Site icon Vistara News

ವಿಸ್ತಾರ TOP 10 NEWS: ಸಿದ್ದರಾಮಯ್ಯ ಕ್ಷೇತ್ರ ಗೊಂದಲದಿಂದ, ಕೇಂದ್ರ ಸರ್ಕಾರಕ್ಕೆ 155 ಲಕ್ಷ ಕೋಟಿ ರೂ. ಸಾಲದವರೆಗಿನ ಪ್ರಮುಖ ಸುದ್ದಿಗಳಿವು

vistara-top-10-news-siddaramaiah-constituency-confusion-continues-to-congress-first-list-on-wednesday-and-more-news

#image_title

1. Karnataka Elections : ಹೆಂಡ್ತಿ, ಮಗನ ಜತೆ ಕೇಳಿ ಹೇಳ್ತೇನೆ; ಕೋಲಾರದ ಜನರಿಗೆ ಸಿದ್ದರಾಮಯ್ಯ ಸಮಾಧಾನ!
ʻʻಕೋಲಾರ ಸುರಕ್ಷಿತ ಅಲ್ಲ ಎಂಬ ವರದಿಗಳಿವೆ. ಹೀಗಾಗಿ ಬೇರೆ ಕ್ಷೇತ್ರ ಆಯ್ಕೆ ಮಾಡಿಕೊಳ್ಳಿʼʼ ಎಂಬ ಹೈಕಮಾಂಡ್‌ ಸಂದೇಶದ ಬಳಿಕ ಅಡಕತ್ತರಿಯಲ್ಲಿ ಸಿಲುಕಿರುವ ಹಿರಿಯ ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಅವರು ಕೋಲಾರದ ಅಭಿಮಾನಿಗಳನ್ನು ಸಮಾಧಾನ ಮಾಡಲು ʻಫ್ಯಾಮಿಲಿ ಅಸ್ತ್ರʼ ಪ್ರಯೋಗ ಮಾಡಿದ್ದಾರೆ. ನಾನು ಹೆಂಡತಿ ಮತ್ತು ಮಗನ ಜತೆ ಚರ್ಚೆ ಮಾಡಿ ಗುರುವಾರ ಅಂತಿಮ ತೀರ್ಮಾನ ಪ್ರಕಟಿಸುತ್ತೇನೆ (Karnataka Elections) ಎಂದು ಅವರು ಹೇಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

2. Basavaraj Bommai: ಎರಡು ತಿಂಗಳಲ್ಲಿ 13 ಬಾರಿ ತವರು ಕ್ಷೇತ್ರಕ್ಕೆ ತೆರಳಿರುವ ಸಿಎಂ ಬಸವರಾಜ ಬೊಮ್ಮಾಯಿ: ಶಿಗ್ಗಾಂವಿಯಲ್ಲಿ ಪ್ರಬಲ ಸ್ಪರ್ಧೆ
ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಕಳೆದ ಎರಡು ತಿಂಗಳಲ್ಲಿ ಬರೊಬ್ಬರಿ 13 ಬಾರಿ ತಮ್ಮ ಕ್ಷೇತ್ರ ಶಿಗ್ಗಾಂವಿಗೆ ಪ್ರವಾಸ ಮಾಡಿದ್ದಾರೆ. ಈ ಮೂಲಕ ವಿಧಾನಸಭೆ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ಏರ್ಪಡುವ ಸಾಧ್ಯತೆಯಿದೆ ಎಂಬ ಮುನ್ಸೂಚನೆಯನ್ನು ನೀಡಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: Karnataka Elections : ಶಿಗ್ಗಾಂವಿಯಲ್ಲಿ ಬೊಮ್ಮಾಯಿ ಕಟ್ಟಿ ಹಾಕಲು ಹೊರಟ ಕಾಂಗ್ರೆಸ್‌ಗೆ ಈಗ ಖಾದ್ರಿ ಸಂಕಟ!

3. Nitin Gadkari : ಕೇಂದ್ರ ಸಚಿವ ನಿತಿನ್‌ ಗಡ್ಕರಿ ಕಚೇರಿಗೆ ಮತ್ತೆ ಜೀವ ಬೆದರಿಕೆ ಕರೆ; ಏನಾಗುತ್ತಿದೆ ಹಿಂಡಲಗಾ ಜೈಲಿನಲ್ಲಿ?
ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್‌ ಗಡ್ಕರಿ (Nitin Gadkari) ಅವರಿಗೆ ಮತ್ತೊಮ್ಮೆ ಜೀವ ಬೆದರಿಕೆ ಕರೆ ಮಾಡಲಾಗಿದೆ. ಮಹಾರಾಷ್ಟ್ರದ ನಾಗ್ಪುರದಲ್ಲಿರುವ ನಿತಿನ್ ಗಡ್ಕರಿ ಅವರ ಜನಸಂಪರ್ಕ ಕಚೇರಿಯ ಲ್ಯಾಂಡ್‌ಲೈನ್‌ಗೆ ಕರೆ ಮಾಡಿದ ವ್ಯಕ್ತಿ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದಾನೆ ಎಂದು ಹೇಳಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

4. Amritpal Singh: 80 ಸಾವಿರ ಪೊಲೀಸರು ಏನು ಮಾಡುತ್ತಿದ್ದಾರೆ? ಪಂಜಾಬ್‌ ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ
ಖಲಿಸ್ತಾನಿಗಳ ಪರ ನಾಯಕ, ಪಂಜಾಬ್‌ನಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುತ್ತಿರುವ ಅಮೃತ್‌ಪಾಲ್‌ ಸಿಂಗ್‌ (Amritpal Singh) ಬಂಧನಕ್ಕಾಗಿ ಕಾರ್ಯಾಚರಣೆಯು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಆತನನ್ನು ಬಂಧಿಸಲು ರಾಜ್ಯದ ಪೊಲೀಸರು ಹರಸಾಹಸಪಡುತ್ತಿದ್ದರೂ ಇದುವರೆಗೆ ಬಂಧನ ಸಾಧ್ಯವಾಗಿಲ್ಲ. ಆತನ ಆಪ್ತರ ಬಂಧನ, ಕಾರು ವಶ, ಶಸ್ತ್ರಾಸ್ತ್ರಗಳ ಜಪ್ತಿ ಮಾತ್ರ ಸಾಧ್ಯವಾಗಿದೆ. ಇನ್ನು ಬಂಧನ ಕಾರ್ಯಾಚರಣೆ ಕುರಿತು ಪಂಜಾಬ್‌ ಹಾಗೂ ಹರಿಯಾಣ ಹೈಕೋರ್ಟ್‌ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, “ಪಂಜಾಬ್‌ನ 80 ಸಾವಿರ ಪೊಲೀಸರು ಏನು ಮಾಡುತ್ತಿದ್ದಾರೆ” ಎಂದು ಪ್ರಶ್ನಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

5. Karnataka Election: ಯುಗಾದಿಗೆ ಕಾಂಗ್ರೆಸ್‌ ರಣಕಹಳೆ: ಮೊದಲ ಪಟ್ಟಿ ಬುಧವಾರ ಬಿಡುಗಡೆ ಎಂದ ಕೆ.ಜೆ. ಜಾರ್ಜ್‌
ಈಗಾಗಲೆ ರಾಜ್ಯ ಹಾಗೂ ಕೇಂದ್ರ ಮಟ್ಟದಲ್ಲಿ ಎರಡು ಸಭೆಗಳನ್ನು ನಡೆಸಿರುವ ಕಾಂಗ್ರೆಸ್‌ ಪಕ್ಷ ವಿಧಾನಸಭೆ ಚುನಾವಣೆಯ ಮೊದಲ ಪಟ್ಟಿಯನ್ನು ಯುಗಾದಿ ದಿನವಾದ ಬುಧವಾರ ಬಿಡುಗಡೆ ಮಾಡಲಿದೆ ಎನ್ನಲಾಗುತ್ತಿದೆ. ಮಾಜಿ ಸಚಿವ ಹಾಗೂ ಚುನಾವಣಾ ಸಮಿತಿಯ ಸದಸ್ಯರೂ ಆಗಿರುವ ಕೆ.ಜೆ. ಜಾರ್ಜ್‌ ಈ ವಿಚಾರವನ್ನು ಖಚಿತಪಡಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

6. ಒಟ್ಟು 155 ಲಕ್ಷ ಕೋಟಿ ರೂ. ಸಾಲ ಇದೆ ಎಂದ ಸೀತಾರಾಮನ್, ಮೋದಿ ಸರ್ಕಾರದಿಂದಲೇ 100 ಲಕ್ಷ ಕೋಟಿ ಸಾಲ?
ಭಾರತ ಸರ್ಕಾರ (Indian Government) ಮಾಡಿರುವ ಒಟ್ಟು ಸಾಲ ಎಷ್ಟಾಗಿದೆ ಗೊತ್ತಾ? ಬರೋಬ್ಬರಿ 155.8 ಲಕ್ಷ ಕೋಟಿ ರೂಪಾಯಿ. ಅಂದರೆ, ನಮ್ಮ ಒಟ್ಟು ಜಿಡಿಪಿಯ ಶೇ.57.3ರಷ್ಟಾಗುತ್ತದೆ ಈ ಮೊತ್ತ! ಅಂದ ಹಾಗೆ, ಈ ಮಾಹಿತಿಯನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ಸೋಮವಾರ ಲೋಕಸಭೆಗೆ ನೀಡಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. Zakir Naik: ಒಮಾನ್‌ನಿಂದ ಜಾಕೀರ್‌ ನಾಯ್ಕ್‌ ಗಡಿಪಾರು, ಮೂಲಭೂತವಾದಿಯ ಬಂಧನಕ್ಕೆ ಭಾರತ ಮುಹೂರ್ತ ಫಿಕ್ಸ್‌?
ಇಸ್ಲಾಮಿಕ್‌ ಮೂಲಭೂತವಾದವನ್ನು ಪಸರಿಸುವುದು, ಉಗ್ರರಿಗೆ ಹಣಕಾಸು ನೆರವು ನೀಡುವುದು, ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಭಾಷಣಗಳಿಂದ ಸಂಕಷ್ಟಕ್ಕೆ ಸಿಲುಕಿ, ವಿದೇಶಕ್ಕೆ ಪರಾರಿಯಾಗಿರುವ ವಿವಾದಿತ ಧರ್ಮಗುರು ಜಾಕೀರ್‌ ನಾಯ್ಕ್‌ನನ್ನು (Zakir Naik) ಬಂಧಿಸಲು ಭಾರತ ಮುಹೂರ್ತ ಫಿಕ್ಸ್‌ ಮಾಡಿದೆ. ಇಸ್ಲಾಮಿಕ್‌ ಮೂಲಭೂತವಾದಿಯನ್ನು ಗಡಿಪಾರು ಮಾಡಲು ಒಮಾನ್‌ ಸರ್ಕಾರದ ಜತೆ ಭಾರತ ಮಾತುಕತೆ ನಡೆಸುತ್ತಿದೆ. ಅಲ್ಲಿಯೇ ಈತನ ಬಂಧನಕ್ಕೆ ಸಂಬಂಧಿಸಿದಂತೆ ಭಾರತದ ಅಧಿಕಾರಿಗಳು ಒಮಾನ್‌ ಅಧಿಕಾರಿಗಳ ಜತೆ ಮಾತುಕತೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

8. Modi in Karnataka: ಬೈಯಪ್ಪನಹಳ್ಳಿ-ಕೆ.ಆರ್‌. ಪುರ ಕಾಮಗಾರಿ ಮುಗಿದಿಲ್ಲ: ಮೋದಿಯಿಂದ ಅಪೂರ್ಣ ಮೆಟ್ರೊ ಕಾಮಗಾರಿ ಉದ್ಘಾಟನೆ ಎಂದ ಕಾಂಗ್ರೆಸ್‌
ಪ್ರಧಾನಿ ನರೇಂದ್ರ ಮೋದಿ ಮಾರ್ಚ್‌ 25 ರಂದು ಬೆಂಗಳೂರಿನಲ್ಲಿ ಕೆ.ಆರ್.‌ ಪುರದಿಂದ ವೈಟ್‌ಫೀಲ್ಡ್‌ವರೆಗಿನ ಮೆಟ್ರೊ ರೈಲು ಮಾರ್ಗವನ್ನು ಉದ್ಘಾಟಿಸುವ ಕಾರ್ಯಕ್ರಮವಿದೆ. ಆದರೆ ಈ ಮಾರ್ಗ ಇನ್ನೂ ಅಪೂರ್ಣವಾಗಿದೆ ಹಾಗೂ ಹಿಂದಿನ ನಿಲ್ದಾಣದೊಂದಿಗೆ ಸಂಪರ್ಕವೇ ಸಾಧ್ಯವಾಗಿಲ್ಲ ಎಂಬ ಚರ್ಚೆಗಳು ನಡೆಯುತ್ತಿವೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

9. Actor Chetan Ahimsa : ಹಿಂದು ಧರ್ಮದ ವಿರುದ್ಧ ಅವಹೇಳನಕಾರಿ ಪೋಸ್ಟ್‌; ನಟ ಚೇತನ್‌ ಅಹಿಂಸಾ ಅರೆಸ್ಟ್‌
ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿರುವ ನಟ ಚೇತನ್‌ ಅಹಿಂಸಾ (Actor Chetan Ahimsa) ಅವರನ್ನು ಮಂಗಳವಾರ ಮುಂಜಾನೆ ಮತ್ತೆ ಬಂಧನಕ್ಕೆ ಒಳಗಾಗಿದ್ದಾರೆ. ಅವರು ಹಿಂದು ಧರ್ವವನ್ನು ಅವಹೇಳನ ಮಾಡಿದ್ದಾರೆ ಎಂಬ ಆರೋಪದಡಿ ಸೋಮವಾರ ರಾತ್ರಿ ಎಫ್‌ಐಆರ್‌ ದಾಖಲಿಸಿಕೊಂಡಿದ್ದ ಶೇಷಾದ್ರಿಪುರಂ ಪೊಲೀಸರು ಮಂಗಳವಾರ ಬೆಳಗ್ಗಿನ ಜಾವ ಮನೆಯಿಂದ ಬಂಧಿಸಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. Brave daughter : ಹಾವು ಕಡಿತಕ್ಕೆ ಒಳಗಾದ ತಾಯಿಯನ್ನು ಬಾಯಿಯಿಂದ ವಿಷ ಹೊರಗೆಳೆದು ರಕ್ಷಿಸಿದ ಮಗಳು
ತಾಯಿಗೆ ವಿಷದ ಹಾವು ಕಚ್ಚಿದ ಸಂದರ್ಭದಲ್ಲಿ ಮಗಳು ಧೃತಿಗೆಡದೆ, ಆ ವಿಷವನ್ನು ಚೀಪಿ ಹೊರ ತೆಗೆದು ಸಿನಿಮೀಯ ರೀತಿಯಲ್ಲಿ ಅಮ್ಮನನ್ನು ರಕ್ಷಿಸಿದ ಘಟನೆ (Brave daughter) ಪುತ್ತೂರು ತಾಲೂಕು ಕೆಯ್ಯೂರು ಗ್ರಾಮದಲ್ಲಿ ನಡೆದಿದೆ. ಸಾಹಸ ಮೆರೆದ ಯುವತಿಗೆ ಸಾರ್ವಜನಿಕ ವಲಯದಿಂದ ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದ್ದು, ತಾಯಿಗೆ ಮರು ಜನ್ಮ ನೀಡಿದ ಮಗಳು ಎಂದು ಜನರು ಕೊಂಡಾಡುತ್ತಿದ್ದಾರೆ. ಮತ್ತಷ್ಟು ವೈರಲ್‌ ನ್ಯೂಸ್‌ಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಮತ್ತಷ್ಟು ಪ್ರಮುಖ ಸುದ್ದಿಗಳಿವು

  1. Rupert Murdoch: 92ನೇ ವಯಸ್ಸಲ್ಲಿ ಕೊನೇ ಪ್ರೀತಿ ಕಂಡುಕೊಂಡ ಮಾಧ್ಯಮ ಉದ್ಯಮಿ ರೂಪರ್ಟ್ ಮುರ್ಡೋಕ್; ಶೀಘ್ರದಲ್ಲೇ 5ನೇ ಮದುವೆ
  2. WPL 2023: ಸೋಲಿನೊಂದಿಗೆ ಅಭಿಯಾನ ಮುಗಿಸಿದ ಆರ್​ಸಿಬಿ
  3. Pathaan Film: ಒಟಿಟಿಯಲ್ಲೂ ತೆರೆಕಾಣಲು ಸಜ್ಜಾಗಿದೆ ಪಠಾಣ್​​; ಅಮೇಜಾನ್​ ಪ್ರೈಮ್​​ನಲ್ಲಿ ಈ ದಿನಾಂಕದಂದು ಬಿಡುಗಡೆ
  4. BJP Important Party: ಜಗತ್ತಿನಲ್ಲೇ ಬಿಜೆಪಿ ಪ್ರಮುಖ ಪಕ್ಷ, 2024ರಲ್ಲೂ ಗೆಲುವು; ವಾಲ್‌ಸ್ಟ್ರೀಟ್‌ ಜರ್ನಲ್‌ ವರದಿ
  5. ಪಾಟ್ನಾ ರೈಲ್ವೆ ಸ್ಟೇಶನ್​​ನಲ್ಲಿ ಅಶ್ಲೀಲ ವಿಡಿಯೊ ಪ್ರಸಾರ ಆಗಿದ್ದಕ್ಕೆ ಫುಲ್ ಖುಷಿಯಾದ ಪೋರ್ನ್​ ಸ್ಟಾರ್​; ಅದು ನಂದೇ ಎಂದ ಕೇಂದ್ರಾ ಲಸ್ಟ್​
  6. Tipu Sultan: ಕಾಂಗ್ರೆಸ್ ನನ್ನನ್ನು ನಂಜೇಗೌಡರಿಗೆ ಹೋಲಿಕೆ ಮಾಡಿರುವುದು ಹೆಮ್ಮೆಯ ವಿಚಾರ: ಸಿ.ಟಿ. ರವಿ
Exit mobile version