Site icon Vistara News

ವಿಸ್ತಾರ TOP 10 NEWS: ಗ್ಯಾರಂಟಿಗೆ ಮುಗಿಬಿದ್ದ ಸಾರ್ವಜನಿಕರಿಂದ, ಸಂಪುಟ ವಿಸ್ತರಣೆ ಅಸಮಾಧಾನದವರೆಗಿನ ಪ್ರಮುಖ ಸುದ್ದಿಗಳಿವು

vistara top 10 news voters demanding for guarantee implementation to cabinet expansion and more news

#image_title

1. Congress Guarantee: ಕರೆಂಟ್‌ ಬಿಲ್‌ ಕೇಳಿದ್ರೆ ಕಟ್ಟಿ ಹಾಕ್ತೇವೆ; ಸಿದ್ದರಾಮಯ್ಯ ಸ್ಟೈಲಲ್ಲೇ ಡೈಲಾಗ್‌!
ಕಾಂಗ್ರೆಸ್‌ ಸರ್ಕಾರಕ್ಕೆ ಗ್ಯಾರಂಟಿ ಅಸ್ತ್ರ ತಲೆನೋವಾಗಿದೆ. 200 ಯುನಿಟ್ ಉಚಿತ ವಿದ್ಯುತ್‌‌, ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಸೇರಿ 5 ಗ್ಯಾರಂಟಿಗಳನ್ನು (Congress Guarantee) ಸರ್ಕಾರ ಜಾರಿ ಮಾಡಬೇಕು ಎಂದು ವಿರೋಧ ಪಕ್ಷಗಳ ಜತೆಗೆ ಸಾರ್ವಜನಿಕರು ಕೂಡಾ ಒತ್ತಾಯಿಸುತ್ತಿದ್ದಾರೆ. ಅಲ್ಲದೆ ಕೆಲವೆಡೆ ಜನರು ಕರೆಂಟ್‌ ಬಿಲ್‌ ಕಟ್ಟಲು ಹಾಗೂ ಸಾರಿಗೆ ಬಸ್‌ಗಳಲ್ಲಿ ಟಿಕೆಟ್‌ ಪಡೆಯಲು ನಿರಾಕರಿಸುತ್ತಿರುವ ಘಟನೆಗಳು ನಡೆಯುತ್ತಿವೆ. ಇಂತಹ ಘಟನೆಗಳು ಶುಕ್ರವಾರವೂ ಕಂಡುಬಂದಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

2. H.D. Kumaraswamy: ಜೆಡಿಎಸ್‌ ವಿಸರ್ಜನೆ ಹೇಳಿಕೆಗೆ ಬದ್ಧ ಎಂದ ಎಚ್‌.ಡಿ. ಕುಮಾರಸ್ವಾಮಿ!
ಜೆಡಿಎಸ್‌ ಪಕ್ಷವನ್ನು ಎಂದು ವಿಸರ್ಜನೆ ಮಾಡುತ್ತೀರ ಎಂದು ಕಾಂಗ್ರೆಸ್‌ ನಾಯಕರು ಹಾಗೂ ಕಾಂಗ್ರೆಸ್‌ ಪಕ್ಷ ಟ್ವೀಟ್‌ ಮೂಲಕ ಪ್ರಶ್ನಿಸುತ್ತಿರುವುದರ ಕುರಿತು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಈ ಹಿಂದೆ ತಾವು ಪಕ್ಷ ವಿಸರ್ಜನೆ ಕುರಿತು ಆಡಿದ ಮಾತಿಗೆ ಬದ್ಧನಾಗಿದ್ದೇನೆ. ಆದರೆ ಕಾಂಗ್ರೆಸ್‌ನವರು ನನ್ನ ಮಾತನ್ನು ಸರಿಯಾಗಿ ಕೇಳಿಸಿಕೊಳ್ಳಬೇಕು ಎಂದಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: Congress Guarantee: ನಾನು ಕರೆಂಟ್ ಬಿಲ್ ಕಟ್ಟಲ್ಲ: ಮಾಜಿ ಸಚಿವ ಆರ್‌. ಅಶೋಕ್‌ ಘೋಷಣೆ

3. ನವದೆಹಲಿಯಲ್ಲಿ ಮುಗಿದ ಸಂಪುಟ ಸರ್ಕಸ್‌: ಶನಿವಾರ ಬೆಳಗ್ಗೆ ಪ್ರಮಾಣವಚನಕ್ಕೆ ಸಿದ್ಧತೆ
ಕಾಂಗ್ರೆಸ್‌ ಸರ್ಕಾರದಲ್ಲಿ ಮೊದಲ ಸಂಪುಟ ವಿಸ್ತರಣೆ ಕಸರತ್ತು ಪೂರ್ಣಗೊಂಡಿದ್ದು, ಶನಿವಾರ 22ರಿಂದ 24 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ದಿನಪೂರ್ತಿ ನವದೆಹಲಿಯಲ್ಲಿ ನಡೆದ ಬಿರುಸಿನ ಚಟುವಟಿಕೆಯಲ್ಲಿ ಸಚಿವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಆಯ್ಕೆ ಮಾಡಿಕೊಂಡು ಹೈಕಮಾಂಡನ್ನು ಒಪ್ಪಿಸಿದ್ದಾರೆ. ಇದೇ ವೇಳೆ ತಮಗೆ ಸಚಿವ ಸ್ಥಾನ ಸಿಗುವುದು ಅನುಮಾನ ಎಂದು ಮನಗಂಡಿರುವ ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌, ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

4. RSS: ಸರ್ಕಾರಿ-ಅನುದಾನಿತ ಶಾಲೆ ಆವರಣದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧ?: ಕಾಂಗ್ರೆಸ್‌ ಹೇಳಿದ್ದೇನು?
ಈಗಾಗಲೆ ಬಜರಂಗದಳ ನಿಷೇಧ, ಆರ್‌ಎಸ್‌ಎಸ್‌ ನಿಷೇಧದಂತಹ ಹೇಳಿಕೆಗಳ ಮೂಲಕ ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ವಾಗ್ವಾದ ಜೋರಾಗಿದೆ. ಇದರ ನಡುವೆಯೇ ರಾಜ್ಯ ಸರ್ಕಾರದ ಶಾಲೆಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ನಿಷೇಧಿಸುವ ಕುರಿತು ಕಾಂಗ್ರೆಸ್‌ ಹೇಳಿರುವುದು ಮತ್ತಷ್ಟು ಚರ್ಚೆಗೆ ಕಾರಣವಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

5. ಸೆಂಗೋಲ್​ ಬಗ್ಗೆ ಪ್ರಧಾನಿ ಮೋದಿಗೆ ತಿಳಿಸಿದ್ದು ಈ ನಾಟ್ಯ ಕಲಾವಿದೆ; 2021ರಲ್ಲಿ ಅವರು ಬರೆದ ಪತ್ರದಲ್ಲೇನಿತ್ತು?

ಪ್ರಧಾನಿ ನರೇಂದ್ರ ಮೋದಿ (PM Modi) ಯವರು ಮೇ 28ರಂದು ಹೊಸ ಸಂಸತ್​ ಭವನವನ್ನು (New Parliament) ಉದ್ಘಾಟನೆ ಮಾಡಲಿದ್ದಾರೆ. ನೂತನ ಸಂಸತ್ ಭವನದ ಉದ್ಘಾಟನೆ ನಿಮಿತ್ತ ಅಂದು ಮುಂಜಾನೆಯಿಂದಲೇ ಧಾರ್ಮಿಕ ಕಾರ್ಯಕ್ರಮಗಳು, ವಿವಿಧ ಸಮಾರಂಭಗಳು ನಡೆಯಲಿದೆ. ಜನಮಾನಸದಿಂದ ಮರೆಗೆ ಸೇರಿದ್ದ ಈ ರತ್ನಖಚಿತ ರಾಜದಂಡದ ಬಗ್ಗೆ ಪ್ರಧಾನಿ ಮೋದಿ ಗಮನಕ್ಕೆ ತಂದಿದ್ದು ಖ್ಯಾತ ಕ್ಲಾಸಿಕಲ್ ಡ್ಯಾನ್ಸರ್​ ಪದ್ಮಾ ಸುಬ್ರಹ್ಮಣ್ಯಮ್​. 2021ರಲ್ಲಿ ಇವರು ಪ್ರಧಾನಿ ಮೋದಿಯವರಿಗೆ ಒಂದು ಪತ್ರ ಬರೆದಿದ್ದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: New Parliament Building: ನೂತನ ಸಂಸತ್‌ ಭವನದ ವೈಭವ ಹೇಗಿದೆ? ಇಲ್ಲಿದೆ ಅದ್ಭುತ ವಿಡಿಯೊ!

6. Cooker Blast:‌ ರಾಮನಗರದಲ್ಲಿ ಎಲೆಕ್ಷನ್‌ ಪ್ರಚಾರದ ವೇಳೆ ಕೊಟ್ಟಿದ್ದ ಕುಕ್ಕರ್‌ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ರಾಮನಗರ ತಾಲೂಕಿನ ಕೂನಮುದ್ದನಹಳ್ಳಿ ಗ್ರಾಮದಲ್ಲಿ ಕುಕ್ಕರ್ ಸ್ಫೋಟಗೊಂಡು (Cooker Blast) ಬಾಲಕಿಯೊಬ್ಬಳು ಗಂಭೀರ ಗಾಯಗೊಂಡಿದ್ದಾಳೆ. ಮಹಾಲಕ್ಷ್ಮಿ (17) ಗಾಯಾಳು ಬಾಲಕಿ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. Contaminated Water: ಕಲುಷಿತ ನೀರು ಸೇವಿಸಿ ಬಾಲಕ ಸಾವು; ರಾಯಚೂರಿನಲ್ಲಿ 30ಕ್ಕೂ ಅಧಿಕ ಮಂದಿ ಅಸ್ವಸ್ಥ
ರಾಯಚೂರು ಜಿಲ್ಲೆಯಲ್ಲಿ ಕಲುಷಿತ ನೀರಿನಿಂದ (Contaminated Water) ಸಾವು-ನೋವುಗಳು ಹೆಚ್ಚುತ್ತಿವೆ. ಈಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಕಲುಷಿತ ನೀರು ಸೇವಿಸಿ ಬಾಲಕನೊಬ್ಬ ಮೃತಪಟ್ಟಿದ್ದಾನೆ. 30ಕ್ಕೂ ಹೆಚ್ಚು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

8. Mansoon 2023:‌ ಮುಂಗಾರು ಪ್ರವೇಶ ಯಾವಾಗ? ರೈತರಿಗಿದೆಯೇ ಸಿಹಿ ಸುದ್ದಿ? ಇಲ್ಲಿದೆ ಹವಾಮಾನ ವರದಿ
ದೇಶದ ಹಲವೆಡೆ ಉತ್ತಮ ಮಳೆಯಾಗುವ ಮೂಲಕ ಧರೆ ತಂಪಾಗಿದೆ. ಸೂರ್ಯನ ಪ್ರತಾಪ ಕಡಿಮೆಯಾಗುತ್ತಿದೆ. ರೈತರು ಭೂಮಿ ಹದಗೊಳಿಸಿ, ಬಿತ್ತನೆಗೆ ಸಿದ್ಧವಾಗುವ ಲೆಕ್ಕದಲ್ಲಿದ್ದಾರೆ. ಇದರ ಮಧ್ಯೆಯೇ, ಮುಂಗಾರು ಮಳೆಯ (Mansoon 2023) ಪ್ರವೇಶ, ಮಳೆಯಾಗುವ ಪ್ರಮಾಣದ ಕುರಿತು ಹವಾಮಾನ ಇಲಾಖೆ ವರದಿ ನೀಡಿದೆ. ಈ ಬಾರಿ ಮೂರು ದಿನ ವಿಳಂಬವಾಗಿ ಅಂದರೆ, ಜೂನ್‌ 4ರಂದು ಮುಂಗಾರು ಕೇರಳ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

9. IPL 2023: ಫೈನಲ್ ಪಂದ್ಯಕ್ಕೂ ಮುನ್ನ ವರ್ಣರಂಜಿತ ಕಾರ್ಯಕ್ರಮ; ಯಾರೆಲ್ಲ ಭಾಗಿ?
16ನೇ ಆವೃತ್ತಿಯ ಐಪಿಎಲ್​ಗೆ ಹೇಗೆ ವರ್ಣರಂಜಿತ ಚಾಲನೆ ನೀಡಲಾಗಿತ್ತೋ ಹಾಗೆಯೇ ಟೂರ್ನಿಯ ಅಂತ್ಯಕ್ಕೂ ಇದೇ ರೀತಿಯ ಅದ್ಧೂರಿ ಕಾರ್ಯಕ್ರಮದ ಮೂಲಕ ತೆರೆ ಎಳೆಯಲು ಬಿಸಿಸಿಐ ಎಲ್ಲ ಸಿದ್ಧತೆ ನಡೆಸಿದೆ. ಫೈನಲ್​ ಪಂದ್ಯಕ್ಕೂ ಮುನ್ನ ನಡೆಯುವ ಈ ಸಮಾರೋಪ ಸಮಾರಂಭದಲ್ಲಿ ಖ್ಯಾತ ಗಾಯಕ ಡಿವೈನ್ ಮತ್ತು ನ್ಯೂಕ್ಲಿಯಾ ಅವರು ಕಾರ್ಯಕ್ರಮ ನೀಡಲಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. Viral Video: ಶಾಲಾ ಮಕ್ಕಳ ಎದುರೇ ಹೊಡೆದಾಡಿಕೊಂಡ ಪ್ರಿನ್ಸಿಪಾಲ್, ಟೀಚರ್! ಇಲ್ಲಿದೆ ನೋಡಿ ವಿಡಿಯೋ
ಮಕ್ಕಳಿಗೆ ಬುದ್ಧಿ ಹೇಳಬೇಕಾದ ಶಿಕ್ಷಕ/ಶಿಕ್ಷಕಿಯರೇ ಮಕ್ಕಳ ರೀತಿ ಜಗಳಮಾಡಿಕೊಂಡರೆ ಹೇಗೆ? ಹೌದು, ಬಿಹಾರದ ಪಾಟ್ನಾ (Patna) ಜಿಲ್ಲೆಯ ಕೌರಿಯಾ ಪಂಚಾಯ್ತಿಯ ಬಿಹ್ತಾ ಮಿಡ್ಲ್ ಸ್ಕೂಲ್‌ನಲ್ಲಿ (Bihta middle school) ಪ್ರಿನ್ಸಿಪಾಲ್ (Principal) ಮತ್ತು ಶಿಕ್ಷಕಿಯೊಬ್ಬರು (Teacher) ಮಕ್ಕಳ ರೀತಿಯಲ್ಲಿ ಮಣ್ಣಲ್ಲಿ ಹೊರಳಾಡಿ, ಜಗಳ ಮಾಡಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ(Viral Video). ಮತ್ತಷ್ಟು ವೈರಲ್‌ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

Exit mobile version