ಬೆಂಗಳೂರು: ರಾಜಧಾನಿ ಸೇರಿ ರಾಜ್ಯದ ಹಲವು ಕಡೆ ಮುಂದಿನ 24 ಗಂಟೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (Weather Alert) ನೀಡಿದೆ.
ಬೆಂಗಳೂರಿನಲ್ಲಿ ಸಂಜೆ ವೇಳೆಗೆ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡಿನಲ್ಲಿ ಸುಳಿಗಾಳಿ ಉಂಟಾದ ಹಿನ್ನೆಲೆ ಕರ್ನಾಟಕದ ಮೇಲೆ ಸಹ ಪರಿಣಾಮವಾಗಲಿದೆ. ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿ.ಮೀ. ತಲುಪಲಿದೆ ಎಂದು ತಿಳಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ, ತುಮಕೂರು, ರಾಮನಗರ ಕೋಲಾರ, ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಕೊಡಗು ಹಾಗೂ ಮಲೆನಾಡು ಪ್ರದೇಶದ ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಒಂದೆರಡು ಕಡೆ ಬಿರುಗಾಳಿ ಸಹಿತ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಇದನ್ನೂ ಓದಿ: Bangalore Rain: ಬೆಂಗಳೂರಿನ ಮಹಾಮಳೆಗೆ ಕೊಚ್ಚಿ ಹೋದ ಚಿನ್ನದಂಗಡಿ; 2 ಕೋಟಿ ರೂ. ಮೌಲ್ಯದಷ್ಟು ನಷ್ಟ