Site icon Vistara News

Voter Data | ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ಬಂಧನ; ಪೊಲೀಸರಿಂದ ತೀವ್ರ ವಿಚಾರಣೆ

Voter Data

ಬೆಂಗಳೂರು: ಮತದಾರರ ಪಟ್ಟಿ ಅಕ್ರಮ ಪ್ರಕರಣದಲ್ಲಿ ಮತದಾರರ ದತ್ತಾಂಶ ಕಳವು ಆರೋಪದಲ್ಲಿ ಪ್ರಮುಖ ಆರೋಪಿಯಾದ ಚಿಲುಮೆ ಸಂಸ್ಥೆಯ ಮುಖ್ಯಸ್ಥ ರವಿಕುಮಾರ್ ಅವರನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ. ನಗರದ ಲಾಲ್‌ಬಾಗ್ ಬಳಿ ಆರೋಪಿಯನ್ನು ಹಲಸೂರು ಗೇಟ್‌ ಠಾಣೆ ಪೊಲೀಸರು ಬಂಧಿಸಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ರೇಣುಕಪ್ರಸಾದ್, ಧರ್ಮೇಶ್, ಸಂಸ್ಥೆ ನಿರ್ದೇಶಕರಾದ ಕೆಂಪೇಗೌಡ, ಐಶ್ವರ್ಯರನ್ನು ಪೊಲೀಸರು ಬಂಧಿಸಿದ್ದರು. ಅದೇ ರೀತಿ ಡಿಜಿಟಲ್ ಸಮೀಕ್ಷಾ ಆ್ಯಪ್ ಡೆವಲಪ್ ಮಾಡಿದ್ದ ಸಂಜೀವ್ ಶೆಟ್ಟಿ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ಇದೀಗ ಪ್ರಮುಖ ಆರೋಪಿ ರವಿಕುಮಾರ್‌ ಬಂಧನವಾಗಿದೆ.

ಇದನ್ನೂ ಓದಿ | Voter Data | ʼಚಿಲುಮೆʼ ಮೊಬೈಲ್‌ ಆ್ಯಪ್‌ ಡೆವಲಪರ್‌ ವಶಕ್ಕೆ; ತೀವ್ರ ವಿಚಾರಣೆ

Exit mobile version