1. SC ST Reservation: ಶಿಕಾರಿಪುರದಲ್ಲಿ ಭುಗಿಲೆದ್ದ ಎಸ್‌ಸಿ-ಎಸ್‌ಟಿ ಮೀಸಲಾತಿ ಹೋರಾಟ: ಬಿಎಸ್‌ವೈ ಮನೆ ಮೇಲೆ ಕಲ್ಲು, ಚಪ್ಪಲಿ ತೂರಾಟ
ಎಸ್‌ಸಿ-ಎಸ್‌ಟಿ ಮೀಸಲಾತಿ (SC ST Reservation) ಜಾರಿ ವಿಚಾರಕ್ಕೆ ಸಂಬಂಧಪಟ್ಟಂತೆ ಶಿಕಾರಿಪುರದಲ್ಲಿ ಲಂಬಾಣಿ ಸಮುದಾಯದವರಿಂದ ಪ್ರತಿಭಟನೆ ನಡೆದಿದ್ದಾರೆ. ಈ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮನೆ ಮುಂದೆ ಬಂದ ಪ್ರತಿಭಟನಾಕಾರರು ಅವರ ಮನೆ ಮೇಲೆ ಕಲ್ಲು, ಚಪ್ಪಲಿ ತೂರಾಟ ನಡೆಸಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಹೆಚ್ಚಿನ ಓದಿಗಾಗಿ: ಎಸ್‌ಸಿ ಪಟ್ಟಿಗೆ ದಲಿತ ಕ್ರೈಸ್ತರು, ಎಸ್‌ಟಿ ಕೆಟಗರಿಗೆ ಬೋಯಾ, ವಾಲ್ಮೀಕಿ; ನಿರ್ಣಯ ಅಂಗೀಕರಿಸಿದ ಆಂಧ್ರ ವಿಧಾನಸಭೆ
2. Karnataka Congress: ಸಿಎಂ ಬಲಗೈ ಬಂಟ ಕಾಂಗ್ರೆಸ್ ಸೇರ್ಪಡೆ; ಬಿಜೆಪಿ ಶೋಚನೀಯ ಸ್ಥಿತಿಗೆ ಸಾಕ್ಷಿ: ಡಿ.ಕೆ. ಶಿವಕುಮಾರ್
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಲಗೈ ಭಂಟನಂತೆ ಇದ್ದ ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ನಾಯಕ, ಮಾಜಿ ಸಂಸದ ಹಾಗೂ ಮಾಜಿ ಶಾಸಕ ಮಂಜುನಾಥ್ ಕುನ್ನೂರ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದು, ಬಿಜೆಪಿಯ ಶೋಚನೀಯ ಸ್ಥಿತಿಗೆ ಇದು ಸಾಕ್ಷಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಚಿಂತಾಮಣಿ, ಕೆ ಆರ್ ಪೇಟೆ, ಶಿಗ್ಗಾಂವಿ ಹಾಗೂ ಶಿವಮೊಗ್ಗ ಕ್ಷೇತ್ರದ ಅನ್ಯ ಪಕ್ಷಗಳ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
3. KRPP Party: ಜನಾರ್ದನ ರೆಡ್ಡಿ ಪಕ್ಷಕ್ಕೆ ಫುಟ್‌ಬಾಲ್ ಚಿಹ್ನೆ: 30 ಸೀಟು ಗುರಿ; ಚಿಹ್ನೆ ಆಯ್ಕೆಯ ಸ್ವಾರಸ್ಯ ಬಿಚ್ಚಿಟ್ಟ ಮಾಜಿ ಸಚಿವ
ಗಣಿ ಉದ್ಯಮಿ ಹಾಗೂ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಸ್ಥಾಪಿಸಿರುವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ( KRPP Party) ಫುಟ್‌ಬಾಲ್ ಗುರುತು ಆಯ್ಕೆ ಮಾಡಿಕೊಂಡಿದ್ದಾರೆ. ಫುಟ್‌ಬಾಲ್ ಗುರುತು ಹಾಗೂ ಪಕ್ಷದ ಪ್ರಣಾಳಿಕೆಯನ್ನು ಬೆಂಗಳೂರಿನಲ್ಲಿ ಜನಾರ್ದನ ರೆಡ್ಡಿ ಬಿಡುಗಡೆ ಮಾಡಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
4. Public Exam : 5, 8ನೇ ತರಗತಿ ಪಬ್ಲಿಕ್ ಪರೀಕ್ಷೆ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್
ಐದು ಮತ್ತು ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ರಾಜ್ಯ ಮಟ್ಟದ ಮೌಲ್ಯಾಂಕನ (Public Exam) ನಡೆಸಲು ಅವಕಾಶ ನೀಡಿರುವ ರಾಜ್ಯ ಹೈಕೋರ್ಟ್‌ನ ಆದೇಶದ ವಿರುದ್ಧ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇದರಿಂದಾಗಿ ಈ ಪರೀಕ್ಷೆ ನಡೆಸುವ ತೀರ್ಮಾನ ತೆಗೆದುಕೊಂಡಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆಗೆ ಗೆಲುವಾದಂತಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
5. Rahul Gandhi: ಸರ್ಕಾರಿ ಬಂಗ್ಲೆ ತೆರವು ಮಾಡಲು ರಾಹುಲ್ ಗಾಂಧಿಗೆ ನೋಟಿಸ್
2019ರ ಮಾನಹಾನಿ ಪ್ರಕರಣದಲ್ಲಿ 2 ವರ್ಷ ಜೈಲು ಶಿಕ್ಷೆಗೆ ಗುರಿಯಾದ ಪರಿಣಾಮ ಕಾಂಗ್ರೆಸ್ ನಾಯಕ, ವಯನಾಡು ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ರಾಹುಲ್ ಗಾಂಧಿ (Rahul Gandhi) ಅವರು ಸಂಸತ್ ಸದಸ್ಯತ್ವದಿಂದ ಅನರ್ಹರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಸರ್ಕಾರಿ ಬಂಗ್ಲೆಯನ್ನೂ ತೆರವುಗೊಳಿಸಬೇಕಾಗಾಗಿದೆ. ನಿಯಮಗಳ ಪ್ರಕಾರ, ಸದಸ್ಯತ್ವದಿಂದ ಅನರ್ಹಗೊಂಡ ದಿನದಿಂದ 30 ದಿನಗಳ ಒಳಗೆ ಬಂಗ್ಲೆಯನ್ನು ಖಾಲಿ ಮಾಡಬೇಕಾಗುತ್ತದೆ. ಈ ಸಂಬಂಧ ರಾಹುಲ್ ಗಾಂಧಿ ಅವರಿಗೆ ಲೋಕಸಭೆಯ ವಸತಿ ಸಮಿತಿಯು ನೋಟಿಸ್ ಜಾರಿ ಮಾಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
6. Corruption case: ನಿರೀಕ್ಷಣಾ ಜಾಮೀನು ತಿರಸ್ಕೃತ, ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧನ
ಭ್ರಷ್ಟಾಚಾರ ಪ್ರಕರಣ (Corruption case) ಸಂಬಂಧ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠವು ಜಾಮೀನು ನಿರಾಕರಣೆ ಮಾಡಿರುವ ಬೆನ್ನಲ್ಲೇ ತುಮಕೂರಿನ ಕ್ಯಾತ್ಸಂದ್ರ ಟೋಲ್ ಬಳಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
7. Amit Shah: ಬೆಂಗಳೂರಿನಲ್ಲಿ ಅಮಿತ್ ಶಾ ಕಾನ್‌ವೇಯಲ್ಲಿ ಭದ್ರತಾ ವೈಫಲ್ಯ; ಇಬ್ಬರು ವಿದ್ಯಾರ್ಥಿಗಳ ವಿಚಾರಣೆ
ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಚರಿಸುವ ಕಾನ್‌ವೇಯಲ್ಲಿ ಭದ್ರತಾ ವೈಫಲ್ಯ ಉಂಟಾಗಿದೆ. ಭಾನುವಾರ (ಮಾ. 26) ರಾತ್ರಿ ಬೆಂಗಳೂರು ಪ್ರವಾಸ ಮುಗಿಸಿ ಅಮಿತ್ ಶಾ ಅವರು ಎಚ್‌ಎಲ್‌ಎಲ್ ವಿಮಾನ ನಿಲ್ದಾಣಕ್ಕೆ ತೆರಳುವ ವೇಳೆ ಈ ಘಟನೆ ನಡೆದಿದ್ದು, ಈ ಸಂಬಂಧ ಇಬ್ಬರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
8. T20 Cricket : ಒಡಿಐನಲ್ಲಿ ದಾಖಲೆ ಬರೆದಿದ್ದ ದಕ್ಷಿಣ ಆಫ್ರಿಕಾ ಟಿ20 ಪಂದ್ಯದಲ್ಲೂ ಮಾಡಿತು ವರ್ಲ್ಡ್ ರೆಕಾರ್ಡ್
ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ (T20 Cricket) ದಕ್ಷಿಣ ಆಫ್ರಿಕಾ ತಂಡ ಭಾನುವಾರ (ಮಾರ್ಚ್ 26) ಐತಿಹಾಸಿಕ ದಾಖಲೆ ಮಾಡಿದೆ. ಪ್ರವಾಸಿ ವೆಸ್ಟ್ ಇಂಡೀಸ್ ನೀಡಿದ್ದ 259 ರನ್‌ಗಳ ಗುರಿಯನ್ನು ಇನ್ನು 7 ಎಸೆತಗಳು ಬಾಕಿ ಇರುವಾಗಲೇ ಮೆಟ್ಟಿನಿಂತ ಹರಿಣ ಪಡೆ, ಟಿ20-ಐ ಕ್ರಿಕೆಟ್‌ನಲ್ಲಿ ಗರಿಷ್ಠ ರನ್‌ಗಳ ಗುರಿಯನ್ನು ಮೆಟ್ಟಿ ನಿಂತು ಸಾಧನೆ ಮಾಡಿತು. ಅಂದಹಾಗೆ ದಕ್ಷಿಣ ಆಫ್ರಿಕಾ ತಂಡ ಏಕದಿನ ಕ್ರಿಕೆಟ್‌ನಲ್ಲೂ ಗರಿಷ್ಠ ರನ್‌ಗಳ ಗುರಿ ಬೆನ್ನತ್ತಿ ಗೆದ್ದ ವಿಶ್ವ ದಾಖಲೆ ಹೊಂದಿದೆ. 2005ರಲ್ಲಿ ಆಸ್ಟ್ರೇಲಿಯಾ ಎದುರು 435 ರನ್‌ಗಳ ಗುರಿ ಬೆನ್ನತ್ತಿ ಜಯ ದಾಖಲಿಸಿತ್ತು. ಈಗ ಟಿ20 ಮಾದರಿಯಲ್ಲೂ ರನ್ಚೇಸ್ ಮಾಡಿದ ದಾಖಲೆ ಸೃಷ್ಟಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
9. PAN-Aadhaar : ಪ್ಯಾನ್- ಆಧಾರ್ ಲಿಂಕ್ ಗಡುವು ವಿಸ್ತರಣೆಯಾಗಲಿದೆಯೇ?
ಪ್ಯಾನ್ ಕಾರ್ಡ್ ಹಾಗೂ ಆಧಾರ್ ಲಿಂಕ್ ಮಾಡಲು 2023ರ ಮಾರ್ಚ್ 31 ಕೊನೆಯ ದಿನವಾಗಿದೆ. ಬಳಿಕ ಲಿಂಕ್ ಮಾಡದಿದ್ದರೆ 2023ರ ಏಪ್ರಿಲ್ 1ರಿಂದ ಪ್ಯಾನ್ ಕಾರ್ಡ್ ನಿಷ್ಕ್ರಿಯವಾಗಲಿದೆ. ಆದರೆ ಈ ಹಿಂದೆ ಹಲವಾರು ಬಾರಿ ಗಡುವನ್ನು ವಿಸ್ತರಿಸಲಾಗಿದೆ. ಆದರೆ ಈ ಸಲ ಗಡುವು ವಿಸ್ತರಣೆಯಾಗಲಿದೆಯೇ ಇಲ್ಲವೇ ( PAN-Aadhaar) ಎಂಬ ಸಂದೇಹ ಉಂಟಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
10. Viral News : ಬೆಳಗ್ಗೆ ಜಡ್ಜ್, ರಾತ್ರಿ ಪೋರ್ನ್ ಸ್ಟಾರ್, ಅಮೆರಿಕ ವ್ಯಕ್ತಿಯ ಮೂನ್‌ಲೈಟ್ ವರ್ಕ್!
ಸಮಾಜದಲ್ಲಿ ಹಲವಾರು ರೀತಿಯ ವೃತ್ತಿಗಳಿವೆ. ಎಲ್ಲ ಹುದ್ದೆಗೂ ಅದರದ್ದೇ ಆದ ಸ್ಥಾನಮಾನವಿದೆ. ಅದರಲ್ಲೂ ವೈದ್ಯರು, ಶಿಕ್ಷಕರು, ನ್ಯಾಯಾಧೀಶರು, ನ್ಯಾಯಮೂರ್ತಿಗಳು ಎನ್ನುವ ಹುದ್ದೆಗಳಂತೂ ಹೆಚ್ಚು ಗೌರವದ ಹುದ್ದೆಗಳು ಎಂದೇ ಹೇಳಬಹುದು. ಆದರೆ ಹುದ್ದೆಯ ಗೌರವವನ್ನೂ ಲೆಕ್ಕಿಸದೆ ಮತ್ತೊಂದು ಕೆಳಮಟ್ಟದ ಕೆಲಸಕ್ಕೆ ಕೈ ಹಾಕಿದ್ದ ನ್ಯಾಯಾಧೀಶರೊಬ್ಬನನ್ನು ಇದೀಗ ಅಧಿಕಾರಿಗಳು ವಜಾ ಮಾಡಿದ್ದಾರೆ. ಆ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ (Viral News) ಆಗಿದೆ. ಮತ್ತಷ್ಟು ವೈರಲ್ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಮತ್ತಷ್ಟು ಪ್ರಮುಖ ಸುದ್ದಿಗಳಿವು
- ರಾಜ ಮಾರ್ಗ ಅಂಕಣ : SSLC ಪರೀಕ್ಷೆ ಅಂತಿಮ ತಯಾರಿ ಭಾಗ-3 ; ವಿಜ್ಞಾನದಲ್ಲಿ ಖುಷಿ ಕೊಡುವ ಅಪ್ಲಿಕೇಶನ್ ಪ್ರಶ್ನೆಗಳು
- Mahila Samman Saving Certificate : ಮಹಿಳಾ ಸಮ್ಮಾನ್ ಸೇವಿಂಗ್ ಸರ್ಟಿಫಿಕೇಟ್‌ಗೆ 7.5% ಬಡ್ಡಿ, ಏಪ್ರಿಲ್ 1ರಿಂದ ಲಭ್ಯ
- Facebook: ಫೇಸ್‌ಬುಕ್‌ನಲ್ಲಿ ಇಂಟರ್ನೆಟ್ ಸ್ಪೀಡ್ ಚೆಕ್ ಮಾಡಿ ! ಈ ಸ್ಟೆಪ್ಸ್ ಫಾಲೋ ಮಾಡಿ ನೋಡಿ…
- DR Calculation : ಡಿಎ ಲೆಕ್ಕಾಚಾರ, ಕೇಂದ್ರ ಸರ್ಕಾರಿ ಉದ್ಯೋಗಿಗಳ ಸಂಬಳ, ಪಿಂಚಣಿ ಎಷ್ಟು ಹೆಚ್ಚಲಿದೆ?
- Teacher Transfer : ಖಾಸಗಿ ಅನುದಾನಿತ ಶಾಲೆಗಳ ಶಿಕ್ಷಕರ ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ
- Karnataka Rain: ಮತ್ತೆ ರಾಜ್ಯದಲ್ಲಿ 3 ದಿನ ಗುಡುಗು ಸಹಿತ ಮಳೆ ಮುನ್ಸೂಚನೆ; ಬೆಂಗಳೂರಲ್ಲಿ ಸಂಜೆಗೇ ಮಳೆ ಕಾಟ
- Actor Ambareesh: ರೇಸ್‌ಕೋರ್ಸ್ ರಸ್ತೆ ಇನ್ಮುಂದೆ ರೆಬೆಲ್‌ಸ್ಟಾರ್ ಅಂಬರೀಶ್ ರೋಡ್; ನಾಮಕರಣ ಮಾಡಿದ ಸಿಎಂ