Site icon Vistara News

ನಾವೂ ಮೊಟ್ಟೆ ಎಸೆದೇ ಬಂದಿದ್ದೇವೆ, ನಾವು ಪ್ರತಿಭಟಿಸಿದ್ರೆ ಸಿಎಂ ಎಲ್ಲೂ ಓಡಾಡೋ ಹಾಗಿಲ್ಲ; ಸಿದ್ದರಾಮಯ್ಯ ಕಿಡಿ

ಕೊಡಗಿನಲ್ಲಿ ಸಿದ್ದರಾಮಯ್ಯ

ಮಡಿಕೇರಿ: ನಮಗೆ ಮೊಟ್ಟೆ ಎಸೆಯೋಕೆ ಬರಲ್ವಾ? ನಾವು ಅವುಗಳನ್ನೇ ಮಾಡಿಕೊಂಡು ಬಂದಿರೋದು. ನಾವು ಹೋರಾಟ ಮಾಡಲು ಶುರು ಮಾಡಿದರೆ ಮುಖ್ಯಮಂತ್ರಿ ಎಲ್ಲೂ ಓಡಾಡೋಕೆ ಆಗಲ್ಲ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಖಡಕ್‌ ಎಚ್ಚರಿಕೆ ನೀಡಿದರು.

ಇಲ್ಲಿನ ಸರ್ಕ್ಯೂಟ್ ಹೌಸ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ, ತಮ್ಮ ಕಾರಿಗೆ ಮೊಟ್ಟೆ ಹೊಡೆದ ಬಗ್ಗೆ ಚಾಟಿಬೀಸಿದ್ದು, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ನಮ್ಮ ಕಾರ್ಯಕರ್ತರು ಬೀದಿಗಿಳಿದರೆ ಬಿಜೆಪಿಯವರಿಗೆ ಕೊಡಗಿನಲ್ಲಿಯೇ ತಿರುಗಾಡಲು ಆಗುವುದಿಲ್ಲ. ಈ ಭಾಗದಲ್ಲಿ ಆಗಿರುವ ಹಾನಿಯನ್ನು ನಾನು ಬಂದು ನೋಡುತ್ತೇನೆ ಎಂಬ ಕಾರಣಕ್ಕೆ ಬಿಜೆಪಿಯವರು ಕಾರ್ಯಕರ್ತರನ್ನು ಬಿಟ್ಟು ಪ್ರತಿಭಟನೆ ಮಾಡಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಬಾರಿ ಕೊಡಗಿನಲ್ಲಿ ಎರಡೂ ಕಡೆ ಕಾಂಗ್ರೆಸ್ ಪರ ಅಲೆ ಇದೆ. ಮುಂದಿನ ಚುನಾವಣೆಯಲ್ಲಿ ನಮ್ಮ ಪಕ್ಷ ಗೆಲ್ಲಲಿದೆ ಎಂಬುದನ್ನು ತಿಳಿದೇ ಹತಾಶೆಯಿಂದ ಬಿಜೆಪಿಯವರು ಪ್ರತಿಭಟನೆ ಮಾಡಿದ್ದಾರೆ. ಕಳಪೆ ಕೆಲಸ ನನಗೆ ಗೊತ್ತಾಗದಿರಲಿ ಎಂಬುದು ಈ ಪ್ರತಿಭಟನೆ ಹಿಂದಿರುವ ಉದ್ದೇಶವಾಗಿದೆ. ಇದರ ಹಿಂದೆ ಟಿಪ್ಪುವಿನ ವಿಚಾರವೇನೂ ಇಲ್ಲ. ಟಿಪ್ಪು ಜಯಂತಿ ಆದ ಮೇಲೆ ನಾನೇನು ಕೊಡಗಿಗೆ ಭೇಟಿ ನೀಡಲ್ವಾ? ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.

ಇದನ್ನೂ ಓದಿ | ಸಿದ್ದರಾಮಯ್ಯ ಸರ್ಕಾರ ಸ್ಥಳೀಯ ಸಂಸ್ಥೆ ಕಾನೂನು ಜಾರಿಯಲ್ಲಿ ಹಿಂದೆ ಬಿತ್ತು: ಮಣಿಶಂಕರ್‌ ಅಯ್ಯರ್‌ ಬೇಸರ

ಬಿಜೆಪಿ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರಿಂದ ಪ್ರತಿಭಟನೆ

ಬಿಜೆಪಿ-ಕಾಂಗ್ರೆಸ್ ಎರಡೂ ಕಡೆಯವರಿಂದ ಪ್ರತಿಭಟನೆ

ಸಿದ್ದರಾಮಯ್ಯ ಮಡಿಕೇರಿ ಪ್ರವಾಸಕ್ಕೆ ಅಡ್ಡಿಪಡಿಸಿ ತಿಮ್ಮಯ್ಯ ಸರ್ಕಲ್‌ನಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಮಧ್ಯೆಯೇ ಬಿಜೆಪಿಗೆ ವಿರುದ್ಧವಾಗಿ ಕಾಂಗ್ರೆಸ್ ಕಾರ್ಯಕರ್ತರೂ ಪ್ರತಿಭಟನೆ ನಡೆಸಿದ್ದಾರೆ. ಎರಡೂ ಕಡೆಯವರಿಂದ ಘೋಷಣೆಗಳು ಕೇಳಿಬಂದಿದ್ದು, ಕೆಲವು ಸಮಯ ಹೈಡ್ರಾಮ ನಡೆಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರಿಂದ ತಿಕ್ಕಾಟ ನಡೆದಿದ್ದು, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರ ಹರಸಾಹಸಪಡೆಬೇಕಾಯಿತು.

ಇದನ್ನೂ ಓದಿ | Savarkar Issue | ಸಿದ್ದರಾಮಯ್ಯ ಕಾರಿಗೆ ಮಡಿಕೇರಿಯಲ್ಲಿ ಮೊಟ್ಟೆ ಎಸೆತ, ಕಪ್ಪು ಪಟ್ಟಿ ಪ್ರದರ್ಶನ!

Exit mobile version