Site icon Vistara News

Weather Report : ಇನ್ನೊಂದು ವಾರ ಭರಪೂರ ಮಳೆ; ಬೆಂಗಳೂರಲ್ಲಿ ಸಿಕ್ಕಾಪಟ್ಟೆ ಚಳಿ

women walking in rain and cold weather women staying in house

ಬೆಂಗಳೂರು: ಕರಾವಳಿಯಲ್ಲಿ ದುರ್ಬಲಗೊಂಡಿದ್ದ ಮುಂಗಾರು (Southwest monsoon) ಚುರುಕುಗೊಂಡಿದೆ. ಇನ್ನೊಂದು ವಾರ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿಯ ಬಹುತೇಕ ಕಡೆಗಳಲ್ಲಿ ಭಾರಿ (Weather update) ಮಳೆಯಾಗಲಿದೆ.

ಕರಾವಳಿ, ಒಳನಾಡಲ್ಲಿ ಭಾರಿ ಮಳೆ

ವಾಯವ್ಯ ಹಾಗೂ ಪಶ್ಚಿಮ ದಿಕ್ಕಿನಿಂದ ಗಾಳಿ ಬೀಸುತ್ತಿದ್ದು, ಇದರ ಪ್ರಭಾವದಿಂದಾಗಿ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಯಲ್ಲಿ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಭರ್ಜರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಕೊಡಗು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಬೆಂಗಳೂರಲ್ಲಿ ವಿಪರೀತ ಚಳಿ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಬೆಳಗ್ಗೆ ಹಾಗೂ ಸಂಜೆ ಸಮಯ ಚಳಿಯ ವಾತಾವರಣ ಇರಲಿದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಗುಡುಗು ಮುನ್ನೆಚ್ಚರಿಕೆ

ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದ್ದು ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ. ಶನಿವಾರದಂದು ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಎಲ್ಲೆಲ್ಲಿ ಮಳೆ ಕೊರತೆ?

ರಾಜ್ಯಾದ್ಯಂತ ಸೆ.8ಕ್ಕೆ ಮಳೆ ಕೊರತೆಯು ವಾಡಿಕೆಗಿಂತ 19 ರಷ್ಟು ಕಡಿಮೆ ಇದೆ. ಉತ್ತರ ಒಳನಾಡಲ್ಲಿ ಶೇ.3ರಷ್ಟು ಇದ್ದರೆ, ಕರಾವಳಿಯಲ್ಲಿ ಶೇ.20ರಷ್ಟು, ದಕ್ಷಿಣ ಒಳನಾಡಲ್ಲಿ ಶೇ. 26ರಷ್ಟಿದೆ. ದಕ್ಷಿಣ ಒಳನಾಡಿನ 7 ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಕೊಡಗಿನಲ್ಲಿ ಶೇ. 47, ಹಾಸನ ಶೇ. 42, ಕೋಲಾರ ಶೇ.34, ಶಿವಮೊಗ್ಗ ಶೇ. 31, ರಾಮನಗರ ಶೇ. 30 , ಚಿಕ್ಕಮಗಳೂರು ಶೇ.27, ಚಿಕ್ಕಬಳ್ಳಾಪುರದಲ್ಲಿ ಶೇ. 20ರಷ್ಟು ಮಳೆ ಕೊರತೆ ಇದೆ. ಇನ್ನು ಬೆಂಗಳೂರಲ್ಲಿ ಶೇ. 8ರಷ್ಟು ಮಳೆ ಕೊರತೆ ಇದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 29 ಡಿ.ಸೆ – 21 ಡಿ.ಸೆ
ಮಂಗಳೂರು: 29 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 21 ಡಿ.ಸೆ
ಗದಗ: 30 ಡಿ.ಸೆ – 21 ಡಿ.ಸೆ
ಹೊನ್ನಾವರ: 31 ಡಿ.ಸೆ- 24 ಡಿ.ಸೆ
ಕಲಬುರಗಿ: 30 ಡಿ.ಸೆ – 23 ಡಿ.ಸೆ
ಬೆಳಗಾವಿ: 28 ಡಿ.ಸೆ – 20 ಡಿ.ಸೆ
ಕಾರವಾರ: 32 ಡಿ.ಸೆ – 24 ಡಿ.ಸೆ

ಇದನ್ನೂ ಓದಿ: Viral Video: ಅಭ್ಯಾಸದ ವೇಳೆ ನಾಯಿ ಮರಿಯೊಂದಿಗೆ ಆಟವಾಡಿದ ವಿರಾಟ್​ ಕೊಹ್ಲಿ

ಸೆಪ್ಟೆಂಬರ್‌ 9ರ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ

ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯದಲ್ಲಿ ಒಳಹರಿವು, ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗರಿಷ್ಠ ಮಟ್ಟ (ಅಡಿಗಳಲ್ಲಿ)ಇಂದಿನ ಮಟ್ಟ (ಅಡಿಗಳಲ್ಲಿ)ಒಳ ಹರಿವು (ಕ್ಯೂಸೆಕ್)ಹೊರ ಹರಿವು (ಕ್ಯೂಸೆಕ್)
ಕೆಆರ್‌ಎಸ್ ಜಲಾಶಯ (KRS Dam)38.0421.3328733980
ಆಲಮಟ್ಟಿ ಜಲಾಶಯ
(Almatti Dam)
519.6117.2124210022
ಮಲಪ್ರಭಾ ಜಲಾಶಯ (Malaprabha Dam)633.8021.651134694
ಘಟಪ್ರಭಾ ಜಲಾಶಯ
(Ghataprabha Dam)
662.9141.60605184
ತುಂಗಾಭದ್ರಾ ಜಲಾಶಯ (Tungabhadra Dam)497.7171.33162910304
ಭದ್ರಾ ಜಲಾಶಯ (Bhadra Dam)657.7345.082852936
ಕಬಿನಿ ಜಲಾಶಯ (Kabini Dam)696.1313.8943091100
ಹಾರಂಗಿ
(Harangi Dam)
871.387.442045250
ಲಿಂಗನಮಕ್ಕಿ (Linganamakki Dam) 554.4467.6225633949
ಹೇಮಾವತಿ
(Hemavathi Dam)
890.5821.277096070

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version