Site icon Vistara News

Vistara Top 10 News: ಸಿದ್ದು ʼಗ್ಯಾರಂಟಿʼ ಬಜೆಟ್‌ ಸರ್ಕಸ್‌ನಿಂದ, ರಾಹುಲ್‌ ಅರ್ಜಿ ರಿಜೆಕ್ಟ್‌ವರೆಗಿನ ಪ್ರಮುಖ ಸುದ್ದಿಗಳಿವು

vistara top 10 news siddaramaiah proposed fourteenth budget to rahul gandhi request rejected and more news

1. Karnataka Budget 2023: ಮಿಗತೆಯಿಂದ ಕೊರತೆಗೆ ಇಳಿದ ರಾಜ್ಯ: ʼಗ್ಯಾರಂಟಿʼ ಚಕ್ರವ್ಯೂಹದಲ್ಲಿ ಸಿಲುಕಿದ ಸಿದ್ದರಾಮಯ್ಯ
ಕಾಂಗ್ರೆಸ್‌ ಪಕ್ಷವು ಚುನಾವಣೆಗೆ ಮುನ್ನ ಘೋಷಿಸಿದ ಐದು ಗ್ಯಾರಂಟಿ ಯೋಜನೆಗಳನ್ನು ಈಡೇರಿಸುವ ಸಲುವಾಗಿ ಈ ಬಾರಿಯ ಬಜೆಟ್‌ ಕೊರತೆಗೆ ಇಳಿದಿದೆ. ಈ ಮಾತನ್ನು, 14ನೇ ಬಾರಿಗೆ ದಾಖಲೆಯ ಬಜೆಟ್‌ ಮಂಡನೆ ಮಾಡಿದ ಸಿಎಂ ಸಿದ್ದರಾಮಯ್ಯ ಸ್ವತಃ ಒಪ್ಪಿಕೊಂಡಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಈ ವರ್ಷ ಬೇಕಾಗಿರುವ 35,450 ಕೋಟಿ ರೂ. ಹೊಂದಿಸಲು ತೆರಿಗೆ, ನೋಂದಣಿ, ಅಬಕಾರಿ ಇಲಾಖೆಗಳಿಗೆ ಗುರಿ ಹೆಚ್ಚಿಸಿದ್ದು, ಹೆಚ್ಚು ಸಾಲ ಮಾಡಿದ್ದು, ಅದರ ಹೊರೆ ಪರೋಕ್ಷವಾಗಿ ಜನರಿಗೇ ಬೀಳುತ್ತದೆ ಎನ್ನುವುದು ಸಿದ್ದರಾಮಯ್ಯ ಬಜೆಟ್‌ನ ಸತ್ಯಾಂಶ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

2. Karnataka Budget 2023 : ಮುಸ್ಲಿಮರಿಗೆ ಶಾದಿ ಭಾಗ್ಯ ಬಿಟ್ಟು ಶಿಕ್ಷಣ, ಉದ್ಯೋಗಕ್ಕೆ‌ 11 ಯೋಜನೆ ಕೊಟ್ಟ ಸಿಎಂ
ಹಿಂದೆಲ್ಲ ಮುಸ್ಲಿಂ ಸಮುದಾಯಕ್ಕೆ ಶಾದಿ ಭಾಗ್ಯದಂಥ ವಿವಾದಿತ ಯೋಜನೆ ನೀಡಿ ಚರ್ಚೆಗೆ ಗ್ರಾಸವಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಈ ಬಾರಿ ಹೊಸ ಯೋಚನೆಗಳ ಮೂಲಕ ಗಮನ ಸೆಳೆದಿದ್ದಾರೆ. ಮುಸ್ಲಿಂ ಸಮುದಾಯದ ಮಕ್ಕಳು ಮತ್ತು ಯುವಜನರ ಶಿಕ್ಷಣ ಹಾಗೂ ಉದ್ಯೋಗಕ್ಕೆ (Education and Employment) ಪೂರಕವಾಗಿ 11 ಯೋಜನೆಗಳನ್ನು ತಾವು ಮಂಡಿಸಿದ 2023-24ನೇ ಸಾಲಿನ ಬಜೆಟ್‌ನಲ್ಲಿ (Karnataka Budget 2023) ಪ್ರಕಟಿಸಿದ್ದಾರೆ. ಇದರಲ್ಲಿ ಮುಸ್ಲಿಂ ಯುವಕರಿಗೆ ಕೌಶಲಗಳನ್ನು ಕಲಿಸುವುದು, ಅವರನ್ನು ನೀಟ್‌, ಸಿಇಟಿ ಮಾತ್ರವಲ್ಲ ಕೆಎಎಸ್‌/ಐಎಎಸ್‌ ಪರೀಕ್ಷೆಗಳಿಗೆ ಸಿದ್ಧಗೊಳಿಸುವ, ವಿದೇಶದಲ್ಲಿ ಅಧ್ಯಯನ ನಡೆಸಲು ಸಹಾಯ ಮಾಡುವ ಕಾರ್ಯಕ್ರಮಗಳೂ ಇವೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

3. Karnataka Budget 2023 : ಕುವೆಂಪು ಆದರ್ಶಗಳಿಗೆ ವಿರುದ್ಧವಾದ ಬಜೆಟ್: ಎನ್. ರವಿಕುಮಾರ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯದ ಘನತೆಗೆ ವಿರುದ್ಧವಾದ ಹಾಗೂ ರಾಷ್ಟ್ರಕವಿ ಕುವೆಂಪು ಅವರ ಆದರ್ಶಗಳಿಗೆ ವ್ಯತಿರಿಕ್ತವಾದ ಬಜೆಟ್ (Karnataka Budget 2023) ಮಂಡಿಸಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಟೀಕೆ ಮಾಡಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

4. karnataka budget 2023 : ಗ್ಯಾರಂಟಿಗಳ ಜಾರಿಗೆ ಸಂಪನ್ಮೂಲ ಹೇಗೆ? ತೆರಿಗೆ ಇಲಾಖೆಗೆ ಕೊಟ್ಟ ಟಾರ್ಗೆಟ್‌ ಡಿಟೇಲ್ಸ್
ರಾಜ್ಯ ಸರ್ಕಾರ ತನ್ನ ಐದು ಗ್ಯಾರಂಟಿ ಯೋಜನೆಗಳ ಜಾರಿಗೆ ಬಜೆಟ್‌ನಲ್ಲಿ ಒಟ್ಟು 57,910 ಕೋಟಿ ರೂ.ಗಳನ್ನು ನಿಗದಿಪಡಿಸಿದೆ. ಹಾಗಾದರೆ ಸರ್ಕಾರ 2023-24ರಲ್ಲಿ ರಾಜ್ಯದಲ್ಲಿ ಎಷ್ಟರಮಟ್ಟಿಗೆ ತೆರಿಗೆ ಸಂಗ್ರಹ ಆಗಬಹುದು ಎಂದು ನಿರೀಕ್ಷಿಸಿದೆ? ( karnataka budget 2023) ಈ ಬಗ್ಗೆ ಬಜೆಟ್‌ನಲ್ಲಿ ಅಂದಾಜು ಲೆಕ್ಕಾಚಾರವನ್ನು ನೋಡಬಹುದು. ವಿವರ ಇಲ್ಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

5. Karnataka Budget 2023 : ಬಜೆಟ್‌ನಲ್ಲಿ 7ನೇ ವೇತನ ಆಯೋಗಕ್ಕೆ ದುಡ್ಡಿಲ್ಲ, ಓಪಿಎಸ್‌ ಜಾರಿಯ ಸುದ್ದಿ ಇಲ್ಲ; ನೌಕರರಿಗೆ ನಿರಾಸೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ರಾಜ್ಯ ಬಜೆಟ್‌ ರಾಜ್ಯದ ಸರ್ಕಾರಿ ನೌಕರರಿಗೆ ನಿರಾಸೆ ಮೂಡಿಸಿದೆ. ಬಜೆಟ್‌ನಲ್ಲಿ 7ನೇ ವೇತನ ಆಯೋಗದ ವರದಿಯನ್ನು (7th Pay Commission) ಜಾರಿಗೊಳಿಸಲು ಅಗತ್ಯವಾಗಿರುವ ಅನುದಾನ ಕಾಯ್ದಿರಿಸಿಲ್ಲ. ಅಂತೆಯೇ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು (NPS) ರದ್ಡು ಪಡಿಸಿ ಹಳೇ ಪಿಂಚಣಿ ಯೋಜನೆಯನ್ನು (OPS) ಜಾರಿಗೆ ತರುವ ಕುರಿತು ಯಾವುದೇ ತೀರ್ಮಾನ (Govt Employees News) ಪ್ರಕಟಿಸಿಲ್ಲ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

6. Karnataka budget 2023 : ಉತ್ತರ ಕನ್ನಡ ಜಿಲ್ಲೆಗಿಲ್ಲ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ! ಕೈಕೊಟ್ಟ ಸಿದ್ದರಾಮಯ್ಯ
ಉತ್ತರ ಕನ್ನಡ ಜಿಲ್ಲೆಯ ದಶಕಗಳ ಬೇಡಿಕೆಯಾಗಿದ್ದ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ (super speciality hospital) ಕನಸು ಕೊನೆಗೂ ಈಡೇರಿಲ್ಲ. ಹಿಂದಿನ ಸಿಎಂ ಬಸವರಾಜ ಬೊಮ್ಮಾಯಿ ಅವರು ತಮ್ಮ ಕೊನೇ ಬಜೆಟ್‌ನಲ್ಲಿ ಕುಮಟಾದಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದ್ದರು. ಆದರೆ, ಈ ಬಾರಿ ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿರುವ ಬಜೆಟ್‌ನಲ್ಲಿ (Karnataka budget 2023) ಅದರ ಪ್ರಸ್ತಾಪವೇ ಇಲ್ಲ. ಈ ಮೂಲಕ ದಶಕದ ಯೋಜನೆ ಇಲ್ಲಿ ಮರೀಚಿಕೆಯಾಗಿಯೇ ಉಳಿದಿದೆ. ಈ ಬಾರಿಯ ಬಜೆಟ್‌ನಲ್ಲಿ ಕಾರವಾರ ವೈದ್ಯಕೀಯ ಕಾಲೇಜು ಆಸ್ಪತ್ರೆ ಕಟ್ಟಡದ ಬಗ್ಗೆ ಮಾತ್ರವೇ ಉಲ್ಲೇಖಿಸಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. Karnataka Budget 2023 : ರಾಷ್ಟ್ರೀಯ ಶಿಕ್ಷಣ ನೀತಿ ರದ್ದು; ರಾಜ್ಯದಲ್ಲಿ ಜಾರಿಗೆ ಬರಲಿದೆ ಹೊಸ ನೀತಿ
ರಾಷ್ಟ್ರೀಯ ಶಿಕ್ಷಣ ನೀತಿ 2020 (national education policy) ಯನ್ನು ರದ್ದು ಪಡಿಸುವ ಮಹತ್ವದ ತೀರ್ಮಾನವನ್ನು ಶುಕ್ರವಾರದಂದು ಮಂಡಿಸಲಾದ ರಾಜ್ಯ ಬಜೆಟ್‌ನಲ್ಲಿ (Karnataka Budget 2023) ಘೋಷಿಸಲಾಗಿದೆ. ಇದಕ್ಕೆ ಬದಲಾಗಿ ʻರಾಜ್ಯ ಶಿಕ್ಷಣ ನೀತಿʼಯನ್ನು ಜಾರಿಗೆ ತರಲಾಗುವುದು ಎಂದು ಪ್ರಕಟಿಸಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

8. Rahul Gandhi: ರಾಹುಲ್ ಗಾಂಧಿಗೆ ಮತ್ತೆ ಸೋಲು; ಜೈಲು ಶಿಕ್ಷೆಗೆ ತಡೆ ನೀಡದ ಗುಜರಾತ್ ಹೈಕೋರ್ಟ್​
2019ರಲ್ಲಿ ಮೋದಿ ಸರ್​ನೇಮ್​ಗೆ (Modi Sir name Case) ಮಾಡಿದ್ದ ಅಪಮಾನ ಮಾಡಿದ್ದ ಕೇಸ್​​ನಲ್ಲಿ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ (Rahul Gandhi)ಗೆ ಮತ್ತೊಮ್ಮೆ ತೀವ್ರ ಹಿನ್ನಡೆಯಾಗಿದೆ. ತಮ್ಮನ್ನು ದೋಷಮುಕ್ತರನ್ನಾಗಿ ಮಾಡಬೇಕು, ಸೂರತ್​ ಕೋರ್ಟ್​ ವಿಧಿಸಿದ್ದ ಜೈಲು ಶಿಕ್ಷೆಗೆ ತಡೆ ನೀಡಬೇಕು ಎಂದು ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ (Gujarat High Court)​ ತಿರಸ್ಕರಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

9. Odisha Train Tragedy: ಮೂವರು ರೈಲು ಸಿಬ್ಬಂದಿಯನ್ನು ಬಂಧಿಸಿದ ಸಿಬಿಐ! ಅಪಘಾತದ ಬಗ್ಗೆ ಮೊದ್ಲೆ ಗೊತ್ತಿತ್ತಾ?
ಒಡಿಶಾ ರೈಲು ದುರಂತಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ(Central Bureau of Investigation – CBI)ವು ರೈಲ್ವೆ ಇಲಾಖೆಯ ಸೀನಿಯರ್ ಸೆಕ್ಷನ್ ಎಂಜಿನಿಯರ್ (ಸಿಗ್ನಲ್) ಅರುಣ್ ಕುಮಾರ್ ಮಹಂತಾ, ಸೆಕ್ಷನ್ ಎಂಜಿನಿಯರ್ ಮೊಹಮ್ಮದ್ ಅಮಿರ್ ಖಾನ್ ಮತ್ತು ಟೆಕ್ನಿಷಿಯನ್ ಪಪ್ಪು ಕುಮಾರ್ ಎಂಬ ಮೂವರನ್ನು ಅರೆಸ್ಟ್ ಮಾಡಿದೆ. ಈ ಮೂವರ ವಿರುದ್ಧ ಕೊಲೆಗೆ ಸಮಾನವಲ್ಲದ ಅಪರಾಧಿ ನರಹತ್ಯೆ ಮತ್ತು ಸಾಕ್ಷಿಗಳ ನಾಶದ ಆರೋಪವನ್ನು ಹೊರಿಸಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. Rishab Shetty: ಒಂದೇ ತಟ್ಟೆಯಲ್ಲಿ ಊಟ ಮಾಡಿದ ರಿಷಬ್‌, ಪ್ರಮೋದ್‌, ರಕ್ಷಿತ್‌ ಶೆಟ್ಟಿ; ವಿಡಿಯೊ ವೈರಲ್‌!
ಜುಲೈ 7ರಂದು ರಿಷಬ್‌ ಶೆಟ್ಟಿ (Rishab Shetty) ಅವರ ಜನುಮದಿನ. 40ನೇ ವಸಂತಕ್ಕೆ ರಿಷಬ್‌ ಕಾಲಿಟ್ಟಿದ್ದಾರೆ. ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್​ನಲ್ಲಿ ರಿಷಬ್ ಶೆಟ್ಟಿ ಅಭಿಮಾನಿಗಳನ್ನು ಈಗಾಗಲೇ ಭೇಟಿಯಾಗಿದ್ದಾರೆ. ಜತೆಗೆ ಊಟದ ವ್ಯವಸ್ಥೆಯನ್ನು ಮಾಡಿದ್ದಾರೆ, ಈ ಸುದ್ದಿ ಬೆನ್ನಲ್ಲೇ ಇದೀಗ ಶೀತಲ್‌ ಶೆಟ್ಟಿ ವಿಡಿಯೊವೊಂದನ್ನು ಶೇರ್‌ ಮಾಡಿಕೊಂಡಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

Exit mobile version