Karnataka Election 2023: ಮತದಾನದ ದಿನ 'ಜೈ ಬಜರಂಗಬಲಿ' ಎನ್ನುತ್ತಾ ಕಮಲದ ಬಟನ್ ಒತ್ತಿ: ಪ್ರಧಾನಿ ನರೇಂದ್ರ ಮೋದಿ - Vistara News

ಉತ್ತರ ಕನ್ನಡ

Karnataka Election 2023: ಮತದಾನದ ದಿನ ‘ಜೈ ಬಜರಂಗಬಲಿ’ ಎನ್ನುತ್ತಾ ಕಮಲದ ಬಟನ್ ಒತ್ತಿ: ಪ್ರಧಾನಿ ನರೇಂದ್ರ ಮೋದಿ

Karnataka Election 2023: ಉತ್ತರ ಕರ್ನಾಟಕ ಜಿಲ್ಲೆಯ ಅಂಕೋಲಾದಲ್ಲಿ ಆಯೋಜಿಸಲಾಗಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು, ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದರು.

VISTARANEWS.COM


on

Vote for bjp with chanting Jai bajrangabali Says PM Narendra Modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಂಕೋಲಾ, ಉತ್ತರ ಕನ್ನಡ: ಕರ್ನಾಟಕವನ್ನು ನಂ.1 ರಾಜ್ಯವನ್ನಾಗಿ ಮಾಡಲು ಬಿಜೆಪಿ ಮತಯಾಚನೆ ಮಾಡುತ್ತಿದೆ. ಆದರೆ, ಕಾಂಗ್ರೆಸ್ ಹೇಗೆ ಮತ ಕೇಳುತ್ತಿದೆ ಗೊತ್ತಾ? ನಮ್ಮ ನಾಯಕ(ಸಿದ್ದರಾಮಯ್ಯ) ಚುನಾವಣೆಯಿಂದ ನಿವೃತ್ತಿಯಾಗುತ್ತಿದ್ದಾನೆ, ಮತ ನೀಡಿ ಎನ್ನುತ್ತಿದೆ. ಅಲ್ಲದೇ, ಮೋದಿಯನ್ನು ಬೈಯುವುದರ ಮೂಲಕ ವೋಟ್ ಮಾಡಿ ಎನ್ನುತ್ತಿದೆ. ಯಾರನ್ನಾದರೂ ಬೈದರೆ ಕರ್ನಾಟಕದವರು ಸಹಿಸಿಕೊಳ್ಳುತ್ತಾರೆಯೇ? ಇಲ್ಲ ಅಲ್ಲವೇ, ಅಂಥವರಿಗೆ ಶಿಕ್ಷೆ ಕೊಡಬೇಕಲ್ಲವೇ? ಹಾಗಿದ್ದರೆ, ಮತದಾನದ ದಿನ ‘ಜೈ ಬಜರಂಗಬಲಿ’ ಎಂದು ಕಮಲದ ಬಟನ್ ಒತ್ತುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಶಿಕ್ಷಿಸಿ ಎಂದು ಪ್ರಧಾನಿ ನರೇಂದ್ರ ಮೋದಿ(PM Narendra Modi) ಅವರು ಹೇಳಿದರು(Karnataka Election 2023).

ಉತ್ತರ ಕನ್ನಡ ಜಿಲ್ಲೆಯಲ್ಲಿ ಆಯೋಜಿಸಲಾಗಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹೇಗೆ ನಕಲಿ ಹೆಸರಿನಲ್ಲಿ ಭ್ರಷ್ಟಾಚಾರ ಮಾಡುತ್ತಿತ್ತು, ಮೋದಿ ಸರ್ಕಾರ ಆ ವ್ಯವಸ್ಥೆಯನ್ನು ಹೇಗೆ ನಿರ್ನಾಮ ಮಾಡಿತು ಎಂಬ ಕುರಿತು ವಿವರಿಸಿದರು. ಅಲ್ಲದೇ, ಮೀನುಗಾರರಿಗೆ ಕೇಂದ್ರ ಸರ್ಕಾರ ಕೈಗೊಂಡಿರುವ ಅಭಿವೃದ್ದಿ ಮತ್ತು ಕಲ್ಯಾಣ ಕಾರ್ಯಕ್ರಮಗಳ ಬಗ್ಗೆಯೂ ಹೇಳಿದರು.

ಕಾಂಗ್ರೆಸ್ ಆಡಳಿತದಲ್ಲಿ ನಕಲಿ ಹೆಸರುಗಳಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿತ್ತು. ಸರ್ಕಾರಿ ಯೋಜನೆಗಳ ಹಣವನ್ನು ಲೂಟಿ ಮಾಡಲಾಗುತ್ತಿತ್ತು. ಕಾಂಗ್ರೆಸ್‌ನವರು 4.2 ಕೋಟಿ ನಕಲಿ ಜನರಿಗೆ ರೇಷನ್ ಕೊಟ್ಟಿದ್ದರು. 4 ಕೋಟಿ ನಕಲಿ ಹೆಸರಿನಲ್ಲಿ ಗ್ಯಾಸ್‌ ಸಬ್ಸಿಡಿ ನೀಡಿದ್ದರು. 1 ಕೋಟಿ ನಕಲಿ ಹೆಸರಿನಲ್ಲಿ ಮಹಿಳಾ ಮಕ್ಕಳ ಕಲ್ಯಾಣ ಯೋಜನೆಯ ಹಣ ನೀಡಿದ್ದರು. 30 ಲಕ್ಷ ನಕಲಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ನೀಡುತ್ತಿದ್ದರು. ಭಾರತದ ಮೂಲೆ ಮೂಲೆಯಿಂದ 10 ಕೋಟಿ ಜನರ ನಕಲಿ ಹೆಸರಗಳನ್ನ ಕಾಂಗ್ರೆಸ್ ಸರ್ಕಾರಿ ದಾಖಲೆಗ ಪತ್ರಗಳಿಗೆ ಸೇರಿಸಿತ್ತು.ಹೀಗೆ ನಕಲಿ ಹೆಸರಿನಲ್ಲಿ ಬರುತ್ತಿದ್ದ ಹಣ ಎಲ್ಲಿ ಹೋಗುತ್ತಿತ್ತು? ಖಂಡಿತವಾಗಿಯೂ ಈ ಕಾಂಗ್ರೆಸ್‌ನ ಮೇಲಸ್ತರದ ನಾಯಕರಿಂದ ಕಳ ಹಂತದ ನಾಯಕರ ಜೇಬಿಗೆ ಹೋಗುತ್ತಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಆರೋಪಿಸಿದರು.

ಕಾಂಗ್ರೆಸ್‌ನವರು ಮೋದಿಗೆ ಯಾಕೆ ಬೈಯುತ್ತಾರೆ ಗೊತ್ತಾ? ಕಾಂಗ್ರೆಸ್ ಸೃಷ್ಟಿಸಿದ ಈ ಭ್ರಷ್ಟ ವ್ಯವಸ್ಥೆಯನ್ನು ನಾನು ನಾಶ ಮಾಡಿದೆ. ಅದಕ್ಕೆ ಕಾಂಗ್ರೆಸ್‌ನವರು ಮೋದಿಯನ್ನು ಬೈಯುತ್ತಾರೆ. ನಾನು 9 ವರ್ಷಗಳಲ್ಲಿ ಈ ನಕಲಿ ಹೆಸರಿನಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರ ತಡೆದಿದ್ದೇನೆ. ಇದರಿಂದ 3.75 ಲಕ್ಷ ಕೋಟಿ ರೂ. ಉಳಿತಾಯ ಮಾಡಿದ್ದೇನೆ ಎಂದು ಪ್ರಧಾನಿ ಮೋದಿ ಅವರು ತಿಳಿಸಿದರು.

ಕಾಂಗ್ರೆಸ್‌ಗೆ ಆದಿವಾಸಿಗಳನ್ನು ಕಂಡರೆ ಆಗದು

ಕಾಂಗ್ರೆಸ್ ಪಕ್ಷವೂ ಎಂದಿಗೂ ಆದಿವಾಸಿಗಳ ಪರವಾಗಿ ಇರಲಿಲ್ಲ. ಬಿಜೆಪಿಯು ದೇಶದ ಮೊದಲ ಆದಿವಾಸಿ ಮಹಿಳೆಯನ್ನು ದೇಶದ ಉನ್ನತ ಸ್ಥಾನಕ್ಕೆ ಆಯ್ಕೆ ಮಾಡಿತು. ಕಾಂಗ್ರೆಸ್ ಇದಕ್ಕೂ ವಿರೋಧ ವ್ಯಕ್ತಪಡಿಸಿತು. ಬಿಜೆಪಿ ಅಭ್ಯರ್ಥಿ ಎಂಬ ಕಾರಣಕ್ಕೆ ಆದಿವಾಸಿ ಮಹಿಳೆಯನ್ನು ವಿರೋಧಿಸಲಿಲ್ಲ. ಬದಲಾಗಿ, ಅದರ ನೀತಿಯೇ ಆದಿವಾಸಿಗಳನ್ನು ಉದ್ದರಿಸುವುದಾಗಿಲ್ಲ ಎಂದು ಹೇಳಿದರು. ಇದೇ ವೇಳೆ, ಅವರು ಉತ್ತರ ಕನ್ನಡ ಜಿಲ್ಲೆಯ ಸಕ್ರಿ ಬೊಮ್ಮಗೌಡ ಸೇರಿದಂತೆ ಇತರ ಮಹಿಳೆಯರನ್ನು ಸ್ಮರಿಸಿಕೊಂಡರು.

ಇದನ್ನೂ ಓದಿ: Karnataka Election: ಭ್ರಷ್ಟಾಚಾರ ವಿರುದ್ಧ ಹೋರಾಡುತ್ತಿರುವ ನನಗೆ ಕಾಂಗ್ರೆಸ್ ಧಮ್ಕಿ ಹಾಕುತ್ತಿದೆ; ಪ್ರಧಾನಿ ನರೇಂದ್ರ ಮೋದಿ

ಮೊಳಗಿದ ಜೈ ಬಜರಂಗ ಬಲಿ ಘೋಷಣೆ

ಪ್ರಧಾನಿ ನರೇಂದ್ರ ಮೋದಿ ಅಂಕೋಲಾದಲ್ಲಿ ತಮ್ಮ ಭಾಷಣವನ್ನು ಜೈ ಬಜರಂಗಿಬಲಿ ಎಂದು ಐದು ಬಾರಿ ಘೋಷಣೆ ಕೂಗುವ ಮೂಲಕ ಆರಂಭಿಸಿದರು. ಕನ್ನಡದಲ್ಲಿ ಶುರು ಮಾಡಿದ ಭಾಷಣಕ್ಕೆ ನೆರೆದಿದ್ದ ಜನರು ಕೂಡ ಅಷ್ಟೇ ಅತ್ಯುತ್ಸಾಹದಿಂದ ಪ್ರತಿಕ್ರಿಯಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಬಿರುಗಾಳಿ ಮಳೆಗೆ ಜನರು ತತ್ತರ; ಸಿಡಿಲಿಗೆ ಎತ್ತುಗಳು ಬಲಿ, ನೆಲಕಚ್ಚಿದ ಬೆಳೆಗಳು

Karnataka Weather Forecast : ಬಿರುಗಾಳಿ ಸಹಿತ ಸುರಿದ ಮಳೆಗೆ (Rain News) ಬೀದರ್‌, ವಿಜಯನಗರ, ದಾವಣಗೆರೆ ರೈತರು ತತ್ತರಿಸಿ ಹೋಗಿದ್ದಾರೆ. ಸಾಲಸೋಲ ಮಾಡಿ ಖರೀದಿಸಿದ್ದ ಎತ್ತುಗಳು ಸಿಡಿಲಿಗೆ ಬಲಿಯಾದರೆ, ನೀರಿಲ್ಲದಿದ್ದರೂ ಟ್ಯಾಂಕರ್‌ ಮೂಲಕ ಕಷ್ಟ ಪಟ್ಟು ಬೆಳೆದಿದ್ದ ಬೆಳೆಯು ನೆಲಕಚ್ಚಿದೆ. ಸದ್ಯ ಬುಧವಾರದಂದು ಎಲ್ಲೆಲ್ಲಿ ಮಳೆ ಮುನ್ಸೂಚನೆಯನ್ನು ನೀಡಲಾಗಿದೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯದ ಹಲವೆಡೆ ಮಳೆ ಅಬ್ಬರಕ್ಕೆ ಜನ-ಜೀವನ ಅಸ್ತವ್ಯಸ್ತವಾಗಿದೆ. ಮುಂದಿನ 24 ಗಂಟೆಯಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ (Rain News) ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಮಧ್ಯ‌ ಮಹಾರಾಷ್ಟ್ರದಿಂದ ಕರ್ನಾಟಕ ಸೇರಿ ಕೇರಳದವರೆಗೆ ಸುಳಿಗಾಳಿಯ ಚಲನೆಯಿಂದ ಹವಾಮಾನದಲ್ಲಿ ವೈಪರಿತ್ಯ ಉಂಟಾಗಿದೆ. ಇದರ ಪ್ರಭಾವದಿಂದಾಗಿ ಇನ್ನೆರಡು ದಿನಗಳು ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ.

ಪ್ರಮುಖವಾಗಿ ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಬಾಗಲಕೋಟೆ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಸೇರಿ ದಕ್ಷಿಣ ಒಳನಾಡಿನ ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗಲಿದೆ. ಇನ್ನೂ 30-40 ಕಿಮೀ ವೇಗದಲ್ಲಿ ಬಿರುಸಿನ ಗಾಳಿ ಬೀಸಲಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಇದನ್ನೂ ಓದಿ:Murder Case : ಕೊಲೆಯಾದ ಮಹಿಳೆಗೆ 20 ಹುಡುಗರ ಸಹವಾಸ! ಅವರಿಗೆ ಆಕೆ ಇಟ್ಟಿದ್ದ ಹೆಸರು ಆರೆಂಜ್, ಆ್ಯಪಲ್, ಬನಾನಾ ಇತ್ಯಾದಿ!

ಸಿಡಿಲಿಗೆ ಎತ್ತುಗಳು ಬಲಿ

ಬೀದರ್‌ನ ಔರಾದ್ ತಾಲೂಕಿನ ಕೊಳ್ಳೂರ ಗ್ರಾಮದಲ್ಲಿ ಸಿಡಿಲು ಬಡಿದು 2 ಎತ್ತುಗಳು ಮೃತಪಟ್ಟಿರುವ ಘಟನೆ ನಡೆದಿದೆ. ಸೋಮವಾರ ತಡರಾತ್ರಿಯಲ್ಲಿ ಭಾರಿ ಮಳೆಯೊಂದಿಗೆ ಸಿಡಿಲು ಬಡಿದಿದೆ. ಪರಿಣಾಮ ಸಾಗರ ಬಸವರಾಜ ಪಾಟೀಲ ಎಂಬುವವರಿಗೆ ಸೇರಿದ ಎತ್ತುಗಳು ಮೃತಪಟ್ಟಿವೆ.

ವಿಜಯನಗರದಲ್ಲಿ ಗಾಳಿ-ಮಳೆಗೆ ಹಾರಿದ ಶಾಮಿಯಾನ

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಸೀತಾರಾಮ್ ತಾಂಡಾದ ಗ್ರಾಮದ ಬಳಿಯ ಆಂಜನೇಯ ದೇಗುಲದಲ್ಲಿ ಹನುಮ ಜಯಂತಿ ನಿಮಿತ್ತ ಶಾಮಿಯಾನ, ಲೈಟಿಂಗ್ ಹಾಕಲಾಗಿತ್ತು. ಆದರೆ ಜೋರಾಗಿ ಬೀಸಿದ ಗಾಳಿ, ಮಳೆಗೆ ಶಾಮಿಯಾನ, ಲೈಟಿಂಗ್ಸ್‌ ಹಾರಿ ಹೋಗಿತ್ತು. ಇದರಿಂದಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿತ್ತು.

ತಡರಾತ್ರಿ ಬಿರುಗಾಳಿ ಸಹಿತ ಮಳೆಗೆ ಹತ್ತಾರು ಎಕರೆ ಪಪ್ಪಾಯಿ ಬೆಳೆ ನೆಲಕ್ಕೆ ಉರುಳಿದೆ. ಹಗರಿಬೊಮ್ಮನಹಳ್ಳಿ ತಾಲೂಕಿನ ವಟ್ಟಮ್ಮನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ವಟ್ಟಮ್ಮನಹಳ್ಳಿ ಗ್ರಾಮದ ಮೂಗಪ್ಪ ಎಂಬುವರಿಗೆ ಸೇರಿದ 5 ಎಕರೆ ಪಪ್ಪಾಯಿ ಬೆಳೆ ಹಾಳಾಗಿದೆ. ಇದರಿಂದ ಅಂದಾಜು 5 ರಿಂದ 7 ಲಕ್ಷ ರೂಪಾಯಿ ಬೆಲೆ ಬಾಳುವ ಪಪ್ಪಾಯಿ ಬೆಳೆಗೆ ಹಾನಿಯಾಗಿದೆ. ಇದೇ ಗ್ರಾಮದ ಪತ್ರಿಗೌಡ ಹೊನ್ನೆಹಳ್ಳಿ ಎನ್ನುವವರ 3 ಎಕರೆ, ಕುಸುಮ ಅವರ 4 ಎಕರೆ ಪಪ್ಪಾಯಿ ಬೆಳೆ ನಷ್ಟವಾಗಿದೆ. ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೂಕ್ತ ಪರಿಹಾರಕ್ಕೆ ರೈತರು ಆಗ್ರಹಿಸಿದ್ದಾರೆ.

ದಾವಣಗೆರೆಯಲ್ಲಿ ಬಾಳೆ ಬೆಳೆ ನಾಶ

ಸೋಮವಾರ ಸಂಜೆ ಸುರಿದ ಗಾಳಿ ಮಳೆಗೆ ಅಪಾರ ಪ್ರಮಾಣದ ಬಾಳೆ ಬೆಳೆ ನಾಶವಾಗಿವೆ. ದಾವಣಗೆರೆಯ ಜಗಳೂರು ತಾಲೂಕಿನ ಕಟ್ಟಿಗೆಹಳ್ಳಿ, ಜಮ್ಮಪುರ, ಹರಿಶಿನಗುಂಡಿ ಸೇರಿದಂತೆ ಹಲವು ಕಡೆ ಬೆಳೆ ನಾಶವಾಗಿದೆ. ಕಟ್ಟಿಗೆಹಳ್ಳಿ ಗ್ರಾಮದ ಸಿದ್ದಮ್ಮ, ಬಸವರಾಜಪ್ಪ ಎಂಬುವರಿಗೆ ಸೇರಿದ 20 ಎಕರೆ ಬಾಳೆ ತೋಟ ನೆಲಕಚ್ಚಿದೆ. ಬರಗಾಲದಲ್ಲಿ ಟ್ಯಾಂಕರ್ ನೀರು ಖರೀದಿ ಮಾಡಿ ಬಾಳೆ ಬೆಳೆಸಿದ್ದರು. ಆದರೆ ಗಾಳಿ ಮಳೆಗೆ ಬಾಳೆಯು ನೆಲಸಮವಾಗಿದೆ. ಕೂಡಲೇ ಹಾನಿಗೊಂಡ ಬೆಳೆಗೆ ಸರ್ಕಾರ ಪರಿಹಾರ ‌ನೀಡುವಂತೆ ಒತ್ತಾಯಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

Modi in Karnataka: ಏಪ್ರಿಲ್‌ 28 – 29ಕ್ಕೆ ಪ್ರಧಾನಿ ನರೇಂದ್ರ ಮೋದಿ ಪ್ರವಾಸ; ಯಾವ ಯಾವ ಕ್ಷೇತ್ರದಲ್ಲಿ ಮತ ಬೇಟೆ?

Modi in Karnataka: ಏಪ್ರಿಲ್‌ 28ರಂದು ರಾಜ್ಯಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಂದು ಮೂರು ಕಡೆ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ದಾವಣಗೆರೆ, ಬೆಳಗಾವಿ ಹಾಗೂ ಉತ್ತರಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಮೋದಿ ಪ್ರಚಾರ ನಡೆಸಲಿದ್ದಾರೆ. ಈ ಮೂಲಕ ಇವುಗಳೂ ಸೇರಿದಂತೆ ಸುತ್ತಮುತ್ತಲಿನ ಲೋಕಸಭಾ ಕ್ಷೇತ್ರಗಳ ಮತದಾರರನ್ನೂ ಸೆಳೆಯಲು ಬಿಜೆಪಿ ಪ್ಲ್ಯಾನ್‌ ಮಾಡಿಕೊಂಡಿದೆ.

VISTARANEWS.COM


on

Modi in Karnataka PM Narendra Modi to visit from April 28 and 29
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಈಗಾಗಲೇ ಒಂದು ಸುತ್ತಿನ ಮತ ಬೇಟೆ ಮುಗಿಸಿ ತೆರಳಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಎರಡನೇ ಹಂತದ ಚುನಾವಣೆಗೆ ರಿಎಂಟ್ರಿ ಕೊಡಲಿದ್ದಾರೆ. ಈ ವೇಳೆ ಮೋದಿ (Modi in Karnataka) ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಏಪ್ರಿಲ್‌ 28 ಹಾಗೂ 29ರಂದು ಕರ್ನಾಟಕದಲ್ಲಿ ಜನರನ್ನು ಮೋಡಿ ಮಾಡಲು ಮೋದಿ ಮುಂದಾಗಿದ್ದಾರೆ.

ಏಪ್ರಿಲ್‌ 28ರಂದು ರಾಜ್ಯಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಂದು ಮೂರು ಕಡೆ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ದಾವಣಗೆರೆ, ಬೆಳಗಾವಿ ಹಾಗೂ ಉತ್ತರಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಮೋದಿ ಪ್ರಚಾರ ನಡೆಸಲಿದ್ದಾರೆ. ಈ ಮೂಲಕ ಇವುಗಳೂ ಸೇರಿದಂತೆ ಸುತ್ತಮುತ್ತಲಿನ ಲೋಕಸಭಾ ಕ್ಷೇತ್ರಗಳ ಮತದಾರರನ್ನೂ ಸೆಳೆಯಲು ಬಿಜೆಪಿ ಪ್ಲ್ಯಾನ್‌ ಮಾಡಿಕೊಂಡಿದೆ.

ಮೂರು ಕಡೆಯೂ ಬೃಹತ್‌ ಸಮಾವೇಶ

ಈ ಮೂರು ಲೋಕಸಭಾ ಕ್ಷೇತ್ರಗಳಲ್ಲಿಯೂ ಬೃಹತ್‌ ಸಮಾವೇಶ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಂದು ಬೆಳಗಾವಿಯಲ್ಲಿ 28 ರಾತ್ರಿ ವಾಸ್ತವ್ಯ ಹೂಡಲಿದ್ದಾರೆ.

29ರಂದು 4 ಕಡೆ ಸಮಾವೇಶ

ಏಪ್ರಿಲ್‌ 29ರಂದು ಕಲಬುರಗಿ, ಬಳ್ಳಾರಿ, ರಾಯಚೂರು ಅಥವಾ ಕೊಪ್ಪಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಮಾವೇಶವನ್ನು ನಡೆಸಲಿದ್ದಾರೆ.

ಕರ್ನಾಟಕದಲ್ಲಿ ಇಂದು ಅಮಿತ್‌ ಶಾ, ಪ್ರಿಯಾಂಕಾ ವಾದ್ರಾ ಪ್ರಚಾರ

ಮಂಗಳವಾರ (ಏಪ್ರಿಲ್‌ 23) ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಹಾಗೂ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ (Priyanka Vadra) ಅವರು ಅಬ್ಬರದ ಪ್ರಚಾರ ಮಾಡಲಿದ್ದಾರೆ.

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿಯೇ ಮಂಗಳವಾರ ಅಮಿತ್‌ ಶಾ ಹಾಗೂ ಪ್ರಿಯಾಂಕಾ ವಾದ್ರಾ ಅವರು ಪ್ರಚಾರ ಮಾಡುತ್ತಿರುವುದು ವಿಶೇಷವಾಗಿದೆ. ಇಂದು ಸಂಜೆ 7.50ಕ್ಕೆ ಅಮಿತ್‌ ಶಾ ಅವರು ತೇಜಸ್ವಿ ಸೂರ್ಯ ಪರ ರೋಡ್‌ ಶೋ ನಡೆಸಲಿದ್ದಾರೆ. ಸ್ವಾಮಿ ವಿವೇಕಾನಂದ ವೃತ್ತದಿಂದ ಸೇಂಟ್‌ ಫ್ರಾನ್ಸಿಸ್‌ ಶಾಲೆವರೆಗೂ ಅಮಿತ್‌ ಶಾ ಅವರು ರೋಡ್‌ ಶೋ ನಡೆಸುವ ಮೂಲಕ ತೇಜಸ್ವಿ ಸೂರ್ಯ ಪರ ಮತಯಾಚನೆ ಮಾಡಲಿದ್ದಾರೆ. ರೋಡ್‌ ಶೋಗಾಗಿ ಬಿಜೆಪಿ ಸಕಲ ಸಿದ್ಧತೆ ಮಾಡಿಕೊಂಡಿದೆ. 8.45ರವರೆಗೆ ರೋಡ್‌ ಶೋ ನಡೆಯಲಿದೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರು ಮಧ್ಯಾಹ್ನ 2 ಗಂಟೆಗೆ ಚಿತ್ರದುರ್ಗಕ್ಕೆ ಆಗಮಿಸಲಿದ್ದು, ಬಹಿರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ ಪ್ರಿಯಾಂಕಾ ವಾದ್ರಾ ಅವರು ಭಾಷಣ ಮಾಡಲಿದ್ದಾರೆ. ಇದಾದ ನಂತರ ಸಂಜೆ ಬೆಂಗಳೂರಿಗೆ ಆಗಮಿಸುವ ಪ್ರಿಯಾಂಕಾ ವಾದ್ರಾ, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯಾ ರೆಡ್ಡಿ ಅವರ ಪರವಾಗಿ ಪ್ರಚಾರ ನಡೆಸುವ ಮೂಲಕ ಹೆಣ್ಣುಮಕ್ಕಳ ಮತ ಸೆಳೆಯುವ ಪ್ರಯತ್ನ ಮಾಡಲಿದ್ದಾರೆ.

ಅಮಿತ್‌ ಶಾ ಅವರು ಬೊಮ್ಮನಹಳ್ಳಿ ವೃತ್ತದಿಂದ ಪ್ರಚಾರ ಆರಂಭಿಸಿದರೆ, ಪ್ರಿಯಾಂಕಾ ವಾದ್ರಾ ಅವರು ಬೊಮ್ಮನಹಳ್ಳಿ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯ ಎಚ್.ಎಸ್. ಆರ್ ಬಡಾವಣೆಯಿಂದ ಪ್ರಚಾರ ಆರಂಭಿಸಲಿದ್ದಾರೆ. ಕರ್ನಾಟಕದಲ್ಲಿ ಏಪ್ರಿಲ್‌ 26ರಂದು ಮೊದಲ ಹಂತದ ಮತದಾನ ನಡೆಯಲಿದ್ದು, ಏಪ್ರಿಲ್‌ 24ರಂದೇ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಇದರಿಂದಾಗಿ ಮಂಗಳವಾರದ ಪ್ರಚಾರವು ಪ್ರಾಮುಖ್ಯತೆ ಪಡೆದಿದೆ. ಕರ್ನಾಟಕದಲ್ಲಿ ಈಗಾಗಲೇ ನರೇಂದ್ರ ಮೋದಿ ಅವರು ಪ್ರಚಾರ ನಡೆಸಿದ್ದಾರೆ.

Continue Reading

ಪ್ರಮುಖ ಸುದ್ದಿ

Tulsi Gowda: ಮನೆಯಲ್ಲಿ ಕಾಲು ಜಾರಿ ಬಿದ್ದು ಪದ್ಮಶ್ರೀ ತುಳಸಿ ಗೌಡ ಅಸ್ವಸ್ಥ

Tulsi Gowda: ಲಕ್ಷಾಂತರ ಮರಗಳನ್ನು ಬೆಳೆಸಿ ವೃಕ್ಷಮಾತೆ ಎನಿಸಿಕೊಂಡಿರುವ ತುಳಸಿ ಗೌಡ ಅವರಿಗೆ ಸದ್ಯ ಕಾರವಾರದ ಜಿಲ್ಲಾಸ್ಪತ್ರೆಯ ಐಸಿಯು‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

VISTARANEWS.COM


on

Tulsi Gowda
Koo

ಕಾರವಾರ: ಮನೆಯಲ್ಲಿ ಕಾಲು ಜಾರಿ ಬಿದ್ದು ಪದ್ಮಶ್ರೀ ತುಳಸಿ ಗೌಡ ಅವರು ಅಸ್ವಸ್ಥರಾಗಿದ್ದು, ಅವರನ್ನು ಕಾರವಾರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ಮನೆಯಲ್ಲಿ ವೃಕ್ಷಮಾತೆ ತುಳಸಿಗೌಡ (Tulsi Gowda) ಅವರು ಜಾರಿ ಬಿದ್ದಿದ್ದರಿಂದ ಕಾಲಿಗೆ ಪೆಟ್ಟಾಗಿತ್ತು.

ಲಕ್ಷಾಂತರ ಮರಗಳನ್ನು ಬೆಳೆಸಿ ವೃಕ್ಷಮಾತೆ ಎನಿಸಿಕೊಂಡಿರುವ ತುಳಸಿ ಗೌಡ ಅವರಿಗೆ ಸದ್ಯ ಐಸಿಯು‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾಲು ಜಾರಿ ಬಿದ್ದ ಪರಿಣಾಮ ತುಳಸಜ್ಜಿ ಅಸ್ವಸ್ಥಗೊಂಡಿದ್ದಾರೆ.

ಇದನ್ನೂ ಓದಿ | Car Accident: ಆಕಸ್ಮಿಕವಾಗಿ ಕಾರು ಹರಿದು ಒಂದೂವರೆ ವರ್ಷದ ಮಗು ಸಾವು; ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಓಮ್ನಿಗೆ ಬ್ಯಾಲೆನೊ ಡಿಕ್ಕಿ, ಬಾಲಕಿ ಸಾವು, 7 ಮಂದಿಗೆ ಗಾಯ, ಸುಟ್ಟುಹೋದ ಓಮ್ನಿ

madavara road accident

ಬೆಂಗಳೂರು: ಮಾದಾವರ ಟೋಲ್‌ಗೇಟ್ ಬಳಿ ಮಾರುತಿ ಒಮ್ನಿ (Maruti Omni) ವಾಹನಕ್ಕೆ ಬ್ಯಾಲೆನೋ ಕಾರು (Baleno) ಹಿಂದಿನಿಂದ ಬಂದು ಡಿಕ್ಕಿಯಾದ (Road Accident) ಪರಿಣಾಮ ಬಾಲಕಿಯೊಬ್ಬಳು (girl death) ಮೃತಪಟ್ಟಿದ್ದು, ಇನ್ನೂ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.

ತುಮಕೂರು ರಸ್ತೆ ಹೈವೇಯಲ್ಲಿ 10 ಗಂಟೆ ರಾತ್ರಿಯಲ್ಲಿ ಘಟನೆ ನಡೆದಿದೆ. ಓಮ್ನಿಯಲ್ಲಿದ್ದವರು ಅಬ್ಬಿಗೆರೆ, ದಾಸಾನುಪುರದ ಸಂಬಂಧಿಕರ ಮನೆಯಿಂದ ಬರುತ್ತಿದ್ದಾಗ ದುರಂತ ಘಟಿಸಿದೆ. ಒಟ್ಟು ಎಂಟು ಜನ ಮಾರುತಿ ಓಮ್ನಿ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಬ್ಯಾಲೆನೋ ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಬ್ಯಾಲೆನೋ ಕಾರು ಹಿಂದಿನಿಂದ ಬಂದು ಡಿಕ್ಕಿ ಹೊಡೆದ ರಭಸಕ್ಕೆ ಓಮ್ನಿ ಮೂರು ಪಲ್ಟಿಯಾಗಿದೆ. ಪಲ್ಟಿಯಾಗುತ್ತಿದ್ದಂತೆ ಓಮ್ನಿ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ.

ಎಂಟು ಜನರಲ್ಲಿ 14 ವರ್ಷದ ಬಾಲಕಿ ದಿವ್ಯ ಸ್ಥಳದಲ್ಲೇ ಸಾವಿಗೀಡಾಗಿದ್ದಾಳೆ. ನಾಲ್ಕು ಜನರ ಸ್ಥಿತಿ ಗಂಭೀರವಾಗಿದ್ದು, ಸದ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನುಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬ್ಯಾಲೆನೋ ಕಾರಿನಲ್ಲಿದ್ದ ಮೂರು ಜನರಲ್ಲಿ ಒಬ್ಬರಿಗೆ ಗಂಭೀರ ಗಾಯವಾಗಿದೆ ಎಂದು ಶಂಕಿಸಲಾಗಿದ್ದು, ಮೂವರೂ ಸ್ಥಳದಿಂದ ನಾಪತ್ತೆಯಾಗಿದ್ದಾರೆ. ಸ್ಥಳದಲ್ಲಿ ಕ್ರೇನ್ ಮೂಲಕ ಸುಟ್ಟ ಕಾರನ್ನು ತೆರವು ಮಾಡಲಾಯಿತು.

ಓಮ್ನಿ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ಎಂಟು ಜನರಲ್ಲಿ ಮಾಯಾಂಕ್, ಮಂಜುಳ, ಸುನಿತಾ, ತರುಣ್, ಮಹೇಶ್, ನಮನ್, ಶಾಂತಿಲಾಲ್ ಗಾಯಾಳುಗಳು. ದಿವ್ಯಾ (14) ಮೃತ ಬಾಲಕಿ. ಎಲ್ಲರೂ ದಾಸನಪುರ ನಿವಾಸಿಗಳು. ನಮನ್, ಸುನಿತಾ, ಮಾಯಾಂಕ್ ಸ್ಥಿತಿ ಗಂಭೀರವಾಗಿದೆ. ಓಮ್ನಿಯ ಪೆಟ್ರೋಲ್ ಟ್ಯಾಂಕ್‌ನಿಂದ ಪೆಟ್ರೋಲ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ | Rain News: ಪ್ರತ್ಯೇಕ ಮಳೆ ಅವಘಡ; ಬೀದರ್‌ನಲ್ಲಿ ಸಿಡಿಲು ಬಡಿದು ಇಬ್ಬರು ಯುವಕರ ದುರ್ಮರಣ

ಬ್ಯಾಲೆನೋ ಕಾರಿನಲ್ಲಿದ್ದ ಮೂರು ಜನ‌ರಿಗಾಗಿ ಪೊಲೀಸರಿಂದ ತೀವ್ರ ಹುಡುಕಾಟ ನಡೆದಿದೆ. ಮೂವರಲ್ಲಿ ಒಬ್ಬ ವ್ಯಕ್ತಿಗೆ ಗಂಭೀರ ಗಾಯವಾಗಿರುವ ಶಂಕೆ ಇದೆ. ಘಟನೆ ನಡೆಯುತ್ತಿದ್ದಂತೆ ಇವರು ಸ್ಥಳದಿಂದ ನಾಪತ್ತೆಯಾಗಿದ್ದಾರೆ. ಇವರನ್ನು ಪರಿಶೀಲನೆ ನಡೆಸಬೇಕಿದೆ ಎಂದು ಬೆಂಗಳೂರು ಗ್ರಾಮಾಂತರ ಎಸ್ ಪಿ ಮಲ್ಲಿಕಾರ್ಜುನ ಬಾಲಾದಂಡಿ ಹೇಳಿಕೆ ನೀಡಿದ್ದಾರೆ.

Continue Reading

ಮಳೆ

Karnataka Weather : ಸಿಡಿಲಿಗೆ 7 ಕುರಿಗಳು ಸಾವು, ಕೊಡಗಿನಲ್ಲಿ ಭಾರಿ ಮಳೆಗೆ ಮಗುಚಿದ ಲಾರಿ; ನಾಳೆ ಎಲ್ಲೆಲ್ಲಿ ಆರ್ಭಟ

Rain News : ರಾಜ್ಯದ ಹಲವಡೆ ವ್ಯಾಪಕ ಮಳೆಯಾಗುತ್ತಿದ್ದು, ಏ.24ರ ವರೆಗೆ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ. ಕೊಡಗಿನಲ್ಲಿ ವರುಣಾರ್ಭಟಕ್ಕೆ ಚಾಲಕನ ನಿಯಂತ್ರಣ ತಪ್ಪಿದ್ದು, ಲಾರಿಯೊಂದು ತಿರುವಿನಲ್ಲಿ ಮಗುಚಿ ಬಿತ್ತು.

VISTARANEWS.COM


on

By

Karnataka Weather Forecast
Koo

ಕೊಡಗು/ಬೆಂಗಳೂರು: ಸೋಮವಾರ (ಏ.22) ಕೊಡಗಿನ ಹಲವೆಡೆ ಗುಡುಗು ಸಹಿತ ಮಳೆಯು (Rain News) ಅಬ್ಬರಿಸುತ್ತಿದೆ. ಮಡಿಕೇರಿ, ನಾಪೋಕ್ಲು, ಮೂರ್ನಾಡು ಭಾಗದಲ್ಲಿ ಭರ್ಜರಿ (Karnataka Weather Forecast) ಮಳೆಯಾಗಿದೆ. ಒಂದು ಕಡೆಗೆ ಮಳೆಯಿಂದ ಕೊಡಗಿನ ಕೃಷಿಕರಲ್ಲಿ ಮಂದಹಾಸ ಮೂಡಿದರೆ ಮತ್ತೊಂದು ಕಡೆ ಮಳೆ ಅನಾಹುತವು ಆತಂಕ ಹೆಚ್ಚಿಸಿದೆ.

ಮಡಿಕೇರಿ‌‌ ಸಮೀಪದ ಜೋಡುಪಾಲ ಬಳಿ ಭಾರಿ ಮಳೆಗೆ ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು‌ ಮಗುಚಿ ಬಿತ್ತು. ಬೆಂಗಳೂರಿನಿಂದ‌‌ ಮಂಗಳೂರಿಗೆ ಲಾರಿಯಲ್ಲಿ ಜ್ಯೂಸ್ ಸಾಗಿಸಲಾಗುತ್ತಿತ್ತು. ಮಳೆಯಿಂದ ಜೋಡುಪಾಲದ ತಿರುವಿನಲ್ಲಿ ಲಾರಿಯ ವೀಲ್ ಜಾರಿ, ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಿಡಿಲು ಬಡಿದು 7 ಕುರಿಗಳು ಸಾವು

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಹೇಮಗುಡ್ಡ ಬಳಿ ಸಿಡಿಲು ಬಡಿದು 7 ಕುರಿಗಳು ಮೃತಪಟ್ಟಿವೆ. ಹೇಮಗುಡ್ಡ ಗ್ರಾಮದ ರಾಮಣ್ಣ ಬಂಡಿ ಎಂಬುವವರಿಗೆ ಸೇರಿದ 7 ಕುರಿಗಳು ಸಿಡಿಲಿಗೆ ಬಲಿಯಾಗಿವೆ. 8ಕ್ಕೂ ಹೆಚ್ಚು ಕುರಿಗಳು ಗಾಯಗೊಂಡಿವೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಧಾರವಾಡ ನಗರದಲ್ಲಿ ಗುಡುಗು ಸಹಿತ ಮಳೆಯಾಗಿದೆ. ಕಳೆದ ಎರಡು ದಿನಗಳಿಂದ ಹೆಚ್ಚಾಗಿದ್ದ ಬಿಸಿಲಿನ ತಾಪಮಾನವು ಮಳೆಯಿಂದಾಗಿ ತಣ್ಣಗಾಗಿತ್ತು. ಕೊಪ್ಪಳ‌ದಲ್ಲಿ ಗಾಳಿ, ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಮಳೆಯಾಗಿದೆ. ಮುಂಜಾನೆ ಮೋಡ ಕವಿದ ವಾತಾವರಣ ಇತ್ತು, ಮಧ್ಯಾಹ್ನದ ಹೊತ್ತಿಗೆ ಶುರುವಾದ ಸಣ್ಣ ಮಳೆಯು ನಂತರ ರಭಸವಾದ ಗಾಳಿಯೊಂದಿಗೆ ಗುಡುಗು ಸಿಡಿಲಿನ ಶಬ್ಧವು ಜನರನ್ನು ಬೆಚ್ಚಿ ಬೀಳಿಸಿತ್ತು.

ಇದನ್ನೂ ಓದಿ: Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

ಮುಂದಿನ 48 ಗಂಟೆಯಲ್ಲಿ ಗಾಳಿ ಜತೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಏ.23ರಂದು ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ಬೆಳಗಾವಿ, ಬಾಗಲಕೋಟೆಯ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗಲಿದೆ. ಕೆಲವೊಮ್ಮೆ 30-40 ಕಿ.ಮೀ ವ್ಯಾಪ್ತಿಯಲ್ಲಿ ರಭಸವಾದ ಗಾಳಿಯು ಬೀಸಲಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ ಸೇರಿ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯದ ಕೆಲವೆಡೆ ಮಳೆಯಾಗಲಿದ್ದು, ಉಳಿದೆಡೆ ಒಣಹವೆ ಇರುವ ಸಾಧ್ಯತೆ ಇದೆ.

ಏ.24ರಂದು ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯದ ಒಂದೆರಡು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ಬಿಸಿ ಗಾಳಿ ಮುನ್ನೆಚ್ಚರಿಕೆ

ಬೀದರ್‌, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಗದಗ, ಧಾರವಾಡ, ದಾವಣಗೆರೆ, ಕೋಲಾರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ.

ಬಿಸಿ ಮತ್ತು ಆರ್ದ್ರತೆ

ಮುಂದಿನ 5 ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಜತೆಗೆ ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂಜಾನೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಮಧ್ಯಾಹ್ನ ಅಥವಾ ಸಂಜೆಗೆ ಆಕಾಶವು ನಿರ್ಮಲವಾಗಿರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 24 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Bengaluru karaga
ಕರ್ನಾಟಕ46 mins ago

Bengaluru Karaga: ಐತಿಹಾಸಿಕ ಬೆಂಗಳೂರು ಕರಗಕ್ಕೆ ಅದ್ಧೂರಿ ಚಾಲನೆ; ಉತ್ಸವ ವೀಕ್ಷಿಸಲು ಹರಿದು ಬಂದ ಜನಸಾಗರ

vistara Editorial ವಿಸ್ತಾರ ಸಂಪಾದಕೀಯ
ದೇಶ3 hours ago

ವಿಸ್ತಾರ ಸಂಪಾದಕೀಯ: ರಕ್ಷಣಾ ರಫ್ತು ಕ್ಷೇತ್ರದಲ್ಲಿ ಬೆಳವಣಿಗೆ ನಮ್ಮ ಹೆಗ್ಗಳಿಕೆ

IPL 2024
ಪ್ರಮುಖ ಸುದ್ದಿ3 hours ago

IPL 2024 : ಸ್ಟೊಯ್ನಿಸ್​​ ಶತಕ, ಚೆನ್ನೈ ವಿರುದ್ಧ 6 ವಿಕೆಟ್​ ಗೆಲವು ಸಾಧಿಸಿದ ಲಕ್ನೊ

Voters' Pledge
ಬೆಂಗಳೂರು3 hours ago

Voters Pledge: ಸಹಕಾರ ಸಂಘಗಳ ಕಾರ್ಯದರ್ಶಿಗಳು, ಸಿಬ್ಬಂದಿಗೆ ಮತದಾನ ಪ್ರತಿಜ್ಞಾವಿಧಿ ಬೋಧನೆ

Lok Sabha Election 2024
Lok Sabha Election 20244 hours ago

Lok Sabha Election 2024: ರಾಹುಲ್‌ ಗಾಂಧಿಯ ಡಿಎನ್‌ಎ ಪರೀಕ್ಷಿಸಬೇಕು; ವಿವಾದ ಹುಟ್ಟುಹಾಕಿದ ಶಾಸಕ ಅನ್ವರ್ ಹೇಳಿಕೆ

DCM DK Shivakumar Election campaign for Bangalore Rural Lok Sabha Constituency Congress candidate DK Suresh In Ramanagara
ರಾಮನಗರ4 hours ago

Lok Sabha Election 2024: ಕೇಂದ್ರ ಸರ್ಕಾರದಿಂದ ರಾಜ್ಯದ ಬಗ್ಗೆ ತಾರತಮ್ಯ ಧೋರಣೆ: ಡಿ.ಕೆ. ಸುರೇಶ್

Priyanka Gandhi
ಕರ್ನಾಟಕ4 hours ago

Priyanka Gandhi: ನಿರುದ್ಯೋಗಿಗಳಿಗೆ ಉದ್ಯೋಗ ನೀಡಿ ಮಂಗಳಸೂತ್ರ ಉಳಿಸೋದು ಗೊತ್ತಿಲ್ಲವೇ?; ಮೋದಿ ವಿರುದ್ಧ ಪ್ರಿಯಾಂಕ ಗಾಂಧಿ ವಾಗ್ದಾಳಿ

Lok Sabha Election 2024
Lok Sabha Election 20244 hours ago

Lok Sabha Election 2024: ಕಾಂಗ್ರೆಸ್‌ ಅಧಿಕಾರಕ್ಕೆ ಬಂದೆ ದೇಶದಲ್ಲಿ ಶರಿಯಾ ಕಾನೂನು ಜಾರಿ; ಯೋಗಿ ಆದಿತ್ಯನಾಥ್ ವಾಗ್ದಾಳಿ

Amit Shah
ಕರ್ನಾಟಕ5 hours ago

Amit Shah: ಬೆಂಗಳೂರಲ್ಲಿ ಅಮಿತ್‌ ಶಾ ಹವಾ; ತೇಜಸ್ವಿ ಸೂರ್ಯ ಪರ ಭರ್ಜರಿ ರೋಡ್‌ ಶೋ

Public Sector Banks
ಪ್ರಮುಖ ಸುದ್ದಿ5 hours ago

Public Sector Banks : ಸಾರ್ವಜನಿಕ ಬ್ಯಾಂಕ್​ಗಳು ಸಾಲ ಕಟ್ಟದವರಿಗೆ ಲುಕ್ ಔಟ್ ನೋಟಿಸ್​ ನೀಡುವಂತಿಲ್ಲ, ಕೋರ್ಟ್​​ ಆದೇಶ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ22 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು1 day ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ1 day ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20244 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌