1) Assembly Session : 5 ವಿಧೇಯಕ ಪಾಸ್; ಬಿಲ್ ಹರಿದು ಸ್ಪೀಕರ್ ಮುಖಕ್ಕೆಸೆದ ಬಿಜೆಪಿ-ಜೆಡಿಎಸ್! ವಿಧಾನಮಂಡಲ ಅಧಿವೇಶನದಲ್ಲಿ (Assembly Session) ಬುಧವಾರ (ಜುಲೈ 19) ತೀವ್ರ ಗದ್ದಲ ಏರ್ಪಟ್ಟಿದೆ. ಐದು ತಿದ್ದುಪಡಿ ವಿಧೇಯಕಗಳನ್ನು ಸದನದಲ್ಲಿ ಅಂಗೀಕಾರ ಮಾಡಲಾಗಿದ್ದು, ಬಿಜೆಪಿ ಹಾಗೂ ಜೆಡಿಎಸ್ ಕೆಂಡಾಮಂಡಲವಾಗಿದೆ. ವಿಪಕ್ಷಗಳ ಗದ್ದಲದ ನಡುವೆಯೂ ಅಂಗೀಕಾರ ನಡೆಸಿ ಚರ್ಚೆಗೆ ಸ್ಪೀಕರ್ (Vidhanasbha Speaker) ಅವಕಾಶ ನೀಡಿದ್ದರಿಂದ ಆಕ್ರೋಶಗೊಂಡ ಬಿಜೆಪಿ ಸದಸ್ಯರು, ವಿಧೇಯಕ ಪ್ರತಿಯನ್ನು (Copy of the Bill) ಹರಿದು ವಿಧಾನಸಭಾಧ್ಯಕ್ಷರ ಮುಖದ ಮೇಲೆ ಎಸೆದಿದ್ದಾರೆ. ಇದೀಗ ಮತ್ತೊಂದು ಸುತ್ತಿನ ರಾಜಕೀಯ ಕೆಸರೆರಚಾಟಕ್ಕೆ ನಾಂದಿಯಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ
ಮತ್ತಷ್ಟು ಓದಿಗಾಗಿ: 1) Assembly Session : 10 ಬಿಜೆಪಿ ಸದಸ್ಯರು ಸಸ್ಪೆಂಡ್; ಎಳೆದು ಹೊರಹಾಕಿದ ಮಾರ್ಷಲ್.
2) Assembly Session : ವಿಧಾನಸಭೆಯಲ್ಲಿ ತಳ್ಳಾಟಕ್ಕೆ ಕುಸಿದು ಬಿದ್ದ ಯತ್ನಾಳ್; ಆಸ್ಪತ್ರೆಗೆ ಶಿಫ್ಟ್
2. ಬೆಂಗಳೂರು ಸ್ಫೋಟಕ್ಕೆ ಸ್ಕೆಚ್ ಹಾಕಿದ್ದ ಶಂಕಿತ ಉಗ್ರರು; ಬಂಧಿತರಿಂದ ಭಯಾನಕ ವಿವರ ಬಹಿರಂಗ
ಬೆಂಗಳೂರು: ಬೆಂಗಳೂರನ್ನೇ ನಡುಗಿಸಬಹುದಾಗಿದ್ದ ಬೃಹತ್ ಸ್ಫೋಟ (Bangalore Blast) ಸಂಚೊಂದನ್ನು ವಿಫಲಗೊಳಿಸಲಾಗಿದೆ (Bangalore Terror). ಬೆಂಗಳೂರಿನ ಸಿಸಿಬಿ ಪೊಲೀಸರು (Bangalore CCB Police) ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಐವರು ಶಂಕಿತ ಉಗ್ರರನ್ನು (Five suspected terrorists) ಬಂಧಿಸಲಾಗಿದ್ದು, ಅವರಿಂದ ವಶಪಡಿಸಿಕೊಂಡ ಒಂದೊಂದು ವಸ್ತುಗಳು ಕೂಡಾ ಭಯ ಹುಟ್ಟಿಸುವಂತಿವೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಮತ್ತಷ್ಟು ಓದಿಗಾಗಿ: ಉಗ್ರರು ಇದ್ದದ್ದು ಹಿಂದುಗಳ ಮನೆಯಲ್ಲಿ; ತಾಯಿ, ತಂಗಿಯನ್ನು ತೋರಿಸಿ ಮನೆ ಪಡೆದಿದ್ದ ಉಗ್ರ!
3. ಗೃಹಲಕ್ಷ್ಮಿ ಯೋಜನೆಗೆ ಸಿಕ್ತು ಚಾಲನೆ; ನಾಳೆಯಿಂದಲೇ ನೋಂದಣಿ, Get Ready
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಲಕ್ಷ್ಮಿ ಯೋಜನೆಗೆ (Gruha lakshmi scheme) ಬುಧವಾರ ಸಂಜೆ (ಜುಲೈ 19) ವಿಧಾನಸಭೆಯ ಬ್ಯಾಂಕ್ವೆಟ್ ಹಾಲ್‌ನಲ್ಲಿ ಚಾಲನೆ ನೀಡಲಾಗಿದೆ. ಕುಟುಂಬದ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2000 ರೂ. ಜಮಾ ಮಾಡುವ ಈ ಯೋಜನೆಗೆ ಅರ್ಜಿ ಸ್ವೀಕಾರ ಕಾರ್ಯ ಗುರುವಾರದಿಂದ ಆರಂಭವಾಗಲಿದೆ ಎಂದು ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಪ್ರಕಟಿಸಿದರು. ರಾಜ್ಯದಲ್ಲಿ 1.28 ಕೋಟಿ ಮಹಿಳೆಯರಿಗೆ ಗೃಹ ಲಕ್ಷ್ಮಿ ಯೋಜನೆಯ ಲಾಭ ಸಿಗಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಮತ್ತಷ್ಟು ಓದಿಗಾಗಿ: ಗೃಹಲಕ್ಷ್ಮಿಗೆ ಆರಂಭದಲ್ಲೇ ವಿಘ್ನ; ಅರ್ಜಿ ಸ್ವೀಕಾರಕ್ಕೆ ಗ್ರಾಮ ಒನ್ ನಕಾರ!
4. ಸೌಜನ್ಯ ಪ್ರಕರಣದಲ್ಲಿ ಮೌನ ಮುರಿದ ಡಾ. ಹೆಗ್ಗಡೆ; ವೈಯಕ್ತಿಕ ನಿಂದನೆ ನಿಲ್ಲಿಸಿ ಎಂದು ಎಚ್ಚರಿಕೆ
ಸೌಜನ್ಯ ಸಾವಿನ ಪ್ರಕರಣಕ್ಕೆ (Sowjanya death case) ಸಿಬಿಐ ತನಿಖೆಗೆ (CBI Investigation) ಒಪ್ಪಿಸಿ ಎಂದು ಮೊದಲು ಹೇಳಿದ್ದೇ ನಾನು. ಹಾಗಿರುವಾಗ ಈ ಪ್ರಕರಣದಲ್ಲಿ ಕ್ಷೇತ್ರದ ವತಿಯಿಂದ ರಕ್ಷಣೆ ಮಾಡಲಾಗುತ್ತಿದೆ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ (Shree Kshetra Dharmasthala) ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ (Dr. D Veerendra Heggade) ಸ್ಪಷ್ಟಪಡಿಸಿದ್ದಾರೆ. ಅದೇ ಹೊತ್ತಿಗೆ ವೈಯಕ್ತಿಕವಾಗಿ ಅಪಮಾನ ಮಾಡುವುದನ್ನು ಸಹಿಸಲಾಗದು, ಅದನ್ನು ನಿಲ್ಲಿಸಲೇಬೇಕು ಎಂಬ ಎಚ್ಚರಿಕೆಪೂರ್ವಕ ಸಂದೇಶ ನೀಡಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
5. ಚಿಕ್ಕಮಗಳೂರು, ಬೆಳಗಾವಿ ಸೇರಿ ವಿವಿಧೆಡೆ ಭಾರಿ ಮಳೆ; ನೆಲಕ್ಕುರುಳಿದ ಮರ, ವಿದ್ಯುತ್ ಕಂಬಗಳು
ರಾಜ್ಯದ ವಿವಿಧೆಡೆ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಭಾರಿ ಅವಾಂತರ ಸೃಷ್ಟಿಸಿದೆ. ಕೆಲವೆಡೆ ಬಿರುಗಾಳಿ ಮಳೆಗೆ ವಿದ್ಯುತ್ ಕಂಬಗಳು, ಮರಗಳು ನೆಲಕ್ಕುರುಳಿರುವುದರಿಂದ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಅದೇ ರೀತಿ ನಿರಂತರ ಮಳೆಯಿಂದ (Rain News) ಮನೆಗಳು, ಬೆಳೆಗಳಿಗೆ ಹಾನಿಯಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
6. ಪ್ರತಿಪಕ್ಷಗಳ ಮೈತ್ರಿಕೂಟದಲ್ಲಿ ಬಿರುಕು ತರಲಿದೆಯಾ INDIA; ಬಿಹಾರ ಸಿಎಂ ನಿತೀಶ್ ಕುಮಾರ್ ನಿಲುವೇನು?
2024ರ ಲೋಕಸಭೆ ಚುನಾವಣೆಯಲ್ಲಿ (2024 Lok Sabha Election) ಬಿಜೆಪಿಯನ್ನು ಹೇಗಾದರೂ ಸೋಲಿಸಬೇಕು ಎಂದು ಫಣತೊಟ್ಟ ಪ್ರತಿಪಕ್ಷಗಳೆಲ್ಲ ಸೇರಿ ಮೈತ್ರಿಕೂಟ ರಚಿಸಿಕೊಂಡು ಎರಡು ಸಭೆಗಳನ್ನೂ ನಡೆಸಿಯಾಯ್ತು. ಜುಲೈ 18ರಂದು ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ INDIA (Indian National Developmental Inclusive Alliance) ಎಂದು ನಾಮಕರಣ ಮಾಡಿದ್ದಾರೆ. ಆದರೆ ಈಗ INDIA ಎಂಬ ಹೆಸರಿನ ಬಗ್ಗೆ ವಿವಿಧ ಆಯಾಮದ ಚರ್ಚೆಗಳು ಹುಟ್ಟುಕೊಂಡಿವೆ. ಇತ್ತ ಬಿಜೆಪಿ ನಾಯಕರು BJP For Bharat ಎನ್ನುತ್ತಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
7. ಟ್ರಾನ್ಸ್‌ಫಾರ್ಮರ್ ಸ್ಫೋಟ; ನಮಾಮಿ ಗಂಗೆ ಯೋಜನೆಯ 20 ಕಾರ್ಮಿಕರ ಸಾವು, ಹಲವರಿಗೆ ಗಾಯ
ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಭಾರಿ ದುರಂತವೊಂದು ಸಂಭವಿಸಿದೆ. ನಮಾಮಿ ಗಂಗೆ ಯೋಜನೆಯಲ್ಲಿ ತೊಡಗಿದ್ದ (Namami Gange) ವೇಳೆ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡು 20 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಚಮೋಲಿ ಜಿಲ್ಲೆಯ ಅಲಕನಂದ ನದಿ ತೀರದಲ್ಲಿ ಯೋಜನೆಯ ಕೆಲಸ ನಡೆಯುತ್ತಿರುವಾಗ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡಿದೆ. ಗಾಯಾಳುಗಳನ್ನು ಚಮೋಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲೂ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
8. ನನ್ನ ಮತ್ತು ಸುದೀಪ್ ಮಧ್ಯೆ ತಂದಿಡಬೇಡಿ ಎಂದು ಮಧ್ಯಸ್ಥಿಕೆಗೆ ಮುಂದಾದ ರವಿಚಂದ್ರನ್!
ನಿರ್ಮಾಪಕ ಎಮ್ ಎನ್ ಕುಮಾರ್ (MN Kumar) ಹಾಗೂ ಕಿಚ್ಚ ಸುದೀಪ್ ಮಧ್ಯೆ ಮನಸ್ತಾಪ ತಾರಕಕ್ಕೆ ಏರುತ್ತಲೇ ಇದೆ. ಸುದೀಪ್ ಚಿತ್ರಗಳನ್ನು ಕುಮಾರ್ ನಿರ್ಮಾಣ ಮಾಡಿದ್ದರು. ಇಬ್ಬರ ಮಧ್ಯೆ ಗೆಳೆತನ ಇತ್ತು. ಆದರೆ, ಈಗ ಈ ಗೆಳೆತನ ಹಾಳಾಗಿದೆ. ಕುಮಾರ್ ಫಿಲ್ಮ್ ಚೇಂಬರ್ ಮೊರೆ ಹೋದರೆ, ಸುದೀಪ್ (Kichcha Sudeepa) ಅವರು ಕೋರ್ಟ್ ಮೆಟ್ಟಿಲೇರಿದ್ದಾರೆ. ನಾನು ಸಮಸ್ಯೆ ಪರಿಹರಿಸಲು ಪ್ರಯತ್ನಿಸುತ್ತೇನೆ. ಅಲ್ಲಿಯವರೆಗೆ ಎಲ್ಲರೂ ಶಾಂತರಾಗಿರಿ. ನನ್ನ-ಸುದೀಪ್ ಮಧ್ಯೆ ತಂದಿಡಬೇಡಿ ಎಂದು ರವಿಚಂದ್ರನ್ ಕೋರಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಪೂರಕ ಸುದ್ದಿಗಾಗಿ: 1) ಕಿಚ್ಚ-ಕುಮಾರ್ ಮನಸ್ತಾಪಕ್ಕೆ ಶಿವಣ್ಣ ಎಂಟ್ರಿ!
9. 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ
ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳ ನೇಮಕಾತಿ (PDO Recruitment 2023) ಪ್ರಕಟಣೆಯ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ (ಪಂಚಾಯತಿ ಅಭಿವೃದ್ಧಿ ಅಧಿಕಾರಿ (PDO), ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್-I, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್-II, ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್-I, ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್-II ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳ ನೇಮಕಕ್ಕೆ ಸದ್ಯವೇ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಅಧಿಸೂಚನೆ ಹೊರಡಿಸಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
10. ಸೋದರ, ಚಿಕ್ಕಪ್ಪ ಇರುವುದು ಪಾಕ್ ಸೇನೆಯಲ್ಲಿ; ಸೀಮಾ ಹೈದರ್ ಬಂದಿದ್ದು ಪ್ರೀತಿಗಾಗೋ, ಗೂಢಚಾರಿಣಿಯೋ?
ಪಬ್ಜಿ ಮೂಲಕ ಪರಿಚಯ ಆದ ಭಾರತೀಯ ಯುವಕನನ್ನು ಸೇರಲು ಪಾಕಿಸ್ತಾನದಿಂದ, ತನ್ನ 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿರುವ ಸೀಮಾ ಹೈದರ್ (Seema Haider) ಸುತ್ತ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ಸೀಮಾ ಹೈದರ್ ಮೇ ತಿಂಗಳಲ್ಲಿ ಕಾನೂನು ಬಾಹಿರವಾಗಿ ಭಾರತಕ್ಕೆ ಕಾಲಿಟ್ಟಿದ್ದಾಳೆ. ಸದ್ಯ ಅವಳು ತನ್ನ ಪ್ರಿಯಕರ ಸಚಿನ್ ಮೀನಾ ಜತೆಗೇ ವಾಸವಾಗಿದ್ದಾಳೆ. ಪಾಕಿಸ್ತಾನದಿಂದ ಬಂದಿರುವ ಇವಳು ನಿಜಕ್ಕೂ ಪ್ರೀತಿಗಾಗಿ ಬಂದಿದ್ದಾಳಾ? ಪಾಕ್ ಗುಪ್ತಚರ ದಳ ಐಎಸ್ಐ ಜತೆ ಲಿಂಕ್ ಇದೆಯಾ? ಗೂಢಚಾರಿಕೆ ಮಾಡಲು ಬಂದಿದ್ದಾ? ಎಂಬಿತ್ಯಾದಿ ಅನುಮಾನಗಳು ಎದ್ದಿವೆ. ಹೀಗಾಗಿ ಪೊಲೀಸರು ಈಕೆಯ ಮೇಲೆ ಕಣ್ಣಿಟ್ಟಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.