ಬೆಂಗಳೂರು: ಶ್ರೀ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರ ದೀಕ್ಷಾ ದಿನದ ಪ್ರಯುಕ್ತ ಒಕ್ಕಲಿಗ ಯುವ ಬ್ರಿಗೇಡ್ ಹಾಗೂ ಎನ್‌ಆರ್‌ಐ ಒಕ್ಕಲಿಗ ಬ್ರಿಗೇಡ್ ವತಿಯಿಂದ ಆಗಸ್ಟ್ 26ರಂದು ಬೆಳಗ್ಗೆ 9.30ಕ್ಕೆ ಸಂಜೆ 5 ಗಂಟೆವರೆಗೆ ನಗರದ ನಾಗದೇವನಹಳ್ಳಿ-ಮರಿಯಪ್ಪನಪಾಳ್ಯದ ರಿಂಗ್ ರೋಡ್‌ನ ಜ್ಞಾನಭಾರತಿ 2ನೇ ಬ್ಲಾಕ್‌ನ ಇಂಡಿಯನ್ ಹೈಸ್ಕೂಲ್ ಆವರಣದಲ್ಲಿ ಮಣ್ಣಿನ ಮಕ್ಕಳಿಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಶ್ರೀ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ, ಮಠದ ಗೌರವ ಕಾರ್ಯದರ್ಶಿ ಶ್ರೀ ಸೌಮ್ಯನಾಥ ಸ್ವಾಮೀಜಿ ಅವರು ಕಾರ್ಯಕ್ರಮದ ಸಾನ್ನಿಧ್ಯ ವಹಿಸಲಿದ್ದಾರೆ. ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದು, ಬೆಂಗಳೂರು ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಸುರೇಶ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಇನ್‌ಸ್ಟಿಟ್ಯೂಟ್ ಅಫ್ ಗ್ಯಾಸ್ಟ್ರೋಎಂಟರಾಲಜಿ ಸೈನ್ಸಸ್ ಆ್ಯಂಡ್ ಆರ್ಗನ್ ಟ್ರಾನ್ಸ್‌ಪ್ಲಾಂಟ್ ಸಂಸ್ಥೆಯ ಡಾ.ಎನ್.ಎಸ್.ನಾಗೇಶ್, ಗೌರವ ಅತಿಥಿಗಳಾಗಿ ಶ್ರೀ ಸಾಯಿ ಸನ್ನಿಧಿ ಎಸ್ಟೇಟ್ಸ್‌ನ ವ್ಯವಸ್ಥಾಪಕ ನಿರ್ದೇಶಕ ನಯನ್ ಗೌಡ, ಒಕ್ಕಲಿಗರ ಸಂಘದ ಮಾಜಿ ನಿರ್ದೇಶಕ ಹಾಗೂ ಇಂಡಿಯನ್ ಪಬ್ಲಿಕ್ ಸ್ಕೂಲ್‌ನ ಅಧ್ಯಕ್ಷ ಎಚ್.ಆನಂದ್ ಅವರು ಉಪಸ್ಥಿತರಿರಲಿದ್ದಾರೆ.
ಇದನ್ನೂ ಓದಿ | Generative AI: ಜನರೇಟಿವ್ ಕೃತಕ ಬುದ್ಧಿಮತ್ತೆಯಿಂದ ಉದ್ಯೋಗ ನಷ್ಟವಾಗಲ್ಲ, ಹೆಚ್ಚಾಗುತ್ತವೆ!
ಎಸ್‌ಎಸ್‌ಎಲ್‌ಸಿ, ಪಿಯುಸಿ, ಯಾವುದೇ ಪದವಿ, ಐಟಿಐ, ಡಿಪ್ಲೊಮಾ, ಎಂಜಿನಿಯರಿಂಗ್, ಸ್ನಾತಕೋತ್ತರ ಪದವಿ, ಎನ್‌ಟಿಟಿ, ಟಿಸಿಎಚ್, ಬಿ.ಇಡಿ, ಎಂ.ಇಡಿ ವಿದ್ಯಾರ್ಹತೆ ಹೊಂದಿರುವ ಯುವಕ, ಯುವತಿಯರು ಶೈಕ್ಷಣಿಕ ದಾಖಲೆಗಳೊಂದಿಗೆ ಉದ್ಯೋಗ ಮೇಳಕ್ಕೆ ಆಗಮಿಸಬಹುದು. ಉದ್ಯೋಗ ಮೇಳದಲ್ಲಿ ಹಲವು ರಾಷ್ಟ್ರೀಯ, ಅಂತಾರಾಷ್ಟ್ತೀಯ ಕಂಪನಿಗಳು ಭಾಗವಹಿಸಲಿವೆ. ಹೆಚ್ಚಿನ ಮಾಹಿತಿಗಾಗಿ ಮೋಹನ್ ಮೊ. 9686564192, ಪುನೀತ್ ಮೊ. 9483697316 ಸಂಪರ್ಕಿಸಿ.