1. Republic Day 2023: 74ನೇ ಗಣರಾಜ್ಯೋತ್ಸವ; ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ಧ್ವಜಾರೋಹಣ
74ನೇ ಗಣರಾಜ್ಯೋತ್ಸವ (Republic Day 2023) ನಿಮಿತ್ತ ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu) ಅವರು ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ಕ್ಷಣಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಇತರ ಕೇಂದ್ರ ಸಚಿವರು ಸಾಕ್ಷಿಯಾದರು. ಹಾಗೇ, ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿರುವ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಉಪಸ್ಥಿತರಿದ್ದರು. ರಾಷ್ಟ್ರಗೀತೆ ಹಾಡಲಾಯಿತು. ಹಾಗೇ, ರಾಷ್ಟ್ರಪತಿಯವರಿಗೆ 21 ಕುಶಾಲ ತೋಪು ಸಿಡಿಸಿ ಗೌರವ ವಂದನೆ ನೀಡಲಾಯಿತು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಹೆಚ್ಚಿನ ಓದಿಗಾಗಿ: Republic Day Parade: ದೆಹಲಿ ಕರ್ತವ್ಯ ಪಥದಲ್ಲಿ ವೈಭವದ ಪಥ ಸಂಚಲನ; ಇಲ್ಲಿವೆ ಫೋಟೋಗಳು
2. Republic day 2023 : ಚುನಾವಣಾ ವರ್ಷದಲ್ಲಿ ಸರ್ಕಾರ, ರಾಜ್ಯದ ಸಾಧನೆ ತೆರೆದಿಟ್ಟ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ, ಏಳು ಸ್ವಾಯತ್ತ ವಿವಿಗಳನ್ನು ಸ್ಥಾಪಿಸಲಾಗಿದೆ. ಏಳು ಎಂಜಿನಿಯರಿಂಗ್ ಕಾಲೇಜುಗಳನ್ನು ಐಐಟಿ ಮಾದರಿಯಲ್ಲಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಸ್ವಚ್ಛತಾ ಆಂದೋಲನ, ಜನರಿಗೆ ಒದಗಿಸುವ ಕಂದಾಯ ಸೇವೆಗಳು, ಉದ್ಯೋಗ ಖಾತ್ರಿ ಮತ್ತಿತರ ಯೋಜನೆಗಳಲ್ಲಿ ರಾಜ್ಯ ದೊಡ್ಡ ಮಟ್ಟದ ಸಾಧನೆ ಮಾಡಿದೆ. ಹೀಗೆ ರಾಜ್ಯ ಸರ್ಕಾರ ಮತ್ತು ರಾಜ್ಯದ ಒಟ್ಟಾರೆ ಸಾಧನೆಗಳ ಗಾಥೆಯನ್ನು ತೆರೆದಿಟ್ಟರು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್. ಅವರು ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ನಡೆದ ೭೪ನೇ ಗಣರಾಜ್ಯೋತ್ಸವ (Republic day 2023) ಕಾರ್ಯಕ್ರಮದಲ್ಲಿ ಧ್ವಜಾರೋಹಣ ಮಾಡಿ, ಧ್ವಜ ವಂದನೆ ಸ್ವೀಕರಿಸಿ ಮಾತನಾಡಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
3. Amit Shah : ರಾಜ್ಯದಲ್ಲಿ ಭಾನುವಾರ ಅಮಿತ್ ಶಾ ಪ್ರವಾಸ: ರಂಗೇರಿದ ಚುನಾವಣಾ ಕಣ
ವಿಧಾನಸಭೆ ಚುನಾವಣೆಗೆ ತಯಾರಿ ನಡೆಸುವ ನಿಟ್ಟಿನಲ್ಲಿ ಬಿಜೆಪಿ ಪಕ್ಷದ ನಂ.2 ನಾಯಕ ಹಾಗೂ ಗೃಹಸಚಿವ ಅಮಿತ್ ಶಾ (Amit Shah) ಎರಡು ದಿನದ ಕರ್ನಾಟಕ ಪ್ರವಾಸಕ್ಕೆ ಶನಿವಾರ ಆಗಮಿಸಲಿದ್ದಾರೆ. ಈ ಕುರಿತು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
4. Karnataka Election: ಮುಗಿಯದ ಜೆಡಿಎಸ್ ಕದನ; ಹಾಸನದಲ್ಲಿ ಮಹಿಳಾ ಅಭ್ಯರ್ಥಿಗೇ ಟಿಕೆಟ್ ಎಂದ ಭವಾನಿ ಬೆಂಬಲಿಗರು
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಕುಟುಂಬ ಕಲಹ ನಿಲ್ಲುವ ಲಕ್ಷಣ ಗೋಚರಿಸುತ್ತಿಲ್ಲ. ಶತಾಯಗತಾಯ ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ ಅನ್ನು ಪಡೆಯಲೇಬೇಕು ಎಂಬ ನಿಟ್ಟಿನಲ್ಲಿ ಭವಾನಿ ರೇವಣ್ಣ ಮುಂದಾಗಿರುವ ಲಕ್ಷಣಗಳು ಗೋಚರಿಸುತ್ತಿವೆ. ಅವರ ಮಹಿಳಾ ಬೆಂಬಲಿಗರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ (Karnataka Election) ಹಾಸನದಲ್ಲಿ ಮಹಿಳಾ ಅಭ್ಯರ್ಥಿಗೇ ಟಿಕೆಟ್ ಕೊಡಬೇಕು ಎಂದು ಹಕ್ಕೊತ್ತಾಯ ಮಂಡಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
5. Prajadhwani : ಚಾಮರಾಜನಗರ ಅಭಿವೃದ್ಧಿಗೆ ನರೇಂದ್ರ ಮೋದಿ ಕೊಡುಗೆ ಏನು?: ಪ್ರಶ್ನಿಸಿದ ಸಿದ್ದರಾಮಯ್ಯ
ಕಾಂಗ್ರೆಸ್ ಸರ್ಕಾರ ಇದ್ದಾಗ ಚಾಮರಾಜನಗರಕ್ಕೆ ಅನೇಕ ಕೊಡುಗೆ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಕೊಡುಗೆ ಏನು? ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಚಾಮರಾಜನಗರದಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ (Prajadhwani) ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತನಾಡಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
6. Prajadhwani : ತನ್ನನ್ನು ತಾನು ಮಾರಿಕೊಂಡು ಪಕ್ಷ ಬಿಟ್ಟ ಆಸಾಮಿ ಸುಧಾಕರ್ : ಸಿದ್ದರಾಮಯ್ಯ ವಾಗ್ದಾಳಿ
ತಮ್ಮ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ 35 ಸಾವಿರ ಕೋಟಿ ರೂ. ಭ್ರಷ್ಟಾಚಾರ ಆರೋಪ ಮAಡಿರುವ ಆರೋಗ್ಯ ಸಚಿವ ಡಾ. ಸುಧಾಕರ್ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ತಮ್ಮನ್ನು ತಾವು ಮಾರಿಕೊಂಡು ಹೋದವರು ಎಂದಿದ್ದಾರೆ. ಚಾಮರಾಜನಗರದಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ (Prajadhwani) ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತನಾಡಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
7. Padma Awards 2023 : ಮೋದಿ ಪ್ರಧಾನಿ ಆದ ಕಾರಣವೇ ನನಗೆ ಈ ಪ್ರಶಸ್ತಿ ಬಂತು, ಇಲ್ಲದಿದ್ದರೆ ಬರುತ್ತಿರಲಿಲ್ಲ ಅಂದ ಭೈರಪ್ಪ
ನರೇಂದ್ರ ಮೋದಿ ಅವರು ಪ್ರಧಾನಿ ಆದ ಕಾರಣವೇ ನನಗೆ ಈ ಪ್ರಶಸ್ತಿ ಬಂತು. ಇಲ್ಲದೆ ಇದ್ದರೆ ಬರುತ್ತಿರಲಿಲ್ಲ: ಹೀಗೆಂದು ಅಭಿಪ್ರಾಯಪಟ್ಟಿದ್ದಾರೆ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿ (Padma Awards 2023) ಪುರಸ್ಕೃತ, ಹಿರಿಯ ಸಾಹಿತಿ ಡಾ. ಎಸ್. ಭೈರಪ್ಪ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
8. iNCOVACC Vaccine: ಮೂಗಿನ ಮೂಲಕ ತೆಗೆದುಕೊಳ್ಳುವ ಇನ್‌ಕೊವಾಕ್ ವ್ಯಾಕ್ಸೀನ್ ಬಿಡುಗಡೆ
ಗಣರಾಜ್ಯೋತ್ಸವ ದಿನದಂದು ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್ ಅವರು ಭಾರತ್ ಬಯೋಟೆಕ್‌ನ ಇಂಟ್ರಾನಾಸಲ್ ಕೋವಿಡ್-19 ಇನ್‌ಕೊವಾಕ್(iNCOVACC Vaccine) ಲಸಿಕೆಗೆ ಚಾಲನೆ ನೀಡಿದರು. ಹೈದ್ರಾಬಾದ್ ಮೂಲದ ಭಾರತ್ ಬಯೋಟೆಕ್ ಕಂಪನಿಯು ಇಂಟ್ರಾನಾಸಲ್ ಲಸಿಕೆಯನ್ನು ಸರ್ಕಾರಕ್ಕೆ 325 ರೂ.ಗೆ ಮತ್ತು ಖಾಸಗಿ ಲಸಿಕಾ ಕೇಂದ್ರಗಳಿಗೆ ಪ್ರತಿ ಶಾಟ್‌ಗೆ 800 ರೂ.ಗೆ ಮಾರಾಟ ಮಾಡುವುದಾಗಿ ಕಳೆದ ಡಿಸೆಂಬರ್‌ನಲ್ಲಿ ಘೋಷಣೆ ಮಾಡಿತ್ತು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
9. Vasishta Simha and Haripriya: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸಿಂಹಪ್ರಿಯಾ
ನಟಿ ಹರಿಪ್ರಿಯಾ ಮತ್ತು ನಟ ವಸಿಷ್ಠ ಸಿಂಹ ಜನವರಿ 26 (Vasishta Simha and Haripriya) ಗುರುವಾರ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮೈಸೂರಿನ (Mysore) ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಮದುವೆ ನೆರವೇರಿದ್ದು, ಸಿನಿಮಾ ಸೆಲೆಬ್ರಿಟಿಗಳು ಸೇರಿದಂತೆ ಅನೇಕ ಗಣ್ಯ ವ್ಯಕ್ತಿಗಳು ಮದುವೆಯಲ್ಲಿ ಭಾಗಿಯಾಗಿದ್ದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
10. Hardik Pandya-MS Dhoni: ಶೋಲೆ ಸಿನಿಮಾದ ಜೈ-ವೀರು ರೀತಿ ಪೋಸ್ ಕೊಟ್ಟ ಪಾಂಡ್ಯ-ಧೋನಿ ಫೋಟೊ ವೈರಲ್
ಟೀಮ್ ಇಂಡಿಯಾ ನ್ಯೂಜಿಲ್ಯಾಂಡ್ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನಾಡಲು ಸಜ್ಜಾಗಿದೆ. ಮೊದಲ ಪಂದ್ಯ ಶುಕ್ರವಾರ ರಾಂಚಿಯಲ್ಲಿ ನಡೆಯಲಿದೆ. ಈಗಾಗಲೇ ಉಭಯ ತಂಡಗಳ ಆಟಗಾರರು ರಾಂಚಿಗೆ ತಲುಪಿದ್ದಾರೆ. ಇದೇ ವೇಳೆ ಭಾರತ ಟಿ20 ತಂಡದ ನಾಯಕ ಹಾರ್ದಿಕ್ ಪಾಂಡ್ಯ(‘Sholay 2 coming soon’) ಅವರು ಎಂ.ಎಸ್. ಧೋನಿ ಮನೆಗೆ ಭೇಟಿ ನೀಡಿ(Hardik Pandya- MS Dhoni), ಶೋಲೆ ಸಿನಿಮಾದ ಜೈ-ವೀರು ರೀತಿಯ ಫೋಟೊಗೆ ಪೋಸ್ ನೀಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ(Viral Photo). ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.