1. Pulse of Karnatana: ಕಿತ್ತೂರು ಮತ್ತು ಕಲ್ಯಾಣ ಕರ್ನಾಟಕದಲ್ಲಿ ಯಾರ ಪರವಿದ್ದಾರೆ ಮತದಾರರು?ವಿಧಾನಸಭೆ ಚುನಾವಣೆಗೂ ಮುನ್ನ ಕರ್ನಾಟಕದ ಮತದಾರರ ನಾಡಿ ಮಿಡಿತ ಅರಿಯುವ ಪ್ರತಿಷ್ಠಿತ ಸಮೀಕ್ಷೆ ʼಪಲ್ಸ್ ಆಫ್ ಕರ್ನಾಟಕʼದ ಎರಡನೇ ಆವೃತ್ತಿ ಪ್ರಕಟವಾಗುತ್ತಿದೆ. ಇಂದು ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ವಿಜಯಪುರ, ಹುಬ್ಬಳ್ಳಿ-ಧಾರವಾಡ, ಗದಗ ಜಿಲ್ಲೆಗಳನ್ನೊಳಗೊಂಡ ಕಿತ್ತೂರು ಕರ್ನಾಟಕ ಹಾಗೂ ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಯಾದಗಿರಿ, ಬೀದರ್ ಜಿಲ್ಲೆಗಳನ್ನು ಒಳಗೊಂಡು ಕಲ್ಯಾಣ ಕರ್ನಾಟಕದ ಮತದಾರರ ಮನದಾಳವನ್ನು ಪ್ರಕಟಿಸಲಾಗಿದೆ.
Pulse of Karnataka: ಕಿತ್ತೂರು ಕರ್ನಾಟಕ: ಹಿಂದುತ್ವ ಅಲೆಯ ಪ್ರದೇಶದಲ್ಲಿ ಬೊಮ್ಮಾಯಿ ಪರ ಒಲವು ಹೇಗಿದೆ?
Pulse of Karnataka: ಕಲ್ಯಾಣ ಕರ್ನಾಟಕ: ಮಲ್ಲಿಕಾರ್ಜುನ ಖರ್ಗೆ ತವರಿನಲ್ಲಿ ಯಾರಿಗೆ ವಿಜಯದ ಹಾರ?
2. ಯಾವುದೇ ಕಾರಣಕ್ಕೆ ವರುಣದಿಂದ ವಿಜಯೇಂದ್ರ ಸ್ಪರ್ಧಿಸಲ್ಲ: ಗೊಂದಲಕ್ಕೆ ತೆರೆಯೆಳೆದ ಯಡಿಯೂರಪ್ಪ
ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ತಮ್ಮ ಪುತ್ರ ಬಿ.ವೈ. ವಿಜಯೇಂದ್ರ ಯಾವುದೇ ಕಾರಣಕ್ಕೆ ವರುಣ ವಿಧಾನಸಭಾ ಕ್ಷೇತ್ರದಿಂಧ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಅತ್ತ ಮೈಸೂರಿಗೆ ವಿಜಯೇಂದ್ರ ಭೇಟಿ ನೀಡಿದ್ದು, ವರುಣದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ಮಾಡಬಹುದು ಎಂಬ ನಿರೀಕ್ಷೆಗಳಿವೆ. ಅಲ್ಲಿನ ಕಾರ್ಯಕರ್ತರೂ ಇದಕ್ಕೆ ಒತ್ತಾಯ ಮಾಡುತ್ತಿರುವ ಬೆನ್ನಿಗೇ ಯಡಿಯೂರಪ್ಪ ಈ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಪೂರಕ ವರದಿ : ಹುಲಿ ಎದುರು ಹುಲಿಯೇ ಫೈಟ್ ಮಾಡ್ಬೇಕು; ವರುಣದಿಂದಲೇ ಸ್ಪರ್ಧಿಸಲು ವಿಜಯೇಂದ್ರಗೆ ಒತ್ತಡ
3. ಕಾಂಗ್ರೆಸ್ 2ನೇ ಪಟ್ಟಿ ಏ. 5ಕ್ಕೆ? ರಾಹುಲ್ ಗಾಂಧಿ ಕೋಲಾರ ಪ್ರತಿಭಟನೆ ಏಪ್ರಿಲ್ 5ರ ಬದಲು ಏ.9
ಮುಂದಿನ ವಿಧಾನಸಭಾ ಚುನಾವಣೆಗಾಗಿ (Karnataka Elections) 124 ಕ್ಷೇತ್ರಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿ ಮುನ್ನಡೆಯಲ್ಲಿರುವ ಕಾಂಗ್ರೆಸ್ ತನ್ನ ಎರಡನೇ ಪಟ್ಟಿಯನ್ನು ಏಪ್ರಿಲ್ 5 ಅಥವಾ 6ರಂದು ಪ್ರಕಟಿಸುವ ಸಾಧ್ಯತೆ ಇದೆ. ಈ ನಡುವೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕೋಲಾರ ಭೇಟಿ ಏಪ್ರಿಲ್ ಐದರ ಬದಲಾಗಿ ಏಪ್ರಿಲ್ 9ಕ್ಕೆ ಮರುನಿಗದಿಯಾಗಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
4. IPL 2023: ಐಪಿಎಲ್ ಕ್ರಿಕೆಟ್ ಹಬ್ಬಕ್ಕೆ ರಂಗು ತುಂಬಿದ ತಮನ್ನಾ, ರಶ್ಮಿಕಾ ಮಂದಣ್ಣ; ಅದ್ಧೂರಿ ಚಾಲನೆ
ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಲೀಗ್ ಐಪಿಎಲ್(IPL 2023) 16ನೇ ಆವೃತ್ತಿಗೆ ಇಂದು (ಶುಕ್ರವಾರ ಮಾರ್ಚ್ 31) ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಅದ್ಧೂರಿಯಾಗಿ ಚಾಲನೆ ಸಿಕ್ಕಿದೆ. ಮುಂದಿನ 2 ತಿಂಗಳು ದೇಶದಲ್ಲಿ ಈ ಕ್ರಿಕೆಟ್ ಹಬ್ಬದ ವಾತಾವರಣ ಇರಲಿದೆ. ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಮತ್ತು ಮಿಲ್ಕಿ ಬ್ಯೂಟಿ ಖ್ಯಾತಿಯ ತಮನ್ನಾ ಭಾಟಿಯ ಹಬ್ಬಕ್ಕೆ ರಂಗು ತುಂಬಿದರು. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
5. Banglore-Mysore Expressway: ದಶಪಥ ಹೆದ್ದಾರಿ ಮತ್ತೆ ದುಬಾರಿ; ನಾಳೆಯಿಂದಲೇ ಟೋಲ್ ದರ ಏರಿಕೆ
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ವಾಹನ ಸವಾರರಿಗೆ ಮತ್ತೆ ಬರೆ ಬೀಳುತ್ತಿದೆ. ಶನಿವಾರದಿಂದ (ಏ. 1) ದರ ಪರಿಷ್ಕರಣೆ ಮಾಡಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿದೆ. ಬರೋಬ್ಬರಿ ಶೇಕಡಾ 22ರಷ್ಟು ದರ ಹೆಚ್ಚಳ ಮಾಡಲಾಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
6. ಸುಕನ್ಯಾ ಸಮೃದ್ಧಿ ಸೇರಿ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರ 0.70% ತನಕ ಏರಿಕೆ
ನಿರೀಕ್ಷೆಯಂತೆ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರವನ್ನು 2023ರ ಏಪ್ರಿಲ್-ಜೂನ್ ಅವಧಿಗೆ (small savings schemes) 0.70% ತನಕ ಏರಿಸಲಾಗಿದೆ. ಹಿರಿಯ ನಾಗರಿಕರ ಉಳಿತಾಯ ಯೋಜನೆ, ಮಾಸಿಕ ಆದಾಯ ಉಳಿತಾಯ ಯೋಜನೆ, ನ್ಯಾಶನಲ್ ಸೇವಿಂಗ್ಸ್ ಸರ್ಟಿಫಿಕೇಟ್, ಕಿಸಾನ್ ವಿಕಾಸ ಪತ್ರ, ಅಂಚೆ ಇಲಾಖೆಯ ಟೈಮ್ ಡಿಪಾಸಿಟ್, ಸುಕನ್ಯಾ ಸಮೃದ್ಧಿ ಖಾತೆಯ ಬಡ್ಡಿ ದರವನ್ನು ಶೇ.8ಕ್ಕೆ ಏರಿಸಲಾಗಿದೆ. ಇದಕ್ಕೂ ಹಿಂದಿನ ತ್ರೈಮಾಸಿಕದಲ್ಲಿ ಇದರ ಬಡ್ಡಿ ದರ 7.6% ಆಗಿತ್ತು. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
7. ನಾಳೆಯಿಂದ ಯಾವುದು ದುಬಾರಿ, ಯಾವುದು ಅಗ್ಗ, ಹೊಸ ಬದಲಾವಣೆ ಏನು?
ಕೇಂದ್ರ ಸರ್ಕಾರ 2023-24ರ ಬಜೆಟ್‌ನಲ್ಲಿ ಘೋಷಿಸಿರುವ ತೆರಿಗೆ ಬದಲಾವಣೆಗಳು ಏಪ್ರಿಲ್ 1ರಿಂದ ಜಾರಿಯಾಗು ತ್ತಿವೆ. ಇದರ ಪರಿಣಾಮ ಏಪ್ರಿಲ್ 1ರಿಂದ ಕೆಲವು ವಸ್ತುಗಳು ದುಬಾರಿ, ಮತ್ತೆ ಕೆಲವು ಅಗ್ಗವಾಗಲಿದೆ. ಸ್ಥಳೀಯ ಉತ್ಪಾದನೆ ಉತ್ತೇಜನಕ್ಕಾಗಿ ಏಪ್ರಿಲ್ 1ರಿಂದ ಅನ್ವಯವಾಗುವಂತೆ ಆಮದು ಸುಂಕವನ್ನು 2023-24ರ ಬಜೆಟ್‌ನಲ್ಲಿ ಹೆಚ್ಚಿಸಿದೆ. ಜತೆಗೆ ಹೊಸ ನಿಯಮಾವಳಿಗಳೂ ಜಾರಿಯಾಗಲಿವೆ. ಪೂರ್ಣ ವಿವರಗಳಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
8. ಮೋದಿ ಪದವಿ ಸರ್ಟಿಫಿಕೇಟ್ ಕೇಳಿದ್ದ ದಿಲ್ಲಿ ಸಿಎಂ ಕೇಜ್ರಿವಾಲ್‌ಗೆ 25 ಸಾವಿರ ರೂ. ದಂಡ!
ಪ್ರಧಾನಿ ನರೇಂದ್ರ ಮೋದಿ ಅವರ ಶಿಕ್ಷಣ ಅರ್ಹತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಗುಜರಾತ್ ಹೈಕೋರ್ಟ್ 25 ಸಾವಿರ ದಂಡ ವಿಧಿಸಿದೆ. ಪದವಿ ಮತ್ತು ಸ್ನಾತಕೋತ್ತರ ಪದವಿ ಸರ್ಟಿಫಿಕೇಟ್‌ಗಳನ್ನು ಪ್ರಧಾನಿ ಕಾರ್ಯಾಲಯವು(PMO) ಒದಗಿಸುವ ಅಗತ್ಯವಿಲ್ಲ ಎಂದು ಕೋರ್ಟ್ ಹೇಳಿದೆ. ಪೂರ್ಣ ವಿವರಗಳಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
9. Bangalore horror : 19ರ ಯುವತಿಯನ್ನು ಎಳೆದೊಯ್ದು ಚಲಿಸುವ ಕಾರಿನಲ್ಲೇ 4 ಗಂಟೆ ಕಾಲ ಅತ್ಯಾಚಾರ ರಾಜಧಾನಿ ಬೆಂಗಳೂರಿನಲ್ಲಿ ಭಯ ಹುಟ್ಟಿಸುವ ಸಾಮೂಹಿಕ ಅತ್ಯಾಚಾರ ಪ್ರಕರಣವೊಂದು (Bangalore horror) ನಡೆದಿದೆ. 19 ವರ್ಷದ ಯುವತಿಯೊಬ್ಬಳನ್ನು ಅಪಹರಿಸಿದ ನಾಲ್ವರು ಯುವಕರು ಚಲಿಸುವ ಕಾರಿನಲ್ಲಿ ಆಕೆಯ ಮೇಲೆ ನಾಲ್ಕು ಗಂಟೆಗಳ ಹೊತ್ತು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ತನ್ನ ಗೆಳೆಯನ ಜತೆ ಪಾರ್ಕ್‌ನಲ್ಲಿ ಕುಳಿತಿದ್ದ ಯುವತಿಯನ್ನು ಎಳೆದುಕೊಂಡು ಹೋದ ಈ ದುಷ್ಟರು ಕಾರಿನೊಳಗೆ ಕೂಡಿ ಹಾಕಿ ರಾತ್ರಿ ಇಡೀ ಸುತ್ತಾಡಿಸಿ ದೌರ್ಜನ್ಯ ನಡೆಸಿ ರಾತ್ರಿ 3.30ರ ಹೊತ್ತಿಗೆ ರಸ್ತೆಯಲ್ಲಿ ಬಿಟ್ಟುಹೋಗಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
10. Viral News : ನೂಡಲ್ಸ್‌ನಿಂದಲೇ ರಸ್ತೆ ಗುಂಡಿ ಮುಚ್ಚುವ ವ್ಯಕ್ತಿ! ವೈರಲ್ ಆಗ್ತಿದೆ ಈತನ ಕೆಲಸ
ರಸ್ತೆ ಗುಂಡಿ ಸಮಸ್ಯೆ ನಮ್ಮ ಬೆಂಗಳೂರಿನ ಮಂದಿಗೆ ಚೆನ್ನಾಗಿ ಗೊತ್ತಿರುವಂತದ್ದು. ಕೇವಲ ಬೆಂಗಳೂರು ಮಾತ್ರವಲ್ಲ, ದೇಶ ವಿದೇಶದಲ್ಲೂ ಈ ರಸ್ತೆ ಗುಂಡಿ ದೊಡ್ಡ ಸಮಸ್ಯೆಯೇ. ಅಭಿವೃದ್ಧಿಹೊಂದಿರುವ ರಾಷ್ಟ್ರ ಎಂದು ಕರೆಸಿಕೊಳ್ಳುವ ಬ್ರಿಟನ್‌ನಲ್ಲೂ ಈ ಸಮಸ್ಯೆ ತಪ್ಪಿದ್ದಲ್ಲ. ಅಲ್ಲಿಯೂ ಕೂಡ ಈ ರಸ್ತೆ ಗುಂಡಿ ವಿಚಾರದಲ್ಲಿ ಸಾಕಷ್ಟು ಮಂದಿ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿ, ಸೋತಿದ್ದಾರೆ. ಇದೀಗ ಈ ವ್ಯಕ್ತಿಯೊಬ್ಬರು ವಿಶೇಷ ರೀತಿಯಲ್ಲಿ ಸರ್ಕಾರದ ಗಮನ ಸೆಳೆಯುತ್ತಿದ್ದು, ಈ ಸುದ್ದಿ ಎಲ್ಲೆಡೆ ವೈರಲ್ (Viral News) ಆಗಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಇನ್ನಷ್ಟು ಪ್ರಮುಖ ಸುದ್ದಿಗಳು
1. ಗುಜರಾತ್, ಬಂಗಾಳದಲ್ಲಿ ರಾಮನವಮಿ ಹಿಂಸಾಚಾರ; 60 ಜನರ ಬಂಧನ, ರಾಜಕೀಯ ಮೇಲಾಟ
2. Aadhaar Update: ಆನ್‌ಲೈನ್‌ನಲ್ಲಿ ಆಧಾರ್ ಅಪ್‌ಡೇಟ್ ಉಚಿತ; ಈ ಸೌಲಭ್ಯ ಜೂನ್ 14ರವರೆಗೆ ಮಾತ್ರ
3. 30 ಕೋಟಿ ರೂ. ಆಸ್ತಿ ಇದ್ದರೂ 3 ಹೊತ್ತು ಊಟ ಹಾಕದ ಮಗ, ಮಾತ್ರೆ ಸೇವಿಸಿ ತಂದೆ-ತಾಯಿ ಆತ್ಮಹತ್ಯೆ
4. ಒಂದೇ ಕುಟುಂಬದ 6 ಮಂದಿಯ ಪ್ರಾಣ ತೆಗೆದ ಸೊಳ್ಳೆ ಬತ್ತಿ; ಹಾಸಿಗೆ ಮೇಲೆ ಬಿದ್ದು ಭುಗಿಲೆದ್ದ ಹೊಗೆ, ಬೆಂಕಿ
5. New Virus: ಕೊರೊನಾ ಬೆನ್ನಲ್ಲೇ ಪತ್ತೆಯಾಯ್ತು ಮತ್ತೊಂಡು ಡೆಡ್ಲಿ ವೈರಸ್! ಭಾರತದಲ್ಲೇ ಮೊದಲ ಕೇಸ್!