ವಿಸ್ತಾರ TOP 10 NEWS |‌ ಯುವ ದಿನದಂದು ಮೋದಿ ಹವಾದಿಂದ, 2ಸಿ-2ಡಿ ಮೀಸಲಿಗೆ ಹೈಕೋರ್ಟ್‌ ತಡೆವರೆಗಿನ ಪ್ರಮುಖ ಸುದ್ದಿಗಳಿವು - Vistara News

ಕರ್ನಾಟಕ

ವಿಸ್ತಾರ TOP 10 NEWS |‌ ಯುವ ದಿನದಂದು ಮೋದಿ ಹವಾದಿಂದ, 2ಸಿ-2ಡಿ ಮೀಸಲಿಗೆ ಹೈಕೋರ್ಟ್‌ ತಡೆವರೆಗಿನ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

vistara-top-10-news-modi hawa in youth day to high court stay over reservation and more news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

1. National Youth Festival | ಯುವಶಕ್ತಿಯೇ ಭಾರತದ ಪಯಣದ ಚಾಲಕ ಶಕ್ತಿ: ಪ್ರಧಾನಿ ನರೇಂದ್ರ ಮೋದಿ ಬಣ್ಣನೆ
ಇಡೀ ವಿಶ್ವವು ಭಾರತದ ಕಡೆಗೆ ಬೆರಗುಗಣ್ಣಿನಿಂದ ನೋಡುತ್ತಿರುವುದಕ್ಕೆ ಇಲ್ಲಿರುವ ಯುವ ಶಕ್ತಿಯೇ ಕಾರಣ. ಯುವಶಕ್ತಿಯೇ ಭಾರತದ ಪಯಣದ ಚಾಲಕ ಶಕ್ತಿ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದರು. ಉತ್ತರ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಲಾಗಿರುವ 26ನೇ ರಾಷ್ಟ್ರೀಯ ಯುವ ಜನೋತ್ಸವದಲ್ಲಿ ಭಾಗವಹಿಸಿ, ನೆರೆದಿದ್ದ ಬೃಹತ್‌ ಯುವಸ್ತೋಮವನ್ನುದ್ದೇಶಿಸಿ ಮಾತನಾಡಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

2. National Youth Festival : ಮೋದಿಗೆ ಹೂವಿನ ಹಾರ ಕೊಡಲು ಬ್ಯಾರಿಕೇಡ್‌ ಹಾರಿಬಂದ ಬಾಲಕ; ಭದ್ರತಾ ಸಿಬ್ಬಂದಿ ತಬ್ಬಿಬ್ಬು!
ರಾಷ್ಟ್ರೀಯ ಯುವಜನೋತ್ಸವ (National Youth Festival) ಕಾರ್ಯಕ್ರಮಕ್ಕೆ ಚಾಲನೆ ನೀಡಲು ಹುಬ್ಬಳ್ಳಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್‌ ಶೋ ವೇಳೆ ಬಿಗಿ ಭದ್ರತೆಯ ನಡುವೆಯೇ ಕಾರಿನತ್ತ ನುಗ್ಗಿ ಬಂದ ಬಾಲಕ ಹಾರವನ್ನು ಪ್ರಧಾನಿಗೆ ನೀಡಿದ್ದಾನೆ. ಈ ಮೂಲಕ ಭದ್ರತಾ ಲೋಪವುಂಟಾಗಿತ್ತು. ಬಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

3. Panchamasali Reservation | ಪಂಚಮಸಾಲಿ ಮೀಸಲಾತಿಗೆ ಹೈಕೋರ್ಟ್‌ ಬ್ರೇಕ್‌: ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚನೆ
ಪಂಚಮಸಾಲಿ ಸಮದಾಯಕ್ಕೆ ಪ್ರವರ್ಗ ೨ಡಿ, ಒಕ್ಕಲಿಗರಿಗೆ ೨ಸಿ ಎಂಬ ಹೊಸ ಪ್ರವರ್ಗ ಸೃಷ್ಟಿಸಿ (Panchamasali Reservation) ವಿಶೇಷ ಮೀಸಲಾತಿ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ಪ್ರಯತ್ನಕ್ಕೆ ಹಿನ್ನಡೆಯಾಗಿದೆ. ಹೊಸ ಮೀಸಲಾತಿ ಪ್ರಸ್ತಾವನೆಗಳಿಗೆ ರಾಜ್ಯ ಹೈಕೋರ್ಟ್‌ ತಡೆಯಾಜ್ಞೆ ನೀಡಿದ್ದು ಯಥಾಸ್ಥಿತಿ ಕಾಪಾಡುವಂತೆ ಸೂಚಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

4. Santro Ravi case | ಸ್ಯಾಂಟ್ರೋ ಬಂಧನದ ಮೂಲಕ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಂಡ ಸರ್ಕಾರ
ಕಳೆದ ಹತ್ತು ದಿನಗಳಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ ಕುಖ್ಯಾತ ಕ್ರಿಮಿನಲ್‌ ಸ್ಯಾಂಟ್ರೋ ರವಿ (Santro Ravi case) ಬಂಧನದೊಂದಿಗೆ ರಾಜ್ಯ ಬಿಜೆಪಿ ಸರ್ಕಾರ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಂಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

5. Karnataka Tableau | ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಟ್ಯಾಬ್ಲೋಗೆ ಅವಕಾಶ!
ಜನವರಿ 26ರ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಟ್ಯಾಬ್ಲೋಗೆ (Karnataka Tableau) ಅವಕಾಶ ನೀಡಲಾಗಿದೆ. ಸುಮಾರು 13 ವರ್ಷಗಳಿಂದ ಕರ್ನಾಟಕವು ಪ್ರತಿನಿಧಿಸುತ್ತಿದ್ದರಿಂದ ಈ ಬಾರಿ ಕೈ ಬಿಡಲಾಗಿತ್ತು. ಆದರೆ, ಮೂರ್ನಾಲ್ಕು ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವುದರಿಂದ, ಈ ವಿಷಯವು ರಾಜಕೀಯ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗಿತ್ತು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

6. Free Electricity | ಕಾಂಗ್ರೆಸ್‌ನ ಉಚಿತ ವಿದ್ಯುತ್‌ ಘೋಷಣೆ ಜಾರಿಗೆ ಬೇಕು ₹23 ಸಾವಿರ ಕೋಟಿ!: ಅನುಷ್ಠಾನ ಅಸಾಧ್ಯ?
ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿ ಮನೆಗೆ 200 ಯುನಿಟ್‌ ಉಚಿತ ವಿದ್ಯುತ್‌ ನೀಡುವುದಾಗಿ ಚಿಕ್ಕೋಡಿಯಿಂದ ಬುಧವಾರ ಆರಂಭವಾದ ಪ್ರಜಾಧ್ವನಿ ಯಾತ್ರೆಯಲ್ಲಿ ಘೋಷಣೆ ಮಾಡಿದ್ದು, ಇದರ ಜಾರಿಯ ಸಾಧ್ಯತೆ ಕುರಿತು ಪ್ರಶ್ನೆಗಳೆದ್ದಿವೆ. ಈ ಕುರಿತು ಪೂರ್ಣ ವರದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. Vivekananda Jayanti 2023 | ವಿಸ್ತಾರ ನ್ಯೂಸ್‌ ನಿಂದ ನಾಳೆ ವಿವೇಕ ವಂದನೆ ಕಾರ್ಯಕ್ರಮ; ಸಿಎಂ ಸೇರಿದಂತೆ ಹಲವು ಗಣ್ಯರು ಭಾಗಿ
ಸ್ವಾಮಿ ವಿವೇಕಾನಂದರ 160ನೇ ಜನ್ಮ ದಿನಾಚರಣೆ (Vivekananda Jayanti 2023) ಅಂಗವಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಯೋಗದಲ್ಲಿ ನಿಮ್ಮ ನೆಚ್ಚಿನ ಸುದ್ದಿ ಸಂಸ್ಥೆ ವಿಸ್ತಾರ ನ್ಯೂಸ್‌ ಶುಕ್ರವಾರ ಏರ್ಪಡಿಸಿರುವ “ವಿವೇಕ ವಂದನೆʼʼ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ.
ಜನವರಿ 13 ರಂದು ವಿಧಾನಸೌಧದ ಮುಂಭಾಗದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ನಗರದ ವಿವಿಧ ಕಾಲೇಜುಗಳ ಸಾವಿರಾರು ವಿದ್ಯಾರ್ಥಿಗಳು ಮತ್ತು ಯುವಜನರು ಭಾಗವಹಿಸಲಿದ್ದಾರೆ. ಬೆಂಗಳೂರಿನ ವಿವೇಕಯುಗ ಫೌಂಡೇಷನ್‌ ಈ ಕಾರ್ಯಕ್ರಮಕ್ಕೆ ಸಾಥ್‌ ನೀಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

8. Janardhana Reddy | ಹೆಚ್ಚುವರಿ ಆಸ್ತಿ ಜಪ್ತಿಗೆ ಅವಕಾಶ ಕೋರಿದ ಸಿಬಿಐ ಮನವಿಗೆ ಅಸ್ತು ಎಂದ ಸರ್ಕಾರ: ರೆಡ್ಡಿಗೆ ಹಿನ್ನಡೆ
ತಮ್ಮ ರಾಜಕೀಯದ ಎರಡನೇ ಇನ್ನಿಂಗ್ಸ್ ಆರಂಭಿಸಲು ಸಜ್ಜಾಗಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ (Janardhana Reddy) ಅವರಿಗೆ ರಾಜ್ಯ ಸರ್ಕಾರ ಶಾಕ್‌ ನೀಡಿದೆ. ಜನಾರ್ದನ ರೆಡ್ಡಿಯ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವುದಕ್ಕೆ ಅನುಮತಿ ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿಗೆ ಸರ್ಕಾರ ಅನುಮತಿ ನೀಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

9. Plastic rice | ಶಾಲಾ ಮಕ್ಕಳ ಬಿಸಿಯೂಟದ ಅಕ್ಕಿ ಜತೆ ಮಿಕ್ಸ್‌ ಆಗಿದೆಯಾ ಪ್ಲಾಸ್ಟಿಕ್‌ ರೈಸ್‌: ತೇಲುವ ಮಣಿಗಳು ಏನಿವು?
ಕೊಡಗು ಜಿಲ್ಲೆ ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫ್ರೌಡಶಾಲಾ ಮಕ್ಕಳ ಬಿಸಿಯೂಟಕ್ಕೆ ಸರಬರಾಜಾದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ (Platic rice) ಮಿಶ್ರವಾಗಿರುವ ಸಂಶಯ ವ್ಯಕ್ತವಾಗಿದ್ದು, ಈ ಬಗ್ಗೆ ಜನರು ಆತಂಕ ವ್ಯಕ್ತಪಡಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. Ram Setu | ರಾಮಸೇತು ರಾಷ್ಟ್ರೀಯ ಸ್ಮಾರಕ, ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ, ಪ್ರತಿಕ್ರಿಯೆ ನೀಡುವಂತೆ ಕೇಂದ್ರಕ್ಕೆ ನಿರ್ದೇಶನ
ಪುರಾತನ ಇತಿಹಾಸವಿರುವ ರಾಮಸೇತುವನ್ನು (Ram Setu) ‘ರಾಷ್ಟ್ರೀಯ ಪಾರಂಪರಿಕ ಸ್ಮಾರಕ’ (National Heritage Monument) ಎಂಬುದಾಗಿ ಘೋಷಿಸಬೇಕು ಎಂದು ರಾಜ್ಯಸಭೆ ಬಿಜೆಪಿ ಮಾಜಿ ಸದಸ್ಯ, ಪಕ್ಷದ ಮುಖಂಡ ಸುಬ್ರಮಣಿಯನ್‌ ಸ್ವಾಮಿ ಸಲ್ಲಿಸಿದ ಅರ್ಜಿಯನ್ನು ಫೆಬ್ರವರಿಯಲ್ಲಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಸಮ್ಮತಿಸಿದೆ. ಹಾಗೆಯೇ, ಫೆಬ್ರವರಿ ಮೊದಲ ವಾರದೊಳಗೆ ಈ ಕುರಿತು ಪ್ರತಿಕ್ರಿಯೆ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ಮತ್ತಷ್ಟು ಪ್ರಮುಖ ಸುದ್ದಿಗಳಿವು

  1. ಯೋಧನ ಎದೆಯಿಂದ ಸಜೀವ ಗ್ರೆನೇಡ್​ ಹೊರತೆಗೆದ ಸಾಹಸಿ ವೈದ್ಯ; ಯಾವುದೇ ಕ್ಷಣದಲ್ಲಾದರೂ ಸ್ಫೋಟಿಸುವ ಅಪಾಯವಿತ್ತು!
  2. Apartmentalisation | ಚಂಡೀಗಢದಲ್ಲಿ ಅಪಾರ್ಟ್‌ಮೆಂಟ್‌ ನಿರ್ಮಾಣ, ಅವೈಜ್ಞಾನಿಕ ನಗರಕ್ಕೆ ಬೆಂಗಳೂರು ನಿದರ್ಶನ ಕೊಟ್ಟ ಸುಪ್ರೀಂ
  3. ಧವಳ ಧಾರಿಣಿ ಅಂಕಣ | ರಾಮಕೃಷ್ಣ ಪರಮಹಂಸರ ತಪಸ್ಸಿನ ಸಾಫಲ್ಯದ ಫಲ ಸ್ವಾಮಿ ವಿವೇಕಾನಂದ
  4. ಮಕ್ಕಳ ಕಥೆ | ಏಳು ಬೀಳು ಕಂಡ ವರ್ತಕ
  5. Rakhi Sawant | ಇಸ್ಲಾಂಗೆ ಮತಾಂತರಗೊಂಡ ರಾಖಿ ಸಾವಂತ್; ಆಕೆಯ ಹೆಸರೀಗ ಫಾತಿಮಾ!
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading

Latest

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

VISTARANEWS.COM


on

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದಾರೆ. ಏಪ್ರಿಲ್‌ 27 ರಂದು ದರ್ಶನ್ ಪರ ವಕೀಲ ರಂಜಿತ್ ರೋಹಟಗಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಂತರ ಜಾಮೀನು ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ 4ಕ್ಕೆ ನಿಗದಿಪಡಿಸಿದೆ.

Continue Reading

ಕರ್ನಾಟಕ

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಬ್ರೇಕ್: ಶಿಕ್ಷಣ ಇಲಾಖೆ ಮಹತ್ವದ ಆದೇಶ

VISTARANEWS.COM


on

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಬ್ರೇಕ್: ಶಿಕ್ಷಣ ಇಲಾಖೆ ಮಹತ್ವದ ಆದೇಶ

ಬೆಂಗಳೂರು: ಶಾಲೆಗಳಲ್ಲಿ ಇನ್ನು ಮುಂದೆ ಅಶ್ಲೀಲ ಹಾಡು ಮತ್ತು ಅಸಭ್ಯ ನೃತ್ಯಗಳಿಗೆ ಅವಕಾಶ ನೀಡದಂತೆ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಹೆಸರಿನಲ್ಲಿ ದ್ವಂದ್ವಾರ್ಥದ ಸಿನಿಮಾ ಹಾಡು ಹಾಗೂ ನೃತ್ಯಗಳನ್ನು ಪ್ರದರ್ಶಿಸುವುದರಿಂದ ಮಕ್ಕಳ ಮನಸ್ಸಿನ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಅಧಿಕೃತ ಆದೇಶ ಹೊರಡಿಸಲಾಗಿದೆ.
ಶಿಕ್ಷಣ ಇಲಾಖೆ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿಯ ಪ್ರಕಾರ, ಶಾಲಾ ಕಾರ್ಯಕ್ರಮಗಳಲ್ಲಿ ಕೇವಲ ಜಾನಪದ, ದೇಶಭಕ್ತಿ ಗೀತೆಗಳು, ಪರಿಸರ ಕಾಳಜಿಯ ಹಾಡುಗಳು ಮತ್ತು ಸಮಾಜಮುಖಿ ಚಿಂತನೆಯುಳ್ಳ ಸಂಗೀತಕ್ಕೆ ಮಾತ್ರ ಆದ್ಯತೆ ನೀಡಬೇಕು. ನೃತ್ಯದ ಸಮಯದಲ್ಲಿ ವಿದ್ಯಾರ್ಥಿಗಳು ಧರಿಸುವ ಉಡುಪುಗಳು ಕೂಡ ಸಭ್ಯವಾಗಿರಬೇಕು ಹಾಗೂ ಅರೆಬರೆ ವಸ್ತ್ರಗಳನ್ನು ಧರಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮನರಂಜನೆಯ ಹೆಸರಿನಲ್ಲಿ ಸಮಾಜಕ್ಕೆ ತಪ್ಪು ಸಂದೇಶ ನೀಡುವ ಅಥವಾ ಮಕ್ಕಳ ನೈತಿಕ ಹಾಗೂ ಮಾನಸಿಕ ಆರೋಗ್ಯ ಕೆಡಿಸುವ ಯಾವುದೇ ಹಾಡುಗಳನ್ನು ಬಳಸದಂತೆ ಶಾಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಈ ನಿಯಮಗಳನ್ನು ಜಾರಿಗೆ ತರುವ ಸಂಪೂರ್ಣ ಜವಾಬ್ದಾರಿಯನ್ನು ಶಾಲಾ ಮುಖ್ಯಸ್ಥರು ಮತ್ತು ಆಡಳಿತ ಮಂಡಳಿಗೆ ವಹಿಸಲಾಗಿದೆ.

Continue Reading

bigbreaking

20 ಸಾವಿರ ಕೋಟಿ ಹಗರಣದ ಮೂಲ ದಾಖಲೆಗಳೇ ನಾಪತ್ತೆ. ಎನ್‌.ಆರ್‌.ರಮೇಶ್‌ ಗಂಭೀರ ಆರೋಪ.

VISTARANEWS.COM


on

ಬೆಂಗಳೂರು: ರಾಜ್ಯ ರಾಜಕೀಯ ಹಾಗೂ ಆಡಳಿತ ವಲಯವನ್ನು ಬೆಚ್ಚಿಬೀಳಿಸುವಂತಹ ಗಂಭೀರ ಆರೋಪವೊಂದು ಹೊರಬಂದಿದೆ. 2007-08ರಿಂದ ಇದುವರೆಗೆ ನಡೆದಿರುವ 20 ಸಾವಿರ ಕೋಟಿಗೂ ಹೆಚ್ಚು ಮೊತ್ತದ TDR ಹಗರಣಗಳಿಗೆ ಸಂಬಂಧಿಸಿದ ಮೂಲ ದಾಖಲೆಗಳು ಈಗಿನ ಜಿಬಿಎ ಯ ಭೂಸ್ವಾಧೀನ ಮತ್ತು ಟಿಡಿಆರ್‌ ವಿಭಾಗದ ಕಚೇರಿಯಿಂದ ನಾಪತ್ತೆಯಾಗಿವೆ ಎನ್ನುವ ಆಘಾತಕಾರಿ ವಿಷಯವನ್ನು ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್ ಬಹಿರಂಗಪಡಿಸಿದ್ದಾರೆ.
ಇಂದು ಜಿಬಿಎ ಕೇಂದ್ರ ಕಚೇರಿ ಮುಂಭಾಗ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಹಿರಿಯ ನಾಯಕ ಹಾಗೂ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್‌ ಟಿಡಿಆರ್‌ ಹಗರಣದ ದಾಖಲೆಗಳ ನಾಪತ್ತೆ ಬಗ್ಗೆ ಮಹತ್ವದ ಮಾಹಿತಿಗಳನ್ನು ತಿಳಿಸಿದರು. ರಸ್ತೆ ಅಭಿವೃದ್ಧಿ ಮತ್ತು ವಿವಿಧ ಅಭಿವೃದ್ಧಿ ಯೋಜನೆಗೆ ಅಗತ್ಯವಿರುವ ಭೂಮಿಯನ್ನು ಭೂ ಮಾಲೀಕರಿಂದ ನಿಯಮಾನುಸಾರ ಸ್ವಾಧೀನಪಡಿಸಿಕೊಂಡು, ಅದಕ್ಕೆ ಬದಲಾಗಿ ನಿಗದಿತ ಮೊತ್ತದ ಪರಿಹಾರ ಧನ ಅಥವಾ TDR /DRC ನೀಡುವ ಕಾರ್ಯ 2007-08 ರಲ್ಲಿ ಚಾಲನೆಗೆ ಬಂದಿತ್ತು. ಇದಾದ ನಂತರ TDR ನಿಯಮಗಳಲ್ಲಿನ ಸಣ್ಣಪುಟ್ಟ ಲೋಪದೋಷಗಳನ್ನು ದುರ್ಬಳಕೆ ಮಾಡಿಕೊಳ್ಳುವ ಕರಾಳ ದಂಧೆ ಬೃಹತ್ ಪ್ರಮಾಣದಲ್ಲಿ ಬೆಳೆದು, ಬಿಬಿಎಂಪಿ ಮತ್ತು ಬಿಡಿಎ ನ ಭ್ರಷ್ಟ ಅಧಿಕಾರಿಗಳ ಸಹಕಾರದಿಂದ ಸುಮಾರು 50 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಗರಣ ನಡೆದಿದೆ ಎಂದು ಎನ್‌.ಆರ್‌.ರಮೇಶ್‌ ಆರೋಪಿಸಿದ್ದಾರೆ.
ಟಿಡಿಆರ್‌ ಹಗರಣ ಪ್ರಕರಣದ ವಿಚಾರ ಈಗಾಗಲೇ ಜಾರಿ ನಿರ್ದೇಶನಾಲಯ (ED) ಮತ್ತು ಲೋಕಾಯುಕ್ತದಲ್ಲಿ ತನಿಖೆ ಹಾಗೂ ವಿಚಾರಣಾ ಹಂತದಲ್ಲಿದೆ. ಆದರೆ ಇದೀಗ ಹಗರಣಕ್ಕೆ ಸಂಬಂಧಿಸಿದ ಪ್ರಮುಖ ದಾಖಲೆಗಳು ಕಾಣೆಯಾಗಿರುವುದು ಪ್ರಕರಣದ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದ್ದು, ಇದರಲ್ಲಿ ಜಿಬಿಎ ಅಧಿಕಾರಿಗಳು ಮತ್ತು ವಂಚಕರ ಪಾತ್ರ ಇದೆ ಎಂದು ಎನ್‌.ಆರ್‌.ರಮೇಶ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಎಲ್ಲಾ ಆರೋಪಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ದಾಖಲೆಗಳೊಂದಿಗೆ ಜಾರಿ ನಿರ್ದೇಶನಾಲಯ ಮತ್ತು ಲೋಕಾಯುಕ್ತದಲ್ಲಿ ದೂರುಗಳನ್ನು ದಾಖಲಿಸಲಿದ್ದೇನೆ ಎಂದು ಅವರು ತಿಳಿಸಿದ್ದಾರೆ.

Continue Reading
Advertisement
Latest6 minutes ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest2 hours ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

Latest2 hours ago

ರಾಜ್ಯದಲ್ಲಿ ನಾಯಕತ್ವ ಗೊಂದಲ: “ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ” – ಖರ್ಗೆ ಸ್ಪಷ್ಟನೆ

Latest3 hours ago

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

Latest20 hours ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

Latest21 hours ago

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ

Latest21 hours ago

ಜಪಾನ್‌ಗೆ ಲಗ್ಗೆ ಇಡಲು ಸಜ್ಜಾದ ʼಧುರಂಧರ್’

bigbreaking21 hours ago

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಾ ಮೇ ಕ್ಲೈಮ್ಯಾಕ್ಸ್‌?

Latest23 hours ago

ಡಾಲಿ ಧನಂಜಯ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ಸ್ಯಾಂಡಲ್‌ವುಡ್ ಸ್ಟಾರ್ ದಂಪತಿ!

Latest1 day ago

ಶಿಸ್ತು ಮರೆತರಾ ರಿಯಾನ್ ಪರಾಗ್? ಕಾನೂನು ಸಂಕಷ್ಟಕ್ಕೆ ಸಿಲುಕುತ್ತಾರಾ ರಾಜಸ್ಥಾನ ರಾಯಲ್ಸ್ ಆಟಗಾರ?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌