1. Odisha Train Accident: ಒಡಿಶಾ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 288ಕ್ಕೆ ಏರಿಕೆ
ಒಡಿಶಾದ ಬಾಲಾಸೋರ್ನಲ್ಲಿ ನಡೆದ ಭೀಕರ ರೈಲು ದುರಂತದಲ್ಲಿ (Odisha Train Accident) ಮೃತಪಟ್ಟವರ ಸಂಖ್ಯೆ 288ಕ್ಕೆ ಏರಿಕೆಯಾಗಿದೆ. 900ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಮೂರು ರೈಲುಗಳ ಮಧ್ಯೆಯ ಡಿಕ್ಕಿಯಿಂದ ಇಷ್ಟು ದೊಡ್ಡಮಟ್ಟದ ಅವಘಡ ಆಗಿದ್ದು, ಇತ್ತೀಚಿನ ವರ್ಷಗಳಲ್ಲೇ ಭೀಕರ ರೈಲು ಅಪಘಾತವಾಗಿದೆ. ಬೆಂಗಳೂರು-ಹೌರಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲಿನ ಮಧ್ಯೆ ಅಪಘಾತವಾಗಿತ್ತು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
2. Odisha Train Accident: ಕನ್ನಡಿಗರ ರಕ್ಷಣೆಗೆ 2013ರಲ್ಲಿದ್ದ ಸಚಿವರನ್ನೇ ನಿಯೋಜಿಸಿದ ಸಿದ್ದರಾಮಯ್ಯ: ಅಪಘಾತ ಸ್ಥಳಕ್ಕೆ ಹೊರಟ ಕರ್ನಾಟಕದ ತಂಡ
ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಸಚಿವ ಸಂತೋಷ್ ಲಾಡ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯೋಜಿಸಿದ್ದಾರೆ. ತಕ್ಷಣ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಹಾಗೂ ಅಗತ್ಯ ನೆರವನ್ನು ಒದಗಿಸಲು ಸೂಚನೆ ನೀಡಿದ್ದಾರೆ. ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಜತೆಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಸೇರಿ ಇತರೆ ಅಧಿಕಾರಿಗಳ ತಂಡ ಘಟನಾ ಸ್ಥಳಕ್ಕೆ ತಲುಪಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
3. Odisha Train Accident: ಗ್ರೀನ್ ಸಿಗ್ನಲ್ ಸಿಕ್ಕರೂ ನಡೆಯಿತು ರೈಲು ಅಪಘಾತ, ತನಿಖಾ ವರದಿ ಮಾಹಿತಿಯೇ ಭೀಕರ
ಒಡಿಶಾದ ಬಾಲಾಸೋರ್ ಜಿಲ್ಲೆಯ ಬಹನಗ ರೈಲು ನಿಲ್ದಾಣದ ಬಳಿ ಸಂಭವಿಸಿದ ತ್ರಿವಳಿ ರೈಲು ಅಪಘಾತದಲ್ಲಿ (Odisha Train Accident) ಮೃತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಗಾಯಾಳುಗಳ ಸಂಖ್ಯೆಯೂ ಸಾವಿರ ಸಮೀಪಿಸಿದೆ. ಇದರ ಬೆನ್ನಲ್ಲೇ ರೈಲು ಅಪಘಾತದ ಕುರಿತು ಪ್ರಾಥಮಿಕ ತನಿಖೆಯ ಮಾಹಿತಿ ಲಭ್ಯವಾಗಿದ್ದು, ಮಾನವ ಪ್ರಮಾದವೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
4. Odisha Train Accident: ರೈಲು ಅಪಘಾತಕ್ಕೆ ಕಾರಣರಾದವರನ್ನು ಸುಮ್ಮನೆ ಬಿಡಲ್ಲ, ಪ್ರಧಾನಿ ಮೋದಿ ಕಿಡಿಕಿಡಿ
ಶುಕ್ರವಾರ ಸಂಜೆ ಒಡಿಶಾದ ಬಾಲಾಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ (Odisha Train Accident) ಮೃತಪಟ್ಟವರ ಸಂಖ್ಯೆ 261ಕ್ಕೆ ಏರಿಕೆಯಾಗಿದೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಅಪಘಾತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ, ಪರಿಹಾರ ಕಾರ್ಯಾಚರಣೆ ವೀಕ್ಷಿಸಿದರು. ಬಳಿಕ, ಆಸ್ಪತ್ರೆಗೆ ತೆರಳಿ ಗಾಯಾಳುಗಳನ್ನು ಸಂತೈಸಿದರು. ಇದೇ ವೇಳೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಅಪಘಾತಕ್ಕೆ ಕಾರಣವಾದ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಲಾಗುವುದು ಎಂದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಹೇಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
5. Congress Guarantee: ಡಿಗ್ರಿ ನಂತರ ಪಿಜಿ ಓದಿದರೆ ಯುವನಿಧಿ ಇಲ್ಲ: ಸರ್ಕಾರದ ಮಾರ್ಗಸೂಚಿಯಲ್ಲಿ ಬಯಲಾಯ್ತು ಸತ್ಯ
ರಾಜ್ಯದ ನಿರುದ್ಯೋಗ ಯುವಕರಿಗೆ ಭತ್ಯೆ ನೀಡುವ ಯುವನಿಧಿ ಗ್ಯಾರಂಟಿ ಯೋಜನೆಗೆ ರಾಜ್ಯ ಸರ್ಕಾರ ಅಧಿಸೂಚನೆ ಹಾಗೂ ಮಾರ್ಗಸೂಚಿ ಪ್ರಕಟಿಸಿದೆ. ಅದರಂತೆ, ಪದವಿ ವ್ಯಾಸಂಗ ಮಾಡಿದವರಿಗಷ್ಟೆ ನಿರುದ್ಯೋಗಭತ್ಯೆ ಸಿಗಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
6. Contaminated Water: ಜೀವ ಹಿಂಡುತ್ತಿದೆ ಜೀವಜಲ; ರಾಯಚೂರಲ್ಲಿ ಮತ್ತೆ 35ಮಂದಿ ತೀವ್ರ ಅಸ್ವಸ್ಥ
ಜಿಲ್ಲೆಯಲ್ಲಿ ಕಲುಷಿತ ನೀರಿನಿಂದ (Contaminated Water) ಉಂಟಾಗುತ್ತಿರುವ ಸಮಸ್ಯೆ ಮುಂದುವರಿದಿದೆ. ಲಿಂಗನಸಗೂರು ತಾಲೂಕಿನ ಯಡಗುಂಟಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ, 35ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಜಾಡಲದಿನ್ನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯರಗುಂಟಿ ಗ್ರಾಮದಲ್ಲಿ ನಿನ್ನೆ ತಡರಾತ್ರಿ ಏಕಾಏಕಿ ಜನರು ಅಸ್ವಸ್ಥರಾಗತೊಡಗಿದರು (Raichur Water Contamination). ವಾಂತಿ-ಭೇದಿ ಶುರುವಾಯಿತು. ಪ್ರಾರಂಭದಲ್ಲಿ ಗ್ರಾಮದಲ್ಲಿಯೇ ಕ್ಲಿನಿಕ್ ತೆರೆದು ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆ ಅಗತ್ಯ ಇದ್ದವರನ್ನು ಲಿಂಗಸಗೂರು, ಸಿಂಧನೂರು, ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
7. PM Narendra Modi: ಜೂನ್ 22ರಂದು ಅಮೆರಿಕ ಸಂಸತ್ತು ಉದ್ದೇಶಿಸಿ ಮಾತನಾಡಲಿದ್ದಾರೆ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಜೂನ್ 22ರಿಂದ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಅವರು ಅಮೆರಿಕದ (America) ಸಂಸತ್ತಿನ ಎರಡೂ ಮನೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಅಮೆರಿಕದ ನಾಯಕರು ಹೇಳಿದ್ದಾರೆ. ಅಮೆರಿಕ ಸಂಸತ್ (US Congress) ಉದ್ದೇಶಿಸಿ ಮಾತನಾಡಲು ಅವಕಾಶ ಕಲ್ಪಿಸುವುದು ಯಾವುದೇ ವಿದೇಶಿ ನಾಯಕನಿಗೆ ನೀಡುವ ಅತ್ಯುನ್ನತ ಗೌರವವಾಗಿದೆ ಎಂದು ಹೇಳಲಾಗುತ್ತಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
8. ಕಣ್ಣು ಕಾಣದ ವೃದ್ಧೆ ಮೇಲೆ ರೇಪ್ ಮಾಡಿದ ಕಾಮುಕ; ಮನನೊಂದು ವಿಷ ಸೇವಿಸಿ ಆತ್ಮಹತ್ಯೆ
ಕಣ್ಣಿಗೆ ಪೂರ್ತಿಯಾಗಿ ಕಾಮದ ಪೊರೆಯನ್ನೇ ಕಟ್ಟಿಕೊಂಡವರಿಗೆ ಕಣ್ಣುಕಾಣದ ವೃದ್ಧೆಯಾದರೇನು? ಆಗಿನ್ನೂ ಕಣ್ಬಿಟ್ಟ ಹಸುಳೆಯಾದರೇನು? ತಮ್ಮ ವಿಕೃತಿಯ ಪ್ರದರ್ಶನವನ್ನು ಮಾಡುತ್ತಾರೆ. ಇದೀಗ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ವ್ಯಾಸಾಪುರ ತಾಂಡಾದಲ್ಲಿ ಕಾಮುಕನೊಬ್ಬ ಕಣ್ಣುಕಾಣದ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ನೋವು-ಅವಮಾನ ಸಹಿಸಲಾಗದೆ ವೃದ್ಧೆ ವಿಷ ಕುಡಿದು ಪ್ರಾಣ ಬಿಟ್ಟಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
9. ವಿಸ್ತಾರ ಅಂಕಣ: ವಿದೇಶದಲ್ಲಿ ಕಾಲಿಟ್ಟ ತಕ್ಷಣ ರಾಹುಲ್ ಗಾಂಧಿ ಭಾರತ ವಿರೋಧಿ ಆಗುವುದೇಕೆ?
ತಮ್ಮನ್ನು ಸಂಸತ್ತಿನಿಂದ ಹೊರಹಾಕಿದ್ದನ್ನೇ ಏನೋ ಘೋರ ಅಪರಾಧ ಎಂಬಂತೆ, ತಾವು ಹುತಾತ್ಮ ಎಂಬಂತೆ ಮಾತನಾಡುತ್ತಾರೆ ರಾಹುಲ್ ಗಾಂಧಿ. ಆದರೆ ಯಾವ ಕಾರಣಕ್ಕೆ ತಮ್ಮನ್ನು ಹೊರಹಾಕಲಾಯಿತು ಎನ್ನುವುದನ್ನು ಮಾತ್ರ ಎಲ್ಲಿಯೂ ಹೇಳುವುದಿಲ್ಲ. ಸ್ವಯಂಕೃತ ಅಪರಾಧಕ್ಕಾಗಿ ಸಂಸತ್ತಿನಿಂದ ಹೊರಗಿರುವ ರಾಹುಲ್ ಈಗ ವಿದೇಶಗಳಲ್ಲಿ ಭಾರತದ ಕುರಿತು ನಕಾರಾತ್ಮಕ ಅಂಶಗಳನ್ನೇ ಬಿಂಬಿಸುತ್ತಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
10. Viral News : ಐದು ವರ್ಷದ ಮಗನನ್ನು ಕೊಂದು, ತಲೆ ಬುರುಡೆಯನ್ನು ಬೇಯಿಸಿಕೊಂಡು ತಿಂದ ತಾಯಿ!
ಪ್ರಪಂಚದಲ್ಲಿ ಕೆಟ್ಟ ತಂದೆ ಸಿಗಬಹುದು, ಆದರೆ ಕೆಟ್ಟ ತಾಯಿ ಸಿಗುವುದಕ್ಕೆ ಸಾಧ್ಯವಿಲ್ಲ ಎನ್ನುವ ಮಾತಿದೆ. ಆದರೆ ಈಗ ಕಾಲ ಬದಲಾಗಿದೆ. ಹೆತ್ತ ತಾಯಿ ಕೂಡ ಕ್ರೂರಿಯಾಗಿ ಕಾಡಬಹುದಾದ ಸಮಾಜದಲ್ಲಿ ನಾವಿದ್ದೇವೆ. ಅದಕ್ಕೆ ಸಾಕ್ಷಿ ಎನ್ನುವಂತೆ ಹೆತ್ತ ತಾಯಿಯೇ ತನ್ನ ಐದು ವರ್ಷದ ಮಗನನ್ನು ಕೊಂದು, ಬೇಯಿಸಿ ತಿಂದಿರುವ ವಿಚಿತ್ರ ಘಟನೆ ಈಜಿಪ್ಟ್‌ನಲ್ಲಿ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.