ಬೆಂಗಳೂರು: ರಾಜಧಾನಿಯಲ್ಲಿ ನೀರಿನ ದರ ಏರಿಕೆ (Water Tariff Hike) ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಕೂಡ ನೀರಿನ ದರ ಏರಿಕೆ ಬಗ್ಗೆ ಸುಳಿವು ನೀಡಿದ್ದಾರೆ. ನೀರಿನ ಬೆಲೆ ಏರಿಸಿದ್ದಾರೆ ಎಂದಿದ್ದಾರೆ. ಆದರೆ, ಇನ್ನೂ ಏರಿಸಿಲ್ಲ. ಆ ಬಗ್ಗೆ ಆಲೋಚನೆ ಇದೆ. ಬಹಳ ದಿನಗಳಿಂದ ನೀರಿನ ದರ ಏರಿಕೆ ಮಾಡಿಲ್ಲ ಎಂದು ಹೇಳುವ ಮೂಲಕ ದರ ಏರಿಕೆಯಾಗಲಿದೆ ಎಂದು ಪರೋಕ್ಷವಾಗಿ ತಿಳಿಸಿದ್ದಾರೆ.
ಬಸ್ ದರ ಏರಿಕೆ ವಿಚಾರಕ್ಕೆ ನಗರದಲ್ಲಿ ಪ್ರತಿಕ್ರಿಯಿಸಿ, ನಿಗಮದಲ್ಲಿ ಕಷ್ಟದ ಪರಿಸ್ಥಿತಿ ಇದೆ. ಅದಕ್ಕೆ ಆ ರೀತಿ ಸಚಿವರು ಮಾತನಾಡಿರಬಹುದು ಅಂತ ಅಂದುಕೊಳ್ತೇನೆ. ನೋಡುತ್ತೇವೆ, ನಾವು ಇನ್ನು ತೀರ್ಮಾನ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ.
ನೆನ್ನೆ ಡಿಸಿಎಂ ಹಾಗೂ ಕೆಲವು ಸಚಿವರು ದೆಹಲಿಗೆ ಹೋಗಿದ್ದೆವು, ರಾಜ್ಯದ ಬೆಳವಣಿಗೆಯನ್ನು ಹೈಕಮಾಂಡ್ ಗಮನಕ್ಕೆ ತಂದಿದ್ದೇವೆ. ಮುಡಾ ಪ್ರಕರಣದ ಪಾದಯಾತ್ರೆ ಬಗ್ಗೆ ಚರ್ಚೆ ಮಾಡಿದ್ದೇವೆ. ಪ್ರಾಸಿಕ್ಯೂಷನ್ ಸಂವಿಧಾನ ಮತ್ತು ಕಾನೂನು ಬಾಹಿರ. ಈ ಬಗ್ಗೆ ಕ್ಯಾಬಿನೆಟ್ ಕೂಡ ರಾಜ್ಯಪಾಲರಿಗೆ ನಿರ್ಣಯ ಕಳುಹಿಸಿದೆ. ಕೋರ್ಟ್‌ನಲ್ಲಿ ರಾಜ್ಯಪಾಲರ ಆದೇಶ ಪ್ರಶ್ನಿಸಿ ಅರ್ಜಿ ಹಾಕಲಾಗಿದೆ. ವಿಚಾರಣೆ 29ಕ್ಕೆ ಮುಂದೂಡಲಾಗಿದೆ ಎಂದು ತಿಳಿಸಿದರು.
ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿಗಳಿಗೆ ದೂರು ಕೊಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ರಾಜ್ಯಪಾಲರು 6 ವಿಧೇಯಕಗಳನ್ನು ವಾಪಸ್ ಕಳುಹಿಸಿದ್ದಾರೆ. ಮತ್ತೆ ನಾವು ಸರ್ಕಾರದ ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಿ ಏನು ಮಾಡಬೇಕು ಅಂತ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.
ಕೆಎಎಸ್ ಪೂರ್ವಭಾವಿ ಪರೀಕ್ಷೆ ಗೊಂದಲದ ಬಗ್ಗೆ ಪ್ರತಿಕ್ರಿಯಿಸಿ, ಗೊಂದಲ ಏನೂ ಇಲ್ಲ. ಎಕ್ಸಾಂ ಮುಂದಕ್ಕೆ ಹಾಕಬೇಕು ಎಂದು ಆಭ್ಯರ್ಥಿಗಳು ಹೇಳುತ್ತಿದ್ದಾರೆ. ಅದರೆಮ ನಾವು ಮುಂದೂಡಿಕೆ ಮಾಡಲು ಆಗುವುದಿಲ್ಲ. ಒಂದು ಪೇಪರ್ ಮಾತ್ರ ಕೃಷ್ಣಜನ್ಮಾಷ್ಠಮಿ ದಿನ ಇದೆ, ಅದನ್ನು ಮುಂದೂಡಲಾಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ | Vinesh Phogat: ವಿನೇಶ್ ಫೋಗಟ್ ಕಾಂಗ್ರೆಸ್ ಸೇರುವುದು ಖಚಿತ; ಮಾಜಿ ಸಿಎಂ ಜತೆ ಚರ್ಚೆ
ಎಷ್ಟೇ ವಿರೋಧ ಬಂದರೂ ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಖಚಿತ: ಡಿ.ಕೆ.ಶಿವಕುಮಾರ್
ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ 12-13 ವರ್ಷಗಳಿಂದ ನೀರಿನ ದರ ಹೆಚ್ಚಳ ಮಾಡಿಲ್ಲ. ಆದರೂ ಬಿಡಬ್ಲ್ಯೂ ಎಸ್‌ಎಸ್‌ಬಿ ಕಷ್ಟಪಟ್ಟು ನಿರ್ವಹಣೆ ಮಾಡುತ್ತಿದೆ. ಯಾರೇ ಆಕ್ಷೇಪ ವ್ಯಕ್ತಪಡಿಸಿದರೂ ನೀರಿನ ದರ ಏರಿಕೆ (Water Price Hike) ಅನಿವಾರ್ಯ. ಅದನ್ನು ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ವಿಧಾನಸೌಧದ ಆವರಣದಲ್ಲಿ ಗುರುವಾರ ನಡೆದ “ಬಾಗಿಲಿಗೆ ಬರಲಿದೆ ಕಾವೇರಿ ಸಂಪರ್ಕ, 110 ಹಳ್ಳಿಗಳಿಗೆ ಕಾವೇರಿ ನೀರಿನ ಸಂಪರ್ಕ” ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಇದನ್ನೂ ಓದಿ: CLP Meeting: ಮುಡಾ ಹಗರಣ; ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಪರ ನಿಂತ ಶಾಸಕರು
ರಾಜಧಾನಿಯ 1.40 ಕೋಟಿ ಜನಸಂಖ್ಯೆಗೆ ನೀರನ್ನು ಒದಗಿಸಲೇ ಬೇಕು. ಇದಕ್ಕಾಗಿ ಸಾಲ ಮಾಡಿ, ಸಂಪರ್ಕ ಜಾಲವನ್ನು ಹೆಚ್ಚಿಸದ ಹೊರತು ನೀರು ಕೊಡಲು ಕಷ್ಟವಾಗುತ್ತದೆ. ದರ ಹೆಚ್ಚಳ ಮಾಡದಿದ್ದರೇ ನೀರು ಸರಬರಾಜು ಕಂಪನಿ ಉಳಿಯುವುದಿಲ್ಲ, ನೌಕರರು ಬದುಕಲು ಆಗುವುದಿಲ್ಲ. ಸಂಸ್ಥೆಗೆ ವಿದ್ಯುತ್ ಬಿಲ್ ಕಟ್ಟಲು ಆಗುತ್ತಿಲ್ಲ. ಎಲ್ಲರಿಗೂ ನೀರಿನ ದರ ಹೆಚ್ಚಳ ಮಾಡುವುದಿಲ್ಲ. ಎಷ್ಟು ಏರಿಕೆ ಮಾಡಬೇಕು ಎಂದು ಇನ್ನೂ ನಿರ್ಧರಿಸಿಲ್ಲ. ಚರ್ಚೆ ಮಾಡಲಿ. ಧರಣಿ ಮಾಡಲಿ ನಾನು ಇದಕ್ಕೆ ಬದ್ಧವಾಗಿದ್ದೇನೆ ಎಂದು ಹೇಳಿದರು.