1. ವಿಸ್ತಾರ Explainer: ಹೊಸ ಸಂಸತ್ ಭವನದಲ್ಲಿ ಸ್ಥಾಪಿತಗೊಂಡ ತಮಿಳುನಾಡಿನ ಚಿನ್ನದ ಸೆಂಗೋಲ್; ಏನಿದರ ಮಹತ್ವ?
ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಆಚರಿಸಲಾಗುತ್ತಿರುವ ಆಜಾದಿ ಕಾ ಅಮೃತ ಮಹೋತ್ಸವದ ಭಾಗವಾಗಿ ಇಂದು ನೂತನ ಸಂಸತ್ ಭವನವನ್ನು ಪ್ರಧಾನಿ ಮೋದಿಯವರು ಉದ್ಘಾಟನೆ ಮಾಡಿದ್ದಾರೆ. ಹಾಗೇ, ಹೊಸದಾಗಿ ನಿರ್ಮಾಣವಾದ ಸಂಸತ್ ಭವನದಲ್ಲಿ ತಮಿಳುನಾಡಿನ ’ರಾಜದಂಡ’ (ಸೆಂಗೋಲ್) ವನ್ನು ಪ್ರತಿಷ್ಠಾಪಿಸಿದ್ದಾರೆ. ಸ್ಪೀಕರ್ ಕುರ್ಚಿಯ ಪಕ್ಕವೇ ರಾಜದಂಡವೂ ನಿಂತಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
2. New Parliament Building: ಸಂಸತ್ ಭವನದಲ್ಲಿ ಕನ್ನಡ ಕಂಪು; ಬಸವಣ್ಣನ ವಚನದ ಇಂಪು, ಇಲ್ಲಿದೆ ವಿಡಿಯೊ
ಪ್ರಜಾಪ್ರಭುತ್ವದ ದೇಗುಲದ ರೀತಿ ತಲೆಯೆತ್ತಿರುವ ನೂತನ ಸಂಸತ್ ಭವನಕ್ಕೆ (New Parliament Building) ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಅತ್ಯಾಧುನಿಕ ತಂತ್ರಜ್ಞಾನ ಬಳಕೆ, ಉತ್ತಮ ಆಸನ ವ್ಯವಸ್ಥೆ ಸೇರಿ ಸಕಲ ಸೌಕರ್ಯಗಳಿರುವ ನೂತನ ಸಂಸತ್ ಭವನದ ನಿರ್ಮಾಣಕ್ಕೆ ದೇಶದ ಹತ್ತಾರು ಭಾಗಗಳಿಂದ ಕಲ್ಲು, ಮಾರ್ಬಲ್ ಸೇರಿ ಹಲವು ವಸ್ತುಗಳನ್ನು ಬಳಸಲಾಗಿದೆ. ಆಯಾ ಪ್ರಾದೇಶಿಕ ಗಣ್ಯರ ಫೋಟೊಗಳು, ಸಂದೇಶಗಳನ್ನೂ ಸಂಸತ್ ಭವನದಲ್ಲಿ ಕೆತ್ತಲಾಗಿದೆ. ಇದಕ್ಕೆ ನಿದರ್ಶನ ಎಂಬಂತೆ ಸಂಸತ್ ಭವನದಲ್ಲಿ ಬಸವಣ್ಣನವರ ಫೋಟೊ, ಅವರ ವಚನವನ್ನು ಕನ್ನಡದಲ್ಲಿ ಕೆತ್ತಲಾಗಿದೆ. ಆ ಮೂಲಕ ಪ್ರಾದೇಶಿಕ ವೈವಿಧ್ಯತೆಗೂ ಆದ್ಯತೆ ನೀಡಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಹೊಸ ಸಂಸತ್ ಭವನ ಉದ್ಘಾಟನೆಯ ಎಲ್ಲ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
3. congress guarantee: ಮನೆ ಮನೆಗೆ ಗ್ಯಾರಂಟಿ ಕಾರ್ಡ್ ಎಸೆದಂತೆ ಗ್ಯಾರಂಟಿ ಜಾರಿ ಅಸಾಧ್ಯ: ಸತೀಶ್ ಜಾರಕಿಹೊಳಿ
ಕಾಂಗ್ರೆಸ್ ಸಚಿವರಿಬ್ಬರಾದ ಸತೀಶ್ ಜಾರಕಿಹೊಳಿ ಹಾಗೂ ಕೆ.ಎನ್. ರಾಜಣ್ಣ, ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ಮಾತನಾಡಿದ್ದು, ಚುನಾವಣೆ ಸಂದರ್ಭದಲ್ಲಿ ಮನೆ ಮನೆಗೆ ಗ್ಯಾರಂಟಿ ಕಾರ್ಡ್ (congress guarantee card) ಎಸೆದ ಹಾಗೆ ನಾವು ಎಲ್ಲರಿಗೂ ಗ್ಯಾರಂಟಿ ಯೋಜನೆ ಕೊಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಹೆಚ್ಚಿನ ಓದಿಗಾಗಿ: congress guarantee: ಗ್ಯಾರಂಟಿಗಳ ಅನುಷ್ಠಾನವು ಸಿದ್ದರಾಮಯ್ಯ ಚೆಕ್‌ಗೆ ಸಹಿ ಹಾಕುವಷ್ಟು ಸುಲಭ ಅಲ್ಲ: ಸಚಿವ ಡಾ. ಸುಧಾಕರ್
4. Karnataka Cabinet: ಬಸ್ ಓಡಿಸೋದಿಲ್ಲ ಎಂದಿದ್ದ ರಾಮಲಿಂಗಾರೆಡ್ಡಿ: ಡಿ.ಕೆ. ಬ್ರದರ್ಸ್ ʼಗ್ಯಾರಂಟಿಗೆʼ ಸಮ್ಮತಿ
ಸಚಿವ ಸಂಪುಟ ವಿಸ್ತರಣೆ ನಂತರದಲ್ಲಿ ಎದ್ದಿರುವ ಅಸಮಾಧಾನವನ್ನು ಒಂದೊಂದಾಗಿ ನಿವಾರಣೆ ಮಾಡಿಕೊಂಡು ಬರಲು ಮುಂದಾಗಿರುವ ಕಾಂಗ್ರೆಸ್, ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರ ಮನವೊಲಿಸುವಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಯಶಸ್ವಿಯಾಗಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
5. Contaminated Water: ರೇಖಲಮರಡಿ ಬಳಿಕ ಗೊರೆಬಾಳದಲ್ಲಿ ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಬಿಸಿಲ ನಾಡು ರಾಯಚೂರಲ್ಲಿ ಜೀವಜಲವೇ ವಿಷಪೂರಿತವಾಗಿದೆ. ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಕಲುಷಿತ ನೀರು ಪೂರೈಕೆ ಆಗಿದೆ ಎಂಬ ಆರೋಪ ಕೇಳಿ ಬಂದಿದೆ. ರೇಖಲಮರಡಿ ಗ್ರಾಮ ಬಳಿಕ ಗೊರೆಬಾಳ ಗ್ರಾಮದಲ್ಲಿ ಕಲುಷಿತ ನೀರಿನಿಂದ ಜನರಿಗೆ ಕಿಡ್ನಿ ವೈಫಲ್ಯವಾಗಿದೆ. ಮೂರು ಜನರ ಸ್ಥಿತಿ ಚಿಂತಾಜನಕವಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
6. All in One Insurance Policy : ಬರಲಿದೆ ಅಗ್ಗದ ದರದಲ್ಲೇ ಗೇಮ್ ಚೇಂಜರ್ ವಿಮೆ ಪಾಲಿಸಿ, ಪ್ರಯೋಜನವೇನು?
ವಿಮೆ ಮಾರುಕಟ್ಟೆ ನಿಯಂತ್ರಕ ಐಆರ್‌ಡಿಎಐ, ಕೈಗೆಟಕುವ ದರದಲ್ಲಿ ಆರೋಗ್ಯ, ಜೀವ, ಪ್ರಾಪರ್ಟಿ ಮತ್ತು ಅಪಘಾತ ಪರಿಹಾರವನ್ನು ಒಳಗೊಂಡಿರುವ ಸಮಗ್ರ ವಿಮೆಯನ್ನು ( All in One Insurance Policy) ಬಿಡುಗಡೆಗೊಳಿಸಲಿದೆ. ಇದರ ವಿವರಗಳನ್ನು ನೋಡೋಣ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
7. IPL 2023: ಐಪಿಎಲ್ ಟ್ರೋಫಿಯಲ್ಲಿ ಬರೆಯಲಾದ ಸಂಸ್ಕೃತ ಶ್ಲೋಕದ ಅರ್ಥವೇನು?
16ನೇ ಆವೃತ್ತಿಯ ಐಪಿಎಲ್ನ ಫೈನಲ್‌ನಲ್ಲಿ ಚೆನ್ನೈ ಮತ್ತು ಗುಜರಾತ್ ತಂಡಗಳು ಪ್ರಶಸ್ತಿಗಾಗಿ ಹೋರಾಟ ನಡೆಸಲಿವೆ. ಈ ಬಾರಿ ಯಾರು ಕಪ್ ಗೆಲ್ಲಲಿದ್ದಾರೆ ಎಂಬ ಕುತೂಹಲದ ಮಧ್ಯೆ ಟ್ರೋಫಿಯಲ್ಲಿ ಬರೆದಿರುವ ಸಂಸ್ಕೃತ ಶ್ಲೋಕದ ಅರ್ಥವೇನು ಎಂಬ ಮತ್ತೊಂದು ಕುತೂಹಲ ಮೂಡಿದೆ. ಇಲ್ಲಿದೆ ಮಾಹಿತಿ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
8. Mann Ki Baat : 101ನೇ ಮನ್ ಕಿ ಬಾತ್‌ನಲ್ಲಿ ವೀರ ಸಾವರ್ಕರ್ ವಿಚಾರಗಳ ಬಗ್ಗೆ ಮೋದಿ ಹೇಳಿದ್ದೇನು?
ಪ್ರಧಾನಿ ನರೇಂದ್ರ ಮೋದಿಯವರು 101ನೇ ಮನ್ ಕಿ ಬಾತ್ (Mann Ki Baat) ಬಾನುಲಿ ಕಾರ್ಯಕ್ರಮದಲ್ಲಿ ಭಾನುವಾರ, ವೀರ ಸಾವರ್ಕರ್ ಜನ್ಮದಿನದ ಪ್ರಯುಕ್ತ ಅವರ ಬದುಕು-ಸಾಧನೆಯನ್ನು ಸ್ಮರಿಸಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಹೆಚ್ಚಿನ ಓದಿಗಾಗಿ: Savarkar Jayanti: ಭಾರತೀಯರನ್ನು ಸ್ವಸ್ವರೂಪದ ಅರಿವಿನೆಡೆಗೆ ನಡೆಸಿದ ವೀರ ಸಾವರ್ಕರ್
9. Kannada New Movie: ʻಡೇರ್‌ಡೆವಿಲ್ ಮುಸ್ತಾಫಾʼ ಅಮೋಘ ಪ್ರದರ್ಶನ; ಹೊರದೇಶದಲ್ಲಿ ತೆರೆಕಾಣಲಿದೆ ಸಿನಿಮಾ
ಕಳೆದ ಆರೇಳು ತಿಂಗಳಿನಿಂದ ಥಿಯೇಟರ್‌ನಲ್ಲಿ ಯಾವ ಸಿನಿಮಾಗೂ ಸಿಗದ ಮೆಚ್ಚುಗೆ ಡೇರ್ ಡೆವಿಲ್ ಮುಸ್ತಾಫಾನ ಪಾಲಾಗಿದೆ. ಬೆಂಗಳೂರು, ಮಂಗಳೂರು, ಶಿವಮೊಗ್ಗ, ಮೈಸೂರು ಸೇರಿದಂತೆ 40 ಸೆಂಟರ್‌ಗಳಲ್ಲಿ ಚಿತ್ರ ಹೌಸ್ ಫುಲ್ ಪ್ರದರ್ಶನ ಕಂಡಿದೆ. ಚಿತ್ರಕ್ಕೆ ಈ ಮಟ್ಟಿಗಿನ ವಿಮರ್ಶೆ ಹಾಗೂ ಬೇಡಿಕೆ ಸಿಗುತ್ತಿರುವ ಬೆನ್ನಲ್ಲೆ ವಿದೇಶದಲ್ಲಿ ಡೇರ್‌ಡೆವಿಲ್ ಮುಸ್ತಾಫಾ ದರ್ಶನಕ್ಕೆ ಚಿತ್ರತಂಡ ಸಜ್ಜಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
10. Viral Post: ಸಾಮಾಜಿಕ ಜಾಲತಾಣದಲ್ಲಿ ಕೋಟಿಗಟ್ಟಲೆ ದುಡಿಯುವ ನಾಯಿಯಿದು!
ಸಾಮಾಜಿಕ ಜಾಲತಾಣಗಳು ಬಂದ ಮೇಲೆ, ಇನ್‌ಫ್ಲುಯೆಂಜರ್‌ಗಳ ಜೀವನದ ಬಗೆಗೆ ಸಾಕಷ್ಟು ಚರ್ಚೆಗಳಾಗಿವೆ. ಇನ್ಸ್‌ಟಾಗ್ರಾಂನಂತಹ ಜಾಲತಾಣದಲ್ಲಿ ಇನ್ಫ್ಲುಯೆಂಜರ್‌ಗಳು ಎಷ್ಟು ದುಡ್ಡು ಸಂಪಾದಿಸಬಹುದು ಎಂಬ ಬಗ್ಗೆ ಸದಾ ಎಲ್ಲರಿಗೂ ಕುತೂಹಲ. ʻಇದರಲ್ಲಿ ಸಾಕಷ್ಟು ದುಡ್ಡು ಮಾಡಬಹುದು, ಕೋಟಿಗಟ್ಟಲೆ ದುಡ್ಡು ಸಂಪಾದಿಸಬಹುದುʼ ಎಂಬ ನಂಬಿಕೆಯೇ ಲಕ್ಷಾಂತರ ಯುವಮಂದಿಯನ್ನು ಇದು ತನ್ನತ್ತ ಸೆಳೆದಿದೆ. ಅಷ್ಟೇ ಅಲ್ಲ, ಈ ಮೂಲಕ ಹಣವನ್ನೂ ಜನಪ್ರಿಯತೆಯನ್ನೂ ಪಡೆದುಕೊಂಡಿದ್ದಾರೆ ಕೂಡಾ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.