ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಕಾರಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಗುಡುಗು ಮಿಂಚಿನ ಮಳೆಯ ಸೂಚನೆ ನೀಡಲಾಗಿದೆ.
ವಾಯುಭಾರ ಕುಸಿತದ ಜತೆಗೆ ಮೇಲ್ಮೈ ಸುಳಿಗಾಳಿಯೂ ವ್ಯಾಪಿಸಿದೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಟ್ರಫ್ ಸಾಗಿದೆ. ಉತ್ತರ ಒಳನಾಡಿನ ಮೂಲಕ ಈ ದಟ್ಟ ಮೋಡ ಹಾದುಹೋಗಲಿದೆ. ಇದರಿಂದಾಗಿ ಕರಾವಳಿಗೆ ಮುಂದಿನ ಐದು ದಿನ ಯೆಲ್ಲೋ ಅಲರ್ಟ್ (Weather News ) ನೀಡಲಾಗಿದೆ.
ಮೊದಲ ಮೂರು ದಿನ ಗುಡುಗು, ಮಿಂಚಿನ ಅಲರ್ಟ್ ನೀಡಲಾಗಿದ್ದು, ಉತ್ತರ ಒಳನಾಡಿನ ಕೆಲ ಜಿಲ್ಲೆಗಳಿಗೆ ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೆಳಗಾವಿ, ಬೀದರ್, ಗುಲ್ಬರ್ಗಾ, ಯಾದಗಿರಿಯಲ್ಲಿ ಭಾರೀ ಮಳೆಯಾಗಲಿದೆ.
ಇದನ್ನೂ ಓದಿ | Rain News | ಹವಾಮಾನ ಇಲಾಖೆ ಎಚ್ಚರಿಕೆ, ಮಂಗಳವಾರ ಬೆಳಗ್ಗೆಯೂ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
ದಕ್ಷಿಣ ಒಳನಾಡಿಗೆ ಶನಿವಾರ (ಸೆ.10) ಯೆಲ್ಲೋ ಅಲರ್ಟ್ ಕೊಡಲಾಗಿದೆ. ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಮಗಳೂರಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇಂದು ಮತ್ತು ನಾಳೆ ಗುಡುಗು ಮಿಂಚಿನ ಅಲರ್ಟ್ ಕೂಡ ನೀಡಿದೆ. ಮೂರು ದಿನದ ಬಳಿಕ ಮಳೆ ಪ್ರಮಾಣದಲ್ಲಿ ಇಳಿಕೆ ಕಾಣಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ | Rain News | ಹವಾಮಾನ ವೈಪರೀತ್ಯ; ಮೀನುಗಾರಿಕೆ ಶುರುವಾಗದೆ ಕಡಲ ಮಕ್ಕಳು ಅತಂತ್ರ