Site icon Vistara News

ವಿಸ್ತಾರ TOP 10 NEWS: ಶೆಟ್ಟರ್‌ ಬಿಟ್ಟಿದ್ದರಿಂದ ಲಾಸ್‌ ಇಲ್ಲವೆಂದ ಅಮಿತ್‌ ಶಾ, ಅದಾನಿಗೆ ಮಾತ್ರ ಲೋನ್‌ ಎಂದ ರಾಹುಲ್‌ ಹಾಗೂ ಇನ್ನಿತರ ಸುದ್ದಿಗಳಿವು

vistara top 10 news No loss for party due to shettar says amit shah and more news of the day

#image_title

1. Karnataka Election 2023 : ಕಣದಿಂದ ಹಿಂದೆ ಸರಿದ ಗಂಗಾಂಬಿಕೆ, ರಾಮಣ್ಣ ಲಮಾಣಿ ಸೇರಿದಂತೆ ಪ್ರಮುಖ ಬಂಡಾಯ ಅಭ್ಯರ್ಥಿಗಳು
ಕರ್ನಾಟಕ ವಿಧಾನಸಭೆಯ ಚುನಾವಣೆಗೆ (Karnataka Election 2023) ಸಂಬಂಧಿಸಿದಂತೆ ನಾಮಪತ್ರ ಹಿಂದಕ್ಕೆ ಪಡೆಯಲು ಸೋಮವಾರ ಕೊನೆಯ ದಿನವಾಗಿದ್ದು, ಈಗ ನಿಜವಾದ ಸ್ಪರ್ಧಿ-ಪ್ರತಿಸ್ಪರ್ಧಿ ಎನ್ನುವುದು ಸ್ಪಷ್ಟವಾಗಿದೆ. ಹಾಗಾಗಿ ಅಸಲಿ ಚುನಾವಣೆ ಈಗ ಆರಂಭವಾಗಿದೆ. ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಬಿಜೆಪಿ ಮತ್ತು ಕಾಂಗ್ರೆಸ್‌ನ ಹಲವು ಅಭ್ಯರ್ಥಿಗಳು ತಮ್ಮ ನಾಮ ಪತ್ರವನ್ನು ಹಿಂದಕ್ಕೆ ಪಡೆದಿದ್ದಾರೆ. 31 ಕ್ಷೇತ್ರದಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳು ಕಣದಲ್ಲಿದ್ದರು. ಇವರಲ್ಲಿ ಬೆರಳೆಣಿಕೆಯಷ್ಟು ಮಂದಿ ನಾಮಪತ್ರ ಹಿಂದಕ್ಕೆ ಪಡೆಯುವಂತೆ ಮಾಡುವಲ್ಲಿ ಪಕ್ಷದ ನಾಯಕರು ಯಶಸ್ವಿಯಾಗಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

2. Amit Shah: ಲಿಂಗಾಯತ, ಒಕ್ಕಲಿಗರ ಮೀಸಲಾತಿ ಕಿತ್ತು ಮುಸ್ಲಿಮರಿಗೆ ಕೊಡುತ್ತೀರಾ?; ಕಾಂಗ್ರೆಸ್‌ಗೆ ಅಮಿತ್‌ ಶಾ ಪ್ರಶ್ನೆ
ಚುನಾವಣಾ ಚಾಣಕ್ಯ ಎಂದೇ ಹೆಸರಾಗಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಅವರು ರಾಜ್ಯಕ್ಕೆ ಮೇಲಿಂದ ಮೇಲೆ ಭೇಟಿ ನೀಡುತ್ತಿದ್ದು, ಸಭೆ, ಸಮಾವೇಶಗಳನ್ನು ಹಮ್ಮಿಕೊಳ್ಳುವ ಮೂಲಕ ರಣತಂತ್ರವನ್ನು ರೂಪಿಸುತ್ತಿದ್ದಾರೆ. ಈ ನಡುವೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ಹಾಗೂ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಭರ್ಜರಿ ರೋಡ್‌ ಶೋ ನಡೆಸಿ, ಮಿಂಚಿನ ಸಂಚಲನವನ್ನುಂಟು ಮಾಡಿದ್ದಾರೆ. ಈ ವೇಳೆ ಮಾತನಾಡಿದ ಅಮಿತ್‌ ಶಾ, “ಬಿಜೆಪಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಮುಸ್ಲಿಂರಿಗೆ ನೀಡಿದ್ದ 4 ಪರ್ಸೆಂಟ್ ಮೀಸಲಾತಿಯನ್ನು ನಾವು ತೆಗೆದುಹಾಕಿ ಲಿಂಗಾಯತರು, ಒಕ್ಕಲಿಗರಿಗೆ ಹಂಚಿದ್ದೇವೆ. ಆದರೆ, ಇದನ್ನು ತೆಗೆದುಹಾಕುವುದಾಗಿ ಕಾಂಗ್ರೆಸ್‌ನವರು ಹೇಳುತ್ತಿದ್ದು, ಯಾರ ಮೀಸಲಾತಿಯನ್ನು ತೆಗೆಯುತ್ತೀರಿ ಎಂದು ಪ್ರಶ್ನೆ ಮಾಡಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: BJP Karnataka: ರಾಜ್ಯದಲ್ಲಿ 2 ದಿನ ಧೂಳೆಬ್ಬಿಸಲಿದೆ ಬಿಜೆಪಿ: ಮಹಾ ಪ್ರಚಾರ ಅಭಿಯಾನದಲ್ಲಿ ಯೋಗಿ ಆದಿತ್ಯನಾಥ ಸೇರಿ 98 ಕೇಂದ್ರ ನಾಯಕರು ಭಾಗಿ

3. Amit Shah: ಜಗದೀಶ್‌ ಶೆಟ್ಟರ್‌ ಹೋಗಿದ್ದರಿಂದ ಪಕ್ಷಕ್ಕೆ ನಷ್ಟವಿಲ್ಲ; ಅವರ ಸೋಲು ಖಚಿತ: ಹುಬ್ಬಳ್ಳಿಯಲ್ಲಿ ಅಮಿತ್‌ ಶಾ
ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರಿಗೆ ಏಕೆ ಟಿಕೆಟ್‌ ನೀಡಿಲ್ಲ ಎನ್ನುವುದನ್ನು ಅವರಿಗೆ ತಿಳಿಸಲಾಗಿದೆ ಎಂದಿರುವ ಕೇಂದ್ರ ಗೃಹಸಚಿವ ಅಮಿತ್‌ ಶಾ, ಸ್ವತಃ ಶೆಟ್ಟರ್‌ ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ ಸೋಲಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಮಿತ್‌ ಶಾ, ಜಗದೀಶ ಶೆಟ್ಟರ್‌ ಹೋಗಿದ್ದರಿಂದ ಯಾವುದೇ ನಷ್ಟ ಆಗುವುದಿಲ್ಲ. ಸ್ವತಃ ಜಗದೀಶ ಶೆಟ್ಟರ್‌ ಚುನಾವಣೆಯಲ್ಲಿ ಸೋಲುತ್ತಾರೆ ಎಂದಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

4. Karnataka Election: ಬಿಜೆಪಿ ಸರ್ಕಾರದಲ್ಲಿ ಅದಾನಿಗೆ ಲೋನ್‌ ಸಿಗುತ್ತೆ, ಸಾಮಾನ್ಯರಿಗೆ ಕೊಡಲ್ಲ: ರಾಹುಲ್‌ ಗಾಂಧಿ
ಕೇಂದ್ರ ಸರ್ಕಾರದ ಜಿಎಸ್‌ಟಿ ಹಾಗೂ ನೋಟು ಅಮಾನ್ಯೀಕರಣದಿಂದ ಸಣ್ಣ ವ್ಯಾಪಾರಸ್ಥರು ಅಂಗಡಿಗಳನ್ನು ಮುಚ್ಚುವಂತಾಯಿತು. ಗೌತಮ್‌ ಆದಾನಿಗೆ ಯಾವುದೇ ಬ್ಯಾಂಕ್‌ನಲ್ಲಿ ಲೋನ್ ಸಿಗುತ್ತದೆ. ಆದರೆ, ಸಾಮಾನ್ಯರಿಗೆ ಎಲ್ಲಿ ಹೋದರೂ ಲೋನ್ ಸಿಗಲ್ಲ. ನಾವು ಸಣ್ಣ ವ್ಯಾಪಾರಸ್ಥರಿಗೆ ಸಹಾಯ ಮಾಡುತ್ತೇವೆ. ಇದು ಬಿಜೆಪಿ ಹಾಗೂ ಕಾಂಗ್ರೆಸ್‌ (Karnataka Election) ನಡುವೆ ಇರುವ ವ್ಯತ್ಯಾಸ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

5. Karnataka Election : ಪಟ್ಟನಾಯಕನಹಳ್ಳಿ ಮಠದ ಓಂಕಾರೇಶ್ವರನಿಗೆ ದೇವೇಗೌಡರಿಂದ ವಿಶೇಷ ಪೂಜೆ
ವಿಧಾನಸಭೆ ಚುನಾವಣೆಗೆ (Karnataka Election) ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಎಲ್ಲ ಪಕ್ಷಗಳ ಮುಖಂಡರು ಪ್ರಚಾರದ ಜತೆಯಲ್ಲಿ ದೇವಸ್ಥಾನಗಳಿಗೂ ಭೇಟಿ ನೀಡಿ ವಿಶೇಷ ಪೂಜೆಗಳನ್ನು ಸಲ್ಲಿಸಲಾರಂಭಿಸಿದ್ದಾರೆ. ಅದೇ ರೀತಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಕೂಡ ಸೋಮವಾರ ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಮಠಕ್ಕೆ ಭೇಟಿ ನೀಡಿದ್ದು, ಓಂಕಾರೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

6. Karnataka Election 2023: ಶಿವಮೊಗ್ಗದಲ್ಲಿ ಲಿಂಗಾಯತ ಮುಖಂಡರ ಜತೆ ಯಡಿಯೂರಪ್ಪ ಸಭೆ; ಎಲೆಕ್ಷನ್‌ ಗೆಲ್ಲಲು ರಣತಂತ್ರ
ಶಿವಮೊಗ್ಗದಲ್ಲಿ ಸೋಮವಾರ ಬಿರುಸಿನ ರಾಜಕೀಯ ಚಟುವಟಿಕೆ ನಡೆದಿದೆ. ಈ ಸಾಲಿನ ಚುನಾವಣೆಯಲ್ಲಿ (Karnataka Election 2023) ಪಕ್ಷದ ಗೆಲುವಿಗೆ ಯಾವ ಯಾವ ಕಾರ್ಯತಂತ್ರವನ್ನು ಹೆಣೆಯಬೇಕು ಎಂಬ ಬಗ್ಗೆ ಚರ್ಚೆ ನಡೆಸಲು ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಅವರ ನಿವಾಸದಲ್ಲಿ ಲಿಂಗಾಯತ ಸಮಾಜ ಮುಖಂಡರ ಸಭೆ ನಡೆಸಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. Lokayukta Raid: ರಾಜ್ಯಾದ್ಯಂತ ಏಕಕಾಲಕ್ಕೆ ಲೋಕಾಯುಕ್ತ ದಾಳಿ; ಭ್ರಷ್ಟರ ಮನೆಯಲ್ಲಿ ಸಿಕ್ತು ಕೋಟಿ ಕೋಟಿ ಹಣ
ರಾಜ್ಯಾದ್ಯಂತ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು (Lokayukta raid) ದಾಳಿ ನಡೆಸಿದ್ದು, ಭ್ರಷ್ಟರಿಗೆ ಬೆವರಿಳಿಸಿದ್ದಾರೆ. ಅಕ್ರಮ ಆಸ್ತಿ ಗಳಿಗೆ ಸೇರಿ ಲಂಚ ಪಡೆಯುವ ಆರೋಪ ಹೊತ್ತಿರುವ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

8. ವಿಸ್ತಾರ Explainer: ಕೇಶವಾನಂದ ಭಾರತೀ ಪ್ರಕರಣಕ್ಕೆ 50 ವರ್ಷ; ಇದು ಸಂವಿಧಾನದ ಮೂಲ ಸ್ವರೂಪ ಉಳಿಸಿದ ತೀರ್ಪು
ಸುಪ್ರೀಂ ಕೋರ್ಟ್‌ ಏ.24ರಂದು ಪ್ರತ್ಯೇಕವಾದ ಒಂದು ವೆಬ್‌ಪೇಜ್‌ ಸೃಷ್ಟಿಸಿದೆ. ʼಕೇಶವಾನಂದ ಭಾರತೀʼ ಪ್ರಕರಣದ ತೀರ್ಪು, ವಾದವಿವಾದಗಳನ್ನು ಈ ವೆಬ್‌ಸೈಟ್‌ನಲ್ಲಿ ಸಂಪೂರ್ಣವಾಗಿ ಕೊಡಲಾಗಿದೆ. ಈ ಪ್ರಕರಣಕ್ಕೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಕೋರ್ಟ್‌ ಹೀಗೆ ಮಾಡಿದೆ. ಈ ತೀರ್ಪು ಇಷ್ಟೊಂದು ಮಹತ್ವದ್ದೇ? ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

9. Wrestlers Protest: ಫುಟ್ ಪಾತ್​ನಲ್ಲಿ ಮಲಗಿದ ಭಾರತದ ಒಲಿಂಪಿಯನ್​ ಕುಸ್ತಿ ಪಟುಗಳು; ಕಾರಣ ಏನು?
ಲೈಂಗಿಕ ಕಿರುಕುಳ ಆರೋಪ(Sexual harassment allegations) ಎದುರಿಸುತ್ತಿರುವ ಭಾರತದ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‍ಐ) ಅಧ್ಯಕ್ಷ ಬ್ರಿಜ್​ ಭೂಷಣ್ ಶರಣ್ ಸಿಂಗ್(Brij Bhushan Sharan Singh)​ ಅವರನ್ನು ಬಂಧಿಸುವಂತೆ ಒತ್ತಾಯಿಸಿ, ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಸೇರಿದಂತೆ ಹಲವು ಖ್ಯಾತ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ(Wrestlers Protest) ಆರಂಭಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. IPL 2023: ಮುಂದಿನ ಬಾರಿ ಈಡನ್​ನಲ್ಲಿ ಕೆಕೆಆರ್​ ಜೆರ್ಸಿ ರಾರಾಜಿಸಲಿದೆ; ನಿವೃತ್ತಿಯ ಸುಳಿವು ನೀಡಿದ ಧೋನಿ
ಭಾನುವಾರ ರಾತ್ರಿ ಕೋಲ್ಕೊತಾದಲ್ಲಿ ನಡೆದ ಐಪಿಎಲ್​9IPL 2023) ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ತಂಡ ಕೋಲ್ಕತ್ತಾ ನೈಟ್​ ರೈಡರ್ಸ್​ ವಿರುದ್ಧ 49 ರನ್​ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಸಂಪಾದಿಸಿದೆ. ಆದರೆ ಪಂದ್ಯದ ಬಳಿಕ ಮಾತನಾಡಿದ ನಾಯಕ ಮಹೇಂದ್ರ ಸಿಂಗ್​ ಧೋನಿ ಮತ್ತೆ ತಮ್ಮ ಐಪಿಎಲ್​ ವಿದಾಯದ ಬಗ್ಗೆ ಪುನರುಚ್ಚರಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ಮತ್ತಷ್ಟು ಪ್ರಮುಖ ಸುದ್ದಿಗಳಿವು

  1. SSLC Exam 2023: ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನ ಪ್ರಕ್ರಿಯೆ ಆರಂಭ; ಮೇ 2ನೇ ವಾರದಲ್ಲಿ ಫಲಿತಾಂಶ ಪ್ರಕಟ
  2. ಸಮರಾಂಕಣ: ಸುಳ್ಳು ಪತ್ತೆ ಯಂತ್ರಗಳು ಎಷ್ಟು ನಂಬಿಕೆಗೆ ಅರ್ಹ? ಅವುಗಳನ್ನು ನಿಜಕ್ಕೂ ಬಳಸಬೇಕೆ?
  3. ರಾಜೇಶ್ ಧ್ರುವ“>Sampath Jayaram: ನಟ ಸಂಪತ್‌ ಜಯರಾಮ್‌ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ? ಸತ್ಯ ಬಹಿರಂಗಪಡಿಸಿದ ನಟ ರಾಜೇಶ್ ಧ್ರುವ.
  4. Kanyadan: ಮದುವೆಗೆ ಬಂದ ವಧುಗಳು ಗರ್ಭಿಣಿಯರು! ಹೆಸರು ಕೈಬಿಟ್ಟು ಟೀಕೆಗೆ ಒಳಗಾದ ಮಧ್ಯಪ್ರದೇಶ ಸರ್ಕಾರ
  5. Govt Employees News : ಸರ್ಕಾರಿ ನೌಕರರಿಗೆ ಶೇ.17 ರಷ್ಟು ವೇತನ ಹೆಚ್ಚಳ ಜಾರಿಗೆ ಅನುದಾನ; ಆರ್ಥಿಕ ಇಲಾಖೆಯಿಂದ ಸೂಚನೆ
Exit mobile version