ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ಏಪ್ರಿಲ್ 20ರಿಂದ ಆರಂಭವಾಗಬೇಕಿದ್ದ ವಿಟಿಯು ಮೊದಲ ಸೆಮಿಸ್ಟರ್ ಪರೀಕ್ಷೆಗಳನ್ನು ಏಪ್ರಿಲ್ 27ರಿಂದ ಆರಂಭಿಸಲು ವಿಟಿಯು ತೀರ್ಮಾನಿಸಿದೆ.
ವಿಟಿಯು ವ್ಯಾಪ್ತಿಯ ಎಲ್ಲ ಕಾಲೇಜುಗಳ ಉಪನ್ಯಾಸಕರನ್ನು ಚುನಾವಣೆ ಕೆಲಸಕ್ಕೆ ನಿಯೋಜನೆ ಮಾಡಿರುವುದರಿಂದ ನಿಗದಿತ ದಿನಾಂಕದಂದು ಪರೀಕ್ಷೆ ನಡೆಸಲು ಕಷ್ಟವಾದ ಕಾರಣ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಹಾಗೆಯೇ, ವಿಟಿಯುನಲ್ಲಿ ಕೆಲವು ತಾಂತ್ರಿಕ ದೋಷ ಕಾಣಿಸಿಕೊಂಡಿರುವುದು ಕೂಡ ಪರೀಕ್ಷೆ ಮುಂದೂಡಲು ಕಾರಣ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ಮೇ 10ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಈಗಾಗಲೇ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 20 ಕೊನೆಯ ದಿನವಾಗಿದೆ. ಏಪ್ರಿಲ್ 21ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ನಾಮಪತ್ರ ಪರಿಶೀಲನೆ ಸೇರಿ ಹಲವು ಕಾರ್ಯದಲ್ಲಿ ವಿಟಿಯು ಉಪನ್ಯಾಸಕರು ಬಿಡುವಿಲ್ಲದ ಕಾರ್ಯದಲ್ಲಿ ತೊಡಗಿದ್ದಾರೆ. ಹಾಗಾಗಿ, ಮೊದಲ ವರ್ಷದ ಎಂಜಿನಿಯರಿಂಗ್ ಪರೀಕ್ಷೆಗಳನ್ನು ಮುಂದೂಡುವುದು ಅನಿವಾರ್ಯವಾಗಿದೆ.
ಇದನ್ನೂ ಓದಿ: NEET PG 2023 : ನೀಟ್ ಪರೀಕ್ಷೆ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿದ ಆರೋಗ್ಯ ಸಚಿವಾಲಯ