1. ಲೋಕಾಯುಕ್ತ ದಾಳಿ: ಸಿಕ್ಕಿದ್ದು 8.13 ಕೋಟಿ ಹಣ, ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ನಂ. 1 ಆರೋಪಿ
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮ (ಕೆಎಸ್‌ಡಿಎಲ್)ಕ್ಕೆ ಕಚ್ಚಾ ವಸ್ತು ಖರೀದಿ ಟೆಂಡರ್‌ಗೆ ಸಂಬಂಧಿಸಿ 40 ಲಕ್ಷ ರೂ. ಲಂಚ ಸ್ವೀಕರಿಸುವ ವೇಳೆ ಜಲ ಮಂಡಳಿ ಮುಖ್ಯಾಧಿಕಾರಿ ಮಾಡಾಳ್ ಪ್ರಶಾಂತ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದರೂ ಈ ಪ್ರಕರಣದಲ್ಲಿ ಪ್ರಧಾನ ಆರೋಪಿಯಾಗಿ ಗುರುತಿಸಲಾಗಿರುವುದು, ಅವರ ತಂದೆ, ಚನ್ನಗಿರಿಯ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರನ್ನು. ಈ ನಡುವೆ ಲೋಕಾಯುಕ್ತ ದಾಳಿಯಲ್ಲಿ 8.13 ಕೋಟಿ ರೂ. ನಗದು ಮತ್ತು ಚಿನ್ನಾಭರಣ ಪತ್ತೆಯಾಗಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
2. ಕೆಎಸ್‌ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ಮಾಡಾಳು ವಿರೂಪಾಕ್ಷಪ್ಪ ರಾಜೀನಾಮೆ, ಸಿಎಂ ಸೂಚನೆ ಬೆನ್ನಲ್ಲೇ ರಿಸೈನ್
ಮಗ ಲಂಚ ಸ್ವೀಕರಿಸಿ ಸಿಕ್ಕಿಬಿದ್ದ ಬೆನ್ನಲ್ಲೇ ಮಾಡಾಳು ವಿರೂಪಾಕ್ಷಪ್ಪ ಅವರು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ನೀಡಿದ ಬೆನ್ನಲ್ಲೇ ಮಾಡಾಳು ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
3. ಪರಾರಿಯಾಗಿರುವ ಮಾಡಾಳು ವಿರೂಪಾಕ್ಷಪ್ಪ, ಬಂಧನಕ್ಕಾಗಿ ಹುಡುಕುತ್ತಿರುವ ಪೊಲೀಸ್
ಕೆಎಸ್‌ಡಿಎಲ್ ಲಂಚ ಪ್ರಕರಣದಲ್ಲಿ ಮೊದಲ ಆರೋಪಿ ಎಂದು ಗುರುತಿಸಲಾಗಿರುವ ಚನ್ನಗಿರಿಯ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರು ತಲೆಮರೆಸಿಕೊಂಡಿದ್ದು, ಅವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಗುರುವಾರ ರಾತ್ರಿ ಪುತ್ರನ ಮೇಲೆ ಲೋಕಾಯುಕ್ತ ದಾಳಿ ನಡೆದ ಬೆನ್ನಿಗೇ ಅವರು ಚನ್ನಗಿರಿಯ ತಮ್ಮ ನಿವಾಸದಿಂದ ಇನ್ನೊಬ್ಬ ಪುತ್ರ ಮಲ್ಲಿಕಾರ್ಜುನ್ ಅವರ ಜತೆಗೆ ಕಾರಿನಲ್ಲಿ ತೆರಳಿದ್ದು ಎಲ್ಲಿಗೆ ಹೋಗಿದ್ದಾರೆ ಎನ್ನುವುದು ಗೊತ್ತಾಗಿಲ್ಲ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
4. ಮಾಡಾಳ್ ವಿರೂಪಾಕ್ಷಪ್ಪ, ಬಿ.ಎಸ್.ವೈ ಅವರ ಆಪ್ತ ವಲಯದಲ್ಲಿರುವವರು: ಮಾಜಿ ಸಿಎಂ ಸಿದ್ದರಾಮಯ್ಯ
ಬೆಳಗಾವಿ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹಿರಿಯ ಸದಸ್ಯನಾಗಿದ್ದು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವವರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಾಡಾಳ್ ವಿರೂಪಾಕ್ಷ ಪುತ್ರ ಪ್ರಶಾಂತ್ ಮೇಲೆ ಲೋಕಾಯುಕ್ತ ದಾಳಿ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
5. Pulse of Karnataka : ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಯಾರಿಗೆ ಮಣೆ?
2023ರ ವಿಧಾನಸಭಾ ಚುನಾವಣೆಯಲ್ಲಿ ಯಾವ ಕ್ಷೇತ್ರದಲ್ಲಿ ಯಾರ ಹವಾ ಇದೆ..? ವಲಯವಾರು ಯಾವ ರಿಸಲ್ಟ್ ಬರಬಹುದು..? ಹೀಗೆ ಒಟ್ಟು 13 ಪ್ರಶ್ನೆಗಳನ್ನು ರಾಜ್ಯದ ಜನತೆಯ ಮುಂದಿಟ್ಟು ನಾಡಿಮಿಡಿತವನ್ನ ಅರಿಯುವ ಪ್ರಯತ್ನವನ್ನು ವಿಸ್ತಾರ ನ್ಯೂಸ್ ನಡೆಸಿದೆ. ಅದರ ಫಲವೇ ಪಲ್ಸ್ ಆಫ್ ಕರ್ನಾಟಕ ಸಮೀಕ್ಷೆ.
ವಿಸ್ತಾರ-ಅಖಾಡಾ ಸಮೀಕ್ಷೆ: ಕಿತ್ತೂರು ಕರ್ನಾಟಕ: ಹಿಂದುತ್ವ ಅಲೆಯ ನಡುವೆ ಸಿದ್ದರಾಮಯ್ಯ ಪ್ರಸಿದ್ಧಿ ಹೇಗಿದೆ?
ವಿಸ್ತಾರ-ಅಖಾಡಾ ಸಮೀಕ್ಷೆ: ಕಲ್ಯಾಣ ಕರ್ನಾಟಕ: ರೆಡ್ಡಿ ಭವಿಷ್ಯವೇನು? ಇದು ಬಿಜೆಪಿಗೆ ಹೆಚ್ಚು ನಷ್ಟ ತರುತ್ತದೆಯೇ?
6. BJP Rathayatre : ಜೆಡಿಎಸ್‌ನ್ನು ಗೆಲ್ಲಿಸ್ಬೇಡಿ, ಅವರು ಹೋಗಿ ಕಾಂಗ್ರೆಸ್ ಜತೆ ಸೇರಿಕೊಳ್ತಾರೆ ಅಂದ ಅಮಿತ್ ಶಾ
ನೀವು ಅಭಿವೃದ್ಧಿಗೆ ಮತ ಕೊಡ್ತೀರೋ? ಕುಟುಂಬ, ಪರಿವಾರ ಕೇಂದ್ರೀಕೃತವಾಗಿರುವ ಪಕ್ಷಗಳಿಗೆ ಮತ ಕೊಡುತ್ತೀರೋ? ನೀವು ಜೆಡಿಎಸ್‌ಗೆ ಏನಾದರೂ ಮತ ಕೊಟ್ಟರೆ, ಅವರಿಗೆ 25-30 ಸೀಟು ತಗೊಂಡು ಭ್ರಷ್ಟಾಚಾರಿ ಕಾಂಗ್ರೆಸ್ ಜತೆಗೆ ಸೇರಿಕೊಳ್ಳುತ್ತಾರೆ.. ಈ ಬಗ್ಗೆ ಎಚ್ಚರವಿರಲಿ: ಹೀಗೆಂದು ಹೇಳಿದರು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ದೇವನಹಳ್ಳಿಯಲ್ಲಿ ಶುಕ್ರವಾರ ಬಿಜೆಪಿ ವಿಜಯಸಂಕಲ್ಪ 4ನೇ ಯಾತ್ರೆ ಉದ್ಘಾಟಿಸಿ ಮಾತನಾಡಿದರು. ಅವರು ಬೀದರ್‌ನ ಬಸವಕಲ್ಯಾಣದಲ್ಲಿ 3ನೇ ರಥಯಾತ್ರೆಗೂ ಚಾಲನೆ ನೀಡಿದ್ದರು. ಪೂರ್ಣ ವರದಿಗೆ ಕ್ಲಿಕ್ ಮಾಡಿ
7. ಹೌದು ನಾನು ಸಿಎಂ ಸ್ಥಾನದ ಆಕಾಂಕ್ಷಿ, ಇದರಲ್ಲೇನಾದರೂ ತಪ್ಪಿದೆಯಾ ಎಂದು ಕೇಳಿದ ಸಿದ್ದರಾಮಯ್ಯ
ʻʻಹೌದು ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ, ಈಸ್ ಇಟ್ ಆ್ಯನಿ ರಾಂಗ್?ʼʼ-ಹೀಗೆಂದು ನೇರವಾಗಿ ಪ್ರಶ್ನೆ ಮಾಡಿದರು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ. ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕೆಲವು ಕಡೆ ʻʻನಾನು ಮುಖ್ಯಮಂತ್ರಿಯಾಗಲು ಅವಕಾಶ ಕೊಡಿʼ ಎಂದು ಮನವಿ ಮಾಡಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಹೇಳಿಕೆ ಮಹತ್ವ ಪಡೆದಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
8. ಬೆಂಗಳೂರಿನಲ್ಲೇ ಆ್ಯಪಲ್ ಫೋನ್ ನಿರ್ಮಾಣ, 300 ಎಕರೆಯಲ್ಲಿ ಫಾಕ್ಸ್‌ಕಾನ್ ಘಟಕ, ಚೀನಾಗೆ ಹಿನ್ನಡೆ
ಬೆಂಗಳೂರು: ಚೀನಾ ಮತ್ತು ಅಮೆರಿಕ ಮಧ್ಯೆ ಸಂಘರ್ಷ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆ್ಯಪಲ್ ಕಂಪನಿಯು ತನ್ನ ಉತ್ಪಾದನಾ ಚಟುವಟಿಕೆಗಳನ್ನು ಚೀನಾದಿಂದ ಭಾರತಕ್ಕೆ ಶಿಫ್ಟ್ ಮಾಡುತ್ತಿದೆ. ಆ್ಯಪಲ್ ಫೋನ್‌ಗಳನ್ನು ಸ್ಥಳೀಯವಾಗಿ ಉತ್ಪಾದಿಸುವ ಪಾಲುದಾರ ಕಂಪನಿಯಾಗಿರುವ ಫಾಕ್ಸ್‌ಕಾನ್ ಟೆಕ್ನಾಲಜಿ ಗ್ರೂಪ್ ಬೆಂಗಳೂರು ವಿಮಾನ ನಿಲ್ದಾಣದ ಬಳಿ ಸುಮಾರು 300 ಎಕರೆ ಪ್ರದೇಶದಲ್ಲಿ ಉತ್ಪಾದನಾ ಘಟಕ ಆರಂಭಿಸಲಿದೆ. ಇದಕ್ಕಾಗಿ ಸುಮಾರು 700 ಮಿಲಿಯನ್ ಡಾಲರ್ ಹೂಡಿಕೆ ಮಾಡಲಿದೆ ಎಂದು ಬ್ಲೂಮ್‌ಬರ್ಗ್ ವರದಿ ಮಾಡಿದೆ. ಪೂರ್ಣ ವರದಿಗೆ ಕ್ಲಿಕ್ ಮಾಡಿ
9. ಭಾರತದ ಪ್ರಜಾಪ್ರಭುತ್ವ ಅಪಾಯದಲ್ಲಿದೆ; ಕೇಂಬ್ರಿಡ್ಜ್ ವಿವಿಯಲ್ಲಿ ರಾಹುಲ್ ಗಾಂಧಿ ವಿವಾದಿತ ಮಾತು
ನವ ದೆಹಲಿ: ಭಾರತ್ ಜೋಡೋ ಯಾತ್ರೆ ಹೆಸರಿನಲ್ಲಿ 4000 ಕಿಮೀ ಹೆಚ್ಚಿನ ದೂರ ಪಾದಯಾತ್ರೆ ನಡೆಸಿದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸದ್ಯ ಲಂಡನ್ ಪ್ರವಾಸದಲ್ಲಿದ್ದಾರೆ. ಅವರು ಅಲ್ಲಿನ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸ ನೀಡಿದ್ದಾರೆ. ಈ ವೇಳೆ ಅವರು ಭಾರತ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಹೇಳಿದ್ದು, ಈ ಬಗ್ಗೆ ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದೆ. ರಾಹುಲ್ ಗಾಂಧಿಯನ್ನು ಟೀಕಿಸಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
10. ಧೋನಿ, ಶಿಲ್ಪಾ ಶೆಟ್ಟಿ ಹೆಸರಲ್ಲಿ ಪ್ಯಾನ್ ಕಾರ್ಡ್ ಸೃಷ್ಟಿಸಿ, ಕ್ರೆಡಿಟ್ ಕಾರ್ಡ್ ಪಡೆದು ಲಕ್ಷಾಂತರ ರೂ. ವಂಚನೆ
ನವದೆಹಲಿ: ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ, ಬಾಲಿವುಡ್ ನಟರಾದ ಅಭಿಷೇಕ್ ಬಚ್ಚನ್, ಶಿಲ್ಪಾ ಶೆಟ್ಟಿ ಸೇರಿ ಹಲವು ಸೆಲೆಬ್ರಿಟಿಗಳ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣವನ್ನು ದೆಹಲಿಯಲ್ಲಿ ಪೊಲೀಸರು ಭೇದಿಸಿದ್ದಾರೆ. ಆನ್‌ಲೈನ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಐವರು ಆರೋಪಿಗಳನ್ನು ಬಂಧಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ