ಕರ್ನಾಟಕ
ವಿಸ್ತಾರ TOP 10 NEWS: ಗ್ಯಾರಂಟಿಗೆ ಮುಗಿಬಿದ್ದ ಸಾರ್ವಜನಿಕರಿಂದ, ಸಂಪುಟ ವಿಸ್ತರಣೆ ಅಸಮಾಧಾನದವರೆಗಿನ ಪ್ರಮುಖ ಸುದ್ದಿಗಳಿವು
ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.
1. Congress Guarantee: ಕರೆಂಟ್ ಬಿಲ್ ಕೇಳಿದ್ರೆ ಕಟ್ಟಿ ಹಾಕ್ತೇವೆ; ಸಿದ್ದರಾಮಯ್ಯ ಸ್ಟೈಲಲ್ಲೇ ಡೈಲಾಗ್!
ಕಾಂಗ್ರೆಸ್ ಸರ್ಕಾರಕ್ಕೆ ಗ್ಯಾರಂಟಿ ಅಸ್ತ್ರ ತಲೆನೋವಾಗಿದೆ. 200 ಯುನಿಟ್ ಉಚಿತ ವಿದ್ಯುತ್, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೇರಿ 5 ಗ್ಯಾರಂಟಿಗಳನ್ನು (Congress Guarantee) ಸರ್ಕಾರ ಜಾರಿ ಮಾಡಬೇಕು ಎಂದು ವಿರೋಧ ಪಕ್ಷಗಳ ಜತೆಗೆ ಸಾರ್ವಜನಿಕರು ಕೂಡಾ ಒತ್ತಾಯಿಸುತ್ತಿದ್ದಾರೆ. ಅಲ್ಲದೆ ಕೆಲವೆಡೆ ಜನರು ಕರೆಂಟ್ ಬಿಲ್ ಕಟ್ಟಲು ಹಾಗೂ ಸಾರಿಗೆ ಬಸ್‌ಗಳಲ್ಲಿ ಟಿಕೆಟ್ ಪಡೆಯಲು ನಿರಾಕರಿಸುತ್ತಿರುವ ಘಟನೆಗಳು ನಡೆಯುತ್ತಿವೆ. ಇಂತಹ ಘಟನೆಗಳು ಶುಕ್ರವಾರವೂ ಕಂಡುಬಂದಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
2. H.D. Kumaraswamy: ಜೆಡಿಎಸ್ ವಿಸರ್ಜನೆ ಹೇಳಿಕೆಗೆ ಬದ್ಧ ಎಂದ ಎಚ್.ಡಿ. ಕುಮಾರಸ್ವಾಮಿ!
ಜೆಡಿಎಸ್ ಪಕ್ಷವನ್ನು ಎಂದು ವಿಸರ್ಜನೆ ಮಾಡುತ್ತೀರ ಎಂದು ಕಾಂಗ್ರೆಸ್ ನಾಯಕರು ಹಾಗೂ ಕಾಂಗ್ರೆಸ್ ಪಕ್ಷ ಟ್ವೀಟ್ ಮೂಲಕ ಪ್ರಶ್ನಿಸುತ್ತಿರುವುದರ ಕುರಿತು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಈ ಹಿಂದೆ ತಾವು ಪಕ್ಷ ವಿಸರ್ಜನೆ ಕುರಿತು ಆಡಿದ ಮಾತಿಗೆ ಬದ್ಧನಾಗಿದ್ದೇನೆ. ಆದರೆ ಕಾಂಗ್ರೆಸ್‌ನವರು ನನ್ನ ಮಾತನ್ನು ಸರಿಯಾಗಿ ಕೇಳಿಸಿಕೊಳ್ಳಬೇಕು ಎಂದಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಹೆಚ್ಚಿನ ಓದಿಗಾಗಿ: Congress Guarantee: ನಾನು ಕರೆಂಟ್ ಬಿಲ್ ಕಟ್ಟಲ್ಲ: ಮಾಜಿ ಸಚಿವ ಆರ್. ಅಶೋಕ್ ಘೋಷಣೆ
3. ನವದೆಹಲಿಯಲ್ಲಿ ಮುಗಿದ ಸಂಪುಟ ಸರ್ಕಸ್: ಶನಿವಾರ ಬೆಳಗ್ಗೆ ಪ್ರಮಾಣವಚನಕ್ಕೆ ಸಿದ್ಧತೆ
ಕಾಂಗ್ರೆಸ್ ಸರ್ಕಾರದಲ್ಲಿ ಮೊದಲ ಸಂಪುಟ ವಿಸ್ತರಣೆ ಕಸರತ್ತು ಪೂರ್ಣಗೊಂಡಿದ್ದು, ಶನಿವಾರ 22ರಿಂದ 24 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ದಿನಪೂರ್ತಿ ನವದೆಹಲಿಯಲ್ಲಿ ನಡೆದ ಬಿರುಸಿನ ಚಟುವಟಿಕೆಯಲ್ಲಿ ಸಚಿವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಆಯ್ಕೆ ಮಾಡಿಕೊಂಡು ಹೈಕಮಾಂಡನ್ನು ಒಪ್ಪಿಸಿದ್ದಾರೆ. ಇದೇ ವೇಳೆ ತಮಗೆ ಸಚಿವ ಸ್ಥಾನ ಸಿಗುವುದು ಅನುಮಾನ ಎಂದು ಮನಗಂಡಿರುವ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
4. RSS: ಸರ್ಕಾರಿ-ಅನುದಾನಿತ ಶಾಲೆ ಆವರಣದಲ್ಲಿ ಆರ್‌ಎಸ್‌ಎಸ್ ಚಟುವಟಿಕೆ ನಿಷೇಧ?: ಕಾಂಗ್ರೆಸ್ ಹೇಳಿದ್ದೇನು?
ಈಗಾಗಲೆ ಬಜರಂಗದಳ ನಿಷೇಧ, ಆರ್‌ಎಸ್‌ಎಸ್ ನಿಷೇಧದಂತಹ ಹೇಳಿಕೆಗಳ ಮೂಲಕ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ವಾಗ್ವಾದ ಜೋರಾಗಿದೆ. ಇದರ ನಡುವೆಯೇ ರಾಜ್ಯ ಸರ್ಕಾರದ ಶಾಲೆಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸುವ ಕುರಿತು ಕಾಂಗ್ರೆಸ್ ಹೇಳಿರುವುದು ಮತ್ತಷ್ಟು ಚರ್ಚೆಗೆ ಕಾರಣವಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
5. ಸೆಂಗೋಲ್ ಬಗ್ಗೆ ಪ್ರಧಾನಿ ಮೋದಿಗೆ ತಿಳಿಸಿದ್ದು ಈ ನಾಟ್ಯ ಕಲಾವಿದೆ; 2021ರಲ್ಲಿ ಅವರು ಬರೆದ ಪತ್ರದಲ್ಲೇನಿತ್ತು?
ಪ್ರಧಾನಿ ನರೇಂದ್ರ ಮೋದಿ (PM Modi) ಯವರು ಮೇ 28ರಂದು ಹೊಸ ಸಂಸತ್ ಭವನವನ್ನು (New Parliament) ಉದ್ಘಾಟನೆ ಮಾಡಲಿದ್ದಾರೆ. ನೂತನ ಸಂಸತ್ ಭವನದ ಉದ್ಘಾಟನೆ ನಿಮಿತ್ತ ಅಂದು ಮುಂಜಾನೆಯಿಂದಲೇ ಧಾರ್ಮಿಕ ಕಾರ್ಯಕ್ರಮಗಳು, ವಿವಿಧ ಸಮಾರಂಭಗಳು ನಡೆಯಲಿದೆ. ಜನಮಾನಸದಿಂದ ಮರೆಗೆ ಸೇರಿದ್ದ ಈ ರತ್ನಖಚಿತ ರಾಜದಂಡದ ಬಗ್ಗೆ ಪ್ರಧಾನಿ ಮೋದಿ ಗಮನಕ್ಕೆ ತಂದಿದ್ದು ಖ್ಯಾತ ಕ್ಲಾಸಿಕಲ್ ಡ್ಯಾನ್ಸರ್ ಪದ್ಮಾ ಸುಬ್ರಹ್ಮಣ್ಯಮ್. 2021ರಲ್ಲಿ ಇವರು ಪ್ರಧಾನಿ ಮೋದಿಯವರಿಗೆ ಒಂದು ಪತ್ರ ಬರೆದಿದ್ದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಹೆಚ್ಚಿನ ಓದಿಗಾಗಿ: New Parliament Building: ನೂತನ ಸಂಸತ್ ಭವನದ ವೈಭವ ಹೇಗಿದೆ? ಇಲ್ಲಿದೆ ಅದ್ಭುತ ವಿಡಿಯೊ!
6. Cooker Blast: ರಾಮನಗರದಲ್ಲಿ ಎಲೆಕ್ಷನ್ ಪ್ರಚಾರದ ವೇಳೆ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ರಾಮನಗರ ತಾಲೂಕಿನ ಕೂನಮುದ್ದನಹಳ್ಳಿ ಗ್ರಾಮದಲ್ಲಿ ಕುಕ್ಕರ್ ಸ್ಫೋಟಗೊಂಡು (Cooker Blast) ಬಾಲಕಿಯೊಬ್ಬಳು ಗಂಭೀರ ಗಾಯಗೊಂಡಿದ್ದಾಳೆ. ಮಹಾಲಕ್ಷ್ಮಿ (17) ಗಾಯಾಳು ಬಾಲಕಿ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
7. Contaminated Water: ಕಲುಷಿತ ನೀರು ಸೇವಿಸಿ ಬಾಲಕ ಸಾವು; ರಾಯಚೂರಿನಲ್ಲಿ 30ಕ್ಕೂ ಅಧಿಕ ಮಂದಿ ಅಸ್ವಸ್ಥ
ರಾಯಚೂರು ಜಿಲ್ಲೆಯಲ್ಲಿ ಕಲುಷಿತ ನೀರಿನಿಂದ (Contaminated Water) ಸಾವು-ನೋವುಗಳು ಹೆಚ್ಚುತ್ತಿವೆ. ಈಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಕಲುಷಿತ ನೀರು ಸೇವಿಸಿ ಬಾಲಕನೊಬ್ಬ ಮೃತಪಟ್ಟಿದ್ದಾನೆ. 30ಕ್ಕೂ ಹೆಚ್ಚು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
8. Mansoon 2023: ಮುಂಗಾರು ಪ್ರವೇಶ ಯಾವಾಗ? ರೈತರಿಗಿದೆಯೇ ಸಿಹಿ ಸುದ್ದಿ? ಇಲ್ಲಿದೆ ಹವಾಮಾನ ವರದಿ
ದೇಶದ ಹಲವೆಡೆ ಉತ್ತಮ ಮಳೆಯಾಗುವ ಮೂಲಕ ಧರೆ ತಂಪಾಗಿದೆ. ಸೂರ್ಯನ ಪ್ರತಾಪ ಕಡಿಮೆಯಾಗುತ್ತಿದೆ. ರೈತರು ಭೂಮಿ ಹದಗೊಳಿಸಿ, ಬಿತ್ತನೆಗೆ ಸಿದ್ಧವಾಗುವ ಲೆಕ್ಕದಲ್ಲಿದ್ದಾರೆ. ಇದರ ಮಧ್ಯೆಯೇ, ಮುಂಗಾರು ಮಳೆಯ (Mansoon 2023) ಪ್ರವೇಶ, ಮಳೆಯಾಗುವ ಪ್ರಮಾಣದ ಕುರಿತು ಹವಾಮಾನ ಇಲಾಖೆ ವರದಿ ನೀಡಿದೆ. ಈ ಬಾರಿ ಮೂರು ದಿನ ವಿಳಂಬವಾಗಿ ಅಂದರೆ, ಜೂನ್ 4ರಂದು ಮುಂಗಾರು ಕೇರಳ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
9. IPL 2023: ಫೈನಲ್ ಪಂದ್ಯಕ್ಕೂ ಮುನ್ನ ವರ್ಣರಂಜಿತ ಕಾರ್ಯಕ್ರಮ; ಯಾರೆಲ್ಲ ಭಾಗಿ?
16ನೇ ಆವೃತ್ತಿಯ ಐಪಿಎಲ್ಗೆ ಹೇಗೆ ವರ್ಣರಂಜಿತ ಚಾಲನೆ ನೀಡಲಾಗಿತ್ತೋ ಹಾಗೆಯೇ ಟೂರ್ನಿಯ ಅಂತ್ಯಕ್ಕೂ ಇದೇ ರೀತಿಯ ಅದ್ಧೂರಿ ಕಾರ್ಯಕ್ರಮದ ಮೂಲಕ ತೆರೆ ಎಳೆಯಲು ಬಿಸಿಸಿಐ ಎಲ್ಲ ಸಿದ್ಧತೆ ನಡೆಸಿದೆ. ಫೈನಲ್ ಪಂದ್ಯಕ್ಕೂ ಮುನ್ನ ನಡೆಯುವ ಈ ಸಮಾರೋಪ ಸಮಾರಂಭದಲ್ಲಿ ಖ್ಯಾತ ಗಾಯಕ ಡಿವೈನ್ ಮತ್ತು ನ್ಯೂಕ್ಲಿಯಾ ಅವರು ಕಾರ್ಯಕ್ರಮ ನೀಡಲಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
10. Viral Video: ಶಾಲಾ ಮಕ್ಕಳ ಎದುರೇ ಹೊಡೆದಾಡಿಕೊಂಡ ಪ್ರಿನ್ಸಿಪಾಲ್, ಟೀಚರ್! ಇಲ್ಲಿದೆ ನೋಡಿ ವಿಡಿಯೋ
ಮಕ್ಕಳಿಗೆ ಬುದ್ಧಿ ಹೇಳಬೇಕಾದ ಶಿಕ್ಷಕ/ಶಿಕ್ಷಕಿಯರೇ ಮಕ್ಕಳ ರೀತಿ ಜಗಳಮಾಡಿಕೊಂಡರೆ ಹೇಗೆ? ಹೌದು, ಬಿಹಾರದ ಪಾಟ್ನಾ (Patna) ಜಿಲ್ಲೆಯ ಕೌರಿಯಾ ಪಂಚಾಯ್ತಿಯ ಬಿಹ್ತಾ ಮಿಡ್ಲ್ ಸ್ಕೂಲ್‌ನಲ್ಲಿ (Bihta middle school) ಪ್ರಿನ್ಸಿಪಾಲ್ (Principal) ಮತ್ತು ಶಿಕ್ಷಕಿಯೊಬ್ಬರು (Teacher) ಮಕ್ಕಳ ರೀತಿಯಲ್ಲಿ ಮಣ್ಣಲ್ಲಿ ಹೊರಳಾಡಿ, ಜಗಳ ಮಾಡಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ(Viral Video). ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕ
Yadgiri News: ಪರಿಸರ ಸಂರಕ್ಷಣೆಗೆ ಇರಲಿ ಎಲ್ಲರ ಕಾಳಜಿ: ಸಂಗಮೇಶ ಉಪಾಸೆ
Yadgiri News: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಯಾದಗಿರಿ ಜಿಲ್ಲೆಯ ಕನಕ ವೃತ್ತದಲ್ಲಿರುವ ಮಹಾತ್ಮ ಗಾಂಧಿ ಉದ್ಯಾನವನದಲ್ಲಿ ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲಾಯಿತು.
ಯಾದಗಿರಿ: ವಿಶ್ವ ಪರಿಸರ ದಿನಾಚರಣೆಯ (World Environment Day) ಅಂಗವಾಗಿ ಸೋಮವಾರ ಜಿಲ್ಲೆಯ ಕನಕ ವೃತ್ತದಲ್ಲಿರುವ ಮಹಾತ್ಮ ಗಾಂಧಿ (Mahatma Gandhi) ಉದ್ಯಾನವನದಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಣೆ ಮಾಡಲಾಯಿತು.
ಶಾಂತಿ ಸದನ ಆಂಗ್ಲ ಮಾಧ್ಯಮ ಶಾಲೆ, ಪ್ರತೀಕ್ಷಾ ಸೇವಾ ಸಂಸ್ಥೆ, ನಗರಸಭೆ ಹಾಗೂ ಅರಣ್ಯ ಇಲಾಖೆ, ವಿಸ್ತಾರ ನ್ಯೂಸ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತ ಸಂಗಮೇಶ ಉಪಾಸೆ ಸಸಿ ನೆಡುವ ಮೂಲಕ ಚಾಲನೆ ನೀಡಿದರು.
ಇದನ್ನೂ ಓದಿ: ಸರ್ಕಾರಿ ಬಸ್ ಓಡಿಸಿದ ಖಾಸಗಿ ವ್ಯಕ್ತಿ; ಕ್ರೂಸರ್‌ಗೆ ಡಿಕ್ಕಿ, ತಪ್ಪಿತು ಭಾರೀ ಅನಾಹುತ
ಬಳಿಕ ಮಾತನಾಡಿದ ಅವರು, ಅರಣ್ಯ ನಾಶದಿಂದ ಈಗ ತಾಪಮಾನ ಹೆಚ್ಚಾಗುತ್ತಿದೆ. ಪ್ರತಿಯೊಬ್ಬರೂ ಪರಿಸರದ ಕಾಳಜಿ ತೊರಬೇಕಿದೆ. ಪ್ರತಿಯೊಬ್ಬರೂ ಮನೆ ಮುಂದೆ ಸಸಿ ನೆಡಬೇಕಿದೆ, ಸಸಿಗಳನ್ನು ನೆಟ್ಟು ಮರ ಗಿಡಗಳನ್ನು ಬೆಳೆಸಿ ಅರಣ್ಯ ಸಂಪತ್ತು ಹೆಚ್ಚಿಸಬೇಕು ಎಂದು ಕರೆ ನೀಡಿದರು.
ಇದೇ ವೇಳೆ ಶಾಂತಿ ಸದನ ಶಾಲೆಯ ಕಾರ್ಯದರ್ಶಿ ಬಸವಂತರೆಡ್ಡಿ, ಪ್ರತೀಕ್ಷಾ ಸೇವಾ ಸಂಸ್ಥೆಯ ಅಧ್ಯಕ್ಷ ಸಿದ್ದು ಪಾಟೀಲ, ಶಾಲೆ ಮಕ್ಕಳು ಹಾಗೂ ಪರಿಸರ ಪ್ರೇಮಿಗಳು ಸಸಿಗಳನ್ನು ನೆಟ್ಟರು.
ಇದನ್ನೂ ಓದಿ: Monsoon Forecast 2023 : ಹವಾಮಾನ ಇಲಾಖೆ VS ಸ್ಕೈಮೆಟ್; ಹೇಗಿರಲಿದೆ ಈ ಬಾರಿಯ ಮುಂಗಾರು ಮಳೆ?
ಕಾರ್ಯಕ್ರಮದಲ್ಲಿ ಮುಖಂಡರಾದ ಬಂದಪ್ಪ ಅರಳಿ, ಬನಶಂಕರ ಸಾಹುಕಾರ, ಸಿಎಂ ಶಿವಶರಣಪ್ಪ, ಶರಣು ಇಡ್ಲುರು, ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಸುರೇಶ ಶೆಟ್ಟಿ, ಆರೋಗ್ಯ ನಿರೀಕ್ಷಕರಾದ ಶರಣಮ್ಮ, ಸಿದ್ದಾರ್ಥ, ಮಹ್ಮದ್ ಸಲೀಂ, ವಿಶ್ವರಾಧ್ಯ ಗುತ್ತೇದಾರ, ಜ್ಞಾನೇಶ್ವರಿ ನಾಟೇಕಾರ್, ಮಲ್ಲಿಕಾರ್ಜುನ ಹಾಗೂ ಇತರರು ಪಾಲ್ಗೊಂಡಿದ್ದರು.
ಕರ್ನಾಟಕ
Lok Sabha Election 2024 : ಲೋಕಸಭೆಯಲ್ಲಿ ಕಾಂಗ್ರೆಸ್ ಮಣಿಸಲು ಬಿಜೆಪಿ-ಜೆಡಿಎಸ್ ಮೈತ್ರಿ ಪ್ರಸ್ತಾಪ!
BJP JDS alliance: ಮುಂದಿನ ವರ್ಷದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕಾಂಗ್ರೆಸ್ ಅನ್ನು ಮಣಿಸಲು ಬಿಜೆಪಿ ಮಾಸ್ಟರ್ ಪ್ಲ್ಯಾನ್ ಒಂದನ್ನು ಸಿದ್ಧ ಮಾಡಿಕೊಂಡಿದೆ ಎನ್ನಲಾಗಿದ್ದು, ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡು “ಕೈ”ಗೆ ಪೆಟ್ಟುಕೊಡಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ (Congress-JDS) ಮೈತ್ರಿ ಮಾಡಿಕೊಂಡು ಬಿಜೆಪಿ ವಿರುದ್ಧ ಸ್ಪರ್ಧೆ ಮಾಡಿದ್ದವು. ಆದರೆ, ಕೊನೆಯಲ್ಲಿ ಈ ಎರಡೂ ಪಕ್ಷಗಳು ತಲಾ 1 ಸ್ಥಾನವನ್ನು ಗೆದ್ದುಕೊಂಡರೆ ಉಳಿದ 25 + 1 ಸ್ಥಾನವನ್ನು ಬಿಜೆಪಿ ಮತ್ತು ಬೆಂಬಲಿತ ಅಭ್ಯರ್ಥಿಗೆ ಜಯ ಒಲಿದಿತ್ತು. ಆದರೆ, ಈ ಬಾರಿ ಈ ಚಿತ್ರಣವೇ ಉಲ್ಟಾ ಆಗುವ ಲಕ್ಷಣಗಳು ಕಾಣುತ್ತಿದ್ದು, 2024ರ ಲೋಕಸಭಾ ಚುನಾವಣೆಗೆ (Lok Sabha Election 2024) ಕಾಂಗ್ರೆಸ್ ಅನ್ನು ಮಣಿಸಲು ಜೆಡಿಎಸ್ ಜತೆಗೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ಲೆಕ್ಕಾಚಾರಗಳೂ ಈ ಪಕ್ಷಗಳಲ್ಲಿ ನಡೆಯುತ್ತಿವೆ ಎಂಬ ಗುಸು ಗುಸು ಪ್ರಾರಂಭವಾಗಿದೆ.
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬಂದಿದೆ. 135 ಸ್ಥಾನಗಳನ್ನು ಗೆದ್ದು ಬೀಗಿದೆ. ಅಲ್ಲದೆ, ಈಗಾಗಲೇ ಘೋಷಿಸಿದಂತೆ 5 ಗ್ಯಾರಂಟಿಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ. ಈಗಾಗಲೇ ಆದೇಶವನ್ನೂ ಹೊರಡಿಸಿದೆ. ಜತೆಗೆ ಮುಂದಿನ ಲೋಕಸಭೆ ಚುನಾವಣೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಮುಂದಡಿ ಇಡುತ್ತಿದೆ. ಪ್ರತಿಯೊಂದು ಹೆಜ್ಜೆಯನ್ನೂ ಈ ನಿಟ್ಟಿನಲ್ಲಿ ಇಡಲಾಗುತ್ತಿದೆ. ಹೀಗಾಗಿ ಮುಂದಿನ ವರ್ಷ ಬರುವ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನವನ್ನು ಗೆಲ್ಲುವ ಟಾರ್ಗೆಟ್ ಅನ್ನು ಕೈ ಪಕ್ಷ ಇಟ್ಟುಕೊಂಡಿದೆ.
ಎದುರೇಟು ಕೊಡಲು ಮಾಸ್ಟರ್ ಪ್ಲ್ಯಾನ್?
ಕಾಂಗ್ರೆಸ್‌ನ ಈ ಟಾರ್ಗೆಟ್‌ಗೆ ಎದುರೇಟು ಕೊಡಲು ಬಿಜೆಪಿ, ಜೆಡಿಎಸ್ ಪಕ್ಷಗಳ ನಡುವೆ ಮಾತುಕತೆ ನಡೆದಿದೆ. ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಎರಡಂಕಿ ದಾಟದಂತೆ ನೋಡಿಕೊಳ್ಳಲು ಮಾಸ್ಟರ್ ಪ್ಲ್ಯಾನ್ ಅನ್ನೇ ಹೆಣೆಯಲಾಗಿದೆ. 2019ರಲ್ಲಿ ಒಂದು ಸ್ಥಾನವನ್ನು ಮಾತ್ರ ಗೆದ್ದಿರುವ ಕಾಂಗ್ರೆಸ್, ಈ ಬಾರಿ ಶತಾಯಗತಾಯ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸದಲ್ಲಿದೆ. ಅಲ್ಲದೆ, ತನ್ನ ಟಾರ್ಗೆಟ್ ಕ್ಷೇತ್ರಗಳಲ್ಲಿ ಆ ನಿಟ್ಟಿನಲ್ಲಿ ಕೆಲವು ಸೂಚನೆಗಳನ್ನೂ ನೀಡಿದೆ ಎನ್ನಲಾಗಿದೆ. ಇದನ್ನು ತಡೆಯಲು ಈಗ ಬಿಜೆಪಿ ಪ್ಲ್ಯಾನ್ ಮಾಡಿದೆ.
ಇದನ್ನೂ ಓದಿ: Free Electricity: ಹೊರಬಿತ್ತು ಗೃಹ ಜ್ಯೋತಿ ಮಾರ್ಗಸೂಚಿ; ಬಾಡಿಗೆದಾರನಿಗಿಲ್ಲ ಉಚಿತ ವಿದ್ಯುತ್?
ಏನಿದೆ ಲೆಕ್ಕಾಚಾರದ ಸೂತ್ರ?
ಹಳೇ ಮೈಸೂರು ಭಾಗದಲ್ಲಿ ಮಾತ್ರ ಜೆಡಿಎಸ್‌ಗೆ ಶಕ್ತಿ ಇದೆ. ಹೀಗಾಗಿ ಇಲ್ಲಿ ಕ್ಷೇತ್ರ ಹಂಚಿಕೆಯ ಸೂತ್ರವನ್ನು ಅನುಸರಿಸಲಾಗುತ್ತಿದೆ. ಅಂದರೆ, ಮಂಡ್ಯ, ಹಾಸನ, ತುಮಕೂರು ಮೂರು ಕ್ಷೇತ್ರ ಬಿಟ್ಟು ಕೊಟ್ಟರೆ ಮೈತ್ರಿಗೆ ಸಿದ್ಧ ಎಂದು ಜೆಡಿಎಸ್ ಹೇಳಿಕೊಂಡಿದೆ ಎಂದು ಹೇಳಲಾಗುತ್ತಿದೆ. ಆದರೆ, ಮೂರು ಕ್ಷೇತ್ರಗಳಲ್ಲಿ ಬಿಜೆಪಿ ತನ್ನದೇ ಆದ ಮತ ಬ್ಯಾಂಕ್ ಅನ್ನು ಹೊಂದಿದೆ. ಹೀಗಾಗಿ ಹೈಕಮಾಂಡ್ ಮಟ್ಟದಲ್ಲಿ ಇದಕ್ಕೆ ಸಮ್ಮತಿ ಸಿಕ್ಕರೆ ಕಾಂಗ್ರೆಸ್‌ಗೆ ಮೈತ್ರಿ ಪಕ್ಷಗಳನ್ನು ಎದುರಿಸುವ ಸವಾಲು ತಲೆದೋರಲಿದೆ.
ಕರ್ನಾಟಕ
Raichur News: ವಿಶ್ವ ಪರಿಸರ ದಿನಾಚರಣೆಯಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆಗೆ ಕಡಿವಾಣಕ್ಕೆ ವಿಶೇಷ ಜಾಗೃತಿ
Raichur News: ರಾಯಚೂರು ಜಿಲ್ಲೆಯ ರಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಸೋಮವಾರ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಸಸಿ ನೆಡುವುದರ ಜತೆಗೆ ಪ್ಲಾಸ್ಟಿಕ್ ವಸ್ತುಗಳ ಬಳಕೆಗೆ ಕಡಿವಾಣ ಹಾಕುವ ಕುರಿತು ವಿಶೇಷ ಜಾಗೃತಿ ಮೂಡಿಸಲಾಯಿತು.
ರಾಯಚೂರು: ಜಿಲ್ಲೆಯ ರಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಸೋಮವಾರ ವಿಶ್ವ ಪರಿಸರ ದಿನಾಚರಣೆ (World Environment Day) ಅಂಗವಾಗಿ ಸಸಿ ನೆಡುವ ಮೂಲಕ ಪರಿಸರ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ, ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ, ಗ್ರೀನ್ ರಾಯಚೂರು, ಶಿಲ್ಪಾ ಫೌಂಡೇಶನ್, ಪರ್ಯಾವರಣ ಸಂರಕ್ಷಣ ಗತಿವಿಧಿ ಸಂಸ್ಥೆ, ವಿಸ್ತಾರ ನ್ಯೂಸ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ನೀರು ಹಾಕುವ ಮೂಲಕ ಪರಿಸರ ದಿನಾಚರಣೆ ಆಚರಿಸಲಾಯಿತು. ಇದೇ ವೇಳೆ ಪ್ಲಾಸ್ಟಿಕ್ ವಸ್ತುಗಳ ಬಳಕೆಗೆ ಕಡಿವಾಣ ಹಾಕುವ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಇದನ್ನೂ ಓದಿ: NIRF Ranking 2023 : ಬೆಂಗಳೂರು ಐಐಎಸ್‌ಸಿ ಸೆಕೆಂಡ್; ಲಾ ಮತ್ತು ರಿಸರ್ಚ್‌ನಲ್ಲಿ ಬೆಂಗಳೂರು ಫಸ್ಟ್
ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿ ಎಂ. ನತೇಶ್ ಮಾತನಾಡಿ, ವಿದ್ಯಾರ್ಥಿಗಳು, ಅಧ್ಯಾಪಕರು ಸೇರಿದಂತೆ ಎಲ್ಲರೂ ಸೇರಿ ಪರಿಸರವನ್ನು ಉಳಿಸಬೇಕಿದೆ. ಕಳೆದ ಬಾರಿ ಗ್ರೀನ್ ರಾಯಚೂರು ಸಂಸ್ಥೆಗೆ ಪರಿಸರ ರಾಜ್ಯ ಪ್ರಶಸ್ತಿ ಬಂದಿತ್ತು. ಈ ಬಾರಿ ಸಿಂಧನೂರಿನ ವನಸಿರಿ ಸಂಸ್ಥೆಗೆ ಪರಿಸರ ರಾಜ್ಯ ಪ್ರಶಸ್ತಿ ಲಭಿಸಿದೆ. ರಾಯಚೂರು ಜಿಲ್ಲೆಗೆ ಸತತವಾಗಿ ಎರಡೂ ಬಾರಿ ಪರಿಸರ ರಾಜ್ಯ ಪ್ರಶಸ್ತಿ ಒಲಿದು ಬಂದಿರುವುದು ಹೆಮ್ಮೆಯ ವಿಚಾರ. ಮುಂದಿನ ದಿನಗಳಲ್ಲಿ ರಾಯಚೂರು ಜಿಲ್ಲೆ ಪರಿಸರ ಉಳಿವಿಗೆ ಮಾದರಿ ಆಗುತ್ತದೆ ಎಂಬ ವಿಶ್ವಾಸವಿದೆ ಎಂದರು.
ಗ್ರೀನ್ ರಾಯಚೂರು ಸಂಸ್ಥೆಯ ಗೌರವಾಧ್ಯಕ್ಷ ಕೊಂಡ ಶ್ರೀ ಕೃಷ್ಣಮೂರ್ತಿ ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಮನೆಯ ಮುಂದೆ ಒಂದು ಗಿಡ ನೆಟ್ಟರೆ ಸಾಕು ಪರಿಸರ ಉಳಿಯುತ್ತದೆ ಎಂದ ಅವರು, ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ಪ್ಲೇಟ್ ಬದಲು ಸ್ಟಿಲ್ ಪ್ಲೇಟ್ ಜನರಿಗೆ ವಿತರಿಸಿ, ಪ್ಲಾಸ್ಟಿಕ್ ಬ್ಯಾನ್ ಬಗ್ಗೆ ಅರಿವು ಮೂಡಿಸುತ್ತಿರುವುದು ಗಮನಕ್ಕೆ ಬಂದಿತು. ನಮ್ಮಲ್ಲೂ ಏಕೆ ಇದನ್ನು ಅಳವಡಿಕೆ ಮಾಡಬಾರದೆಂದು ವಿಚಾರ ಮಾಡಿ, ಒಂದು ಕಾರ್ಯಕ್ರಮಕ್ಕೆ ಏನೆಲ್ಲ ವಸ್ತುಗಳು ಬೇಕು ಎಂದು ಅಧ್ಯಯನ ಮಾಡಿ, ಈಗ ಅನುಷ್ಠಾನಕ್ಕೆ ತರುವ ಪ್ರಯತ್ನವಾಗಿದೆ ಎಂದರು.
ಇದನ್ನೂ ಓದಿ: Murder Case: ಟೋಲ್ ವಿಚಾರಕ್ಕೆ ಕಿರಿಕ್; ಹಾಕಿ ಸ್ಟಿಕ್‌ನಿಂದ ಬಡಿದು ಕೊಂದೇಬಿಟ್ಟರು ದುರುಳರು
ಗ್ಲಾಸ್, ಪ್ಲೇಟ್, ಸ್ಪೂನ್ ಉಚಿತವಾಗಿ ವಿತರಣೆ ಮಾಡಲು ಶುರು ಮಾಡಿದ್ದೇವೆ. ಯಾರೇ ಆಗಲಿ ನಮ್ಮನ್ನು ಸಂಪರ್ಕ ಮಾಡಿದರೆ, ಉಚಿತವಾಗಿ ಸ್ಟೀಲ್ ಪ್ಲೇಟ್‌ಗಳನ್ನು ಕೊಟ್ಟು ನಾವೇ ಅದನ್ನು ಮರಳಿ ತರುತ್ತವೆ. ಇದು ಬಡ ಕುಟುಂಬದ ಜನರಿಗೂ ಅನುಕೂಲವಾಗುತ್ತವೆ. ಇನ್ನು ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಪ್ಲೇಟ್ ಬ್ಯಾನ್ ಮಾಡಬೇಕು, ಅದರಲ್ಲಿ ಪ್ಲಾಸ್ಟಿಕ್ ಪೇಪರ್ ಇರುತ್ತದೆ ಇದು ಜನರ ಜೀವಕ್ಕೆ ಹಾನಿಯುಂಟು ಮಾಡುತ್ತದೆ ಎಂದು ತಿಳಿಸಿದರು.
ರಿಮ್ಸ್ ನಿರ್ದೇಶಕ ಡಾ.ಬಸವರಾಜ್ ಪೀರಾಪುರ ಮಾತನಾಡಿ, ಪ್ರತಿ ವಿದ್ಯಾರ್ಥಿಗೆ ಒಂದು ಸಸಿ ನೆಡುವ ಮತ್ತು ನಿರ್ವಹಣೆ ಮಾಡುವ ಜವಾಬ್ದಾರಿ ನೀಡಲಾಗಿದೆ. ಈಗಾಗಲೇ ರಿಮ್ಸ್ ಆವರಣದಲ್ಲಿ ಸಾಕಷ್ಟು ಗಿಡ ಮರಗಳನ್ನು ನೆಡಲಾಗಿದೆ. ಹೊರಾಂಗಣಕ್ಕೂ ನಮ್ಮ ಕ್ಯಾಂಪಸ್‌ಗೂ ಹೋಲಿಕೆ ಮಾಡಿದರೆ, ನಮ್ಮಲ್ಲಿ ಬಿಸಿಲಿನ ತಾಪಮಾನ ಒಂದು ಡಿಗ್ರಿ ಕಡಿಮೆ ಇರುತ್ತದೆ ಎಂದರು.
ಶಿಲ್ಪಾ ಫೌಂಡೇಶನ್ ಸಂಸ್ಥೆಯ ಮುಖ್ಯಸ್ಥ ವಿಷ್ಣುಕಾಂತ ಮಾತನಾಡಿದರು. ಕಾರ್ಯಕ್ರಮದಲ್ಲಿ ಗ್ರೀನ್ ರಾಯಚೂರು ಸಂಸ್ಥೆಯ ಅಧ್ಯಕ್ಷೆ ಸರಸ್ವತಿ ಪರಿಸರ ರಕ್ಷಣೆಯ ಪ್ರತಿಜ್ಞಾವಿಧಿ ಬೋಧಿಸಿದರು.
ಇದನ್ನೂ ಓದಿ: Chakravarthy Sulibele: ಜೈಲಿಗೆ ಕಳುಹಿಸಲೇ ಬೇಕು ಅಂತಿದ್ದರೆ ಬನ್ನಿ, ನಾನೂ ನೋಡ್ತೇನೆ: ಎಂಬಿಪಿಗೆ ಸೂಲಿಬೆಲೆ ಸವಾಲ್
ಈ ಸಂದರ್ಭದಲ್ಲಿ ರಾಜೇಂದ್ರ, ವೆಂಕಟೇಶ್, ಸಂದ್ಯಾ ನಾಯ್ಕ್, ಗಿರೀಶ್, ಡಾ. ಅಮರವರ್ಮ ಹಾಗೂ ಇತರರು ಪಾಲ್ಗೊಂಡಿದ್ದರು.
ಕರ್ನಾಟಕ
World Environment Day : ಕೆರೆ ಉಳಿಸಿ ಮರ ಬೆಳೆಸಿ ಎಂದ ಸಾಲುಮರದ ತಿಮ್ಮಕ್ಕ; ವಿಸ್ತಾರ ಅಭಿಯಾನಕ್ಕೆ ಭಾರಿ ಸ್ಪಂದನೆ
World Environment Day: ಎಲ್ಲೆಡೆ ಪರಿಸರ ದಿನವನ್ನು ಸಂಭ್ರಮ-ಸಡಗರದಿಂದ ಆಚರಿಸಲಾಗುತ್ತಿದೆ. ಗಿಡ ನೆಡುವ ಕಾರ್ಯಕ್ರಮದ ಜತೆಗೆ ಶಾಲಾ-ಕಾಲೇಜುಗಳಲ್ಲಿ ಪರಿಸರದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಅರಣ್ಯ ಇಲಾಖೆಯ ರಾಯಭಾರಿ ನಾಡೋಜ ಸಾಲುಮರದ ತಿಮ್ಮಕ್ಕ (Saalumarada Thimmakka) ಕೂಡ ಸಾಥ್ ನೀಡಿದ್ದಾರೆ.
ಮೈಸೂರು: ಹಸಿರೇ ಉಸಿರಾಗಿದ್ದು, ಕಾಡು ಬೆಳೆದರಷ್ಟೇ ನಾಡು ಉಳಿಯಲು ಸಾಧ್ಯವಾಗಿದೆ. ಹೀಗಾಗಿ ಕೆರೆ ಉಳಿಸಿ, ಮರ ಬೆಳೆಸಿ. ಗಿಡ ನೆಟ್ಟರೆ ಮರವಾಗುತ್ತದೆ, ನನ್ನಂಥ ಇಳಿ ವಯಸ್ಸಿನವರಿಗೆ ನೆರಳಾಗುತ್ತದೆ ಎಂದು ಅರಣ್ಯ ಇಲಾಖೆಯ ರಾಯಭಾರಿ ನಾಡೋಜ ಸಾಲುಮರದ ತಿಮ್ಮಕ್ಕ (Saalumarada Thimmakka) ತಿಳಿಸಿದರು. ವಿಶ್ವ ಪರಿಸರ ದಿನಾಚರಣೆ (World Environment Day) ಹಿನ್ನೆಲೆ ವಿಸ್ತಾರ ನ್ಯೂಸ್ ಸಹಯೋಗದಲ್ಲಿ ಮೈಸೂರಿನ ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಸಲಾಯಿತು. ಶಾಸಕ ಜಿ.ಡಿ.ಹರೀಶ್‌ಗೌಡ, ಶಿಕ್ಷಕರು, ಮುಖಂಡರು, ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾನಾಡಿದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ, ನನಗೆ ನನ್ನ ಪತಿಗೆ ಏನೂ ಇರಲಿಲ್ಲ. ಆಗ ಮರ ನೆಟ್ಟು ಬೆಳೆಸಿದೆವು. ಈಗ ಎಲ್ಲ ಸೌಲಭ್ಯ, ಸೌಕರ್ಯಗಳೂ ಇವೆ. ಆದಷ್ಟು ಕೆರೆ, ಕಲ್ಯಾಣಿ ಕಟ್ಟಿಸಿ, ಇದರಿಂದ ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿಯಲು ನೀರು ಸಿಗುತ್ತದೆ ಎಂದು ಸಲಹೆ ನೀಡಿದರು.
ಮೆಡಿಕಲ್ ವಿದ್ಯಾರ್ಥಿಗಳ ಪರಿಸರ ಕಾಳಜಿ
ರಾಯಚೂರಿನಲ್ಲಿ ವಿಸ್ತಾರ ನ್ಯೂಸ್ ಪರಿಸರ ಕಾಳಜಿಗೆ ರಿಮ್ಸ್ ಆಸ್ಪತ್ರೆಯ ಮೆಡಿಕಲ್ ವಿದ್ಯಾರ್ಥಿಗಳು ಸಾಥ್ ನೀಡಿದರು. ಕ್ಯಾಂಪೆಸ್‌ನಲ್ಲಿ ಸಸಿ ನೆಟ್ಟು, ಮೂರು ಜನ ವಿದ್ಯಾರ್ಥಿಗಳಿಗೆ ಒಂದು ಸಸಿ ನಿರ್ವಹಣೆಯ ಜವಾಬ್ದಾರಿ ನೀಡಲಾಯಿತು. ಪರಿಸರ ದಿನದಂದು ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಗ್ರೀನ್ ರಾಯಚೂರು, ಶಿಲ್ಪಾ ಫೌಂಡೇಶನ್, ರಿಮ್ಸ್ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಯ ಸಂಯುಕ್ತಾಶಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಎಲೆಗಳಿಂದ ತಯಾರಾದ ಸೆಲ್ಫಿ ಬಾಕ್ಸ್
ಹಾವೇರಿಯಲ್ಲಿಯು ವಿಸ್ತಾರ ನ್ಯೂಸ್ ಹಾಗೂ ಎಂ ಆರ್ ಎಂ ಶಾಲೆ, ಎಂಆರ್ ಎಂ ಪಿಯು ಕಾಲೇಜು ಸಹಯೋಗದಲ್ಲಿ ಪರಿಸರ ದಿನವನ್ನು ಆಚರಿಸಲಾಯಿತು. ನಗರದ ಶಿವಾಜಿನಗರ ನಾಲ್ಕನೇ ಕ್ರಾಸ್‌ನಲ್ಲಿರುವ ಶಾಲೆಯ ಆವರಣದಲ್ಲಿ ಪುಟಾಣಿ ಮಕ್ಕಳು ಸಸಿ ನೆಟ್ಟರು. ಬಳಿಕ ಜಾಥಾ ನಡೆಸಿ ಜನರಲ್ಲಿ ಪರಿಸರದ ಕುರಿತು ಜಾಗೃತಿ ಮೂಡಿಸಿದರು. ವಿಶೇಷ ಎಂದರೆ ಶಾಲಾ ಆವರಣದಲ್ಲಿ ಹಸಿರು ಎಲೆಯಿಂದ ತಯಾರಿಸಿದ್ದ ಸೆಲ್ಫಿ ಬಾಕ್ಸ್‌ನಲ್ಲಿ ನಿಂತು ಫೋಟೊ ಕ್ಲಿಕ್ಕಿಸಿಕೊಂಡರು. ಹಸಿರು ಎಲೆಗಳನ್ನು ಕಟ್ಟಿಕೊಳ್ಳುವ ಮೂಲಕ ಮಕ್ಕಳು ವಿಶಿಷ್ಟವಾಗಿ ಪರಿಸರ ಜಾಗೃತಿ ಮೂಡಿಸಿದ್ದು ಎಲ್ಲರ ಗಮನ ಸೆಳೆಯಿತು.
ಇತ್ತ ರಾಣೆಬೆನ್ನೂರಿನಲ್ಲಿ ನಗರದ ರೋಟರಿ ಪ್ರೌಢಶಾಲೆಯಲ್ಲಿ ಸಸಿ ನೆಡಲಾಯಿತು. ರೋಟರಿ ಕ್ಲಬ್, ರೋಟರಿ ಆಂಗ್ಲ ಮಾಧ್ಯಮ ಶಾಲೆ , ರೋಟರಿ ವಿಜ್ಞಾನ ಮತ್ತು ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಾಥ್ ನೀಡಿದರು. ಶಿಗ್ಗಾವಿಯ ರಂಭಾಪುರಿ ಕಾಲೇಜಿನಲ್ಲೂ ವಿದ್ಯಾರ್ಥಿಗಳು ಸಂಭ್ರಮದಿಂದ ಪರಿಸರ ದಿನವನ್ನು ಆಚರಿಸಿದರು.
ಇದನ್ನೂ ಓದಿ: Free Electricity: ಹೊರಬಿತ್ತು ಗೃಹ ಜ್ಯೋತಿ ಮಾರ್ಗಸೂಚಿ; ಬಾಡಿಗೆದಾರನಿಗಿಲ್ಲ ಉಚಿತ ವಿದ್ಯುತ್?
ಗಿಡ ನೆಟ್ಟರು ಸಚಿವ ಕೆ. ಎಚ್ ಮುನಿಯಪ್ಪ
ದೇವನಹಳ್ಳಿ ಪಟ್ಟಣದ ಚಿಕ್ಕಕೆರೆ ಬಳಿ ಪರಿಸರ ದಿನದ ಅಂಗವಾಗಿ ಗಿಡ ನೆಡಲಾಯಿತು. ಬಯೋಮಾ ಎನ್ವಿರಾಲ್ಮೆಂಟ್ ಟ್ರಸ್ಟ್ ಸಹಯೋಗದಿಂದ ನಿರ್ಮಾಣ ಮಾಡಿದ ವಾಟರ್ ಪಿಲ್ಟರ್ ನಿರ್ಮಾಣಕ್ಕೆ ಸಚಿವ ಕೆ.ಎಚ್. ಮುನಿಯಪ್ಪ ಚಾಲನೆ ನೀಡಿದರು. ಸಿಎಸ್ಆರ್ ನಿಧಿಯಲ್ಲಿ 60 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿದ ವಾಟರ್ ಪ್ಲಾಂಟ್ ಉದ್ಘಾಟನೆ ಮಾಡಿ, ಗಿಡ ನೆಟ್ಟು ನೀರೆರೆದರು. ಕಾರ್ಯಕ್ರಮದಲ್ಲಿ ಭಾಗಿಯಾದ ಎಲ್ಲರಿಗೂ ಒಂದೊಂದು ಗಿಡ ನೆಡುವಂತೆ ಮನವಿ ಮಾಡಿದರು.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
-
ಸುವಚನ15 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ದೇಶ20 hours ago
Odisha Train Accident: ಅಪಘಾತ ನಡೆದು 51 ಗಂಟೆಯಲ್ಲೇ ಹಳಿ ಸಿದ್ಧ, ರೈಲು ಸಂಚಾರ; 36 ತಾಸು ಸ್ಥಳದಲ್ಲೇ ಇದ್ದ ಸಚಿವ
-
ಕರ್ನಾಟಕ21 hours ago
Ullal News: ಆಪ್ತನ ಸಹೋದರನ ಅಂತಿಮಯಾತ್ರೆಗೆ ಹೆಗಲುಕೊಟ್ಟ ಸ್ಪೀಕರ್ ಯು.ಟಿ. ಖಾದರ್
-
ಕರ್ನಾಟಕ20 hours ago
Shivamogga News: ಶಿಕಾರಿಪುರದಲ್ಲಿ ರಾಷ್ಟ್ರಕೂಟರ ಕಾಲದ ಪ್ರಾಚ್ಯಾವಶೇಷಗಳು ಪತ್ತೆ
-
ಕರ್ನಾಟಕ13 hours ago
Odisha Train Accident: ಒಡಿಶಾ ರೈಲು ದುರಂತಕ್ಕೆ ಕೋಮು ಬಣ್ಣ ನೀಡಿದ ಮಹಿಳೆ, ಒಡಿಶಾ ಪೊಲೀಸರಿಂದ ತನಿಖೆ
-
ಕರ್ನಾಟಕ11 hours ago
ವಿಶ್ವ ಪರಿಸರ ದಿನ: ಸಸಿ ನೆಡಿ, ಫೋಟೊ ಕಳುಹಿಸಿ; ವಿಸ್ತಾರ ನ್ಯೂಸ್ ಅಭಿಯಾನ
-
ಕ್ರಿಕೆಟ್24 hours ago
Team India : ಕ್ರಿಕೆಟ್ ಅಭಿಮಾನಿಗಳಿಗೆ ಬೇಸರದ ಸುದ್ದಿ; ಭಾರತಕ್ಕೆ ಅಫಘಾನಿಸ್ತಾನ ಕ್ರಿಕೆಟ್ ತಂಡದ ಪ್ರವಾಸ ರದ್ದು!
-
ದೇಶ24 hours ago
Bihar Bridge Collapse: ರೈಲು ದುರಂತ ಬೆನ್ನಲ್ಲೇ ಬಿಹಾರದಲ್ಲಿ ಸೇತುವೆ ಕುಸಿತ; 1,700 ಕೋಟಿ ರೂ. ಗಂಗಾ ನದಿ ಪಾಲು