದಿರುವ ಈ ಜೋಡಿ ಭೇಟಿಯಾಗಿದ್ದೆಲ್ಲಿ? ಪ್ರೀತಿ ಹುಟ್ಟಿದ್ದು ಎಲ್ಲಿ? ಇವರ ಮದುವೆ ನಡೆದದ್ದೆಲ್ಲಿ? ಪುರೋಹಿತರು, ಗುರು ಹಿರಿಯರು, ಬಂಧು ಬಳಗದ ಸಮ್ಮುಖದಲ್ಲಿ ಅದ್ದೂರಿಯಾಗಿ ವಿವಾಹವಾದರೇ, ಯಾರೆಲ್ಲ ಗಣ್ಯರು ಬಂದಿದ್ದರು? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್!‌ ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

5. ಬಂಡೆ ಮಠ ಸ್ವಾಮೀಜಿ ವಿಡಿಯೊ ವೈರಲ್‌, ಮೂವರು ಮಹಿಳೆಯರ ಸಹಿತ 7 ಮಂದಿ ಪೊಲೀಸ್‌ ಬಲೆಯಲ್ಲಿ

ಮಾಗಡಿಯ ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ ಹೊಸ ತಿರುವುಗಳನ್ನು ಪಡೆದಿದೆ. ಒಂದು ಕಡೆ ಮಹಿಳೆಯೊಬ್ಬರ ಜೊತೆ ಸ್ವಾಮಿಜಿ ವಿಡಿಯೊ ಕಾಲ್‌ ಮೂಲಕ ಮಾತನಾಡುವ ವಿಡಿಯೊ ವೈರಲ್‌ ಆಗಿದೆ. ಇನ್ನೊಂದು ಕಡೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಮಹಿಳೆಯರು ಸೇರಿದಂತೆ ಏಳು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

6. Contaminated water | ರಾಜ್ಯದ ವಿವಿಧೆಡೆ ಕಲುಷಿತ ನೀರು ಸಮಸ್ಯೆ: ಶಹಾಪುರದಲ್ಲಿ ಮತ್ತೊಬ್ಬರ ಸಾವು

ಶಹಾಪುರ ತಾಲೂಕಿನ ಹೋತಪೇಟ ಗ್ರಾಮದಲ್ಲಿ ಕಲುಷಿತ ನೀರು (Contaminated water) ಸೇವಿಸಿ ಇಬ್ಬರು ಮೃತಪಟ್ಟಿರುವ ಬೆನ್ನಲ್ಲೇ ಈಗ ಮತ್ತೊಬ್ಬರು ಅಸುನೀಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಾವಿನ ಸಂಖ್ಯೆ ೩ಕ್ಕೇರಿದಂತಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ. ರಾಯಚೂರು ನಗರ ಭಾಗದಲ್ಲಿ ಸುಮಾರು ನಾಲ್ಕು ತಿಂಗಳ ಹಿಂದೆ ಕಲುಷಿತ ನೀರು ‌ಸೇವನೆ (Contaminated water) ಮಾಡಿದ್ದ 7 ಜನರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಕೆಲ ಅಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು. ಆದರೂ ಅಧಿಕಾರಿಗಳ ನಿರ್ಲಕ್ಷ್ಯ ಮುಂದುವರಿದಿದ್ದು, ಗ್ರಾಮೀಣ ತಾಲೂಕಿನ ಬಿಚ್ಚಾಲಿ ಗ್ರಾಮದಲ್ಲಿರುವ ಬಹು ಗ್ರಾಮ ಕುಡಿಯುವ ‌ನೀರಿನ ಘಟಕದಲ್ಲಿ ಇಲಿ ಸತ್ತು ಬಿದ್ದರೂ ಅದೇ ನೀರನ್ನೇ ಅಧಿಕಾರಿಗಳು ಸರಬರಾಜು ‌ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ. ಬೆಳಗಾವಿ ಜಿಲ್ಲೆಯ ರಾಮದುರ್ಗ ‌ತಾಲೂಕಿನ‌ ಮುದೇನೂರು ಗ್ರಾಮದಲ್ಲಿ ಕಲುಷಿತ ನೀರು (Contaminated water) ಸೇವಿಸಿ ಐವತ್ತಕ್ಕೂ ಅಧಿಕ ಗ್ರಾಮಸ್ಥರು ಅಸ್ವಸ್ಥಗೊಂಡಿದ್ದು, ಸ್ಥಳೀಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. ಕಾಂಗ್ರೆಸ್‌ ಪ್ರವಾಸಕ್ಕೆ ಹೈಕಮಾಂಡ್‌ ಗ್ರೀನ್ ಸಿಗ್ನಲ್‌; ಸಿದ್ದರಾಮಯ್ಯ, ಡಿಕೆಶಿಗೆ ತಲಾ 14 ಲೋಕಸಭಾ ಕ್ಷೇತ್ರ ಹಂಚಿಕೆ

ಭಾರತ್‌ ಜೋಡೋ ಯಾತ್ರೆಯ ನಡುವೆಯೇ ರಾಜ್ಯ ಕಾಂಗ್ರೆಸ್ ನಾಯಕರ ಪ್ರತ್ಯೇಕ ಪ್ರವಾಸಕ್ಕೆ ಹೈಕಮಾಂಡ್ ಗ್ರೀನ್ ಸಿಗ್ನಲ್‌ ನೀಡಿದೆ. ರಾಜ್ಯದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪ್ರತ್ಯೇಕ ಪ್ರವಾಸಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹಿರಿಯ ನಾಯಕಿ ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಹಮತ ಸೂಚಿಸಲಾಗಿದೆ.
ಕಾಂಗ್ರೆಸ್‌ ಪಕ್ಷದಲ್ಲಿ ಬಣ ರಾಜಕೀಯದ ಹಿನ್ನೆಲೆಯಲ್ಲಿ ಪ್ರತ್ಯೇಕ ಪ್ರವಾಸ ಬೇಡ ಎಂದು ಕೆಲ ಕೈ ನಾಯಕರು ಸಲಹೆ ನೀಡಿದ್ದರು. ಆದರೆ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಪ್ರತ್ಯೇಕ ಪ್ರವಾಸಕ್ಕೆ ಹೈಕಮಾಂಡ್‌ ಅನುಮತಿ ಸಿಕ್ಕಿದ್ದು, ನವೆಂಬರ್ ತಿಂಗಳಲ್ಲಿ ಉಭಯ ನಾಯಕರು ತಲಾ 14 ಲೋಕಸಭಾ ಕ್ಷೇತ್ರಗಳಲ್ಲಿ ಪ್ರಚಾರ ಮಾಡಲು ಸೂಚನೆ ನೀಡಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

Blank Blue

8. Head Bush Movie | ದೂರಿತ್ತ ವೀರಗಾಸೆ ಕಲಾವಿದರು, ವೀರಶೈವ ಪುರೋಹಿತರು; ಕ್ಷಮೆ ಯಾಚಿಸಿದ ಡಾಲಿ ಧನಂಜಯ

ಅಂಡರ್ವಲ್ಡ್‌ ಡಾನ್‌ ಜಯರಾಜ್‌ ಜೀವನ ವೃತ್ತಾಂತದ ಕಥಾ ಹಂದರ ಹೊಂದಿರುವ ಡಾಲಿ ಧನಂಜಯ್‌ ಅಭಿಯನಯದ ಹೆಡ್‌ ಬುಷ್‌ ಸಿನಿಮಾಕ್ಕೆ (Head Bush Movie) ಮತ್ತೊಂದು ಸಂಕಷ್ಟ ಎದುರಾಗಿದೆ. ಈ ಚಿತ್ರದಲ್ಲಿ ವೀರಗಾಸೆ ಕಲಾವಿದರಿಗೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಪೊಲೀಸ್ ಇಲಾಖೆಗೆ ದೂರು ನೀಡಲಾಗಿದ್ದು, ಕೂಡಲೇ ಚಲನಚಿತ್ರ ಪ್ರದರ್ಶನವನ್ನು ಸ್ಥಗಿತಗೊಳಿಸುವಂತೆ ಆಗ್ರಹಿಸಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: Dolly Dhananjay | ಹೆಡ್ ಬುಷ್ ಸಿನಿಮಾದ ವೀರಗಾಸೆ ಕುರಿತ ವಿವಾದಕ್ಕೆ ಡಾಲಿ ಧನಂಜಯ್‌ ನೀಡಿದ ಸ್ಪಷ್ಟನೆ ಏನು?

9. ವಾಟ್ಸ್ಆ್ಯಪ್ ಏಕಾಏಕಿ ಸ್ಥಗಿತವಾಗಿದ್ದೇಕೆ? ವರದಿ ಕೊಡಿ ಎಂದ ಕೇಂದ್ರ ಸರ್ಕಾರ

ಮಂಗಳವಾರ ವಾಟ್ಸ್ಆ್ಯಪ್ ಬಳಕೆಯಲ್ಲಿ 2 ಗಂಟೆ ವ್ಯತ್ಯಯವಾಗಿತ್ತು. ಈ ಬಗ್ಗೆ ಸಮಗ್ರ ವರದಿಯನ್ನು ಸಲ್ಲಿಸುವಂತೆ ಕೇಂದ್ರ ಮಾಹಿತಿ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್ಸ್ ಸಚಿವಾಲಯವು ಕೇಳಿಕೊಂಡಿದೆ. ವಾಟ್ಸ್ಆ್ಯಪ್ (WhatsApp Outage) ಈ ಬಗ್ಗೆ ತನ್ನ ವರದಿಯನ್ನು ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯೆ ತಂಡಕ್ಕೆ ತನ್ನ ವರದಿಯನ್ನು ಸಲ್ಲಿಸಬೇಕಿದೆ. ಈ ಸಂಸ್ಥೆಯಲ್ಲಿ ಕೇಂದ್ರ ಮಾಹಿತಿ ತಂತ್ರಜ್ಞಾನ ಹಾಗೂ ಎಲೆಕ್ಟ್ರಾನಿಕ್ಸ್ ಸಚಿವಾಲಯದಡಿ ಕೆಲಸ ಮಾಡುತ್ತಿದೆ. ಸೇವೆಯಲ್ಲಿ ವ್ಯತ್ಯಯವಾಗುತ್ತದೆಯೋ ಆಗ ಸಚಿವಾಲಯವು ಮಧ್ಯೆ ಪ್ರವೇಶಿಸಿ ಸಂಬಂಧಿಸಿದ ಕಂಪನಿಯಂದ ಈ ಬಗ್ಗೆ ಮಾಹಿತಿ ಸಹಿತ ವರದಿಯನ್ನು ಪಡೆದುಕೊಳ್ಳುತ್ತದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. T20 World Cup | ತಂಗಳು ಆಹಾರ ತಿಂದು ಪ್ರಾಕ್ಟೀಸ್ ಮಾಡುವುದೇ ಹೇಗೆ? ಐಸಿಸಿ ಆತಿಥ್ಯಕ್ಕೆ ಸೆಹ್ವಾಗ್‌ ಕೆಂಡಾಮಂಡಲ

ಸಿಡ್ನಿಯಲ್ಲಿ ಟೀಮ್ ಇಂಡಿಯಾ ಆಟಗಾರರಿಗೆ (T20 World Cup) ತಂಗಳು ಆಹಾರ ಕೊಟ್ಟಿರುವ ವಿಷಯ ಭಾರತ ತಂಡದ ಮಾಜಿ ಸ್ಫೋಟಕ ಬ್ಯಾಟರ್ ವೀರೇಂದ್ರ ಸೆಹ್ವಾಗ್‌ ಅವರಿಗೆ ಕೋಪ ತರಿಸಿದೆ. ಆಟಗಾರರ ಕಾಳಜಿ ನೋಡಿಕೊಳ್ಳಬೇಕಾದ ಐಸಿಸಿಯ ಕ್ರಮವನ್ನು ಅವರು ಟ್ವೀಟ್‌ ಮಾಡಿ ವಿರೋಧಿಸಿದ್ದಾರೆ. ವಿದೇಶದಲ್ಲಿ ಕ್ರೀಡಾಪಟುಗಳಿಗೆ ಉತ್ತಮ ಆಹಾರ ದೊರಕುತ್ತದೆ ಎಂಬದು ಭ್ರಮೆಯಾಗಿದೆ ಎಂದು ಅವರು ಹೇಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ಮತ್ತಷ್ಟು ಸುದ್ದಿಗಳು

1️⃣Nuclear Weapons | ಯಾವುದೇ ಕಾರಣಕ್ಕೂ ಅಣ್ವಸ್ತ್ರ ಬಳಕೆ ಕೂಡದು, ರಷ್ಯಾಗೆ ರಾಜನಾಥ್‌ ಸಿಂಗ್‌ ಆಗ್ರಹ
2️⃣ Lifestyle Diseases | ಬದಲಾದ ಜೀವನ ವಿಧಾನ, 50 ಕೋಟಿ ಜನಕ್ಕೆ ರೋಗ ಬರಲಿವೆ, ಇನ್ನಾದರೂ ನಿಧಾನ
3️ Unilever | ಡವ್‌ ಡ್ರೈ ಶ್ಯಾಂಪೂಗಳ ಹಿಂತೆಗೆತದಿಂದ ಭಾರತಕ್ಕೆ ಪರಿಣಾಮವಿಲ್ಲ : ಎಚ್‌ಯುಎಲ್
4️⃣ರೂಪಾಯಿ ಮೌಲ್ಯ ಕುಸಿತ ತಪ್ಪಿಸಲು ನೋಟ್ ಮೇಲೆ ಗಣೇಶ, ಲಕ್ಷ್ಮೀ ಚಿತ್ರ ಮುದ್ರಿಸಿ: ಕೇಜ್ರಿವಾಲ್ ಸಲಹೆ!
5️⃣Kantara Movie | ʻಹ್ಯಾಟ್ಸ್‌ ಆಫ್‌ ರಿಷಬ್‌ʼಎಂದು ಕಾಂತಾರ ಸಿನಿಮಾ ಹೊಗಳಿದ ಸ್ಟಾರ್‌ ರಜನಿಕಾಂತ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿಕ್ಷಣ

CET 2024 exam: ಸಿಇಟಿಯಲ್ಲಿ 50 ಔಟ್ ಆಫ್ ಸಿಲೆಬಸ್ ಪ್ರಶ್ನೆ; ಮರು ಪರೀಕ್ಷೆ ಅಥವಾ ಗ್ರೇಸ್‌ ಮಾರ್ಕ್ಸ್‌? ಇಂದು ನಿರ್ಧಾರ

CET 2024 exam: ಈ ಸಮಸ್ಯೆಯನ್ನು ಸರಿಪಡಿಸಲಾಗದ ಸ್ಥಿತಿಗೆ ಕೆಇಎ ಬಂದಿದೆ ಎನ್ನಲಾಗಿದೆ. ನಾಲ್ಕು ವಿಷಯಗಳಲ್ಲಿ ಒಟ್ಟು 50 ಪ್ರಶ್ನೆಗಳು ಔಟ್ ಆಫ್ ಸಿಲೆಬಸ್ ಇರುವುದರಿಂದ ಕೆಇಎ ಮುಂದೆ ಏನು ಮಾಡಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಈಗ ಗ್ರೇಸ್ ಮಾರ್ಕ್ಸ್ ನೀಡಲು ಸಾಧ್ಯವೇ? ಮರು ಪರೀಕ್ಷೆ ನಡೆಸಬೇಕಾ? ಎಂಬ ಗೊಂದಲ ಏರ್ಪಿಟ್ಟಿದೆ. ಈ ಬಗ್ಗೆ ಇಂದೇ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ.

VISTARANEWS.COM


on

50 out of syllabus question in CET 2024 exam Re examination or grace marks
Koo

ಬೆಂಗಳೂರು: ಎಂಜಿನಿಯರಿಂಗ್, ಕೃಷಿ ಸೇರಿದಂತೆ ಹಲವು ವೃತ್ತಿಪರ ಕೋರ್ಸ್‌ಗಳಿಗೆ ಬುಧವಾರ, ಗುರುವಾರ ನಡೆದಿದ್ದ ದಿನದ ಸಿಇಟಿ-2024 ಪರೀಕ್ಷೆಯಲ್ಲಿ (CET 2024 exam) ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA) ಮಹಾ ಎಡವಟ್ಟು ಆಗಿದೆ. ನಾಲ್ಕು ವಿಷಯಗಳಿಂದ ಒಟ್ಟು 50 ಪ್ರಶ್ನೆಗಳು ಔಟ್ ಆಫ್ ಸಿಲೆಬಸ್ ಬಂದಿವೆ. ಹೀಗಾಗಿ ಈ ಬಗ್ಗೆ ಪರಿಶೀಲಿಸಿ ತೀರ್ಮಾನ ಕೈಗೊಳ್ಳಲು ಇಂದೇ (ಶನಿವಾರ – ಏಪ್ರಿಲ್‌ 20) ಸಮಿತಿಯನ್ನು ರಚನೆ ಮಾಡಲು ಮುಂದಾಗಿದೆ. ಅಲ್ಲದೆ, ಮರು ಪರೀಕ್ಷೆ ಮಾಡಲಿದೆಯೇ? ಅಥವಾ ಗ್ರೇಸ್‌ ಮಾರ್ಕ್ಸ್‌ ಕೊಡಲಿದೆಯೇ ಎಂಬ ಪ್ರಶ್ನೆಗಳು ಎದುರಾಗಿವೆ.

ಮೊದಲ ದಿನದ ಸಿಇಟಿ ಪರೀಕ್ಷೆಯಲ್ಲಿ ಗಣಿತ ಹಾಗೂ ಜೀವಶಾಸ್ತ್ರದ ವಿಷಯದಲ್ಲಿ ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೇಳಲಾಗಿತ್ತು. ಎರಡನೇ ದಿನದ ಪರೀಕ್ಷೆಯಲ್ಲಿಯೂ ಈ ಸಮಸ್ಯೆ ಪುನರಾವರ್ತನೆಯಾಗಿತ್ತು. ಭೌತಶಾಸ್ತ್ರದಲ್ಲಿ 8 ಹಾಗೂ ರಸಾಯನಶಾಸ್ತ್ರ ವಿಷಯದಲ್ಲಿ 18 ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗಳನ್ನು ಕೇಳಲಾಗಿತ್ತು. ಇದು ವಿದ್ಯಾರ್ಥಿಗಳ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

ಈ ಸಮಸ್ಯೆಯನ್ನು ಸರಿಪಡಿಸಲಾಗದ ಸ್ಥಿತಿಗೆ ಕೆಇಎ ಬಂದಿದೆ ಎನ್ನಲಾಗಿದೆ. ನಾಲ್ಕು ವಿಷಯಗಳಲ್ಲಿ ಒಟ್ಟು 50 ಪ್ರಶ್ನೆಗಳು ಔಟ್ ಆಫ್ ಸಿಲೆಬಸ್ ಇರುವುದರಿಂದ ಕೆಇಎ ಮುಂದೆ ಏನು ಮಾಡಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಈಗ ಗ್ರೇಸ್ ಮಾರ್ಕ್ಸ್ ನೀಡಲು ಸಾಧ್ಯವೇ? ಮರು ಪರೀಕ್ಷೆ ನಡೆಸಬೇಕಾ? ಎಂಬ ಗೊಂದಲ ಏರ್ಪಿಟ್ಟಿದೆ.

ಇದನ್ನೂ ಓದಿ: Neha Murder Case: ನೇಹಾಳನ್ನು ಮದುವೆ ಮಾಡಿಸುವಂತೆ ಆಕೆಯ ಹೆತ್ತವರ ಪ್ರಾಣ ತಿಂದಿದ್ದ ಫಯಾಜ್!‌

ಮರು ಪರೀಕ್ಷೆ ಮಾಡುತ್ತಾ?

ಮರು ಪರೀಕ್ಷೆ ನಡೆಸಲು ಕೆಇಎ ಮುಂದಾಗುತ್ತದೆಯೇ? ಒಂದು ವೇಳೆ ಈ ನಿರ್ಧಾರಕ್ಕೆ ಬಂದರೆ ದೂರದೂರಿನಿಂದ ಬಂದು ಪರೀಕ್ಷೆ ಬರೆದ ಮಕ್ಕಳಿಗೆ ಮತ್ತೊಂದು ಸವಾಲು ಎದುರಾಗಲಿದೆ. ಹೀಗಾಗಿ ಮಕ್ಕಳಿಗೆ ಗ್ರೇಸ್ ಮಾರ್ಕ್ಸ್ ಕೊಡಿ. ಇಲ್ಲದಿದ್ದರೆ ಮಕ್ಕಳ ಭವಿಷ್ಯವೇ ಹಾಳಾಗುತ್ತದೆ ಎಂದು ಪೋಷಕರು ಒತ್ತಾಯ ಮಾಡುತ್ತಿದ್ದಾರೆ.

ಏಪ್ರಿಲ್‌ 27ರವರೆಗೆ ಆಕ್ಷೇಪಣೆ ಸಲ್ಲಿಕೆಗೆ KEA ಅವಕಾಶ

ಈ ಬಾರಿ ಸಿಇಟಿಯಲ್ಲಿ ನೋಂದಣಿ ಮಾಡಿಕೊಂಡಿದ್ದ 3,49,637 ವಿದ್ಯಾರ್ಥಿಗಳ ಪೈಕಿ ಶೇ.92ರಷ್ಟು ಮಂದಿ ಪರೀಕ್ಷೆ ಬರೆದಿದ್ದಾರೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಈ ವರ್ಷ ಪಠ್ಯದಲ್ಲಿ ಇಲ್ಲದ ವಿಷಯಕ್ಕೆ ಸಂಬಂಧಿಸಿದಂತೆ ಪರೀಕ್ಷಾ ಪ್ರಾಧಿಕಾರ ಪ್ರಶ್ನೆ ಕೇಳಿದೆ. ಪಿಯು ಮಂಡಳಿ ನಿಗದಿ ಪಡಿಸಿರುವ ಪಿಯು ಪಠ್ಯಪುಸ್ತಕದ ಆಧಾರದ ಮೇಲೆ ಸಿಇಟಿ ಪರೀಕ್ಷೆ ನಡೆಸಬೇಕು. ಆದರೆ ಪಿಯು ಮಂಡಳಿ ನಿಗದಿ ಮಾಡದ ಪಠ್ಯ ಪುಸ್ತಕದ ಪ್ರಶ್ನೆ ಕೇಳಿ ಕೆಇಎ ಗೊಂದಲ ಸೃಷ್ಟಿಸಿದೆ. ಕೆಇಎ ಎಡವಟ್ಟಿಗೆ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಏಪ್ರಿಲ್ 27ರವರೆಗೆ ಕಾಲಾವಕಾಶವನ್ನು ಕೆಇಎ ನೀಡಿದೆ.

ಪ್ರಶ್ನೆಪತ್ರಿಕೆಯಲ್ಲಿನ ಯಾವುದೇ ಪ್ರಶ್ನೆಗಳ ಬಗ್ಗೆ ಆಕ್ಷೇಪಣೆಗಳು ಇದ್ದರೆ, ವಿಷಯ, ವರ್ಷನ್‌ ಕೋಡ್, ಪ್ರಶ್ನೆ ಸಂಖ್ಯೆಗಳನ್ನು ನಮೂದಿಸಿ keaugcet24@gmail.com ಗೆ ಇ – ಮೇಲ್‌ ಮೂಲಕ ಸಂಜೆ 5.30ರ ಒಳಗೆ ದೂರು ಸಲ್ಲಿಸಲು ಕೆಇಎ ಸೂಚಿಸಿದೆ. ಇದಕ್ಕೆ ತಜ್ಞರ ಸಮಿತಿಯು ಪರಿಶೀಲಿಸಿ ಸೂಕ್ತ ಪರಿಹಾರವನ್ನು ನೀಡಲಿದೆ ಎಂದು ಕೆಇಎ ಸ್ಪಷ್ಟಪಡಿಸಿದೆ.

ಈ ಬಗ್ಗೆ ಪರೀಕ್ಷಾ ಪ್ರಾಧಿಕಾರ ಹಾಗೂ ಪಿಯು ಮಂಡಳಿ ನಡುವೆ ಆರೋಪ ಪ್ರತ್ಯಾರೋಪ ನಡೆದಿದೆ. ಪಿಯು ಮಂಡಳಿ ನೀಡಿದ ಪಠ್ಯ ಪುಸ್ತಕದ ಆಧಾರದ ಮೇಲೆಯೇ ಸಿಇಟಿ ಪ್ರಶ್ನೆ ಪತ್ರಿಕೆ ತಯಾರಿಸಲಾಗಿದೆ ಎಂದು ಕೆಇಎ‌ ಹೇಳಿದೆ. ತಾವು ನೀಡಿದ ಪರಿಷ್ಕೃತ ಪಠ್ಯಪುಸ್ತಕ ಕೆಇಎ ಅನುಸರಿಸಿಲ್ಲ ಎಂದು ಪಿಯು ಮಂಡಳಿ ಆರೋಪಿಸಿದೆ. ಎರಡು ಇಲಾಖೆ ನಡುವೆ ಪತ್ರವ್ಯವಹಾರ ನಡೆದಿದೆ. ಪಠ್ಯಪುಸ್ತಕ ಪರಿಷ್ಕರಣೆ ಆಧಾರದ ಮೇಲೆ ಸಿಇಟಿ ಪರೀಕ್ಷೆ ನಡೆಸುವಂತೆ ಪಿಯು ಬೋರ್ಡ್ ಮೊದಲೇ ಪತ್ರ ಬರೆದಿತ್ತು. ಪಿಯು ಬೋರ್ಡ್ ಪತ್ರಕ್ಕೆ ಉತ್ತರವನ್ನೂ ಕೆಇಎ ನೀಡಿತ್ತು. ಪರಿಷ್ಕೃತ ಪಠ್ಯಪುಸ್ತಕ ಅನುಸರಿಸಲಾಗಿದೆ ಎಂದಿದೆ. ಕೊನೆಗೆ ಪಿಯು ಬೋರ್ಡ್ ನೀಡಿದ ಪರಿಷ್ಕೃತ ಪಠ್ಯಪುಸ್ತಕವನ್ನು ಕೆಇಎ ನಿರ್ಲಕ್ಷ್ಯ ಮಾಡಿದೆ.

ಇಂದು ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಕೆಇಎ ಸೂಚನೆ ನೀಡಿದೆ. ಆಕ್ಷೇಪಣೆಗಳ ಆಧಾರದ ಮೇಲೆ ಪರಿಶೀಲನೆಗೆ ಸಮಿತಿ ರಚಿಸುವ ಭರವಸೆಯನ್ನು ಕೆಇಎ ನೀಡಿದ್ದು, ಸಮಿತಿ ನೀಡುವ ವರದಿಯ ಆಧಾರದ ಮೇಲೆ‌ ಕ್ರಮ ಕೈಗೊಳ್ಳಲಾಗುವುದು ಎಂದು ಕೆಇಎ ನಿರ್ದೇಶಕಿ ರಮ್ಯಾ ಹೇಳಿದ್ದಾರೆ.

Continue Reading

ಮಳೆ

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

Rain News : ಸಿಡಿಲಿನ ಹೊಡೆತಕ್ಕೆ ಮೃತಪಡುವವರ ಸಂಖ್ಯೆ ಏರಿಕೆ ಆಗುತ್ತಲೇ ಇದೆ. ಗುಡುಗು ಸಿಡಿಲಿನ ಮುನ್ನೆಚ್ಚರಿಕೆ ಕೊಟ್ಟರೂ ಮುಂಜಾಗ್ರತಾ ವಹಿಸಿದೆ ಜನರು ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ಸದ್ಯ ಹಲವೆಡೆ ಸುರಿದ ಭಾರಿ ಗಾಳಿಮಳೆಗೆ ನಾನಾ ಅನಾಹುತಗಳು (Karnataka Weather Forecast) ಸಂಭವಿಸಿವೆ.

VISTARANEWS.COM


on

By

Rain News
Koo

ಬೀದರ್: ರಾಜ್ಯದ ಹಲವೆಡೆ ಮಳೆಯು (Rain news) ಅಬ್ಬರಿಸುತ್ತಿದ್ದು, ಸಾವು-ನೋವಿಗೆ ಕಾರಣವಾಗುತ್ತಿದೆ. ಯಾದಗಿರಿ ಜಿಲ್ಲೆಯ ಔರಾದ ತಾಲೂಕಿನ ಚಿಕ್ಲಿ (ಜೆ) ತಾಂಡದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಭೀಮಲಾ ಹೇಮಲು (60) ಮೃತ ದುರ್ದೈವಿ. ನಿನ್ನೆ ಶುಕ್ರವಾರ ಸಂಜೆ ಭೀಮಲಾ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದಿದೆ. ಸ್ಥಳಕ್ಕೆ ಔರಾದ ತಾಲೂಕಿನ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗದಗದಲ್ಲಿ ವರುಣಾರ್ಭಟಕ್ಕೆ ಜಾನುವಾರು ಬಲಿ

ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಕೆಲೂರು ಗ್ರಾಮದಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗಿದೆ. ಸಿಡಿಲು ಬಡಿದು ಎತ್ತು ಹಾಗೂ ಎಮ್ಮೆ ಮೃತಪಟ್ಟಿವೆ. ರೈತ ಶಂಕ್ರಪ್ಪ ಸೋಂಪುರ ಅವರಿಗೆ ಸೇರಿದ ಎತ್ತು ಅನ್ನು ಮನೆ ಬಳಿ ಕಟ್ಟಿದ್ದರು. ಈ ವೇಳೆ ಸಿಡಿಲು ಬಡಿದು ಎತ್ತು ಜೀವ ಬಿಟ್ಟಿತ್ತು.

ಮತ್ತೊಬ್ಬ ರೈತ ಹನುಮಪ್ಪ ಕೊಂಚಿಗೇರಿ ಎಂಬುವವರ ಎಮ್ಮೆಯೂ ಗ್ರಾಮದ ಹೊರವಲಯದಲ್ಲಿ ಸಿಡಿಲು ಬಡಿದು ಮೃತಪಟ್ಟಿದೆ. ಹೆತ್ತ ಮಕ್ಕಳಂತೆ‌ ಜಾನುವಾರುಗಳನ್ನು ಜೋಪಾನ ಮಾಡಿದ್ದ ರೈತ ಕುಟುಂಬಗಳು ಕಣ್ಣೀರು ಹಾಕಿದರು. ಸ್ಥಳಕ್ಕೆ ಬಾರದ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ಹೊರಹಾಕಿದರು.

Rain News

ಇದನ್ನೂ ಓದಿ: Boat Capsizes: ಭಾರೀ ಗಾಳಿ ಮಳೆಗೆ ಅರಬ್ಬೀ ಸಮುದ್ರದಲ್ಲಿ ಬೋಟ್‌ ಮುಳುಗಡೆ, ನಾಲ್ವರ ರಕ್ಷಣೆ; ಇಲ್ಲಿದೆ ವಿಡಿಯೋ

ಹಾಸನದಲ್ಲಿ ಮೂರು ಮನೆಗಳಿಗೆ ಹಾನಿ

ಹಾಸನ ಜಿಲ್ಲೆಯ ವಿವಿಧೆಡೆ ನಿನ್ನೆ ಶುಕ್ರವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದೆ. ಗುಡುಗು, ಸಿಡಿಲು, ಬಿರುಗಾಳಿ ಸಹಿತ ಸುರಿದ ವರ್ಷಧಾರೆಗೆ ಮೂರು ಮನೆಗಳಿಗೆ ಹಾನಿಯಾಗಿದೆ. ಸಕಲೇಶಪುರ ತಾಲೂಕಿನ ಬಿರಡಹಳ್ಳಿ ಗ್ರಾಮದಲ್ಲಿ ಭಾರಿ ಗಾಳಿಗೆ ವಾಸದ ಮನೆಯ ಹಂಚುಗಳು ಹಾರಿ ಹೋಗಿದ್ದವು. ಶೀಟ್‌ಗಳು ಮನೆಯ ಒಳಗೆ ಮುರಿದು ಬಿದ್ದಿತ್ತು. ಮನೆಯ ಮೇಲೆ ಮರ ಬಿದ್ದು ಒಂದು ಮನೆ ಜಖಂಗೊಂಡಿತ್ತು.

ಗ್ರಾಮದ ಸಲೀಂ, ಚಂದ್ರು ಎಂಬುವವರಿಗೆ ಸೇರಿದ ಮನೆಗಳು ಹಾನಿಯಾಗಿದ್ದರೆ, ಜಾಕೋಬ್ ಪಿಂಟೊ ಎಂಬುವವರ ಮನೆಯ ಮೇಲೆ ಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡಿತ್ತು. ಮನೆಯಲ್ಲಿದ್ದರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದರು. ಸ್ಥಳಕ್ಕೆ ಅಧಿಕಾರಿಗಳು ಆಗಮಿಸಿ ಪರಿಶೀಲಿಸುವಂತೆ ಒತ್ತಾಯಿಸಿದರು. ಮಳೆಯಿಂದ ಆಗಿರುವ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದರು.

Rain News

ಕೆಲವೆಡೆ ಬಾರಿ ಗಾಳಿಗೆ ಬೃಹತ್‌ ಗಾತ್ರದ ಮರ ಉರುಳಿ ಬಿದ್ದಿತ್ತು. ಜನ್ನಾಪುರ-ಹಲಸುಲಿಗೆ ರಸ್ತೆ ಮಧ್ಯೆ ಮರ ಬಿದ್ದು, ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದವು. ಇದರಿಂದಾಗಿ ಜನ್ನಾಪುರ, ಹಲಸುಲಿಗೆ, ಮಾಗಡಿ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿ, ರಾತ್ರಿಯಿಂದ ವಿದ್ಯುತ್ ಇಲ್ಲದೆ ಗ್ರಾಮಸ್ಥರ ಪರದಾಡಿದರು.

Rain News

ಜಲಾವೃತಗೊಂಡ ಬ್ರಿಡ್ಜ್‌

ಗದಗನಲ್ಲಿ ವರುಣದೇವನ ಆರ್ಭಟ ಜೋರಾಗಿದೆ. ಗುಡುಗು, ಸಿಡಿಲು ಸಹಿತ ಭಾರೀ ಮಳೆಗೆ ಗದಗನಿಂದ ಬೆಟಗೇರಿಗೆ ಸಂಪರ್ಕಿಸುವ ಬಳ್ಳಾರಿ ಗೇಟ್ ಅಂಡರ್ ಬ್ರಿಡ್ಜ್‌ ಸಂಪೂರ್ಣ ಜಲಾವೃತಗೊಂಡಿದೆ. ಸುಮಾರು 8 ಅಡಿಗಳಷ್ಟು ನೀರು ನಿಂತಿದ್ದು, ಸಂಚಾರ ಅಸ್ತವ್ಯಸ್ತಗೊಂಡು ವಾಹನ ಸವಾರರು ಪರದಾಡಿದರು. ಇತ್ತ ಬೆಟಗೇರಿ ಹಾಗೂ ಗದಗ ನಗರ ಸಂಪರ್ಕಿಸಬೇಕಾದರೆ ಸುತ್ತು ಹಾಕಿಕೊಂಡು ಹೋಗುವ ಪರಿಸ್ಥಿತಿ ಸೃಷ್ಟಿಯಾಗಿದೆ. ರಸ್ತೆ ಬದಿ ಪಾರ್ಕ್‌ ಮಾಡಿದ್ದ ಮಿನಿ ಬಸ್ ಜಲಾವೃತವಾಗಿತ್ತು. ನೀರಿನಲ್ಲಿಯೇ ಬಸ್ ಚಲಾಯಿಸಿಕೊಂಡು ಬರಲಾಯಿತು.

ಮುರಿದು ಬಿದ್ದ ಸಿಗ್ನಲ್‌ ಕಂಬ

ಧಾರವಾಡದಲ್ಲಿ ಜೋರಾಗಿ ಬೀಸಿದ ಗಾಳಿಗೆ ಸಿಗ್ನಲ್ ಕಂಬ ಮುರಿದು ಬಿದ್ದಿತ್ತು. ಧಾರವಾಡದ ಯುಬಿ ಹಿಲ್ ಸರ್ಕಲ್‌ನಲ್ಲಿದ್ದ ಕಂಬದ ಕೆಳಭಾಗದಲ್ಲಿ ತುಕ್ಕು ಹಿಡಿದಿತ್ತು. ರಭಸವಾಗಿ ಬೀಸಿದ ಗಾಳಿಗೆ ರಸ್ತೆ ಮೇಲೆಯೇ ಕಂಬ ಬಿದ್ದಿತ್ತು. ಅದೃಷ್ಟವಶಾತ್ ವಾಹನ ಸವಾರರು ಪಾರಾಗಿದ್ದರು. ವಿದ್ಯಾಗಿರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿನ್ನದ ದರ

Gold Rate Today: ಬಂಗಾರದ ದರ ಇಳಿಮುಖ; ರಾಜ್ಯದ ಬೆಲೆಗಳನ್ನು ಇಲ್ಲಿ ಗಮನಿಸಿ

Gold Rate Today: ಕಳೆದ ಒಂದು ತಿಂಗಳಿನಿಂದ ಚಿನ್ನದ ದರ ಏರುತ್ತಲೇ ಇದ್ದುದು ನಿನ್ನೆಯಿಂದ ಸ್ವಲ್ಪ ಸ್ವಲ್ಪವಾಗಿ ಇಳಿಯಲು ಆರಂಭಿಸಿದೆ. ರಾಜ್ಯದಲ್ಲಿ ಇಂದಿನ ದರಗಳು ಹೀಗಿವೆ.

VISTARANEWS.COM


on

gold beauty
Koo

ಬೆಂಗಳೂರು: ಶನಿವಾರ ರಾಜ್ಯದಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ತಲಾ ₹10 ಇಳಿಕೆಯಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ದರ ಏರುತ್ತಲೇ ಇದ್ದುದು ನಿನ್ನೆಯಿಂದ ಸ್ವಲ್ಪ ಸ್ವಲ್ಪವಾಗಿ ಇಳಿಯಲು ಆರಂಭಿಸಿದೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,805ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹54,440 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹68,050 ಮತ್ತು ₹6,80,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,424 ಆಗಿದ್ದರೆ, ಎಂಟು ಗ್ರಾಂ ಬೆಲೆ ₹59,392 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹74,240 ಮತ್ತು ₹7,42,400 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹85.75, ಎಂಟು ಗ್ರಾಂ ₹686 ಮತ್ತು 10 ಗ್ರಾಂ ₹857.50ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,575 ಮತ್ತು 1 ಕಿಲೋಗ್ರಾಂಗೆ ₹85,750 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ68,21074,390
ಮುಂಬಯಿ68,05074,240
ಬೆಂಗಳೂರು68,05074,240
ಚೆನ್ನೈ68,85075,110

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ: Gold Rate Today: ₹74,130 ತಲುಪಿ ಯಥಾಸ್ಥಿತಿ ಕಾಪಾಡಿಕೊಂಡ ಚಿನ್ನದ ಬೆಲೆ; ಇಂದಿನ ದರ ಹೀಗಿದೆ

Continue Reading

ಕ್ರೈಂ

Neha Murder Case: ನೇಹಾಳನ್ನು ಮದುವೆ ಮಾಡಿಸುವಂತೆ ಆಕೆಯ ಹೆತ್ತವರ ಪ್ರಾಣ ತಿಂದಿದ್ದ ಫಯಾಜ್!‌

Neha Murder Case: ಖುದ್ದು ಪೋಷಕರು ನೀಡಿರುವ ದೂರಿನಲ್ಲಿ ಈ ವಿಷಯ ಬಹಿರಂಗವಾಗಿದೆ. ನೇಹಾಳನ್ನು ಪ್ರೀತಿ ಮಾಡುತ್ತಿದ್ದೇನೆ. ತನಗೆ ಮದುವೆ ಮಾಡಿ ಕೊಡುವಂತೆ ನೇಹಾಳ ಪೋಷಕರಿಗೆ ಫಯಾಜ್‌ ಬೆನ್ನು ಬಿದ್ದಿದ್ದ. ನಾಲ್ಕೈದು ತಿಂಗಳಿಂದಲೂ ಮದುವೆಗಾಗಿ ಈತ ಪೀಡಿಸುತ್ತಿದ್ದ ಎಂದು ಗೊತ್ತಾಗಿದೆ.

VISTARANEWS.COM


on

Neha Murder case JDS slams hands for defending love jihad to protect accused
Koo

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ದಾರುಣವಾಗಿ (Hubli Murder Case) ಕೊಲೆಯಾದ ನೇಹಾ ಹಿರೇಮಠ (Neha Murder Case) ಅವರನ್ನು ತನಗೆ ಮದುವೆ ಮಾಡಿಕೊಡುವಂತೆ ಕೊಲೆಪಾತಕಿ ಫಯಾಜ್‌ (Fayaz) ಬಹು ದಿನಗಳಿಂದ ಆಕೆಯ ಹೆತ್ತವರನ್ನು ಪೀಡಿಸುತ್ತಿದ್ದ ಎಂಬ ವಿಚಾರ ಬಯಲಾಗಿದೆ. ನೇಹಾ ಹೆತ್ತವರು ನೀಡಿರುವ ದೂರಿನ ಕಾಪಿಯಲ್ಲಿ ಇದು ಉಲ್ಲೇಖವಾಗಿದೆ.

ಖುದ್ದು ಪೋಷಕರು ನೀಡಿರುವ ದೂರಿನಲ್ಲಿ ಈ ವಿಷಯ ಬಹಿರಂಗವಾಗಿದೆ. ನೇಹಾಳನ್ನು ಪ್ರೀತಿ ಮಾಡುತ್ತಿದ್ದೇನೆ. ತನಗೆ ಮದುವೆ ಮಾಡಿ ಕೊಡುವಂತೆ ನೇಹಾಳ ಪೋಷಕರಿಗೆ ಫಯಾಜ್‌ ಬೆನ್ನು ಬಿದ್ದಿದ್ದ. ನಾಲ್ಕೈದು ತಿಂಗಳಿಂದಲೂ ಮದುವೆಗಾಗಿ ಈತ ಪೀಡಿಸುತ್ತಿದ್ದ ಎಂದು ಗೊತ್ತಾಗಿದೆ.

ನಮ್ಮ ಮಗಳು ನಿನ್ನನ್ನು ಇಷ್ಟಪಟ್ಟಿಲ್ಲ ಎಂದು ಪೋಷಕರು ಹೇಳಿದ್ದರು. ಇನ್ನೂ ಹೆಚ್ಚಿನ ವ್ಯಾಸಂಗ ಮಾಡುವುದಿದೆ ಎಂದು ಫಯಾಜ್‌ನ ತಂದೆ, ತಾಯಿಗೆ ದೂರವಾಣಿ ಕರೆ ಮಾಡಿ ನೇಹಾ ಪೋಷಕರು ಹೇಳಿದ್ದರು. ಇಬ್ಬರ ಮತವೂ ಬೇರೆ ಆಗಿರುವುದರಿಂದಲೂ ಸಮಸ್ಯೆ ಉಂಟಾಗಬಹುದು ಎಂಬುದನ್ನು ಕೂಡ ಅವರ ಅರಿವಿಗೆ ತರಲಾಗಿತ್ತು. ಎಫ್‌ಐಆರ್‌ನಲ್ಲಿ ಈ ಬಗ್ಗೆ ವಿವರವಾದ ಉಲ್ಲೇಖವನ್ನು ನೇಹಾಳ ತಾಯಿ ಗೀತಾ ನೀಡಿದ್ದಾರೆ.

ಇಷ್ಟಾದರೂ ನಮ್ಮ ಮಗಳ ಬೆನ್ನು ಬಿದ್ದಿದ್ದ ಫಯಾಜ್, ನಾಲ್ಕೈದು ಬಾರಿ ಬೆದರಿಕೆ ಹಾಕಿದ್ದ. ಮದುವೆಯಾಗದಿದ್ದರೆ ನಿನ್ನನ್ನು ಜೀವಂತವಾಗಿ ಬಿಡುವುದಿಲ್ಲ ಎಂದು ಬೆದರಿಕೆ ಹಾಕುತ್ತಿದ್ದ ಎಂದು ನೇಹಾ ತಮ್ಮ ಗಮನಕ್ಕೆ ತಂದಿದ್ದಳು ಎಂದು ನೇಹಾಳ ಪೋಷಕರು ತಿಳಿಸಿದ್ದಾರೆ. ಆಗಲೇ ಬಹುಶಃ ಇದನ್ನು ಪೊಲೀಸರ ಗಮನಕ್ಕೆ ತಂದಿದ್ದರೆ ನೇಹಾ ಜೀವ ಉಳಿಯುತ್ತಿತ್ತೋ ಏನೋ ಎಂದು ಹೇಳಲಾಗುತ್ತಿದೆ.

“ತಪ್ಪು ಆಕೆಯಲ್ಲೂ ಇದೆ” ಎಂದು ಫಯಾಜ್‌ ತಾಯಿ

ಈ ನಡುವೆ, “ತಪ್ಪು ಆಕೆಯಲ್ಲೂ ಇದೆʼ ಎಂದು ಹೇಳಿರುವ ಆರೋಪಿ ಫಯಾಜ್‌ ತಾಯಿಯ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ವಿಸ್ತಾರ ನ್ಯೂಸ್‌ಗೆ ಹೇಳಿಕೆ ನೀಡಿರುವ ಫಯಾಜ್‌ ತಾಯಿ, ತಪ್ಪು ಒಬ್ಬರಿಂದ ಆಗಲು ಸಾಧ್ಯವೇ ಇಲ್ಲ. ತಪ್ಪು ಇಬ್ಬರಲ್ಲೂ ಇರುತ್ತೆ. ಅವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಅದು ಹೇಗೆ ಒನ್ ಸೈಡ್ ಲವ್ ಆಗುತ್ತೆ?” ಎಂದು ಪ್ರಶ್ನಿಸಿದ್ದಾರೆ.

“ಸತ್ಯಾಸತ್ಯತೆ ಪರಿಶೀಲಿಸಿ, ಸಾಧಕ ಬಾಧಕ ನೋಡಿ ಅವನಿಗೆ ಶಿಕ್ಷೆ ನೀಡಬೇಕು. ಏನೇ ಶಿಕ್ಷೆ ಕೊಟ್ಟರೂ ಸಹ ನಾನು ಒಪ್ಪಿಕೊಳ್ಳುತ್ತೇನೆ. ಇಬ್ಬರೂ ಕ್ಲಾಸ್ ಮೇಟ್ ಆಗಿದ್ದವರು. ಮುಂದೆ ಅವರಲ್ಲಿ ಏನು ನಡೆಯಿತು ಅದು ಗೊತ್ತಿಲ್ಲ. ಪೋನ್‌ನಲ್ಲಿ ಅವಳ ಜೊತೆ ಮಾತನಾಡಿದ ಎಲ್ಲ ರೆಕಾರ್ಡ್‌ಗಳಿವೆ. ಇದರ ಮೇಲೆ ಕಾನೂನು ಯಾವ ರೀತಿ ಕ್ರಮ ಕೈಗೊಳ್ಳುತ್ತೋ ಅದು ತೆಗೆದುಕೊಳ್ಳಲಿ” ಎಂದಿದ್ದಾರೆ.

“ಇರುವೆಯನ್ನೂ ಸಹ ಸಾಯಿಸದ ಅವನಿಗೆ ಇಷ್ಟೊಂದು ಧೈರ್ಯ ಹೇಗೆ ಬಂತು ಅಂತ ನಮಗೆ ಗೊತ್ತಿಲ್ಲ. ಜಿಮ್ ಮಾಡಿ ಒಳ್ಳೆಯ ಬಾಡಿ ಇಟ್ಟುಕೊಂಡಿದ್ದ ಅವನು. ಅವಳ ಜೊತೆಗಿನ ಪ್ರೀತಿ ಸ್ನೇಹದಿಂದಲೇ ಅವನು ಡಿಪ್ರೆಶನ್‌ಗೆ ಹೋದ. ಊಟ ಸಹ ಸರಿಯಾಗಿ ಮಾಡುತ್ತಿರಲಿಲ್ಲ” ಎಂದಿದ್ದಾರೆ.

“ನಾವು ನೂರಾರು ಮಕ್ಕಳಿಗೆ ಶಿಕ್ಷಣ ಕೊಟ್ಟಿದ್ದೇವೆ. ಅವರು ತಪ್ಪು ಮಾಡಿದಾಗ ಹೊಡೆದು ಬುದ್ಧಿ ಹೇಳ್ತೀವಿ. ಆದ್ರೆ ನನ್ನ ಮಗನೇ ಈಗ ತಪ್ಪು ಮಾಡಿದ್ದಾನೆ, ಅದು ತಪ್ಪು ತಪ್ಪೇ. ಕಾನೂನು ಪ್ರಕಾರ ಏನು ಶಿಕ್ಷೆ ಆಗಬೇಕೋ ಅದು ಆಗಲಿ. ಘಟನೆ ನಡೆದು ಸಂಜೆ ಗೊತ್ತಾಗಿದೆ. ಎರಡು ದಿನದಿಂದ ನಂಗೆ ಕರೆ ಸಹ ಮಾಡಿಲ್ಲ ಅವನು. ಅವನ ತಪ್ಪಿಗೆ ಶಿಕ್ಷೆ ಆಗಲೇಬೇಕು, ಅದನ್ನು ಅವನು ಅನುಭವಿಸಬೇಕು” ಎಂದು ಹೇಳಿದ್ದಾರೆ.

“ಐಎಎಸ್ ಆಫೀಸರ್ ಆಗುತ್ತಾನೆ ಅಂತ ನಾವು ಅಂದುಕೊಂಡಿದ್ದೆವು. ಒಬ್ಬನೇ ಮಗ ಎಂದು ಉತ್ತಮ ಶಿಕ್ಷಣ ಕೊಡಿಸಿದ್ದೆವು. ಅವನ ತಪ್ಪಿನಿಂದ ನಾವೆಲ್ಲರೂ ತಲೆ ತಗ್ಗಿಸುವಂತೆ ಆಗಿದೆ” ಎಂದು ಹೇಳಿದ್ದಾರೆ. ಆದರೆ ಅವರು ಫಯಾಜ್‌ ಕೃತ್ಯವನ್ನು ಸಮರ್ಥಿಸಿಕೊಂಡಂತೆ ಮಾತನಾಡಿರುವುದು ಹಾಗೂ ಈ ಕೃತ್ಯದಲ್ಲಿ ನೇಹಾ ಪಾಲೂ ಇದೆ ಎಂಬರ್ಥ ಬರುವಂತೆ ಮಾತನಾಡಿರುವುದು ಎಲ್ಲರ ಹುಬ್ಬೇರುವಂತೆ ಮಾಡಿದೆ.

ಇದನ್ನೂ ಓದಿ: Neha Murder Case: ನೇಹಾ ಹತ್ಯೆ: ಅಪರಾಧಿಗೆ ಶಿಕ್ಷೆ ನೀಡಬೇಕು ಎಂದು ಸಿನಿಮಾ ತಾರೆಯರ ಆಗ್ರಹ

Continue Reading
Advertisement
50 out of syllabus question in CET 2024 exam Re examination or grace marks
ಶಿಕ್ಷಣ5 mins ago

CET 2024 exam: ಸಿಇಟಿಯಲ್ಲಿ 50 ಔಟ್ ಆಫ್ ಸಿಲೆಬಸ್ ಪ್ರಶ್ನೆ; ಮರು ಪರೀಕ್ಷೆ ಅಥವಾ ಗ್ರೇಸ್‌ ಮಾರ್ಕ್ಸ್‌? ಇಂದು ನಿರ್ಧಾರ

MS Dhoni
ಪ್ರಮುಖ ಸುದ್ದಿ10 mins ago

MS Dhoni : ಧೋನಿ ಮುಟ್ಟಿದ್ದೆಲ್ಲ ದಾಖಲೆ, ಲಕ್ನೊ ವಿರುದ್ಧವೂ ಮತ್ತೊಂದು ರೆಕಾರ್ಡ್​​

Neha Murder Case Rachita Ram React
ಕ್ರೈಂ26 mins ago

Neha Murder Case: ನೇಹಾ ಹತ್ಯೆ ಆರೋಪಿಯನ್ನು ಜನರ ಕೈಗೆ ಒಪ್ಪಿಸಿ ಎಂದ ಡಿಂಪಲ್‌ ಕ್ವೀನ್‌!

Rain News
ಮಳೆ30 mins ago

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

gold beauty
ಚಿನ್ನದ ದರ34 mins ago

Gold Rate Today: ಬಂಗಾರದ ದರ ಇಳಿಮುಖ; ರಾಜ್ಯದ ಬೆಲೆಗಳನ್ನು ಇಲ್ಲಿ ಗಮನಿಸಿ

Pragya Misra
ತಂತ್ರಜ್ಞಾನ44 mins ago

Pragya Misra: ಭಾರತದಲ್ಲಿ ತನ್ನ ಮೊದಲ ಉದ್ಯೋಗಿಯನ್ನು ನೇಮಿಸಿದ ಒಪನ್ ಎಐ

Neha Murder case JDS slams hands for defending love jihad to protect accused
ಕ್ರೈಂ47 mins ago

Neha Murder Case: ನೇಹಾಳನ್ನು ಮದುವೆ ಮಾಡಿಸುವಂತೆ ಆಕೆಯ ಹೆತ್ತವರ ಪ್ರಾಣ ತಿಂದಿದ್ದ ಫಯಾಜ್!‌

Drunken Groom
ದೇಶ47 mins ago

Drunken Groom: ಕುಡಿದ ಮತ್ತಿನಲ್ಲಿಯೇ ಮಂಟಪಕ್ಕೆಬಂದ ವರ; ಒದ್ದೋಡಿಸಿದ ವಧು!

Nysa Devgan Kajol shares 3 new pics
ಸಿನಿಮಾ53 mins ago

Nysa Devgan: ಕಾಜೋಲ್‌ ಮಗಳಿಗೆ ಹುಟ್ಟು ಹಬ್ಬದ ಸಂಭ್ರಮ! ನೈಸಾಗೆ ವಯಸ್ಸೆಷ್ಟು?

IPL 2024
ಕ್ರೀಡೆ59 mins ago

IPL 2024 : ಬಿಸಿಸಿಐ ನಿಯಮ ಉಲ್ಲಂಘನೆ; ಋತುರಾಜ್​, ರಾಹುಲ್​ಗೆ ದಂಡ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ1 hour ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Dina Bhavishya
ಭವಿಷ್ಯ8 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ21 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ1 day ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20245 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20246 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

ಟ್ರೆಂಡಿಂಗ್‌