1. Tiger Attack: ಮೈಸೂರಲ್ಲಿ ಚಿರತೆ ದಾಳಿಗೆ ಬಾಲಕ ಮೃತ್ಯು ಬೆನ್ನಲ್ಲೇ ಹುಲಿ ದಾಳಿಗೆ ಯುವಕ ಬಲಿ; ಒಂದೇ ದಿನದ ಅಂತರದಲ್ಲಿ 2 ಸಾವು
ಶನಿವಾರ (ಜ. ೨೧) ರಾತ್ರಿಯಷ್ಟೇ ಚಿರತೆ ದಾಳಿಗೆ ತಿ.ನರಸೀಪುರ ತಾಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಯಿಂದ (leopard attack) 11 ವರ್ಷದ ಬಾಲಕನೊಬ್ಬ ಬಲಿಯಾಗಿದ್ದ. ಇದರ ಬೆನ್ನಲ್ಲೇ ಹುಲಿ ದಾಳಿಗೆ (Tiger Attack) ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ (Nagarahole National Park) ಬಳ್ಳೆ ಹಾಡಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಕಾಡು ಪ್ರಾಣಿ ದಾಳಿಗೆ ಒಂದೇ ದಿನದ ಅಂತರದಲ್ಲಿ ಮತ್ತೊಂದು ಜೀವ ಬಲಿಯಾದಂತೆ ಆಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಹೆಚ್ಚಿನ ಓದಿಗಾಗಿ: leopard attack: ಚಿರತೆ ದಾಳಿಯಿಂದ ಇನ್ನು ಒಂದೇ ಸಾವಾದರೂ ನಿನ್ನನ್ನು ಕೊಲ್ಲುವೆ; ಅರಣ್ಯ ಸಂರಕ್ಷಣಾಧಿಕಾರಿಗೆ ಮೃತ ಬಾಲಕನ ಅಜ್ಜನಿಂದ ವಾರ್ನಿಂಗ್
ಹೆಚ್ಚಿನ ಓದಿಗಾಗಿ: leopard attack: ತಿ.ನರಸೀಪುರದಲ್ಲಿ ಬೋನಿಗೆ ಬಿತ್ತು ಒಂದು ಚಿರತೆ ಮತ್ತು ಮೂರು ಮರಿಗಳು
2. ಮೋದಿ ಕುರಿತ ಆಕ್ಷೇಪಾರ್ಹ ಸಾಕ್ಷ್ಯಚಿತ್ರಕ್ಕೆ ಕಾಂಗ್ರೆಸ್ ಬೆಂಬಲ, ಇದು ಟುಕ್ಡೆ ಗ್ಯಾಂಗ್ ಎಂದು ಜರಿದ ಬಿಜೆಪಿ
ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಆಕ್ಷೇಪಾರ್ಹವಾಗಿ ಚಿತ್ರಿಸಿರುವ ಬಿಬಿಸಿ ಡಾಕ್ಯುಮೆಂಟರಿಗೆ ಬ್ರಿಟನ್‌ನಲ್ಲಿಯೇ ವಿರೋಧ ವ್ಯಕ್ತವಾಗಿದೆ. ಆದಾಗ್ಯೂ, ಭಾರತದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೋದಿ ಅವರಿಗೆ ಸುಪ್ರೀಂ ಕೋರ್ಟ್ ಕ್ಲೀನ್ ಚಿಟ್ ನೀಡಿದೆ. ಹಾಗಾಗಿ, ಕೇಂದ್ರ ಸರ್ಕಾರವು ಡಾಕ್ಯುಮೆಂಟರಿಯ ಲಿಂಕ್, ಪೋಸ್ಟ್ ಹಾಗೂ ವಿಡಿಯೊಗಳನ್ನು ಟ್ವಿಟರ್ ಹಾಗೂ ಯುಟ್ಯೂಬ್‌ನಿಂದ ಡಿಲೀಟ್ ಮಾಡಿಸಿದೆ. ಆದರೂ, ಡಾಕ್ಯುಮೆಂಟರಿ ವಿಚಾರವೀಗ ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ಟೀಕೆ, ವಾಗ್ವಾದಕ್ಕೆ ಕಾರಣವಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
3. Karnataka Congress : ಸೋಮವಾರ ಬೆಳಗ್ಗೆ ಬೆಂಗಳೂರಿನ 300ಕ್ಕೂ ಹೆಚ್ಚು ಕಡೆಗಳಲ್ಲಿ ಕಾಂಗ್ರೆಸ್ ಪ್ರತಿಭಟನೆ
‘ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಜನಜಾಗೃತಿ ಮೂಡಿಸಲು ಕಾಂಗ್ರೆಸ್ ಪಕ್ಷ ಜ.23, ಸೋಮವಾರ ಬೆಳಗ್ಗೆ 10 ಗಂಟೆಯಿಂದ 12 ಗಂಟೆವರೆಗೂ ನಗರದ 300ಕ್ಕೂ ಹೆಚ್ಚು ಕಡೆಗಳಲ್ಲಿ ಭ್ರಷ್ಟಾಚಾರ ತೊಲಗಿಸಿ, ಬೆಂಗಳೂರು ಉಳಿಸಿ ಎಂಬ ಮೌನ ಪ್ರತಿಭಟನೆ ಮಾಡಲಾಗುವುದು’ ಎಂದು ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರಿಸ್ ತಿಳಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಹೆಚ್ಚಿನ ಓದಿಗಾಗಿ: Congress Protest : ನೇತಾಜಿ ಜನ್ಮದಿನದಂದೇ ಕಾಂಗ್ರೆಸ್ ಪ್ರತಿಭಟನೆ: ಸುಭಾಷ್‌ಚಂದ್ರ ಬೋಸ್‌ಗೆ ಅವಮಾನ ಎಂದ ಎನ್. ರವಿಕುಮಾರ್
4. Prajadhwani : ನಾನು ಅಪ್ಪಟ ಹಿಂದು; ಆದರೆ ಹಿಂದುತ್ವವಾದಿ ಅಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ
ತಮ್ಮನ್ನೂ ಸೇರಿ ಕಾಂಗ್ರೆಸ್‌ನಲ್ಲಿ ಅನೇಕ ಅಪ್ಪಟ ಹಿಂದುಗಳಿದ್ದು, ಹಿಂದುತ್ವವಾದಿಗಳಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದರು. ಉಡುಪಿಯಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ (Prajadhwani) ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತನಾಡಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
5. LIC Recruitment 2023 : ಎಲ್‌ಐಸಿಯಲ್ಲಿ 9,000 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಭಾರತೀಯ ಜೀವ ವಿಮೆ ನಿಗಮವು (LIC) 9,000 ಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿಗೊಳಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಎಲ್‌ಐಸಿಯ ಎಡಿಒ (Apprentice Development Officers) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
6. Bus Service: ಜ.24ರಂದು ಬಸ್ ಸೇವೆಯಲ್ಲಿ ವ್ಯತ್ಯಯ; ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು
ಆರು ವರ್ಷ ಕಳೆದರೂ ವೇತನ ಹೆಚ್ಚಳ ಮಾಡದ ರಾಜ್ಯ ಸರ್ಕಾರದ ವಿರುದ್ಧ ನಾಲ್ಕು ನಿಗಮದ ಸಾರಿಗೆ ನೌಕರರು (Bus Service) ಬೀದಿಗಿಳಿಯಲಿದ್ದಾರೆ. ಸರ್ಕಾರದ ಧೋರಣೆ ಖಂಡಿಸಿ ಜ.24ರಂದು ಫ್ರೀಡಂ ಪಾರ್ಕ್‌ನಲ್ಲಿ ಧರಣಿ ಸತ್ಯಾಗ್ರಹಕ್ಕೆ ಮುಂದಾಗುತ್ತಿದ್ದು, ಇದರಿಂದಾಗಿ ಬಸ್ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
7. Joe Biden : ಅಮೆರಿಕ ಅಧ್ಯಕ್ಷ ಜೋ ಬೈಡೆನ್ ನಿವಾಸದಲ್ಲಿ ಎಫ್‌ಬಿಐ ಶೋಧ, 6 ರಹಸ್ಯ ದಾಖಲೆಗಳು ಪತ್ತೆ
ಅಮೆರಿಕದ ಅಧ್ಯಕ್ಷ ಜೋ ಬೈಡೆನ್ ( Joe Biden) ನಿವಾಸದಲ್ಲಿ ಶುಕ್ರವಾರ ಫೆಡರಲ್ ಬ್ಯೂರೊ ಆಫ್ ಇನ್ವೆಸ್ಟಿಗೇಶನ್ (FBI) ಶೋಧ ಕಾರ್ಯಾಚರಣೆ ನಡೆಸಿದ್ದು, ಸರ್ಕಾರದ 6 ರಹಸ್ಯ ದಾಖಲೆಗಳು ಪತ್ತೆಯಾಗಿವೆ. 13 ಗಂಟೆಗಳ ಕಾಲ ಕಾರ್ಯಾಚರಣೆ ನಡೆಯಿತು. ಬೈಡೆನ್ ಅವರು ಉಪಾಧ್ಯಕ್ಷರಾಗಿದ್ದಾಗ ವರ್ಗೀಕೃತ ಎಂದು ಪರಿಗಣನೆಯಾಗಿದ್ದ ದಾಖಲೆಗಳು ಪತ್ತೆಯಾಗಿವೆ. ವೆಲ್ಲಿಂಗ್ಟನ್‌ನಲ್ಲಿ ಇರುವ ನಿವಾಸದಲ್ಲಿ ಕಾರ್ಯಾಚರಣೆ ನಡೆಯಿತು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
8. Kantara Movie: ಹಿಂದಿಯಲ್ಲಿ ನೂರು ದಿನಗಳನ್ನು ಪೂರೈಸಿದ ʻಕಾಂತಾರʼ
ಕಾಂತಾರ-2 ಸುದ್ದಿ ಬೆನ್ನಲ್ಲೇ ಇದೀಗ ಕಾಂತಾರ-1 (Kantara Movie) ಸಿನಿಮಾ ಹಿಂದಿಯಲ್ಲಿ ನೂರು ದಿನಗಳನ್ನು ಪೂರೈಸಿದೆ. ಕನ್ನಡದಲ್ಲಿ ಹಿಟ್ ಆದ ನಂತರ ಹಲವು ಭಾಷೆಗಳಲ್ಲಿ ಸಿನಿಮಾ ತೆರೆ ಕಂಡಿತ್ತು. ಇದೀಗ ಶತಕದ ಸಂಭ್ರಮದಲ್ಲಿ ಸಿನಿಮಾ ನೋಡಿದ ಪ್ರೇಕ್ಷಕರಿಗೆ ರಿಷಬ್ ಶೆಟ್ಟಿ ಧನ್ಯವಾದ ಸೂಚಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
9. ಸಂಡೇ ರೀಡ್ | ಕ್ಯಾಪ್ಟನ್ ಗೋಪಿನಾಥ್ ಜೀವನದ ಒಳʼಹರಿವುʼ ತೆರೆದಿಡುವ ಪುಸ್ತಕ ʼನಮ್ಮ ಭಾರತʼ
ಕ್ಯಾಪ್ಟನ್ ಜಿ. ಆರ್. ಗೋಪಿನಾಥ್ ಅವರು ಬರೆದಂತಹ, ವಿಜಯ್ ಜೋಷಿ ಅವರು ಕನ್ನಡಕ್ಕೆ ಅನುವಾದಿಸಿದ ‘ನಮ್ಮ ಭಾರತ’ ಪುಸ್ತಕವನ್ನು ಹರಿವು ಬುಕ್ಸ್ ಪ್ರಕಟಮಾಡಿದೆ. ಇದು ಕ್ಯಾಪ್ಟನ್ ಗೋಪಿನಾಥ್ ಅವರು ಬರೆದಂಥ ಲೇಖನಗಳ ಗುಚ್ಛ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
10. ತವರಿಗೆ ಹೋಗಿ ಕುಳಿತ ಪತ್ನಿ; ಕಡುಕೋಪದಲ್ಲಿ ತನ್ನ ಖಾಸಗಿ ಅಂಗವನ್ನೇ ಕತ್ತರಿಸಿಕೊಂಡ ಪತಿ!
ಬಿಹಾರದಲ್ಲಿ 25 ವರ್ಷದ ಯುವಕನೊಬ್ಬ ಪತ್ನಿಯ ಮೇಲಿನ ಕೋಪಕ್ಕೆ ತನ್ನ ಖಾಸಗಿ ಅಂಗವನ್ನೇ ಕತ್ತರಿಸಿ, ಬಿಸಾಡಿದ್ದಾನೆ. ಕೋಪದ ಕೈಯಲ್ಲಿ ಬುದ್ಧಿಕೊಟ್ಟು ಬಹುಮುಖ್ಯವಾದ ಅಂಗವನ್ನೇ ಕಳೆದುಕೊಂಡಿದ್ದಾನೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಮತ್ತಷ್ಟು ಪ್ರಮುಖ ಸುದ್ದಿಗಳು
- Pathaan Movie, ಯಾರು ಶಾರುಖ್ ಎಂದು ಕೇಳಿದ ಅಸ್ಸಾಮ್ ಸಿಎಂಗೆ ಖಾನ್ ಫೋನ್ ಕಾಲ್!
- California shooting : ಕ್ಯಾಲಿಫೋರ್ನಿಯಾದ ಡ್ಯಾನ್ಸ್ ಕ್ಲಬ್‌ನಲ್ಲಿ ಗುಂಡಿನ ದಾಳಿ, 9 ಜನರ ಸಾವು
- ಶ್ರದ್ಧಾ ವಾಳ್ಕರ್ ಹತ್ಯೆ ಪ್ರಕರಣದಲ್ಲಿ ಸಿದ್ಧವಾಯ್ತು 3000 ಪುಟಗಳ ಕರಡು ಆರೋಪ ಪಟ್ಟಿ; ಕಾನೂನು ತಜ್ಞರಿಂದ ಪರಿಶೀಲನೆ
- Richest Hindus of Pakistan : ಇವರು ಪಾಕಿಸ್ತಾನದ ಶ್ರೀಮಂತ ಹಿಂದೂಗಳು! ಎಷ್ಟಿದೆ ಆಸ್ತಿ?
- WhatsApp New Feature : ವಾಟ್ಸಾಪ್‌ನಲ್ಲಿ ನೀವಿನ್ನು ಒರಿಜಿನಲ್ ಸೈಜಿನಲ್ಲೇ ಇಮೇಜ್ ಕಳುಹಿಸಬಹುದು