ಬೆಂಗಳೂರು: ವಿಶ್ವ ಮಾಧ್ಯಮ ಸಂವಾದ ಕೇಂದ್ರದ ವತಿಯಿಂದ ವಿಎಸ್‌ಕೆ ಮಾಧ್ಯಮ ಪ್ರಶಸ್ತಿ-2023 ಪ್ರದಾನ ಸಮಾರಂಭವನ್ನು ಜೂನ್ 25ರಂದು ಬೆಳಗ್ಗೆ 10.30ಕ್ಕೆ ನಗರದ ಬಸವನಗುಡಿಯ ಬಿಎಂಎಸ್ ಎಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ತಿ.ತಾ.ಶರ್ಮಾ ಪತ್ರಿಕೋದ್ಯಮ ಪ್ರಶಸ್ತಿ, ಬೆ.ಸು.ನಾ.ಮಲ್ಯ ಪತ್ರಿಕೋದ್ಯಮ ಪ್ರಶಸ್ತಿ, ಹೊ.ವೆ. ಶೇಷಾದ್ರಿ ಅಂಕಣಕಾರ ಪ್ರಶಸ್ತಿ ಹಾಗೂ ವಿಎಸ್‌ಕೆ ಡಿಜಿಟಲ್ ಮಾಧ್ಯಮ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಮಾಧ್ಯಮ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಪತ್ರಕರ್ತರಿಗೆ ಪ್ರಶಸ್ತಿ ನೀಡಲಾಗುತ್ತದೆ.
ಇದನ್ನೂ ಓದಿ | ಜೂ.24ರಂದು ಕನ್ನಡ ಬರಹಗಾರರ, ಪ್ರಕಾಶಕರ ಸಂಘದ ವಾರ್ಷಿಕೋತ್ಸವ, ಪ್ರಶಸ್ತಿ ಪ್ರದಾನ
ಮುಖ್ಯ ಅತಿಥಿಗಳಾಗಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿ ಡಾ. ನಿರಂಜನ ವಾನಳ್ಳಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯವಾಹ ನಾ.ತಿಪ್ಪೇಸ್ವಾಮಿ ಅವರು ಭಾಗವಹಿಸಲಿದ್ದಾರೆ.
ಪ್ರಶಸ್ತಿ ಪುರಸ್ಕೃತರು
ತಿ.ತಾ.ಶರ್ಮಾ ಪತ್ರಿಕೋದ್ಯಮ ಪ್ರಶಸ್ತಿ: ರವಿಪ್ರಕಾಶ್ ಎಸ್., ಜಯಪ್ರಕಾಶ್ ಶೆಟ್ಟಿ
ಬೆ.ಸು.ನಾ.ಮಲ್ಯ ಪತ್ರಿಕೋದ್ಯಮ ಪ್ರಶಸ್ತಿ: ಎಂ.ಶ್ರೀನಿವಾಸನ್
ಹೊ.ವೆ. ಶೇಷಾದ್ರಿ ಅಂಕಣಕಾರ ಪ್ರಶಸ್ತಿ: ಹೆಬ್ರಿ ಬಾಲಕೃಷ್ಣ ಮಲ್ಯ, ಕಾ. ರಮಾನಂದ ಆಚಾರ್ಯ
ವಿಎಸ್‌ಕೆ ಡಿಜಿಟಲ್ ಮಾದ್ಯಮ ಪ್ರಶಸ್ತಿ: ಎಂ.ಎಸ್.ರಾಘವೇಂದ್ರ