1. Union Budget 2023: ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಈ ಬಾರಿ 7561 ಕೋಟಿ ರೂ.! ಇದು ದಾಖಲೆಯ ಅನುದಾನ
ಈ ಬಾರಿ ಕರ್ನಾಟಕದ (Karnataka) ರೈಲ್ವೇ ಯೋಜನೆಗಳಿಗಾಗಿ (Indian Railway) ಬಜೆಟ್‌ನಲ್ಲಿ (Union Budget 2023) ಅತ್ಯಧಿಕ ಹಣವನ್ನು ಹಂಚಿಕೆ ಮಾಡಲಾಗಿದೆ. ಒಟ್ಟು 7561 ಕೋಟಿ ರೂ. ಮೀಸಲಿಡಲಾಗಿದೆ. ಇದು ಈ ಹಿಂದೆ ನೀಡುತ್ತಿದ್ದ ಮೊತ್ತಕ್ಕೆ ಹೋಲಿಸಿದರೆ, 9 ಪಟ್ಟು ಹೆಚ್ಚು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಅವರು ತಿಳಿಸಿದ್ದಾರೆ. ಮುಂದಿನ ಎರಡು ತಿಂಗಳಲ್ಲಿ ಕರ್ನಾಟಕದ ವಿಧಾನಸಭೆಗೆ ಚುನಾವಣೆ ನಡೆಯಲಿರುವುದರಿಂದ, ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಕೇಂದ್ರ ಬಜೆಟ್ನಲ್ಲಿ ಕರ್ನಾಟಕಕ್ಕೆ ವಿಶೇಷ ಮುತುವರ್ಜಿ ವಹಿಸಲಾಗಿದೆ. ಅದೇ ರೀತಿ, ರೈಲ್ವೆ ಯೋಜನೆಗಳಿಗೂ ಹೆಚ್ಚಿನ ಹಣವನ್ನು ಎತ್ತಿಡಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಹೆಚ್ಚಿನ ಓದಿಗಾಗಿ: Budget 2023 : ಕೇಂದ್ರ ಬಜೆಟ್ನಲ್ಲಿ ಕರ್ನಾಟಕಕ್ಕೆ ಗರಿಷ್ಠ ಅನುದಾನ ನೀಡಲಾಗಿದೆ: ಅರುಣ್ ಸಿಂಗ್
2. Parliament Session: ಬಜೆಟ್ ಅಧಿವೇಶನಕ್ಕೆ ಅದಾನಿ ಅಡ್ಡಿ; ಎರಡೂ ಸದನಗಳ ಕಲಾಪ ಫೆ.6ಕ್ಕೆ ಮುಂದೂಡಿಕೆ
ಅದಾನಿ ಸಮೂಹವು ಷೇರು ವ್ಯವಹಾರದಲ್ಲಿ ಅಕ್ರಮ ಎಸಗಿದೆ ಎಂದು ಅಮೆರಿಕ ಮೂಲದ ಹಿಂಡೆನ್ಬರ್ಗ್ ಸಂಶೋಧನಾ ಸಂಸ್ಥೆ ವರದಿ ಮಾಡಿದ ಬೆನ್ನಲ್ಲೇ, ಆ ಸಮೂಹದ ಷೇರು ದೊಡ್ಡಮಟ್ಟದಲ್ಲಿ ಕುಸಿತವಾಗಿದೆ. ಪ್ರಸಕ್ತ ಸಾಲಿನ ಬಜೆಟ್ ಅಧಿವೇಶನದಲ್ಲಿ (Parliament Session) ಇದೇ ವಿಷಯವೀಗ ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತಿದೆ. ಜನವರಿ 31ರಂದು ಬಜೆಟ್ ಅಧಿವೇಶನ ಪ್ರಾರಂಭವಾಗಿ, ಫೆ.1ರಂದು ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಿದ್ದಾರೆ. ಅದರ ಮರುದಿನದಿಂದಲೂ ಸಂಸತ್ತಿನಲ್ಲಿ ಅದಾನಿ ವಿಷಯವನ್ನೇ ಇಟ್ಟುಕೊಂಡು ಪ್ರತಿಪಕ್ಷಗಳು ಗದ್ದಲ ಎಬ್ಬಿಸುತ್ತಿವೆ. ತತ್ಪರಿಣಾಮ ಲೋಕಸಭೆ ಮತ್ತು ರಾಜ್ಯಸಭೆ ಕಲಾಪವನ್ನು ಫೆ.6ರವರೆಗೆ ಮುಂದೂಡಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
3. Adani Group shares : ಅದಾನಿ ಷೇರುಗಳಲ್ಲಿ ಹೂಡಿಕೆಯಿಂದ ಎಸ್‌ಬಿಐ, ಎಲ್‌ಐಸಿಗೆ ಈಗಲೂ ಲಾಭ : ನಿರ್ಮಲಾ ಸೀತಾರಾಮನ್
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಅದಾನಿ ಬಿಕ್ಕಟ್ಟಿನ ಬಗ್ಗೆ ಪ್ರತಿಕ್ರಿಯಿಸಿದ್ದು, ಷೇರುಗಳ ಮೌಲ್ಯ ಕುಸಿತದ ಬಳಿಕವೂ ಎಲ್‌ಐಸಿ, ಎಸ್‌ಬಿಐಗೆ ಲಾಭವಾಗಿದೆ ಎಂದು ತಿಳಿಸಿದ್ದಾರೆ. ಅದಾನಿ ಗ್ರೂಪ್ ಷೇರುಗಳಲ್ಲಿ (Adani Group shares) ಎಸ್‌ಬಿಐ ಮತ್ತು ಎಲ್‌ಐಸಿಯ ಹೂಡಿಕೆಗಳು ನಿಗದಿಯ ಮಿತಿಯೊಳಗೆಯೇ ಇದ್ದು, ಈಗಲೂ ಲಾಭದಾಯಕವಾಗಿದೆ ಎಂದು ಹೇಳಿದ್ದಾರೆ. ಎಸ್‌ಬಿಐ ಮತ್ತು ಎಲ್‌ಐಸಿ ವಿವರವಾದ ಹೇಳಿಕೆಗಳನ್ನು ಬಿಡುಗಡೆಗೊಳಿಸಿವೆ. ಎಸ್‌ಬಿಐ ಮುಖ್ಯಸ್ಥರು ಕೂಡ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
4. Ramesh Jarakiholi : ರಮೇಶ್ ಜಾರಕಿಹೊಳಿ ದೆಹಲಿ ಭೇಟಿ ಸಕ್ಸೆಸ್; ಅಮಿತ್ ಶಾ ಜತೆ 10 ನಿಮಿಷ ಚರ್ಚೆ, ಏನೆಲ್ಲಾ ಹೇಳಿದ್ರು?
ತನ್ನ ವಿರುದ್ಧದ ವಿವಾದಾತ್ಮಕ ಲೈಂಗಿಕ ಸಿಡಿ ಪ್ರಕರಣ ಡಿ.ಕೆ. ಶಿವಕುಮಾರ್ ಅವರ ಷಡ್ಯಂತ್ರದ ಫಲ ಎಂದು ಆಪಾದಿಸುತ್ತಿರುವ ರಮೇಶ್ ಜಾರಕಿಹೊಳಿ ಅವರು ಇದರ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಅದನ್ನು ಸಾಧಿಸುವುದಕ್ಕಾಗಿ ದೆಹಲಿಗೆ ಹೋಗಿರುವ ಅವರು, ಕೊನೆಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುವಲ್ಲಿ ಸಫಲರಾಗಿದ್ದಾರೆ. ಈ ಮೂಲಕ ಈ ಹೋರಾಟದಲ್ಲಿ ಮೊದಲ ಯಶಸ್ಸು ಸಿಕ್ಕಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
5. Prajadhwani : ಡಿ.ಕೆ. ಶಿವಕುಮಾರ್‌ಗೂ ಕೇರ್ ಮಾಡದ ರಮೇಶ್ ಕುಮಾರ್: ತವರು ಜಿಲ್ಲೆಯ ರ‍್ಯಾಲಿಗಳಿಗೆ ಗೈರಾದ ಮಾಜಿ ಸಚಿವ
ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷವನ್ನು ಸಜ್ಜುಗೊಳಿಸಲು ಆರಂಭಿಸಿರುವ ಪ್ರಜಾಧ್ವನಿ ಯಾತ್ರೆಯಲ್ಲಿ (Prajadhwani) ಯಾತ್ರೆಯಲ್ಲಿ ಒಡಕಿನ ಧ್ವನಿಗಳು ಗೋಚರಿಸಲು ಆರಂಭಿಸಿವೆ. ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೋಲಾರ ಜಿಲ್ಲೆಯಿಂದಲೇ ಪ್ರಜಾಧ್ವನಿಗೆ ಚಾಲನೆ ನೀಡಿದರೂ ಮಾಜಿ ಸಚಿವ ಹಾಗೂ ಸಿದ್ದರಾಮಯ್ಯ ಆಪ್ತ ಕೆ.ಆರ್. ರಮೇಶ್ ಕುಮಾರ್ ಗೈರಾಗಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
6. Administrative Reforms : 20 ಅಂಕ ಪಡೆದರೂ SSLC ಪಾಸ್; 3,457 ಕಿರಿಯ ಪ್ರಾಥಮಿಕ ಶಾಲೆಗಳ ವಿಲೀನ: ಆಡಳಿತ ಸುಧಾರಣಾ ವರದಿ ಶಿಫಾರಸು
ಶಾಲೆಯ ನಂತರ ಕಾಲೇಜಿಗೆ ತೆರಳುವ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸುವ ಸಲುವಾಗಿ, ಎಸ್‌ಎಸ್‌ಎಸ್‌ಎಲ್ ಸಿ ಪರೀಕ್ಷೆಯ ಥಿಯರಿ ಪರೀಕ್ಷೆಯಲ್ಲಿ 20 ಅಂಕ ಪಡೆದರೂ ಪಾಸ್ ಮಾಡಬಹುದು, ಶಾಲೆಯಿಂದ ಹೊರಗುಳಿಯುವ ಮಕ್ಕಳ ಸಂಖ್ಯೆಯನ್ನು ಕಡಿಮೆ ಮಾಡಲು 3,457 ಕಿರಿಯ ಪ್ರಾಥಮಿಕ ಶಾಲೆಗಳ ವಿಲೀನ ಮಾಡಬಹುದು ಎನ್ನುವುದೂ ಸೇರಿ ಅನೇಕ ಶಿಫಾರಸುಗಳನ್ನು ಕರ್ನಾಟಕ ಸರ್ಕಾರ ರಚಿಸಿದ್ದ ಎರಡನೇ ಆಡಳಿತ ಸುಧಾರಣಾ ಆಯೋಗ ಮಾಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಹೆಚ್ಚಿನ ಓದಿಗಾಗಿ: Administrative Reforms : ಮಕ್ಕಳಿಗೆ 5 ಮೊಟ್ಟೆ, ಸರ್ಕಾರಿ ವೈದ್ಯರ ಖಾಸಗಿ ʼಸೇವೆʼ ಬಂದ್, KPSC ಸದಸ್ಯರ ಕಡಿತ: ಆಡಳಿತ ಸುಧಾರಣಾ ವರದಿ ಶಿಫಾರಸು
7. Terror Threat: ಮುಂಬಯಿ ಮೇಲೆ ದಾಳಿ ನಡೆಸುವುದಾಗಿ ರಾಷ್ಟ್ರೀಯ ತನಿಖಾ ದಳಕ್ಕೆ ಬೆದರಿಕೆ ಸಂದೇಶ; ದೇಶದ ಎಲ್ಲ ಪ್ರಮುಖ ನಗರಗಳಲ್ಲೂ ಕಟ್ಟೆಚ್ಚರ
ಮುಂಬಯಿ ಮಹಾನಗರದಲ್ಲಿ ಭಯೋತ್ಪಾದಕ ದಾಳಿ ನಡೆಸುವುದಾಗಿ ರಾಷ್ಟ್ರೀಯ ತನಿಖಾ ದಳ (ಎನ್ಐಎ)ಕ್ಕೆ ಬೆದರಿಕೆ ಮೇಲ್ ಸಂದೇಶ ಬಂದಿದೆ. ಇ-ಮೇಲ್ ಕಳಿಸಿದಾತ ತನ್ನ ಹೆಸರು ಹೇಳಿಕೊಂಡಿಲ್ಲ, ಆದರೆ ತಾನು ತಾಲಿಬಾನ್ ಉಗ್ರ ಎಂದು ಹೇಳಿಕೊಂಡಿದ್ದಾನೆ. ತಮಗೆ ಬಂದ ಇ-ಮೇಲ್ ಸಂದೇಶವನ್ನು ರಾಷ್ಟ್ರೀಯ ತನಿಖಾ ದಳ ಪೊಲೀಸರ ಗಮನಕ್ಕೆ ತಂದಿದೆ. ಅದರ ಬೆನ್ನಲ್ಲೇ ಮುಂಬಯಿ ಸೇರಿ, ಮಹಾರಾಷ್ಟ್ರದ ಹಲವು ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಅಷ್ಟೇ ಅಲ್ಲ, ಬೆಂಗಳೂರು ಸೇರಿ ದೇಶದ ಎಲ್ಲ ಮಹಾನಗರಗಳಲ್ಲೂ ಪೊಲೀಸ್ ಕಣ್ಗಾವಲು ಇಡಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಹೆಚ್ಚಿನ ಓದಿಗಾಗಿ: Ayodhya Ram Mandir: ಅಯೋಧ್ಯೆ ರಾಮಮಂದಿರ ಸ್ಫೋಟಿಸುವುದಾಗಿ ಬೆದರಿಕೆ; ಭದ್ರತೆಗೆ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜನೆ
8. Viral Video: ಪಾಕಿಸ್ತಾನವನ್ನೇ ಪುಡಿಗಟ್ಟುತ್ತಿದ್ದಾರೆ ಭಯೋತ್ಪಾದಕರು; ಕರಾಚಿ ಮಸೀದಿಯ ಮೇಲೆ ಹತ್ತಿ ಮಿನಾರ್ಗಳ ಧ್ವಂಸ
ತೀವ್ರವಾದ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಪಾಕಿಸ್ತಾನಕ್ಕೆ, ಆ ದೇಶವೇ ಹುಟ್ಟಿಸಿದ ಉಗ್ರರೂ ಭೂತಗಳಂತೆ ಕಾಡುತ್ತಿದ್ದಾರೆ. ಜನವರಿ 30ರಂದು ಪೇಷಾವರ ಮಸೀದಿ ಮೇಲೆ ಬಾಂಬ್ ದಾಳಿಯಾಗಿ 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಈ ದಾಳಿಯ ಹೊಣೆಯನ್ನು ತೆಹ್ರೀಕ್ ಇ ತಾಲಿಬಾನ್ ಪಾಕಿಸ್ತಾನ (ಟಿಟಿಪಿ) ಉಗ್ರ ಸಂಘಟನೆ ಹೊತ್ತುಕೊಂಡಿತ್ತು. ಅದರ ಬೆನ್ನಲ್ಲೇ ಇನ್ನೊಂದು ಉಗ್ರ ಸಂಘಟನೆ ತೆಹ್ರೀಕ್-ಇ-ಲಬ್ಬೈಕ್ ಪಾಕಿಸ್ತಾನ (TLP terrorists)ದ ಭಯೋತ್ಪಾದಕರು ಈಗ ಕರಾಚಿಯಲ್ಲಿರುವ ಅಹ್ಮದಿ ಮಸೀದಿಯ ಗೋಪುರಸ್ತಂಭಗಳನ್ನೆಲ್ಲ ಧ್ವಂಸ ಮಾಡಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
9. Bangalore traffic: ಬೆಂಗಳೂರು ಟ್ರಾಫಿಕ್‌ಗೆ ಬಲಿಯಾದ ಕಂದಮ್ಮ, ಆಂಬ್ಯುಲೆನ್ಸ್‌ನಲ್ಲೇ ಹೋದ ಜೀವ
ಬೆಂಗಳೂರಿನ ಟ್ರಾಫಿಕ್‌ನಿಂದಾಗಿ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಒಂದೂವರೆ ವರ್ಷದ ಎಳೆಯ ಕಂದ ಆಂಬ್ಯುಲೆನ್ಸ್‌ನಲ್ಲೇ ಮೃತಪಟ್ಟ ಘಟನೆ ನೆಲಮಂಗಲದಲ್ಲಿ ನಡೆದಿದೆ. ಮಗುವಿನ ತಂದೆ ತಾಯಿ ಸಹ ಆಸ್ಪತ್ರೆಯಲ್ಲಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
10. BBC Documentary : ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರಸಾರ ನಿಷೇಧ, ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್
2002ರಲ್ಲಿ ನಡೆದಿದ್ದ ಗೋದ್ರಾ ಹತ್ಯಾಕಾಂಡದಲ್ಲಿ ನರೇಂದ್ರ ಮೋದಿಯವರು ತಪ್ಪಿತಸ್ಥರು ಎಂಬಂತೆ ಬಿಂಬಿಸಿ ಚಿತ್ರಿಸಿರುವ ಬಿಬಿಸಿ ಡಾಕ್ಯುಮೆಂಟರಿ(BBC Documentary) ಪ್ರಸಾರಕ್ಕೆ ಕೇಂದ್ರ ಸರ್ಕಾರ ವಿಧಿಸಿರುವ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಸುಪ್ರೀಂಕೋರ್ಟ್, ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಶುಕ್ರವಾರ ನೋಟಿಸ್ ಜಾರಿಗೊಳಿಸಿದೆ. ತನ್ನ ಆದೇಶಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರ, ಮೂಲ ದಾಖಲಾತಿಗಳನ್ನು ಸಲ್ಲಿಸಬೇಕು ಎಂದಿರುವ ಸುಪ್ರೀಂಕೋರ್ಟ್, 2023ರ ಏಪ್ರಿಲ್‌ನಲ್ಲಿ ಮುಂದಿನ ವಿಚಾರಣೆ ನಡೆಸಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಮತ್ತಷ್ಟು ಪ್ರಮುಖ ಸುದ್ದಿಗಳಿವು
- Mysuru Bengaluru Expressway Toll : ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇ ಟೋಲ್ ಸಂಗ್ರಹ ಫೆ.15ರಿಂದ ಆರಂಭ
- Murder Case: ಮಂಗಳೂರು ಜ್ಯುವೆಲ್ಲರಿಗೆ ನುಗ್ಗಿ ನೌಕರನಿಗೆ ಚಾಕು ಇರಿದು ಕೊಂದ ಮುಸುಕುಧಾರಿ
- BSF Recruitment 2023: ಬಿಎಸ್‌ಎಫ್‌ನ 1410 ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಬೇಹುಗಾರಿಕೆಗಾಗಿ ಅಮೆರಿಕಕ್ಕೆ ಬಲೂನ್ ಬಿಟ್ಟ ಚೀನಾ; ಹೊಡೆದುರುಳಿಸಲು ಹಿಂದೇಟು ಹಾಕುತ್ತಿರುವ ಪೆಂಟಗನ್!
- PSI Scam : ಪಿಎಸ್‌ಐ ಹಗರಣದ ಎಫ್‌ಐಆರ್, ಎಲ್ಲ ದಾಖಲೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಕೋರ್ಟ್ ಆದೇಶ
- ಮೊಗಸಾಲೆ ಅಂಕಣ: ಭದ್ರಾ ಮೇಲ್ದಂಡೆ: ರಾಜ್ಯದ ಮೊದಲ ಕೇಂದ್ರ ಯೋಜನೆ