ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಶನಿವಾರ (ಮೇ 20) ಗುಡುಗು ಸಹಿತ ಮಳೆಯಾಗುವ (karnataka Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಸಮುದ್ರ ಮಟ್ಟದಿಂದ 900 ಮೀಟರ್ ದೂರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಉತ್ತರ ಪ್ರದೇಶದ ವ್ಯಾಪ್ತಿಯಲ್ಲಿ ಹೀಗಾಗಿದೆ. ಈ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ಚಾಮರಾಜ ನಗರ, ಕೊಡಗು, ರಾಮನಗರ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಇಲ್ಲವೇ ರಾತ್ರಿಯ ಸಮಯದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಗರಿಷ್ಠ ಉಷ್ಣಾಂಶ 35 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಗರಿಷ್ಠ ಉಷ್ಣಾಂಶದ ಮುನ್ಸೂಚನೆ
ಮುಂದಿನ 48 ಗಂಟೆಯಲ್ಲಿ ಗರಿಷ್ಠ ಉಷ್ಣಾಂಶವು ಒಳನಾಡಿನ ಹಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಮತ್ತು ಕರಾವಳಿಯ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: Karnataka CM: ಸಿದ್ದರಾಮಯ್ಯ ಪದಗ್ರಹಣಕ್ಕೆ ಶ್ರೀರಾಮ ಪಟ್ಟಾಭಿಷೇಕದ ಟಚ್; ಕಂಠೀರವದಲ್ಲಿ ರಾಮನ ಮೂರ್ತಿ
ಪ್ರಮುಖ ನಗರಗಳಲ್ಲಿನ ಪ್ರಸ್ತುತ ಹವಾಮಾನ ಹೀಗಿದೆ
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಕಲಬುರಗಿ- 42 ಡಿ.ಸೆ – 26 ಡಿ.ಸೆ
ಗದಗ- 39 ಡಿ.ಸೆ – 24 ಡಿ.ಸೆ
ಚಿತ್ರದುರ್ಗ- 39 ಡಿ.ಸೆ – 24 ಡಿ.ಸೆ
ಬೆಳಗಾವಿ- 38 ಡಿ.ಸೆ – 21 ಡಿ.ಸೆ
ಕಾರವಾರ- 37ಡಿ.ಸೆ – 28 ಡಿ.ಸೆ
ಮಂಗಳೂರು- 35 ಡಿ.ಸೆ – 27 ಡಿ.ಸೆ
ಹೊನ್ನಾವರ- 34 ಡಿ.ಸೆ- 25 ಡಿ.ಸೆ
ಬೆಂಗಳೂರು ನಗರ- 34 ಡಿ.ಸೆ – 22 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ