Site icon Vistara News

Dharma Samrakshana Padayatra: ಯಾವುದೇ ತನಿಖೆಗೆ ನಾವು ಸಿದ್ಧ; ಸೌಜನ್ಯ ಪ್ರಕರಣದ ಬಗ್ಗೆ ಮೌನ ಮುರಿದ ವೀರೇಂದ್ರ ಹೆಗ್ಗಡೆ

Veerendra Heggade

ಮಂಗಳೂರು: ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಖಂಡಿಸಿ ಭಾನುವಾರ ಬೃಹತ್‌ ಧರ್ಮ ಸಂರಕ್ಷಣಾ ಪಾದಯಾತ್ರೆ (Dharma Samrakshana Padayatra) ನಡೆಯಿತು. ಉಜಿರೆಯಿಂದ ಧರ್ಮಸ್ಥಳದವರೆಗೂ ಸುಮಾರು 6 ಕಿ.ಮೀ ನಡೆದ ಪಾದಯಾತ್ರೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಸೇರಿ ರಾಜ್ಯದ ವಿವಿಧ ಭಾಗಗಳಿಂದ ನಾಡಿನ ಪ್ರಸಿದ್ಧ ಸಂತರು, ಜನಪ್ರತಿನಿಧಿಗಳು ಸೇರಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು.

ನಂತರ ಧರ್ಮಸ್ಥಳದಲ್ಲಿ ನಡೆದ ಧರ್ಮ ಸಂರಕ್ಷಣಾ ಸಭೆಯಲ್ಲಿ ಮಾತನಾಡಿದ ಧರ್ಮಸ್ಥಳ ಕ್ಷೇತ್ರ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು, ಧರ್ಮಸ್ಥಳಕ್ಕೆ ಆಪತ್ತು ಬಂದಾಗ ನೀವು ಕೈಗೊಂಡ ಈ ಪ್ರಾರ್ಥನೆಯನ್ನು ಸ್ವಾಮಿಯ ಪಾದಕ್ಕೆ ಅರ್ಪಿಸುತ್ತೇನೆ. ನಿಮ್ಮ ದೀಕ್ಷೆಯಿಂದ ಈ ಎಲ್ಲಾ ಕಷ್ಟಗಳೂ ದೂರವಾಗಲಿ. ಕೆಲವರು ದಾಖಲೆಯಿಲ್ಲದೆ ಆರೋಪ ಮಾಡುತ್ತಿದ್ದು, ಯಾವುದೇ ರೀತಿಯ ತನಿಖೆಯಾಗಲಿ, ನಾವೂ ಸಿದ್ಧ ಎಂದು ಸೌಜನ್ಯ ಪ್ರಕರಣದ ಆರೋಪಗಳ ಬಗ್ಗೆ ಮೌನ ಮುರಿದರು.

ಭಕ್ತರು ಧರ್ಮ ಸೈನಿಕರು. ಧರ್ಮಸ್ಥಳದಲ್ಲಿ ಎಲ್ಲರೂ ಶಾಂತವಾಗಿದ್ದಾರೆ ಎಂದರೆ ಅದಕ್ಕೆ ಮಂಜುನಾಥ ಸ್ವಾಮಿ, ಚಂದ್ರನಾಥ ಸ್ವಾಮಿ ಕಾರಣ. ದುಷ್ಟ ಶಕ್ತಿಗಳು ವಿಜೃಂಭಿಸುತ್ತಿವೆ. ನೀವೇ ಶಿಷ್ಟರ ರಕ್ಷಣೆ ಮಾಡಬೇಕು. ಕ್ಷೇತ್ರದ ಕಾರ್ಯವನ್ನು ಎಲ್ಲಾ ಜನರು ಮೆಚ್ಚಿದ್ದಾರೆ. ಇಲ್ಲಿಗೆ ಇಂದು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ, ಬೆಂಬಲ ನೀಡಿದ್ದೀರಿ. ದೇಶ ಹಾಳು ಮಾಡಬೇಕಾದರೆ, ಮೊದಲು ಸಂಸ್ಕೃತಿಯನ್ನು ನಾಶ ಮಾಡುತ್ತಾರೆ. ನಮ್ಮ ಕ್ಷೇತ್ರಕ್ಕೆ ಬಂದ ಅಪಾಯ ಬೇರೆ ಕ್ಷೇತ್ರಗಳಿಗೂ ಬರಬಹುದು. ಹೀಗಾಗಿ ಯಾವುದೇ ಕಾರಣಕ್ಕೂ ಸಂಸ್ಕೃತಿಯನ್ನು ನಾಶ ಮಾಡಲು ಬಿಡಬೇಡಿ ಎಂದು ಕರೆ ನೀಡಿದರು.

ಇದನ್ನೂ ಓದಿ | VISTARA TOP 10 NEWS : ಕೇರಳದಲ್ಲಿ ಬಾಂಬ್​​ ಸ್ಫೋಟ; ಕಾಂಗ್ರೆಸ್​ಗೆ ಡಿನ್ನರ್​ ಪಾಲಿಟಿಕ್ಸ್ ಟ್ರಬಲ್​ ಮತ್ತಿತರ ಸುದ್ದಿಗಳು

ವಿಷವನ್ನು ಸೇವಿಸುವ ಶಕ್ತಿ ಎಲ್ಲರಿಗೂ ಬರುವುದಿಲ್ಲ. ಇದು ದೇವರ ಪರೀಕ್ಷೆ. ಮಳೆ ಬರುತ್ತಿದೆ, ಆದರೆ, ಯಾರು ಸಹ ಓಡುತ್ತಿಲ್ಲ, ನಿಂತಿದ್ದೀರಿ. ವೈಯಕ್ತಿಕವಾದ ನಿಂದನೆಯಿಂದ ಸಂಸ್ಕೃತಿ ನಾಶ ಮಾಡುವ ಪ್ರಯತ್ನ ನಡೆಯುತ್ತಿದೆ. ನೀವೆಲ್ಲರೂ ಸ್ವಾಸ್ಥ್ಯ ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು.

Exit mobile version