ಬೆಂಗಳೂರು: ಕೊರೊನಾ ಸೋಂಕಿನ ನಂತರ ಸಹಜ ಜೀವನಕ್ಕೆ ಮರಳುತ್ತಿದ್ದ ರಾಜ್ಯದಲ್ಲಿ ಝಿಕಾ ವೈರಸ್ ಕಾಣಿಸಿಕೊಂಡು ಹೊಸ ಆತಂಕ ಸೃಷ್ಟಿಸಿದೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ, ರಾಜ್ಯದಲ್ಲಿ ಮಳೆಯ ವಾತಾವರಣ ಮುಂದುವರಿದಿದೆ, ಮೋದಿ ಹತ್ಯೆ ಮಾಡಬೇಕೆಂಬ ಕಾಂಗ್ರೆಸ್ ನಾಯಕನ ಮಾತು ವೈರಲ್ ಆಗಿದೆ, ಸದಾಶಿವ ಆಯೋಗದ ವರದಿ ಕುರಿತು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ ಎನ್ನುವುದೂ ಸೇರಿ ದಿನದ ಪ್ರಮುಖ ಸುದ್ದಿಗಳ ಗುಚ್ಛ ವಿಸ್ತಾರ TOP 10 NEWS.
1. Zika virus | ರಾಜ್ಯದಲ್ಲಿ ಮೊದಲ ಝಿಕಾ ವೈರಸ್ ರಾಯಚೂರಿನಲ್ಲಿ ಪತ್ತೆ; 5 ವರ್ಷದ ಬಾಲಕಿಗೆ ಪಾಸಿಟಿವ್
ಕೊರೊನಾ ಸೋಂಕಿನ ಬಳಿಕ ಜನರಿಗೆ ಈಗ ಹೊಸ ತಲೆನೋವು ಶುರುವಾಗುವ ಲಕ್ಷಣ ಕಾಣಿಸಿಕೊಂಡಿದ್ದು, ಝಿಕಾ ವೈರಸ್ ಪತ್ತೆಯಾಗಿದೆ. ನೆರೆಯ ಕೇರಳ, ಮಹಾರಾಷ್ಟ್ರ ಸೇರಿ ವಿವಿಧ ರಾಜ್ಯಗಳಲ್ಲಿ ಈ ಸೋಂಕು ಕಾಣಿಸಿಕೊಂಡಿದ್ದು, ಇದೀಗ ಕರ್ನಾಟಕಕ್ಕೂ ಕಾಲಿಟ್ಟಿದ್ದು, ಆತಂಕ ಮೂಡಿಸಿದೆ. ರಾಜ್ಯದಲ್ಲೇ ಮೊದಲ ಝಿಕಾ ವೈರಸ್ (Zika virus) ರಾಯಚೂರಿನಲ್ಲಿ ಪತ್ತೆ ಆಗಿದೆ. ಈ ಸಂಬಂಧ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಖಚಿತಪಡಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
2. Weather Report | ಮಾಂಡೌಸ್ ಎಫೆಕ್ಟ್; ನಾಳೆ-ನಾಡಿದ್ದು ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ
ಮಾಂಡೌಸ್ ಸೈಕ್ಲೋನ್ ಎಫೆಕ್ಟ್‌ನಿಂದಾಗಿ ಕಳೆದ ಮೂರು ದಿನದಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಇನ್ನೆರಡು ದಿನ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Weather Report) ತಿಳಿಸಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
3. ವಿಸ್ತಾರ ವಿಶೇಷ | SCST ಮೀಸಲು ನಂತರ ಸರ್ಕಾರದ ಮತ್ತೊಂದು ಅಸ್ತ್ರ: ಸದಾಶಿವ ಆಯೋಗದ ಕುರಿತು ಮಹತ್ವದ ನಿರ್ಧಾರ
ಇತ್ತೀಚೆಗಷ್ಟೆ ಎಸ್‌ಸಿಎಸ್‌ಟಿ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡಿ ಆ ಸಮುದಾಯಗಳ ವಿಶ್ವಾಸ ಗೆಲ್ಲಲು ಮುಂದಾಗಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಸರ್ಕಾರ ಶೀಘ್ರದಲ್ಲಿಯೇ ಮತ್ತೊಂದು ಪ್ರಮುಖ ನಿರ್ಧಾರವನ್ನು ಕೈಗೊಳ್ಳುವ ಪ್ರಕ್ರಿಯೆಯಲ್ಲಿದೆ. ಎಸ್‌ಸಿ ಸಮುದಾಯಕ್ಕೆ ನೀಡಿರುವ ಮೀಸಲಾತಿಯನ್ನು ವರ್ಗೀಕರಣ ಮಾಡುವ ನ್ಯಾ. ಸದಾಶಿವ ಆಯೋಗದ ವರದಿಯ ಅನುಷ್ಠಾನದ ಕುರಿತು ನಿರ್ಧಾರ ಹೊರಬೀಳಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
4. ಜನವರಿಯಲ್ಲಿ ಬಸ್ ಯಾತ್ರೆ; ಫೆಬ್ರವರಿಯಲ್ಲಿ ರಾಹುಲ್ ಪ್ರವಾಸ: ಒಗ್ಗಟ್ಟಿನ ಮಂತ್ರ ಜಪಿಸಿದ ಎಐಸಿಸಿ ಮಹತ್ವದ ಸಭೆ
ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಯೋಜಿಸಿದ್ದ ಮಹತ್ವದ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಪ್ರಮುಖರು ಭಾಗಿಯಾಗಿದ್ದರು.ಪ್ರಮುಖವಾಗಿ ರಾಜ್ಯದಲ್ಲಿ ಚುನಾವಣೆಗೆ ತಯಾರಿ ನಡೆಸಲು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಬಸ್ ಯಾತ್ರೆ ಕುರಿತು ಚರ್ಚೆ ನಡೆದಿದೆ. ಆದರೆ ಪ್ರತ್ಯೇಕ ಬಸ್ ಯಾತ್ರೆಗೆ ಹೈಕಮಾಂಡ್ ಬ್ರೇಕ್ ಹಾಕಿದೆ. ಎಲ್ಲರೂ ಒಗ್ಗಟ್ಟಿನಿಂದ ಪ್ರವಾಸ ಮಾಡಬೇಕು. ಡಿಸೆಂಬರ್‌ನಲ್ಲಿ ಅಧಿವೇಶನ ಮುಕ್ತಾಯವಾದ ನಂತರ ಜನವರಿಯಲ್ಲಿ ಬಸ್ ಯಾತ್ರೆ ಕೈಗೊಳ್ಳಲಿ ಎಂದು ತಿಳಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
5. ವಿಸ್ತಾರ Explainer | ಲೂಸ್ ಸಿಗರೇಟ್ ಮಾರಾಟ ನಿಷೇಧಕ್ಕೆ ಚಿಂತನೆ ಏಕೆ? ಇದರ ಹಿಂದಿನ ಉದ್ದೇಶ ಏನು?
ದೇಶಾದ್ಯಂತ ಸಿಗರೇಟ್‌ಗಳ ಚಿಲ್ಲರೆ ಮಾರಾಟ ನಿಷೇಧಕ್ಕೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದ್ದು, ಶೀಘ್ರವೇ ಹೊಸ ನಿಯಮ ಜಾರಿಗೆ ಬರುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರವು ಏಕೆ ಬಿಡಿ ಸಿಗರೇಟ್‌ಗಳ ಮಾರಾಟ ನಿಷೇಧ ಮಾಡಲು ಮುಂದಿದೆ? ಇದರ ಹಿಂದಿರುವ ಘನ ಉದ್ದೇಶವೇನು ಎಂಬುದರ ಸಂಕ್ಷಿಪ್ತ ಮಾಹಿತಿ ಇಂತಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
6. ಎಲೆಕ್ಷನ್ ಹವಾ | ಗಂಗಾವತಿ | ಪರಣ್ಣ ವಿರೋಧಿ ಅಲೆಯ ಲಾಭ ಪಡೆಯುವ ಸೆಣೆಸಾಟದಲ್ಲಿ ಅನ್ಸಾರಿ
ಹಾಲಿ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿ ಅವರ ಆಡಳಿತ ವಿರೋಧಿ ಅಲೆಯನ್ನು ಮೂಲವಾಗಿಸಿಕೊಂಡು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಗೆಲುವಿನ ನಗೆ ಬೀರಲು ಪ್ರಯತ್ನಿಸುತ್ತಿರುವುದರಿಂದ ಸೆಣೆಸಾಟ ಜೋರಾಗುವ ಸಾಧ್ಯತೆಯಿದೆ. ಈ ನಡುವೆ ಗಣಿಧಣಿ ಗಾಲಿ ಜನಾರ್ದನ ರೆಡ್ಡಿಯೂ ಎಂಟ್ರಿ ಕೊಡುವ ಮುನ್ಸೂಚನೆಯಿದ್ದು, ರಣಕಣ ರಂಗೇರಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
7. Kill Modi | ಸಂವಿಧಾನ ಉಳಿಸಲು ಮೋದಿಯನ್ನು ಕೊಂದುಬಿಡಿ ಎಂದ ಕಾಂಗ್ರೆಸ್ ನಾಯಕ, ಭುಗಿಲೆದ್ದ ಆಕ್ರೋಶ
“ಸಂವಿಧಾನ ಉಳಿಸಲು ನರೇಂದ್ರ ಮೋದಿ ಅವರನ್ನು ಕೊಲ್ಲಲು (Be Ready To Kill Modi) ಸಿದ್ಧರಾಗಿರಿ” ಎಂದು ಮಧ್ಯಪ್ರದೇಶ ಕಾಂಗ್ರೆಸ್‌ನ ಹಿರಿಯ ನಾಯಕ ರಾಜಾ ಪಟೇರಿಯಾ ಸಭೆಯಲ್ಲಿ ಕರೆ ನೀಡಿದ್ದು, ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಹಾಗೆಯೇ, ರಾಜಾ ಪಟೇರಿಯಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
8. NPS News | ಎನ್‌ಪಿಎಸ್ ರದ್ದು; ಹಿಮಾಚಲ ಪ್ರದೇಶದಂತೆ ರಾಜ್ಯದಲ್ಲಿಯೂ ಚುನಾವಣಾ ವಿಷಯವಾಗಲಿದೆಯೇ?
ಹಿಮಾಚಲ ಪ್ರದೇಶದಲ್ಲಿ ನೂತನ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದುಪಡಿಸಿ, ಹಳೆಯ ಪಿಂಚಣಿ ಯೋಜನೆ(ಒಪಿಎಸ್) ಜಾರಿಗೊಳಿಸುವ ತೀರ್ಮಾನವನ್ನು ಮೊದಲ ಸಚಿವ ಸಂಪುಟದ ಸಭೆಯಲ್ಲಿಯೇ ತೆಗೆದುಕೊಳ್ಳಲಾಗುವುದು ಎಂದು ಆ ರಾಜ್ಯದ ನೂತನ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ (NPS News) ಪ್ರಕಟಿಸಿದ್ದಾರೆ. ಇದರ ಬೆನ್ನಲ್ಲಿಯೇ ರಾಜ್ಯದಲ್ಲಿಯೂ ಎನ್‌ಪಿಎಸ್ ವಿರುದ್ಧದ ಹೋರಾಟ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆಗಳಿವೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
9. Shahrukh Khan | ಮೆಕ್ಕಾ ಬಳಿಕ ವೈಷ್ಣೋದೇವಿ ದೇವಸ್ಥಾನಕ್ಕೆ ಭೇಟಿ ಕೊಟ್ಟ ಶಾರುಖ್ ಖಾನ್: ವಿಡಿಯೊ ವೈರಲ್!
ಬಾಲಿವುಡ್ ನಟ ಶಾರುಖ್ ಖಾನ್ (Shahrukh Khan ) ಮೆಕ್ಕಾಗೆ ಭೇಟಿ ನೀಡಿದ ನಂತರ ಜಮ್ಮು ಮತ್ತು ಕಾಶ್ಮೀರದ ವೈಷ್ಣೋದೇವಿ ದೇವಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಶಾರುಖ್ ತನ್ನ ಭದ್ರತಾ ಸಿಬ್ಬಂದಿಯಿಂದ ಸುತ್ತುವರಿದು ದೇವಸ್ಥಾನದ ಕಡೆಗೆ ಹೋಗುತ್ತಿರುವ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
10. Success secret | ಜೀವನದಲ್ಲಿ ಯಶಸ್ವಿಯಾಗಲು ಏನು ಬೇಕು? ಇಲ್ಲಿದೆ ಉತ್ತರ!
ಅಮೆರಿಕದ ನ್ಯೂಯಾರ್ಕ್‌ನ ಮನೋವೈದ್ಯರ ತಂಡವೊಂದು, ಯಶಸ್ವಿಯಾಗಲು ವ್ಯಕ್ತಿಯಲ್ಲಿ ಇರಬೇಕಾದ್ದೇನು ಎಂಬ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸಿತು. ಅದರಲ್ಲಿ ತಿಳಿದು ಬಂದದ್ದೇನು ಗೊತ್ತೇ? ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಮತ್ತಷ್ಟು ಪ್ರಮುಖ ಸುದ್ದಿಗಳು
- Brims hospital | ಹೆರಿಗೆ ನೋವಿನಲ್ಲಿದ್ದ ತುಂಬು ಗರ್ಭಿಣಿಯನ್ನು 2 ಗಂಟೆ ಕಾಲ ಆಸ್ಪತ್ರೆಯಿಂದ ಆಸ್ಪತ್ರೆಗೆ ಓಡಾಡಿಸಿದರು!
- Bhupendra Patel | ಗುಜರಾತ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಭೂಪೇಂದ್ರ ಪಟೇಲ್
- AAP MLAs | ಗುಜರಾತ್ ಆಪ್ ಶಾಸಕರ ಜತೆಗೆ ಮೂವರು ಪಕ್ಷೇತರ ಎಂಎಲ್‌ಎಗಳು ಬಿಜೆಪಿಗೆ?
- CBSE board exams 2023 | ಸಿಬಿಎಸ್ಇ 10, 12ನೇ ತರಗತಿ ಪರೀಕ್ಷೆ ಪ್ರಶ್ನೆಗಳಲ್ಲಿ ಬದಲಾವಣೆ! ಸರ್ಕಾರ ಹೇಳಿದ್ದೇನು?
- Kantara Movie | ಕಾಂತಾರವನ್ನು ಕೊಂಡಾಡಿದ ಬಾಲಿವುಡ್ ನಟ ಹೃತಿಕ್ ರೋಷನ್!
- Assembly session | ಡಿ. 19ರಿಂದ ಬೆಳಗಾವಿ ಅಧಿವೇಶನ: 6 ಮಸೂದೆ ಮಂಡನೆ, ಸದಸ್ಯರ ಹಾಜರಾತಿ ಕಡ್ಡಾಯ