1. National Youth Festival | ಯುವಶಕ್ತಿಯೇ ಭಾರತದ ಪಯಣದ ಚಾಲಕ ಶಕ್ತಿ: ಪ್ರಧಾನಿ ನರೇಂದ್ರ ಮೋದಿ ಬಣ್ಣನೆ
ಇಡೀ ವಿಶ್ವವು ಭಾರತದ ಕಡೆಗೆ ಬೆರಗುಗಣ್ಣಿನಿಂದ ನೋಡುತ್ತಿರುವುದಕ್ಕೆ ಇಲ್ಲಿರುವ ಯುವ ಶಕ್ತಿಯೇ ಕಾರಣ. ಯುವಶಕ್ತಿಯೇ ಭಾರತದ ಪಯಣದ ಚಾಲಕ ಶಕ್ತಿ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದರು. ಉತ್ತರ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಲಾಗಿರುವ 26ನೇ ರಾಷ್ಟ್ರೀಯ ಯುವ ಜನೋತ್ಸವದಲ್ಲಿ ಭಾಗವಹಿಸಿ, ನೆರೆದಿದ್ದ ಬೃಹತ್ ಯುವಸ್ತೋಮವನ್ನುದ್ದೇಶಿಸಿ ಮಾತನಾಡಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
2. National Youth Festival : ಮೋದಿಗೆ ಹೂವಿನ ಹಾರ ಕೊಡಲು ಬ್ಯಾರಿಕೇಡ್ ಹಾರಿಬಂದ ಬಾಲಕ; ಭದ್ರತಾ ಸಿಬ್ಬಂದಿ ತಬ್ಬಿಬ್ಬು!
ರಾಷ್ಟ್ರೀಯ ಯುವಜನೋತ್ಸವ (National Youth Festival) ಕಾರ್ಯಕ್ರಮಕ್ಕೆ ಚಾಲನೆ ನೀಡಲು ಹುಬ್ಬಳ್ಳಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ವೇಳೆ ಬಿಗಿ ಭದ್ರತೆಯ ನಡುವೆಯೇ ಕಾರಿನತ್ತ ನುಗ್ಗಿ ಬಂದ ಬಾಲಕ ಹಾರವನ್ನು ಪ್ರಧಾನಿಗೆ ನೀಡಿದ್ದಾನೆ. ಈ ಮೂಲಕ ಭದ್ರತಾ ಲೋಪವುಂಟಾಗಿತ್ತು. ಬಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
3. Panchamasali Reservation | ಪಂಚಮಸಾಲಿ ಮೀಸಲಾತಿಗೆ ಹೈಕೋರ್ಟ್ ಬ್ರೇಕ್: ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚನೆ
ಪಂಚಮಸಾಲಿ ಸಮದಾಯಕ್ಕೆ ಪ್ರವರ್ಗ ೨ಡಿ, ಒಕ್ಕಲಿಗರಿಗೆ ೨ಸಿ ಎಂಬ ಹೊಸ ಪ್ರವರ್ಗ ಸೃಷ್ಟಿಸಿ (Panchamasali Reservation) ವಿಶೇಷ ಮೀಸಲಾತಿ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ಪ್ರಯತ್ನಕ್ಕೆ ಹಿನ್ನಡೆಯಾಗಿದೆ. ಹೊಸ ಮೀಸಲಾತಿ ಪ್ರಸ್ತಾವನೆಗಳಿಗೆ ರಾಜ್ಯ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು ಯಥಾಸ್ಥಿತಿ ಕಾಪಾಡುವಂತೆ ಸೂಚಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
4. Santro Ravi case | ಸ್ಯಾಂಟ್ರೋ ಬಂಧನದ ಮೂಲಕ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಂಡ ಸರ್ಕಾರ
ಕಳೆದ ಹತ್ತು ದಿನಗಳಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ ಕುಖ್ಯಾತ ಕ್ರಿಮಿನಲ್ ಸ್ಯಾಂಟ್ರೋ ರವಿ (Santro Ravi case) ಬಂಧನದೊಂದಿಗೆ ರಾಜ್ಯ ಬಿಜೆಪಿ ಸರ್ಕಾರ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಂಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
5. Karnataka Tableau | ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಟ್ಯಾಬ್ಲೋಗೆ ಅವಕಾಶ!
ಜನವರಿ 26ರ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಟ್ಯಾಬ್ಲೋಗೆ (Karnataka Tableau) ಅವಕಾಶ ನೀಡಲಾಗಿದೆ. ಸುಮಾರು 13 ವರ್ಷಗಳಿಂದ ಕರ್ನಾಟಕವು ಪ್ರತಿನಿಧಿಸುತ್ತಿದ್ದರಿಂದ ಈ ಬಾರಿ ಕೈ ಬಿಡಲಾಗಿತ್ತು. ಆದರೆ, ಮೂರ್ನಾಲ್ಕು ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವುದರಿಂದ, ಈ ವಿಷಯವು ರಾಜಕೀಯ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗಿತ್ತು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
6. Free Electricity | ಕಾಂಗ್ರೆಸ್‌ನ ಉಚಿತ ವಿದ್ಯುತ್ ಘೋಷಣೆ ಜಾರಿಗೆ ಬೇಕು ₹23 ಸಾವಿರ ಕೋಟಿ!: ಅನುಷ್ಠಾನ ಅಸಾಧ್ಯ?
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಚಿಕ್ಕೋಡಿಯಿಂದ ಬುಧವಾರ ಆರಂಭವಾದ ಪ್ರಜಾಧ್ವನಿ ಯಾತ್ರೆಯಲ್ಲಿ ಘೋಷಣೆ ಮಾಡಿದ್ದು, ಇದರ ಜಾರಿಯ ಸಾಧ್ಯತೆ ಕುರಿತು ಪ್ರಶ್ನೆಗಳೆದ್ದಿವೆ. ಈ ಕುರಿತು ಪೂರ್ಣ ವರದಿಗೆ ಇಲ್ಲಿ ಕ್ಲಿಕ್ ಮಾಡಿ.
7. Vivekananda Jayanti 2023 | ವಿಸ್ತಾರ ನ್ಯೂಸ್ ನಿಂದ ನಾಳೆ ವಿವೇಕ ವಂದನೆ ಕಾರ್ಯಕ್ರಮ; ಸಿಎಂ ಸೇರಿದಂತೆ ಹಲವು ಗಣ್ಯರು ಭಾಗಿ
ಸ್ವಾಮಿ ವಿವೇಕಾನಂದರ 160ನೇ ಜನ್ಮ ದಿನಾಚರಣೆ (Vivekananda Jayanti 2023) ಅಂಗವಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಯೋಗದಲ್ಲಿ ನಿಮ್ಮ ನೆಚ್ಚಿನ ಸುದ್ದಿ ಸಂಸ್ಥೆ ವಿಸ್ತಾರ ನ್ಯೂಸ್ ಶುಕ್ರವಾರ ಏರ್ಪಡಿಸಿರುವ “ವಿವೇಕ ವಂದನೆʼʼ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ.
ಜನವರಿ 13 ರಂದು ವಿಧಾನಸೌಧದ ಮುಂಭಾಗದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ನಗರದ ವಿವಿಧ ಕಾಲೇಜುಗಳ ಸಾವಿರಾರು ವಿದ್ಯಾರ್ಥಿಗಳು ಮತ್ತು ಯುವಜನರು ಭಾಗವಹಿಸಲಿದ್ದಾರೆ. ಬೆಂಗಳೂರಿನ ವಿವೇಕಯುಗ ಫೌಂಡೇಷನ್ ಈ ಕಾರ್ಯಕ್ರಮಕ್ಕೆ ಸಾಥ್ ನೀಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
8. Janardhana Reddy | ಹೆಚ್ಚುವರಿ ಆಸ್ತಿ ಜಪ್ತಿಗೆ ಅವಕಾಶ ಕೋರಿದ ಸಿಬಿಐ ಮನವಿಗೆ ಅಸ್ತು ಎಂದ ಸರ್ಕಾರ: ರೆಡ್ಡಿಗೆ ಹಿನ್ನಡೆ
ತಮ್ಮ ರಾಜಕೀಯದ ಎರಡನೇ ಇನ್ನಿಂಗ್ಸ್ ಆರಂಭಿಸಲು ಸಜ್ಜಾಗಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ (Janardhana Reddy) ಅವರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಜನಾರ್ದನ ರೆಡ್ಡಿಯ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವುದಕ್ಕೆ ಅನುಮತಿ ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿಗೆ ಸರ್ಕಾರ ಅನುಮತಿ ನೀಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
9. Plastic rice | ಶಾಲಾ ಮಕ್ಕಳ ಬಿಸಿಯೂಟದ ಅಕ್ಕಿ ಜತೆ ಮಿಕ್ಸ್ ಆಗಿದೆಯಾ ಪ್ಲಾಸ್ಟಿಕ್ ರೈಸ್: ತೇಲುವ ಮಣಿಗಳು ಏನಿವು?
ಕೊಡಗು ಜಿಲ್ಲೆ ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫ್ರೌಡಶಾಲಾ ಮಕ್ಕಳ ಬಿಸಿಯೂಟಕ್ಕೆ ಸರಬರಾಜಾದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ (Platic rice) ಮಿಶ್ರವಾಗಿರುವ ಸಂಶಯ ವ್ಯಕ್ತವಾಗಿದ್ದು, ಈ ಬಗ್ಗೆ ಜನರು ಆತಂಕ ವ್ಯಕ್ತಪಡಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
10. Ram Setu | ರಾಮಸೇತು ರಾಷ್ಟ್ರೀಯ ಸ್ಮಾರಕ, ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ, ಪ್ರತಿಕ್ರಿಯೆ ನೀಡುವಂತೆ ಕೇಂದ್ರಕ್ಕೆ ನಿರ್ದೇಶನ
ಪುರಾತನ ಇತಿಹಾಸವಿರುವ ರಾಮಸೇತುವನ್ನು (Ram Setu) ‘ರಾಷ್ಟ್ರೀಯ ಪಾರಂಪರಿಕ ಸ್ಮಾರಕ’ (National Heritage Monument) ಎಂಬುದಾಗಿ ಘೋಷಿಸಬೇಕು ಎಂದು ರಾಜ್ಯಸಭೆ ಬಿಜೆಪಿ ಮಾಜಿ ಸದಸ್ಯ, ಪಕ್ಷದ ಮುಖಂಡ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ ಅರ್ಜಿಯನ್ನು ಫೆಬ್ರವರಿಯಲ್ಲಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿಸಿದೆ. ಹಾಗೆಯೇ, ಫೆಬ್ರವರಿ ಮೊದಲ ವಾರದೊಳಗೆ ಈ ಕುರಿತು ಪ್ರತಿಕ್ರಿಯೆ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಮತ್ತಷ್ಟು ಪ್ರಮುಖ ಸುದ್ದಿಗಳಿವು
- ಯೋಧನ ಎದೆಯಿಂದ ಸಜೀವ ಗ್ರೆನೇಡ್ ಹೊರತೆಗೆದ ಸಾಹಸಿ ವೈದ್ಯ; ಯಾವುದೇ ಕ್ಷಣದಲ್ಲಾದರೂ ಸ್ಫೋಟಿಸುವ ಅಪಾಯವಿತ್ತು!
- Apartmentalisation | ಚಂಡೀಗಢದಲ್ಲಿ ಅಪಾರ್ಟ್‌ಮೆಂಟ್ ನಿರ್ಮಾಣ, ಅವೈಜ್ಞಾನಿಕ ನಗರಕ್ಕೆ ಬೆಂಗಳೂರು ನಿದರ್ಶನ ಕೊಟ್ಟ ಸುಪ್ರೀಂ
- ಧವಳ ಧಾರಿಣಿ ಅಂಕಣ | ರಾಮಕೃಷ್ಣ ಪರಮಹಂಸರ ತಪಸ್ಸಿನ ಸಾಫಲ್ಯದ ಫಲ ಸ್ವಾಮಿ ವಿವೇಕಾನಂದ
- ಮಕ್ಕಳ ಕಥೆ | ಏಳು ಬೀಳು ಕಂಡ ವರ್ತಕ
- Rakhi Sawant | ಇಸ್ಲಾಂಗೆ ಮತಾಂತರಗೊಂಡ ರಾಖಿ ಸಾವಂತ್; ಆಕೆಯ ಹೆಸರೀಗ ಫಾತಿಮಾ!