1. Karnataka Politics : ನಾಯಿ ಮರಿ ಹೇಳಿಕೆ ಸಿದ್ದು ಸಂಸ್ಕೃತಿ ತೋರಿಸುತ್ತದೆ, ಜನರೇ ಬುದ್ಧಿ ಕಲಿಸುತ್ತಾರೆ: ಸಿಎಂ ಬೊಮ್ಮಾಯಿ
ರಾಜ್ಯ ರಾಜಕೀಯದಲ್ಲಿ (Karnataka Politics) ಪಕ್ಷದ ನಾಯಕರ ವಾಕ್ಸಮರಗಳು ದಿನೇ ದಿನೆ ಹೆಚ್ಚುತ್ತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ನಾಯಿ ಮರಿಗೆ ಹೋಲಿಕೆ ಮಾಡಿ ಮಾತನಾಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದು, ಇಂತಹ ಹೇಳಿಕೆ ಸಿದ್ದರಾಮಯ್ಯ ಅವರ ವ್ಯಕ್ತಿತ್ವವನ್ನು ತೋರಿಸುತ್ತದೆ. ಜನರೇ ಅವರಿಗೆ ತಕ್ಕ ಪಾಠವನ್ನು ಕಲಿಸಲಿದ್ದಾರೆ ಎಂದು ಹೇಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಹೆಚ್ಚಿನ ಓದಿಗಾಗಿ: Karnataka Elections | ನಾಯಿ ಮರಿ ಹೇಳಿಕೆಗೆ ಅರುಣ್ ಸಿಂಗ್ ಆಕ್ರೋಶ: ಇದು ಬೊಮ್ಮಾಯಿಗಲ್ಲ ರಾಜ್ಯದ ಜನರಿಗೆ ಅಪಮಾನ ಎಂದ ಬಿಜೆಪಿ
2. Karnataka Election | ಬಾಂಬೇ ಬಾಯ್ಸ್‌ಗೆ 12 ಹುಡುಗಿಯರನ್ನು ಸಪ್ಲೈ ಮಾಡಿದ್ದೇ ಸ್ಯಾಂಟ್ರೊ ರವಿ: HDK ಗಂಭೀರ ಆರೋಪ
೨೦೧೯ರಲ್ಲಿ ತನ್ನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಉರುಳಿಸಿದ ಎರಡೂ ಪಕ್ಷಗಳ ಶಾಸಕರು ಮುಂಬಯಿಯಲ್ಲಿದ್ದಾಗ ಅವರಿಗೆ ೧೨ ಹುಡುಗಿಯರನ್ನು ಇದೇ ಸ್ಯಾಂಟ್ರೋ ರವಿ ಪೂರೈಕೆ ಮಾಡಿದ್ದ ಎಂಬ ಗಂಭೀರ ಆರೋಪವನ್ನು ಎಚ್.ಡಿ. ಕುಮಾರಸ್ವಾಮಿ ಮಾಡಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
3. Murugha seer ಪ್ರಕರಣಕ್ಕೆ ಬಿಗ್ ಟ್ವಿಸ್ಟ್ | ಬಾಲಕಿಯರ ಮೇಲೆ ಅತ್ಯಾಚಾರವೇ ನಡೆದಿಲ್ಲ ಎನ್ನುತ್ತಿದೆ ವೈದ್ಯಕೀಯ ವರದಿ!
ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾಶರಣರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ (Murugha seer) ನಡೆಸಿದ್ದಾರೆ ಎಂದು ಆರೋಪಿಸಿದ್ದ ಇಬ್ಬರು ಸಂತ್ರಸ್ತ ಬಾಲಕಿಯರ ಮೇಲೆ ಯಾವುದೇ ಅತ್ಯಾಚಾರ ನಡೆದಿರುವ ಬಗ್ಗೆ ವೈದ್ಯಕೀಯ ದಾಖಲೆಗಳಿಲ್ಲ ಎಂದು ವೈದ್ಯಕೀಯ ವರದಿಯಲ್ಲಿ ತಿಳಿಸಲಾಗಿದೆ ಎಂದು ತಿಳಿದುಬಂದಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಮತ್ತಷ್ಟು ಓದಿಗಾಗಿ: Murugha seer | ವೈದ್ಯಕೀಯ ವರದಿ ಕುತಂತ್ರದ ಭಾಗ, ಇದು ಕ್ಲೀನ್‌ಚಿಟ್ ಅಲ್ಲ ಎಂದ ಒಡನಾಡಿ, ಸಿಬಿಐ ತನಿಖೆಗೆ ಆಗ್ರಹ
4. ಕನ್ನಡ ಸಾಹಿತ್ಯ ಸಮ್ಮೇಳನ | ಅತೃಪ್ತ ಆತ್ಮಗಳಿಂದ ಪರ್ಯಾಯ: ಸಮ್ಮೇಳನಾಧ್ಯಕ್ಷ ಡಾ. ದೊಡ್ಡರಂಗೇಗೌಡ
ಸಮ್ಮೇಳನಾಧ್ಯಕ್ಷ ಪೀಠದ ಭಾಷಣ, ನುಡಿಯ ಆಶಯ, ಗಡಿನಾಡು, ಪರ್ಯಾಯ ಸಾಹಿತ್ಯ ಸಮ್ಮೇಳನ, ಸಿನಿಮಾ ಸಾಹಿತಿ ಎಂಬ ಕಡೆಗಣನೆ- ಎಲ್ಲದರ ಕುರಿತು ಡಾ. ದೊಡ್ಡರಂಗೇಗೌಡರು ಆಡಿರುವ ಮಾತುಗಳು ಇಲ್ಲಿವೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಕನ್ನಡ ಸಾಹಿತ್ಯ ಸಮ್ಮೇಳನ | 11 ಮುಸ್ಲಿಮರಿಗೆ ಅವಕಾಶ, ಇಬ್ಬರಿಗೆ ಸನ್ಮಾನ; ಮುಸ್ಲಿಂ ಪ್ರಾತಿನಿಧ್ಯ ಇಲ್ಲವೆನ್ನುವುದು ಬೇಜವಾಬ್ದಾರಿ ಮಾತು: ಮಹೇಶ್ ಜೋಶಿ ಸಂದರ್ಶನ
ಕನ್ನಡ ಸಾಹಿತ್ಯ ಸಮ್ಮೇಳನದ ಸಿದ್ಧತೆ ಜತೆಗೆ ಇತ್ತೀಚೆಗೆ ನಡೆಯುತ್ತಿರುವ ಕೆಲವು ವಿವಾದಗಳ ಕುರಿತು ಡಾ. ಮಹೇಶ್ ಜೋಶಿ ಮಾತನಾಡಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
5. SM Krishna | ಬಿಜೆಪಿ ಹಿರಿಯ ಮುಖಂಡ, ಮಾಜಿ ಸಿಎಂ ಎಸ್ ಎಂ ಕೃಷ್ಣ ರಾಜಕೀಯ ಜೀವನಕ್ಕೆ ಗುಡ್‌ಬೈ
ರಾಜ್ಯದ ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ, ರಾಜ್ಯಪಾಲರಾಗಿ ಬಹುತೇಕ ಎಲ್ಲ ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ ಮಾಜಿ ಕಾಂಗ್ರೆಸಿಗ, ಹಾಲಿ ಬಿಜೆಪಿ ಮುಖಂಡ ಎಸ್.ಎಂ. ಕೃಷ್ಣ (SM Krishna) ಅವರು ರಾಜಕೀಯ ಜೀವನಕ್ಕೆ ಗುಡ್‌ಬೈ ಹೇಳುತ್ತಿರುವುದಾಗಿ ಘೋಷಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
6. Crime Rate : 2022ರಲ್ಲಿ ರಾಜಧಾನಿಯಲ್ಲಿ 172 ಕೊಲೆ, 153 ಅತ್ಯಾಚಾರ: ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
2022ರಲ್ಲಿ ಬೆಂಗಳೂರು ನಗರದಲ್ಲಿ 172 ಕೊಲೆಗಳು ನಡೆದಿದ್ದು, ಅಷ್ಟೂ ಪ್ರಕರಣವನ್ನೂ ಭೇದಿಸಲಾಗಿದೆ. ಅಪರಾಧ ಪ್ರಮಾಣವನ್ನು (Crime Rate) ಕಳೆದ ಮೂರು ವರ್ಷಕ್ಕೆ ಹೋಲಿಕೆ ಮಾಡಿದಲ್ಲಿ ಗಮನಾರ್ಹ ಏರಿಕೆ ಕಂಡಿಲ್ಲ. ೨೦೨೧ರಲ್ಲಿ ಲಾಕ್‌ಡೌನ್ ಸಮಯದಲ್ಲಿ ೧೫೨ ಕೊಲೆಗಳು ನಡೆದಿವೆ. ಅಲ್ಲದೆ, ೧೫೩ ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹೇಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
7. Sonia Gandhi | ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಅನಾರೋಗ್ಯ; ದೆಹಲಿ ಆಸ್ಪತ್ರೆಗೆ ದಾಖಲು
ಕಾಂಗ್ರೆಸ್ ಮಾಜಿ ಅಧ್ಯಕ್ಷೆ, ಹಿರಿಯ ನಾಯಕಿ ಸೋನಿಯಾ ಗಾಂಧಿ (Sonia Gandhi) ಆರೋಗ್ಯದಲ್ಲಿ ಇಂದು ಏರುಪೇರಾಗಿದ್ದು, ಅವರನ್ನು ದೆಹಲಿಯ ಶ್ರೀಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದೆ. ಸೋನಿಯಾ ಗಾಂಧಿಯವರ ಶ್ವಾಸಕೋಶದಲ್ಲಿ ಸೋಂಕು ಉಂಟಾಗಿದ್ದು, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಪಕ್ಷ ತಿಳಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
8. Anganwadi Workers | ಅಂಗನವಾಡಿ ಕಾರ್ಯಕರ್ತೆಯರಾಗಲು PUC ಆಗಲೇಬೇಕು, ಸಹಾಯಕಿಯರಿಗೆ SSLC ಕಡ್ಡಾಯ: ಇದು NEP Rules
ರಾಜ್ಯದಲ್ಲಿ ಇನ್ನು ಮುಂದೆ ಅಂಗನವಾಡಿ ಕಾರ್ಯಕರ್ತೆಯರಾಗಲು (Anganwadi Workers) ಕನಿಷ್ಠ ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು, ಸಹಾಯಕರಿಗೆ ಎಸ್ಸೆಸ್ಸೆಲ್ಸಿ ಕಡ್ಡಾಯ! ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಪೂರಕವಾಗಿ ಹೊಸ ನಿಯಮ ಜಾರಿಗೆ ಬರಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
9. Aadhaar Address Change | ಕುಟುಂಬದ ಮುಖ್ಯಸ್ಥರ ವಿಳಾಸ ಬಳಸಿ ನಿಮ್ಮ ಆಧಾರ್ ವಿಳಾಸ ಬದಲಾವಣೆ ಹೇಗೆ? ಹೀಗೆ ಮಾಡಿ
ವಿಳಾಸ ದೃಢೀಕರಿಸುವ ದಾಖಲೆ ಇಲ್ಲದೆ ಆಧಾರ್ ಕಾರ್ಡ್‌ನಲ್ಲಿ ವಿಳಾಸ ಬದಲಾವಣೆ ಮಾಡಲು ಕಷ್ಟವಾಗುತ್ತಿರುವ ಕಾರಣ ಭಾರತೀಯ ವಿಶೇಷ ಗುರುತಿನ ಪ್ರಾಧಿಕಾರವು ಹೊಸ ಸೌಲಭ್ಯ ಕಲ್ಪಿಸಿದೆ. ‘ಕುಟುಂಬದ ಮುಖ್ಯಸ್ಥ’ರ ವಿಳಾಸ ಬಳಸಿ ಈಗ ಆನ್‌ಲೈನ್ ಮೂಲಕವೇ ಯಾವುದೇ ದಾಖಲೆ ಇಲ್ಲದೆ ಆಧಾರ್ ವಿಳಾಸ ಬದಲಾಯಿಸಬಹುದಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
10. Accident In Delhi | ಅಪಘಾತದ ಬರ್ಬರತೆಗೆ ಅಂಜಲಿಯ ಮೆದುಳೇ ನಾಪತ್ತೆ, ಮುರಿದ ಬೆನ್ನೆಲುಬು
ರಾಜಧಾನಿಯಲ್ಲಿ ಹೊಸ ವರ್ಷಾಚರಣೆಯ ತಡರಾತ್ರಿ ನಡೆದ ಬರ್ಬರ ಅಪಘಾತದಲ್ಲಿ ಮೃತಪಟ್ಟ ಯುವತಿ ಅಂಜಲಿಯ ಶವಪರೀಕ್ಷೆಯಿಂದ ಹೊರಬಿದ್ದಿರುವ ವಿವರಗಳು ಬೆಚ್ಚಿಬೀಳಿಸುವಂತಿವೆ. ಮದ್ಯ ಸೇವಿಸಿ ಮತ್ತರಾಗಿದ್ದ ಯುವಕರು ಕಾರಿನಡಿಗೆ ಯುವತಿಯನ್ನು ಸಿಲುಕಿಸಿ ಹದಿಮೂರು ಕಿಲೋಮೀಟರ್ ಎಳೆದುಕೊಂಡು ಹೋದ ಪರಿಣಾಮ ಅಂಜಲಿಯ ತಲೆಬುರುಡೆ ಒಡೆದು ಬಿಚ್ಚಿಕೊಂಡಿದೆ. ಮೆದುಳಿನ ಒಳಭಾಗ ನಾಪತ್ತೆಯಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.