ವಿಸ್ತಾರ TOP 10 NEWS | ನಂದಿನಿ ಹಾಲು-ಮೊಸರಿನ ದರ ಹೆಚ್ಚಳದಿಂದ, ಟಿಪ್ಪು ಪುಸ್ತಕಕ್ಕೆ ತಡೆವರೆಗಿನ ಪ್ರಮುಖ ಸುದ್ದಿಗಳಿವು - Vistara News

ಕರ್ನಾಟಕ

ವಿಸ್ತಾರ TOP 10 NEWS | ನಂದಿನಿ ಹಾಲು-ಮೊಸರಿನ ದರ ಹೆಚ್ಚಳದಿಂದ, ಟಿಪ್ಪು ಪುಸ್ತಕಕ್ಕೆ ತಡೆವರೆಗಿನ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

vistara top 10 news nandini milk price hike to tipu book sales stay and more news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅನೇಕ ಬಾರಿ ಹೆಚ್ಚಳ ಮಾಡಲು ಮುಂದಾಗಿದ್ದರೂ ತಡೆ ಹಿಡಿಯಲಾಗಿದ್ದ ನಂದಿನಿ ಹಾಲು ಹಾಗೂ ಮೊಸರಿನ ದರವನ್ನು ಏರಿಕೆ ಮಾಡಲು ಕೆಎಂಎಫ್‌ ನಿರ್ಧಾರ ಮಾಡಿದೆ. ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಗಡಿ ಗ್ರಾಮಗಳ ಕುರಿತು ಬಾಯಿ ಹರಿಬಿಟ್ಟಿದ್ದಾರೆ, ಟಿ.ಎನ್‌. ಶೇಷನ್‌ರಂಥ ಚುನಾವನಾ ಆಯುಕ್ತರು ಬೇಕು ಎಂದು ಸುಪ್ರೀಂಕೋರ್ಟ್‌ ಹೇಳಿದೆ, ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅನ್ಯ ಮತೀಯರು ಮಾರಾಟ ಮಾಡಲು ಅವಕಾಶ ಬೇಡ ಎಂದು ಹಿಂದು ಜಾಗರಣ ವೇದಿಕೆ ಹೇಳಿದೆ. ಮಾಜಿ ಸಿಎಂ ಸಿದ್ದರಾಮಯ್ಯ 400 ಕೋಟಿ ರೂ. ಸರ್ಕಾರಿ ಭೂಮಿಯನ್ನು ಖಾಸಗಿಯವರಿಗೆ ಪರಭಾರೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಟಿಪ್ಪು ಸುಲ್ತಾನನ ಕುರಿತು ಬಿಡುಗಡೆಯಾಗಿದ್ದ ʼಟಿಪ್ಪು ನಿಜ ಕನಸುಗಳುʼ ಕೃತಿಯ ಮಾರಾಟಕ್ಕೆ ಹೈಕೋರ್ಟ್‌ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ ಎನ್ನುವವರೆಗೆ ಪ್ರಮುಖ ಸುದ್ದಿಗಳ ಗುಚ್ಛ ವಿಸ್ತಾರ TOP 10 NEWS.

1. Nandini Milk Price | ನಂದಿನಿ ಹಾಲು, ಮೊಸರಿನ ದರ ಏರಿಕೆ: ಗುರುವಾರ ಬೆಳಗ್ಗೆ 11 ಗಂಟೆ ನಂತರ ಅನ್ವಯ
ರಾಜ್ಯದ ಅತಿ ದೊಡ್ಡ ಹಾಲು ಉತ್ಪಾದಕರ ಸಂಘವಾದ ಕೆಎಂಎಫ್‌ ತನ್ನ ಬ್ರ್ಯಾಂಡ್‌ ನಂದಿನಿ ಹಾಲು ಮತ್ತು ಮೊಸರಿನ ದರದಲ್ಲಿ ಪ್ರತಿ ಲೀಟರ್‌ಗೆ ತಲಾ 2 ರೂ. ಏರಿಕೆ ಮಾಡಿದೆ. ಉತ್ಪಾದಕರಿಗೆ ಹೆಚ್ಚುತ್ತಿರುವ ಉತ್ಪಾದನಾ ವೆಚ್ಚ ಹಾಗೂ ರಾಜ್ಯದ ಗಡಿ ಪ್ರದೇಶಗಳಲ್ಲಿ ನೆರೆ ರಾಜ್ಯಗಳ ಹಾಲು ಉತ್ಪಾದಕ ಸಂಸ್ಥೆಗಳತ್ತ ರಾಜ್ಯದ ರೈತರು ವಾಲುತ್ತಿರುವುದನ್ನು ತಪ್ಪಿಸಲು ಈ ನಿರ್ಧಾರ ಕೈಗೊಂಡಿದೆ. ಬುಧವಾರ 19 ನಿರ್ದೇಶಕರೊಂದಿಗೆ ಸಭೆ ನಡೆಸಿದ ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ನೇರವಾಗಿ ರೈತರಿಗೆ ಈ ಹಣವನ್ನು ನೀಡಲಾಗುತ್ತದೆ. ಗ್ರಾಹಕರು ನಮಗೆ ಸಹಕರಿಸಬೇಕು ಎಂದರು. ಗುರುವಾರ ಬೆಳಗ್ಗೆ ಹಾಲಿನ ದರ ಈಗಿನಷ್ಟೇ ಇರಲಿದೆ. ಆದರೆ ಬೆಳಗ್ಗೆ 11 ಗಂಟೆಯ ನಂತರ ಹೊಸ ದರ ಅನ್ವಯ ಆಗಲಿದೆ ಎಂದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

2. ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ | ಒಂದೇ ಒಂದು ಹಳ್ಳಿಯನ್ನು ಬಿಟ್ಟುಕೊಡಲ್ಲ, ಫಡ್ನವಿಸ್‌ ಬಾಯ್ಮಾತಿನ ಪ್ರತಾಪ
ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ ಅರ್ಜಿಯ ವಿಚಾರಣಾರ್ಹತೆ ಕುರಿತು ಸುಪ್ರೀಂ ಕೋರ್ಟ್‌ ಇನ್ನೂ ತೀರ್ಮಾನವನ್ನೇ ಕೈಗೊಂಡಿಲ್ಲ. ಆಗಲೇ, ಮಹಾರಾಷ್ಟ್ರದ ಕೋಪ-ತಾಪ ಶುರುವಾಗಿದೆ. ಇದರ ಭಾಗವಾಗಿಯೇ, “ನಾವು ಮಹಾರಾಷ್ಟ್ರದ ಒಂದೇ ಒಂದು ಹಳ್ಳಿಯನ್ನು ಬಿಟ್ಟುಕೊಡುವುದಿಲ್ಲ” ಎಂದು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಹೇಳಿದ್ದಾರೆ.
“ಮಹಾರಾಷ್ಟ್ರದ ಒಂದೇ ಒಂದು ಹಳ್ಳಿಯು ಕರ್ನಾಟಕದ ಜತೆ ವಿಲೀನಗೊಳ್ಳಲು ಬಿಡುವುದಿಲ್ಲ. ಕರ್ನಾಟಕ ಸರ್ಕಾರವು ಮೊದಲು ಮರಾಠಿ ಮಾತನಾಡುವ ಬೆಳಗಾವಿ, ಕಾರವಾರ ಹಾಗೂ ನಿಪ್ಪಾಣಿಯು ಮಹಾರಾಷ್ಟ್ರದೊಂದಿಗೆ ವಿಲೀನವಾಗುವುದನ್ನು ತಡೆಯಲು ಹೋರಾಟ ನಡೆಸುವ ತಾಕತ್ತು ಬೆಳೆಸಿಕೊಳ್ಳಲಿ” ಎಂದು ವ್ಯಂಗ್ಯ ಮಾಡಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

೩. Supreme Court | ಟಿ ಎನ್‌ ಶೇಷನ್‌ರಂಥ ದಿಟ್ಟ ಚುನಾವಣಾ ಆಯುಕ್ತರ ಅಗತ್ಯ ಇದೆ ಎಂದ ಸುಪ್ರೀಂ ಕೋರ್ಟ್‌
ಚುನಾವಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ವಾಸ್ತವದಲ್ಲಿ ಆತಂಕಕಾರಿ ಪರಿಸ್ಥಿತಿಗಳಿವೆ. ಟಿ ಎನ್ ಶೇಷನ್ (TN Seshan) ರೀತಿಯ ನಡವಳಿಕೆ ಹೊಂದಿರುವಂಥ ವ್ಯಕ್ತಿ ಮುಖ್ಯ ಚುನಾವಣಾ ಆಯುಕ್ತರಾಗುವ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ (Supreme Court) ಅಭಿಪ್ರಾಯಪಟ್ಟಿದೆ. ಚುನಾವಣಾ ಆಯೋಗದ ಮುಖ್ಯ ಆಯುಕ್ತರ ನೇಮಕದಲ್ಲಿ ಸುಧಾರಣೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸುತ್ತಿರವ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು, ಸಂವಿಧಾನವು ಮುಖ್ಯ ಚುನಾವಣಾ ಆಯುಕ್ತ ಹಾಗೂ ಇಬ್ಬರು ಆಯುಕ್ತರೆಂಬ ದುರ್ಬಲ ಭುಜಗಳ ಮೇಲೆ ಅಗಾಧ ಅಧಿಕಾರವನ್ನು ಹೊರಿಸಿದೆ. ಹಾಗಾಗಿ, ಚುನಾವಣಾ ಮುಖ್ಯ ಆಯುಕ್ತರ ನೇಮಕಾತಿ ಪ್ರಕ್ರಿಯೆಯಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಅವರನ್ನೂ ಸೇರಿಸುವ ಮೂಲಕ, ತಟಸ್ಥತೆಯನ್ನು ಕಾಯ್ದುಕೊಳ್ಳಲು ಸಾಧ್ಯವಾಗಲಿದೆ ಎಂದು ಹೇಳಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: Arun Goel | ಚುನಾವಣೆ ಆಯುಕ್ತರಾಗಿ ಅರುಣ್‌ ಗೋಯಲ್‌ ನೇಮಕ

೪. ಮಂಗಳೂರು ಸ್ಫೋಟ | ಶಾರಿಕ್‌ ತಂಗಿದ್ದ ಕೊಯಮತ್ತೂರಿನ ಎಂವಿಎಂ ಲಾಡ್ಜ್‌ ಸೀಲ್‌, ಅಲ್ಲೂ ಪ್ಲ್ಯಾನ್‌ ಆಗಿತ್ತಾ ಕುಕ್ಕರ್‌ ಬ್ಲಾಸ್ಟ್‌?
ಮಂಗಳೂರಿನ ನಾಗುರಿಯಲ್ಲಿ ನವೆಂಬರ್‌ ೧೯ರ ಸಂಜೆ ೪.೩೦ರ ಹೊತ್ತಿಗೆ ಸಂಭವಿಸಿದ ಕುಕ್ಕರ್‌ ಬಾಂಬ್‌ ಸ್ಫೋಟದ (ಮಂಗಳೂರು ಸ್ಫೋಟ) ರೂವಾರಿ ಶಾರಿಕ್‌ ಕೆಲವು ತಿಂಗಳ ಹಿಂದೆ ಕೊಯಮತ್ತೂರಿನಲ್ಲಿ ತಂಗಿದ್ದ ಲಾಡ್ಜನ್ನು ತಮಿಳುನಾಡು ಪೊಲೀಸರು ಸೀಲ್‌ ಮಾಡಿದ್ದಾರೆ. ಕೊಯಮತ್ತೂರಿನ ಗಾಂಧಿಪುರಂನಲ್ಲಿರುವ ಎಂವಿಎಂ ಲಾಡ್ಜ್‌ನಲ್ಲಿ ಶಾರಿಕ್‌ ತಂಗಿದ್ದ ಎನ್ನುವುದನ್ನು ಪೊಲೀಸರು ದೃಢಪಡಿಸಿಕೊಂಡಿದ್ದಾರೆ. ಕಾಮರಾಜು ಎಂಬಾತನ ಒಡೆತನದಲ್ಲಿರುವ ಲಾಡ್ಜ್‌ಗೆ ಈಗ ಪೊಲೀಸರು ಬೀಗ ಹಾಕಿದ್ದು, ಮಾಲೀಕನನ್ನೂ ವಿಚಾರಣೆ ನಡೆಸುತ್ತಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: ಮಂಗಳೂರು ಸ್ಫೋಟ | ಗಾಯಾಳು ಆಟೋ ಚಾಲಕಗೆ 50,000 ರೂ. ಸಹಾಯ, ಶಾರಿಕ್‌ ಮುಖ ನೋಡದ ಆರಗ ಜ್ಞಾನೇಂದ್ರ

5. Kukke subrahmanya | ಕುಕ್ಕೆ ಕ್ಷೇತ್ರದಲ್ಲಿ ಅನ್ಯಮತೀಯರಿಗೆ ವ್ಯಾಪಾರ ನಿರ್ಬಂಧ: ಜಾಗರಣ ವೇದಿಕೆ ಮನವಿ
ರಾಜ್ಯದ ದೇವಾಲಯಗಳಲ್ಲಿ ಅನ್ಯಮತೀಯರಿಗೆ ವ್ಯವಹಾರ ಮಾಡಲು ಅವಕಾಶ ನೀಡಬಾರದು ಎಂಬ ಕೂಗು ಮತ್ತೆ ಜೀವಪಡೆದಿದೆ. ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಅನ್ಯ ಮತೀಯರಿಗೆ ವ್ಯಾಪಾರ ನಿರ್ಬಂಧ ವಿಧಿಸಬೇಕು ಎಂದು ಹಿಂದು ಜಾಗರಣ ವೇದಿಕೆ ಕ್ಷೇತ್ರದ ಆಡಳಿತ ಮಂಡಳಿಗೆ ಮನವಿ ಸಲ್ಲಿಸಿದೆ. ಈ ಹಿಂದೆ ಹಲವು ಬಾರಿ ದೇವಸ್ಥಾನದ ನಿಗದಿತ ಅಂಗಡಿಗಳ ಏಲಂನಲ್ಲಿ ಅನ್ಯ ಧರ್ಮೀಯರು ಪಾಲ್ಗೊಳ್ಳಲು ಅವಕಾಶವಿರಬಾರದು ಎಂದು ಆಗ್ರಹಿಸಲಾಗಿತ್ತು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: Dress code in temple | ಶಿರಸಿ ಮಾರಿಕಾಂಬಾ ದೇವಾಲಯದಲ್ಲಿ ವಸ್ತ್ರಸಂಹಿತೆ ಸದ್ದು! ಹಿಂದು ಜಾಗೃತಿ ವೇದಿಕೆ ಮನವಿ

6. ಸರ್ಕಾರದ ₹400 ಕೋಟಿ ಮೌಲ್ಯದ ಭೂಮಿ ಪರರ ಪಾಲು?: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸುಮಾರು 400 ಕೋಟಿ ರೂ. ಮೌಲ್ಯದ ಸರ್ಕಾರದ ಭೂಮಿಯನ್ನು, ಅಧಿಕಾರಿಗಳ ಮೇಲೆ ಪ್ರಭಾವ ಬೀರಿ ಖಾಸಗಿಯವರಿಗೆ ನೀಡಲು ಸಹಕರಿಸಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಬೆಂಗಳೂರು ದಕ್ಷಿಣ ಅಧ್ಯಕ್ಷ ಎನ್‌. ಆರ್‌. ರಮೇಶ್‌ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದಾರೆ. ಈ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಜತೆಗೆ ಬಿಡಿಎ, ನಗರಾಭಿವೃದ್ಧಿ ಅಧಿಕಾರಿಗಳು, ಭೂಮಿಯನ್ನು ಅಕ್ರಮವಾಗಿ ಪರಭಾರೆ ಮಾಡಿಕೊಂಡ ಖಾಸಗಿ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಬೇಕು ಎಂದು ದೂರಿನಲ್ಲಿ ಎನ್‌.ಆರ್‌. ರಮೇಶ್‌ ಆಗ್ರಹಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. ಪಾಕ್​ ಆಕ್ರಮಿತ ಕಾಶ್ಮೀರ ವಶಕ್ಕೆ ಸಿದ್ಧ, ಅಂಥ ಯಾವುದೇ ಆದೇಶ ಬಂದರೂ ನಾವು ರೆಡಿ ಎಂದ ಸೇನಾ ಜನರಲ್​ ದ್ವಿವೇದಿ
ಪಾಕ್​ ಆಕ್ರಮಿತ ಕಾಶ್ಮೀರವನ್ನು ಮತ್ತೆ ವಾಪಸ್​ ಭಾರತಕ್ಕೆ ಪಡೆಯಬೇಕು ಎಂಬ ಆದೇಶ ಬಂದರೆ, ಅದನ್ನು ಕಾರ್ಯಗತಗೊಳಿಸಲು ನಮ್ಮ ಸೇನೆ ಸಜ್ಜಾಗಿದೆ. ಕೇವಲ ಇದು ಅಂತಲ್ಲ, ಇಂಥ ಅದೆಷ್ಟೇ ಆದೇಶಗಳನ್ನು ಭಾರತೀಯ ಸೇನೆ ನೀಡಿದರೂ ನಾವು ಅದನ್ನು ಪಾಲಿಸುತ್ತೇವೆ ಎಂದು ಸೇನೆಯ ಉತ್ತರವಲಯದ ಕಮಾಂಡರ್​ ಲೆಫ್ಟಿನೆಂಟ್​ ಜನರಲ್​ ಉಪೇಂದ್ರ ದ್ವಿವೇದಿ ಹೇಳಿದ್ದಾರೆ.
ಕಳೆದ ತಿಂಗಳು ಶೌರ್ಯ ದಿವಸ್​ ಆಚರಣೆ ವೇಳೆ ಮಾತನಾಡಿದ್ದ ರಕ್ಷಣಾ ಸಚಿವ ರಾಜನಾಥ ಸಿಂಗ್​, ‘ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ)ವನ್ನು ಸಂಪೂರ್ಣವಾಗಿ ಭಾರತದ ವಶಕ್ಕೆ ಪಡೆದ ಬಳಿಕವಷ್ಟೇ, 2019ರ ಆಗಸ್ಟ್​ 5ರಂದು ಪ್ರಾರಂಭ ಮಾಡಿರುವ ಜಮ್ಮು-ಕಾಶ್ಮೀರ ಏಕೀಕರಣ ಮಿಷನ್​ ಪೂರ್ಣಗೊಳ್ಳಲಿದೆ’ ಎಂಬಂಥ ಒಂದು ಮಹತ್ವದ ಮಾತುಗಳನ್ನಾಡಿದ್ದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

8. FIFA World Cup | ಜಾಕೀರ್​ ನಾಯ್ಕ್​​ಗೆ ನಾವು ಆಹ್ವಾನ ಕೊಟ್ಟಿಲ್ಲ, ಅನ್ಯ ದೇಶದ ಪಿತೂರಿ ಇರಬಹುದು; ಸಿಟ್ಟಾದ ಭಾರತಕ್ಕೆ ಸ್ಪಷ್ಟನೆ ಕೊಟ್ಟ ಕತಾರ್​
ಕತಾರ್​ ಆಡಳಿತ ಈಗ ಸ್ಪಷ್ಟನೆ ನೀಡಿದೆ. ‘ಫಿಫಾ ವರ್ಲ್ಡ್​ಕಪ್​ ಉದ್ಘಾಟನಾ ಸಮಾರಂಭಕ್ಕೆ ನಾವು ಜಾಕೀರ್​ ನಾಯ್ಕ್​​ನನ್ನು ಆಹ್ವಾನಿಸಿರಲಿಲ್ಲ’ ಎಂದು ಭಾರತಕ್ಕೆ ತಿಳಿಸಿದೆ. ಅಷ್ಟೇ ಅಲ್ಲ, ‘ಕತಾರ್​-ಭಾರತದ ದ್ವಿಪಕ್ಷೀಯ ಸಂಬಂಧವನ್ನು ಹಾಳುಗೆಡವಲು ಯಾವುದೋ ಅನ್ಯದೇಶಗಳು ಮಾಡಿದ ಕುತಂತ್ರ ಇದು. ಬೇಕೆಂತಲೇ ತಪ್ಪು ಮಾಹಿತಿಗಳನ್ನು ಹಬ್ಬಿಸಲಾಗುತ್ತಿದೆ’ ಎಂದೂ ಹೇಳಿದೆ. ಕತಾರ್​ ಈ ಬಗ್ಗೆ ಭಾರತಕ್ಕೆ ರಾಜತಾಂತ್ರಿಕ ಸಂದೇಶವನ್ನು ನೀಡಿದೆ. ಜಾಕೀರ್​ ನಾಯ್ಕ್​ ಬಹುಶಃ ಖಾಸಗಿಯಾಗಿ ಫಿಫಾ ವರ್ಲ್ಡ್​ಕಪ್​​ಗೆ ಭೇಟಿ ಕೊಟ್ಟಿದ್ದಿರಬಹುದು’ ಎಂದೂ ಹೇಳಿಕೊಂಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

9. ಟಿಪ್ಪು ವಿವಾದ | ಟಿಪ್ಪು ನಿಜ ಕನಸುಗಳು ಕೃತಿಯ ಮಾರಾಟಕ್ಕೆ ಕೋರ್ಟ್‌ನಿಂದ ತಾತ್ಕಾಲಿಕ ತಡೆ
ಟಿಪ್ಪು ಸುಲ್ತಾನ್‌ ಕುರಿತು ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ರಚಿಸಿರುವ ನಾಟಕ ʼಟಿಪ್ಪು ನಿಜ ಕನಸುಗಳುʼ ಪುಸ್ತಕ ಮಾರಾಟಕ್ಕೆ ನ್ಯಾಯಾಲಯ ತಡೆಯಾಜ್ಞೆ ವಿಧಿಸಿದೆ. ರಫೀಉಲ್ಲ ಬಿ.ಎಸ್‌. ಎನ್ನುವವರು ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಿರುವ ಬೆಂಗಳೂರಿನ 14ನೇ ಹೆಚ್ಚುವರಿ ಸಿಟಿ ಸಿವಿಲ್‌ ಕೋರ್ಟ್‌ ತಡೆ ನೀಡಿದೆ.
ಆನ್‌ಲೈನ್‌ ಸೇರಿ ಎಲ್ಲಿಯೂ ಮಾರಾಟ ಮಾಡದಂತೆ ತಡೆ ನೀಡಲಾಗಿದೆ. ಪುಸ್ತಕದಲ್ಲಿ ಅಜಾನ್‌ ಅನ್ನು ಅವಮಾನಿಸಲಾಗಿದೆ ಹಾಗೂ ಅನೇಕ ತಪ್ಪು ಮಾಹಿತಿಗಳನ್ನು ನೀಡಲಾಗಿದೆ. ಇದರಿಂದ ಸಮಾಜದಲ್ಲಿ ಅಶಾಂತಿ ಮೂಡಲು ಕಾರಣವಾಗುತ್ತದೆ ಎಂದು ಅರ್ಜಿದಾರರು ದೂರಿದ್ದರು. ನ್ಯಾಯಾಲಯವು ಕೃತಿಯ ಲೇಖಕರು ಹಾಗೂ ಪ್ರಕಾಶಕರಿಗೆ ತುರ್ತು ನೋಟಿಸ್‌ ಜಾರಿ ಮಾಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. Shraddha Murder Case | ಪೀಸ್​ಪೀಸ್​ ಮಾಡುವುದಾಗಿ ಶ್ರದ್ಧಾಗೆ 2020ರಲ್ಲೇ ಬೆದರಿಕೆ ಹಾಕಿದ್ದ ಅಫ್ತಾಬ್​; ಪತ್ರ ಬಿಚ್ಚಿಟ್ಟ ಸತ್ಯಗಳಿವು!
ಶ್ರದ್ಧಾ ವಾಳ್ಕರ್​ ಆಕೆಯ ಲಿವ್​ ಇನ್​ ಸಂಗಾತಿ ಅಫ್ತಾಬ್​​ನಿಂದಲೇ ಹತ್ಯೆಯಾಗಿ, 35 ತುಂಡುಗಳಾಗಿ ಹೋಗಿದ್ದಾಳೆ. 2022ರ ಮೇ 18ರಂದು ಈಕೆಯ ಕೊಲೆಯಾಗಿದ್ದರೂ, ಅದು ಈಗೊಂದು ಎಂಟು ದಿನಗಳ ಹಿಂದೆ ಬೆಳಕಿಗೆ ಬಂದಿದೆ. ಶ್ರದ್ಧಾಳ ತಲೆ ಭಾಗ ಪತ್ತೆಯಾಗಿದ್ದು, ತನಿಖೆಯೂ ವೇಗವಾಗಿ ನಡೆಯುತ್ತಿದೆ. ಇನ್ನು ಶ್ರದ್ಧಾ ಮತ್ತು ಅಫ್ತಾಬ್​ ನಡುವೆ ಪದೇಪದೆ ಜಗಳವಾಗುತ್ತಿತ್ತು. 2020ರಲ್ಲೂ ಒಮ್ಮೆ ಶ್ರದ್ಧಾ ಮೇಲೆ ಅಫ್ತಾಬ್​ ಭಯಾನಕವಾಗಿ ಹಲ್ಲೆ ಮಾಡಿದ್ದ ಎಂಬ ವಿಷಯ ಈಗಾಗಲೇ ಬೆಳಕಿಗೆ ಬಂದಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ಗುಜರಾತ್‌ ಚುನಾವಣೆ ವಿಶೇಷ

1. Gujarat election 2022 | ಬಿಜೆಪಿ ಯಾತ್ರೆಗೆ ಬ್ರೇಕ್‌ ಹಾಕಲಿದೆಯಾ ಆಪ್‌ ಸ್ಪರ್ಧೆ, ಬುಡಕಟ್ಟು ಜನರ ಸಿಟ್ಟು?
2. Gujarat Election 2022 | ಅಸ್ಮಿತೆ ಹಾದಿಯಲ್ಲಿ ಬಿಜೆಪಿ, ಮಾರ್ಗ ಬದಲಿಸಿದ ಕೈ, ರೋಡ್ ಬ್ರೇಕರ್ ಆಪ್!

ಮತ್ತಷ್ಟು ಪ್ರಮುಖ ಸುದ್ದಿಗಳು

  1. DK Shivakumar | ಕೆಪಿಸಿಸಿ ಅಧ್ಯಕ್ಷನಾಗಿದ್ದಕ್ಕೆ ನಾನಾ ತನಿಖಾ ಸಂಸ್ಥೆಗಳ ಮೂಲಕ ಕಿರುಕುಳ ಎಂದ ಡಿ.ಕೆ ಶಿವಕುಮಾರ್
  2. WhatsApp Calls Tab | ಡೆಸ್ಕ್‌ಟಾಪ್ ವಾಟ್ಸ್ಆ್ಯಪ್‌ಗೆ ಕಾಲ್ಸ್ ಟ್ಯಾಬ್ ಫೀಚರ್, ಇದರಿಂದ ಏನು ಲಾಭ?
  3. Kantara Movie | ನಟ ಚೇತನ್‌ ಅಹಿಂಸಾ ವಿರುದ್ಧದ ಕೇಸ್‌ ವಜಾಗೊಳಿಸಲು ಹೈಕೋರ್ಟ್‌ ನಕಾರ
  4. Video | ಜೈಲಲ್ಲಿ ಸರಿಯಾಗಿ ಊಟ ಕೊಡದೆ 28 ಕೆಜಿ ತೂಕ ನಷ್ಟವಾಯಿತು ಎಂದಿದ್ದ ದೆಹಲಿ ಸಚಿವ ಸತ್ಯೇಂದ್ರ ಜೈನ್​; ಆದರೆ ವಾಸ್ತವ ಏನು?
  5. HD Kumaraswamy | ರಮೇಶ್‌ ಕುಮಾರ್‌ ವಿರುದ್ಧದ ʼಅವಾಚ್ಯʼ ಶಬ್ದವನ್ನು ಹಿಂಪಡೆದ ಮಾಜಿ ಸಿಎಂ
  6. ನಗ್ನ ಜೋಡಿ ಮೇಲೆ ಮಂತ್ರವಾದಿ ಫೆವಿಕ್ವಿಕ್‌ ಸುರಿದು ದೇಹಗಳನ್ನು ಅಂಟಿಸಿದ, ಬಳಿಕ ಕತ್ತು ಸೀಳಿ ಕೊಂದ
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಕೊಡಗು

Murder Case : ತೆಲಂಗಾಣ ಉದ್ಯಮಿ ಕೊಲೆ ಕೇಸ್‌; ಸ್ಥಳ ಮಹಜರು ವೇಳೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಕಾಲ್ಕಿತ್ತ ಆರೋಪಿ

Murder Case : ತೆಲಂಗಾಣ ಉದ್ಯಮಿ ಕೊಲೆ ಪ್ರಕರಣದ ಆರೋಪಿ ಸ್ಥಳ ಮಹಜರು ವೇಳೆ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

VISTARANEWS.COM


on

By

Murder Case
Koo

ಬೆಂಗಳೂರು: ಕೊಲೆ ಆರೋಪಿಯನ್ನು (Murder Case) ಮಹಜರು ನಡೆಸಲು ಕರೆದೊಯ್ಯುವ ವೇಳೆ ಪೊಲೀಸರ ಕಣ್ತಪ್ಪಿಸಿ ಎಸ್ಕೇಪ್ ಆಗಿರುವ ಘಟನೆ ತೆಲಂಗಾಣ ರಾಜ್ಯದ ಉಪ್ಪಳ್‌ನಲ್ಲಿ ನಡೆದಿದೆ. ತೆಲಂಗಾಣದಲ್ಲಿ ಉದ್ಯಮಿಯನ್ನು ಹತ್ಯೆ ನಡೆಸಿ ಬಳಿಕ ಕೊಡಗು ಜಿಲ್ಲೆಯ ಸುಂಟಿಕೊಪ್ಪದ ಪನ್ಯದ ಎಸ್ಟೇಟ್‌ನಲ್ಲಿ ಸುಟ್ಟುಹಾಕಿದ್ದರು. ಈ ಸಂಬಂಧ ಮೂವರು ಆರೋಪಿಗಳನ್ನು ಕೊಡಗು ಪೊಲೀಸರು ಬಂಧಿಸಿದ್ದರು.

ಓರ್ವ ನ್ಯಾಯಾಂಗ ಬಂಧನವಾಗಿದ್ದು, ಉಳಿದ ಇಬ್ಬರು ಆರೋಪಿಗಳ ಪೈಕಿ ಅಂಕುರ್ ರಾಣಾ ಠಾಕೂರ್‌ನನ್ನು ಎರಡು ದಿನಗಳ ಹಿಂದೆ ತೆಲಂಗಾಣಕ್ಕೆ ಮಹಜರು ನಡೆಸಲು ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ಪೊಲೀಸರ ಕಣ್ತಪ್ಪಿಸಿ ಎಸ್ಕೇಪ್ ಆಗಿದ್ದಾನೆ. ಸದ್ಯ ಆರೋಪಿ ಪರಾರಿ ಸಂಬಂಧ ತೆಲಂಗಾಣ ಉಪ್ಪಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಹೆಚ್ಚುವರಿಯಾಗಿ ಕೊಡಗಿನ ಎರಡು ಎಕ್ಸ್ ಪರ್ಟ್ ಟೀಮ್ ಕೂಡ ತೆಲಂಗಾಣಕ್ಕೆ ತೆರಳಿದ್ದು ಹುಟುಕಾಟ ನಡೆಸುತ್ತಿದ್ದಾರೆ.

ಏನಿದು ಪ್ರಕರಣ?

ಕೊಡಗು: ಅಕ್ಟೋಬರ್ 8ರಂದು ಕೊಡಗಿನ ಸುಂಟಿಕೊಪ್ಪ ಸಮೀಪ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ (Murder case) ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಪ್ರಕರಣವನ್ನು ಭೇದಿಸಿ ತೆಲಂಗಾಣ ಮೂಲದ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಪ್ರಮುಖ ಆರೋಪಿ ನಿಹಾರಿಕ (29), ಪಶು ವೈದ್ಯ ನಿಖಿಲ್ ಹಾಗೂ ಹರಿಯಾಣದ ಅಂಕುರ್ ಎಂಬುವವರು ಬಂಧಿತರು.

ಈ ಮೂವರು ರಿಯಲ್ ಎಸ್ಟೇಟ್ ಉದ್ಯಮಿ ರಮೇಶ್ (54) ಎಂಬಾತನನ್ನು ತೆಲಂಗಾಣದಲ್ಲಿ ಕೊಲೆ ಮಾಡಿ, ಕೊಡಗಿನಲ್ಲಿ ಸುಟ್ಟು ಹಾಕಿ ಕಾಲ್ಕಿತ್ತಿದ್ದರು. ಆಸ್ತಿಗಾಗಿ ನಿಹಾರಿಕ ಪ್ರಿಯಕರರ ಜತೆ ಸೇರಿ ತನ್ನ ಪತಿಯನ್ನೇ ಹತ್ಯೆ ಮಾಡಿದ್ದಳು. ಹತ್ಯೆ ಮಾಡಿ ನಂತರ ಕೊಡಗಿನ ಸುಂಟಿಕೊಪ್ಪದಲ್ಲಿ ಸುಟ್ಟು ಹಾಕಿದ್ದರು. ಪ್ರಕರಣ ಸಂಬಂಧ ಪೊಲೀಸರು ಸಿಸಿ ಕ್ಯಾಮೆರಾ ಸುಳಿವು ಆಧಾರಿಸಿ, ರೆಡ್ ಕಲರ್ ಬೆಂಜ್ ಕಾರಿನ ಹಿಂದೆ ಬಿದ್ದಿದ್ದರು. ಕಾರುಪತ್ತೆ ಮಾಡಿ ಆರೋಪಿಯನ್ನು ಬಂಧಿಸಲಾಗಿತ್ತು.

Murder Case
ಬಂಧಿತ ಆರೋಪಿಗಳು

ನಿಹಾರಿಕ ತಾನು 10ನೇ ತರಗತಿಯಲ್ಲಿ ಇರುವಾಗಲೇ ಮದುವೆಯಾಗಿದ್ದಳು. ಎರಡು ಮಕ್ಕಳಾದ ಮೇಲೆ ಪತಿಗೆ ಡಿವೋಸ್‌ ಕೊಟ್ಟು ದೂರವಾಗಿದ್ದಳು. ಬಳಿಕ ಜೈಲಿನಲ್ಲಿದ್ದ ಅಂಕುರ್ ಎಂಬಾತನ ಪರಿಚಯವಾಗಿತ್ತು. ಈ ಅಂಕುರ್‌ ಮೂಲಕ ರಮೇಶ್‌ನ ಪರಿಚಯವಾಗಿ ಮದುವೆಯಾಗಿದ್ದಳು. ರಮೇಶ್‌ ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮಾಡುತ್ತಿದ್ದರು. ಈ ನಡುವೆ ನಿಹಾರಿಕ, ನಿಖಿಲ್‌ ಜತೆಗೂ ಲಿವಿಂಗ್ ರಿಲೇಶನ್ ಶಿಪ್‌ನಲ್ಲಿ ಇದ್ದಳು.

ನಿಹಾರಿಕ ಅಂಕುರ್‌ನೊಂದಿಗೆ ಸೇರಿ ಆಸ್ತಿ ನೀಡುವಂತೆ ರಮೇಶ್‌ನಿಗೆ ಕಿರುಕುಳ ನೀಡುತ್ತಿದ್ದರು. ಆಸ್ತಿ ನೀಡದೇ ಇದ್ದದ್ದಕ್ಕೆ ಹೈದರಾಬಾದ್ ಸಮೀಪ ಹಗ್ಗದಿಂದ ಬಿಗಿದು ರಮೇಶ್‌ನ ಕೊಲೆ ಮಾಡಿದ್ದರು. ಕೊಲೆ ಮಾಡಿ ಬಳಿಕ ರಮೇಶ್‌ನ ಕಾರಿನಲ್ಲೇ ಆತನ ಅಪಾರ್ಟ್ಮೆಂಟ್‌ಗೆ ಹೋಗಿ ಹಣ, ಆಸ್ತಿ ದಾಖಲೆ ದೋಚಿದ್ದರು. ನಂತರ ಬೆಂಗಳೂರಿಗೆ ಬಂದು ಪೆಟ್ರೋಲ್ ಖರೀದಿಸಿ, ಕೊಡಗಿಗೆ ತಂದು ರಮೇಶ್‌ ಬಾಡಿಯನ್ನು ಸುಟ್ಟು ಹಾಕಿದ್ದರು. ಕೊಲೆ ಬಳಿಕ ಅಂಕುರ್ ದೆಹಲಿ, ಹರಿಯಾಣ ಅಂತ ಸುತ್ತಾಡಿದ್ದ.

Continue Reading

ಗದಗ

HK Patil : ಮುಖ್ಯಮಂತ್ರಿ ಸಿದ್ದರಾಮಯ್ಯ ಎನ್ನುವ ಬದಲಿಗೆ `ಡಿಕೆಶಿ’ ಎಂದು ಸಚಿವ ಎಚ್‌ಕೆ ಪಾಟೀಲ್‌ ಯಡವಟ್ಟು

HK Patil: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಏರ್ಪಡಿಸಿದ್ದ ಕಾರ್ಯಕ್ರಮವೊಂದರಲ್ಲಿ ಹಿರಿಯ ರಾಜಕಾರಣಿ ಹಾಗೂ ಸಚಿವ ಎಚ್.ಕೆ.ಪಾಟೀಲ್‌ ತಮ್ಮ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎನ್ನುವ ಬದಲಿಗೆ ಡಿ.ಕೆ ಎಂದು ಹೇಳಿ ಕ್ಷಣಮಾತ್ರದಲ್ಲೆ ಸರಿಪಡಿಸಿಕೊಂಡ ಘಟನೆ ನಡೆದಿದೆ.

VISTARANEWS.COM


on

By

HK patil
Koo

ಗದಗ: ಕರ್ನಾಟಕದ ಕಾಂಗ್ರೆಸ್ ಆಡಳಿತದಲ್ಲಿ ಮುಖ್ಯಮಂತ್ರಿ ಸ್ಥಾನದ‌‌ ಮೇಲೆ ಎಲ್ಲರ ಕಣ್ಣಿದೆ. ಕಾರಣ ಮುಡಾ ಹಗರಣ‌‌ ಎದುರಿಸುತ್ತಿರುವ ಮುಖ್ಯಮಂತ್ರಿ‌ ಸಿದ್ದರಾಮಯ್ಯ ಅವರ ಸಿಎಂ ಕುರ್ಚಿ ಮುಡಾ ಹಗರಣದಿಂದ‌ ಖಾಲಿಯಾಗುತ್ತೆ ಅನ್ನೋ ಬಿಸಿ‌ಬಿಸಿ ಚರ್ಚೆ ಪ್ರಚಲಿತದಲ್ಲಿದೆ. ಇದಕ್ಕೆ ಪುಷ್ಟಿಕರೀಸುವಂತೆ ಗದಗದಲ್ಲಿ ಸಚಿವ ಎಚ್‌ಕೆ ಪಾಟೀಲ್‌ (HK Patil) ಮುಖ್ಯಮಂತ್ರಿ ಹೆಸರನ್ನು ಹೇಳುವ ಸಂದರ್ಭದಲ್ಲಿ ಸಿದ್ದರಾಮಯ್ಯ ಬದಲಿಗೆ ಡಿ.ಕೆ ಶಿವಕುಮಾರ್‌ ಹೆಸರು ಪ್ರಸ್ತಾಪಿಸಿ, ಕ್ಷಣಮಾತ್ರದಲ್ಲೆ ಸರಿಪಡಿಸಿಕೊಂಡಿದ್ದಾರೆ.

ಮುದ್ರಣ‌ ಕಾಶಿ ಗದಗ ಜಿಲ್ಲೆಯಲ್ಲಿ‌ ಶುಕ್ರವಾರ ಅದ್ಧೂರಿ 66ನೇ ಕನ್ನಡ ರಾಜ್ಯೋತ್ಸವ ಜರುಗಿತು. ‌ಈ ವೇಳೆ ಜಿಲ್ಲಾ ಉಸ್ತುವಾರಿ‌ ಸಚಿವ ಹಾಗೂ ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ವೇದಿಕೆ ಮೇಲೆ ಭಾಷಣದ‌ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಹೇಳುವ ಬದಲಾಗಿ, ಡಿಕೆ ಎಂದು ಪ್ರಸ್ತಾಪಿಸಿ, ತಕ್ಷಣ ಎಚ್ಚೆತ್ತು,‌ ಸಿದ್ಧರಾಮಯ್ಯ‌ ಎಂದು ಮುಂದುವರೆದು,‌ ಉಪಮುಖ್ಯಮಂತ್ರಿ‌ ಡಿ.ಕೆ. ಶಿವಕುಮಾರ್‌ ಅವರು ಎಂದೇಳಿ, ತಮ್ಮ ಭಾಷಣ ಮುಂದುವರೆಸಿದರು.

ಮೈಸೂರು ರಾಜ್ಯಕ್ಕೆ ಕರ್ನಾಟಕ‌ ನಾಮಕರಣದ ಐವತ್ತರ‌ ಸಂಭ್ರಮಾಚರಣೆಯನ್ನು ಕಳೆದ ವರ್ಷ 2023ರ ನವಂಬರ್, 1,2,3 ರಂದು ಮೂರು‌ ದಿನಗಳ‌ ಕಾಲ ಗದಗ ನಗರದ ಸೊಸೈಟಿಯ ಆವರಣದಲ್ಲಿ ನಡೆದಿತ್ತು.‌ ಗತವೈಭವ ಮರುಕಳಿಸುವ ಹಾಗೆ, ಐತಿಹಾಸಿಕ ಕಾರ್ಯಕ್ರಮಕ್ಕೆ ನಗರದ ಎಲ್ಲ ಜನತೆ‌ ಸಾಕ್ಷಿಯಾಗಿದ್ದೀರಿ. ನಾಡಿನ ಮುಖ್ಯಮಂತ್ರಿಗಳಾದ ಡಿ.ಕೆ (ತಕ್ಷಣ ಎಚ್ಚೆತ್ತು ಭಾಷಣದ ಪ್ರತಿ ತೀಕ್ಷ್ಣವಾಗಿ ವೀಕ್ಷಿಸಿ) ಮಾನ್ಯ‌ ಸಿದ್ಧರಾಮಯ್ಯನವರು,‌ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಸೇರಿದಂತೆ, ಸಚಿವ ಸಂಪುಟದ ಎಲ್ಲ‌ ಸಹೋದ್ಯೋಗಿಗಳು ಈ‌ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸಿದ್ದರು ಎಂದು ಪ್ರಸ್ತಾಪಿಸಿ, ಮುಂದೆ ತಮ್ಮ ಭಾಷಣದ ಸಂದೇಶವನ್ನು ಮುಂದುವರಿಸಿದ್ದಾರೆ.

ಸಿದ್ದರಾಮಯ್ಯನವರ ಸಂಪುಟದಲ್ಲಿ ‌ಅತ್ಯಂತ‌ ಹಿರಿಯ ಮತ್ತು ಅನುಭವಿ ರಾಜಕಾರಣಿಯಾಗಿರುವ ಎಚ್.ಕೆ.ಪಾಟೀಲ ಸಿದ್ದರಾಮಯ್ಯನವರ ಆಪ್ತ ಬಳಗದಲ್ಲಿಯೂ ಒಬ್ಬರಾಗಿದ್ದಾರೆ.‌ ದೀಪಾವಳಿ‌ ಶುಭ‌ ಸಂದರ್ಭದಲ್ಲಿ ಸಚಿವರ ಬಾಯಲ್ಲಿ, ಡಿಕೆಶಿ ಮುಖ್ಯಮಂತ್ರಿಯಾಗಿದ್ದು ಅಚಾನಕ್ ಆಗಿ ಆದ ಅಚಾತುರ್ಯವೋ,‌ ಅಥವಾ ಸಚಿವರ ಆಂತರ್ಯದ ನುಡಿಯೋ ಎಲ್ಲವೂ ಕಾಕತಾಳಿಯ‌ ಎಂಬಂತಿದೆ.

Continue Reading

ಸಿನಿಮಾ

Dolly Dhananjay: ಕೋಟೆ ನಾಡಿನ ಕನ್ಯೆ ಜತೆಗೆ ಸಪ್ತಪದಿ ತುಳಿಯಲ್ಲಿದ್ದಾರೆ ಡಾಲಿ ಧನಂಜಯ್‌

Dolly Dhananjay : ಮುಂದಿನ ವರ್ಷ ಫೆಬ್ರವರಿ ತಿಂಗಳಲ್ಲಿ ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ ಜೋಡಿ ಹಸೆಮಣೆ ಏರಲಿದ್ದಾರೆ. ದೀಪಾವಳಿ ಹಬ್ಬದ ಪ್ರಯುಕ್ತ ಡಾಲಿ ಧನಂಜಯ್‌ ತಮ್ಮ ಬಾಳಸಂಗಾತಿಯನ್ನು ಪರಿಚಯಿಸಿದ್ದಾರೆ.

VISTARANEWS.COM


on

By

Dolly Dhananjay
Koo

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ನಟರಾಕ್ಷಸ ಡಾಲಿ ಧನಂಜಯ್‌ (Dolly Dhananjay) ತಮ್ಮ ಅಭಿಮಾನಿಗಳಿಗೆ ಶುಭ ಸುದ್ದಿ ನೀಡಿದ್ದಾರೆ.

Sandalwood star Dali Dhananjay And dhanya They are getting married next year
Sandalwood star Dali Dhananjay And dhanya They are getting married next year

ಹಲವು ದಿನಗಳ ಮೌನಕ್ಕೆ ತೆರೆ ಎಳೆದಿರುವ ಧನಂಜಯ್ ಬೆಳಕಿನ ಹಬ್ಬ ದೀಪಾವಳಿಯಂದು ಬಾಳ ಸಂಗತಿಯನ್ನು ಪರಿಚಯಿಸಿದ್ದಾರೆ.

Sandalwood star Dali Dhananjay And dhanya They are getting married next year
Sandalwood star Dali Dhananjay And dhanya They are getting married next year

ಡಾಕ್ಟರ್ ಧನ್ಯತಾ ಜತೆಗೆ ಸಪ್ತಪದಿ ತುಳಿಯಲಿದ್ದಾರೆ. ಕೋಟೆ ನಾಡು ಚಿತ್ರದುರ್ಗದ ಧನ್ಯತಾ ಅವರೊಂದಿಗೆ ಮುಂದಿನ ವರ್ಷ ಫೆಬ್ರವರಿ 16 ರಂದು ಅದ್ಧೂರಿಯಾಗಿ ವಿವಾಹ ನಡೆಯಲಿದೆ.

Sandalwood star Dali Dhananjay And dhanya They are getting married next year

ಸಾಂಸ್ಕೃತಿಕ ನಗರಿ ಮೈಸೂರಿನ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ಧನ್ಯತಾ ಹಾಗೂ ಧನಂಜಯ್‌ ವಿವಾಹ ನಡೆಯಲಿದೆ.

Sandalwood star Dali Dhananjay And dhanya They are getting married next year
Sandalwood star Dali Dhananjay And dhanya They are getting married next year

ಸೌತ್ ಸಿನಿಮಾ ಇಂಡಸ್ಟ್ರಿ ತಾರೆಯರು ಹಾಗು ಹಲವು ರಾಜಕೀಯ ಗಣ್ಯರು ಡಾಲಿ ಧನಂಜಯ್ ವಿವಾಹಕ್ಕೆ ಸಾಕ್ಷಿಯಾಗಲಿದ್ದಾರೆ.

Sandalwood star Dali Dhananjay And dhanya They are getting married next year
Sandalwood star Dali Dhananjay And dhanya They are getting married next year

ವಿಭಿನ್ನ ರೀತಿಯ ಫೋಟೊಶೂಟ್‌ ನಡೆಸಿ ತಮ್ಮ ಹುಡುಗಿಯನ್ನು ಪರಿಚಯಿಸಿದ ಡಾಲಿ ಧನಂಜಯ್‌

Sandalwood star Dali Dhananjay And dhanya They are getting married next year
Sandalwood star Dali Dhananjay And dhanya They are getting married next year
Continue Reading

ಸಿನಿಮಾ

Actor Darshan: ಈ ಕಾರಣಕ್ಕೆ ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಕ್ಕಿದ್ದು; 6 ವಾರಗಳ ನಂತ್ರ ಮತ್ತೆ ಜೈಲು!

Actor Darshan: ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಕ್ಕಿದ್ದು, 6 ವಾರಗಳ ನಂತ್ರ ಮತ್ತೆ ಸರೆಂಡರ್‌ ಆಗಬೇಕಿದೆ

VISTARANEWS.COM


on

By

Hc grants interim bail to actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್‌ಗೆ ಹೈಕೋರ್ಟ್‌ನಲ್ಲಿ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. 5 ತಿಂಗಳ ಬಳಿಕ ನಟ ದರ್ಶನ್‌ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ಸಿಕ್ಕಿದೆ. ಮಧ್ಯಂತರ ಜಾಮೀನು ನೀಡಿ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಪೀಠದಿಂದ ಆದೇಶ ಹೊರಡಿದೆ. ಇನ್ನು ನಟ ದರ್ಶನ್‌ಗೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜಾಮೀನು ಸಿಕ್ಕಿಲ್ಲ. ಬದಲಾಗಿ ಅನಾರೋಗ್ಯದಿಂದ ಬಳಲುತ್ತಿರುವ ಕಾರಣ ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್‌ ಆದೇಶ ನೀಡಿದೆ.

ಬೆನ್ನುಹುರಿ ಚಿಕಿತ್ಸೆಗೆ ದರ್ಶನ್‌ಗೆ ಷರತ್ತುಬದ್ಧ ಮಧ್ಯಂತರ ಜಾಮೀನು ಅಂಗೀಕಾರವಾಗಿದೆ. ದರ್ಶನ್ ಇಚ್ಛಿಸಿದ ಆಸ್ಪತ್ರೆಯಲ್ಲಿಯೇ ಚಿಕಿತ್ಸೆಗೆ ಅವಕಾಶ ಕಲ್ಪಿಸಲಾಗಿದೆ. ಒಂದು ವಾರದಲ್ಲಿ ಯಾವ ರೀತಿಯ ಚಿಕಿತ್ಸೆ ಎಂಬ ವರದಿಯನ್ನು ನೀಡಬೇಕು. ದರ್ಶನ್ ತನ್ನ ಪಾಸ್‌ಪೋರ್ಟ್ ಸರಂಡರ್ ಮಾಡಬೇಕೆಂದು ನ್ಯಾ . ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ಆದೇಶಿಸಿದೆ.

ಏನಿದು ಕೊಲೆ ಕೇಸ್‌?

ಜೂನ್ 9ರಂದು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಸಂಬಂಧ ಜೂನ್ 11ರಂದು ಮೈಸೂರಿನಲ್ಲಿ ಎ2 ದರ್ಶನ್ ಅರೆಸ್ಟ್ ಆಗಿದ್ದರು. ಜೂನ್ 22ರಂದು ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಜೂ.22ರಂದು ನಟ ದರ್ಶನ್‌ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಆದರೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆದ ಹಿನ್ನೆಲೆಯಲ್ಲಿ ಅಲ್ಲಿಂದ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ದರ್ಶನ್ ಶಿಫ್ಟ್ ಮಾಡಲಾಗಿತ್ತು. ಆ.29ರಂದು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಆಗಿದ್ದ ದರ್ಶನ್‌ಗೆ ಬೆನ್ನು ನೋವು ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ದರ್ಶನ್‌ಗೆ ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್ ಆದೇಶಿಸಿದೆ.

ಪವಿತ್ರಾಗೌಡ ಖುಷಿ

ದರ್ಶನ್‌ಗೆ ಮಧ್ಯಂತರ ಜಾಮೀನು ಮಂಜೂರು ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾ ಗೌಡ ಖುಷಿ ಆಗಿದ್ದಾರೆ. ತನ್ನಿಂದಾಗಿ ದರ್ಶನ್ ಜೈಲು ಸೇರಿದ ಎಂಬ ಬೇಸರವಿತ್ತು. ದರ್ಶನ್‌ಗೆ ಜಾಮೀನು ಸಿಕ್ಕಿದೆ ಎಂದು ಪವಿತ್ರಾ ಖುಷಿಯಾಗಿದ್ದು, ತನಗೂ ಬೇಲ್ ಸಿಗುತ್ತೆಂಬ ವಿಶ್ವಾಸದಲ್ಲಿದ್ದಾರೆ.

Continue Reading
Advertisement
Murder Case
ಕೊಡಗು1 ಗಂಟೆ ago

Murder Case : ತೆಲಂಗಾಣ ಉದ್ಯಮಿ ಕೊಲೆ ಕೇಸ್‌; ಸ್ಥಳ ಮಹಜರು ವೇಳೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಕಾಲ್ಕಿತ್ತ ಆರೋಪಿ

Dina Bhavishya
ಭವಿಷ್ಯ10 ಗಂಟೆಗಳು ago

Dina Bhavishya : ಒತ್ತಡದಿಂದ ವಿಮುಕ್ತಿ ಹೊಂದಿ ವಿರಾಮದ ಸಂತೋಷವನ್ನು ಅನುಭವಿಸುವಿರಿ

HK patil
ಗದಗ20 ಗಂಟೆಗಳು ago

HK Patil : ಮುಖ್ಯಮಂತ್ರಿ ಸಿದ್ದರಾಮಯ್ಯ ಎನ್ನುವ ಬದಲಿಗೆ `ಡಿಕೆಶಿ’ ಎಂದು ಸಚಿವ ಎಚ್‌ಕೆ ಪಾಟೀಲ್‌ ಯಡವಟ್ಟು

Dolly Dhananjay
ಸಿನಿಮಾ23 ಗಂಟೆಗಳು ago

Dolly Dhananjay: ಕೋಟೆ ನಾಡಿನ ಕನ್ಯೆ ಜತೆಗೆ ಸಪ್ತಪದಿ ತುಳಿಯಲ್ಲಿದ್ದಾರೆ ಡಾಲಿ ಧನಂಜಯ್‌

Dina Bhavishya
ಭವಿಷ್ಯ1 ದಿನ ago

Dina Bhavishya : ಪ್ರಮುಖ ವ್ಯಕ್ತಿಗಳೊಂದಿಗೆ ಮಾತನಾಡುವಾಗ ಜಾಗೃತೆ ಇರಲಿ

Dina Bhavishya
ಭವಿಷ್ಯ2 ದಿನಗಳು ago

Dina Bhavishya : ಭೂ ಸಂಬಂಧಿ ವ್ಯವಹಾರಗಳಲ್ಲಿ ಡಬಲ್‌ ಲಾಭ; ಬಹುದಿನಗಳ ಕನಸು ನನಸಾಗುವ ಕಾಲ

Hc grants interim bail to actor Darshan
ಸಿನಿಮಾ3 ದಿನಗಳು ago

Actor Darshan: ಈ ಕಾರಣಕ್ಕೆ ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಕ್ಕಿದ್ದು; 6 ವಾರಗಳ ನಂತ್ರ ಮತ್ತೆ ಜೈಲು!

dina bhavishya
ಭವಿಷ್ಯ3 ದಿನಗಳು ago

Dina Bhavishya : ಅನಾವಶ್ಯಕ ವಾದದಲ್ಲಿ ಸಿಲಿಕಿಕೊಳ್ಳುವ ಸಾಧ್ಯತೆ ಎಚ್ಚರಿಕೆ ಇರಲಿ

Doctors at Fortis Hospital remove fish bone from man's stomach for 5 years
ಬೆಂಗಳೂರು4 ದಿನಗಳು ago

Bengaluru News : 5 ವರ್ಷದಿಂದ ವ್ಯಕ್ತಿಯ ಹೊಟ್ಟೆಯೊಳಗಿತ್ತು ಮೀನಿನ ಮೂಳೆ!

murder case
ಕೊಡಗು4 ದಿನಗಳು ago

Murder case : ಸುಳಿವೆ ಇಲ್ಲದಿರುವ ಕೊಲೆ ಪ್ರಕರಣ ಭೇದಿಸಿದ ಸುಂಟಿಕೊಪ್ಪ ಪೊಲೀಸರಿಗೆ ಸನ್ಮಾನ

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ11 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ12 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ4 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌