Site icon Vistara News

Weather Report: ಬೆಂಗಳೂರಿಗರೇ ಎಚ್ಚರ, ಇಂದು ಇರಲಿದೆ ಮಳೆ ಅಬ್ಬರ; ರಾಜ್ಯದ 16 ಕಡೆ ಯೆಲ್ಲೋ ಅಲರ್ಟ್‌

#image_title

ಬೆಂಗಳೂರು: ರಾಜ್ಯದ ವಿವಿಧೆಡೆ ಭಾನುವಾರ (ಮೇ 21) ಗುಡುಗು, ಮಿಂಚು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ. ಈ ಬಗ್ಗೆ ಹವಾಮಾನ ಇಲಾಖೆ (Weather report) ಮುನ್ಸೂಚನೆಯನ್ನು ನೀಡಿದೆ. ಗಂಟೆಗೆ ಗಾಳಿ ವೇಗವು 30-40 ಕಿ.ಮೀ ತಲುಪುವ ಸಾಧ್ಯತೆ ಇದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲಿ ವರುಣ ಅಬ್ಬರಿಸಲಿದ್ದಾನೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ನಗರ, ಚಿತ್ರದುರ್ಗ, ಕೋಲಾರ, ಮೈಸೂರು, ಚಾಮರಾಜನಗರ ಹಾಗೂ ಕೊಡಗು, ಚಿಕ್ಕಮಗಳೂರು, ತುಮಕೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಕಲಬುರಗಿ, ಬಾಗಲಕೋಟೆ, ಗದಗದಲ್ಲಿ ವ್ಯಾಪಕ ಮಳೆಯಾಗಲಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Elephant killed : 20 ವರ್ಷದ ಹೆಣ್ಣು ಕಾಡಾನೆಯನ್ನು ಗುಂಡಿಟ್ಟು ಕೊಂದ ದುಷ್ಕರ್ಮಿಗಳು

ಮಳೆ ನಡುವೆಯೂ ಗರಿಷ್ಠ ಉಷ್ಣಾಂಶವು ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿಯ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ/ರಾತ್ರಿಯ ಸಮಯದಲ್ಲಿ ಕೆಲವು ಕಡೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಂಭವ ಇದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಪ್ರಮುಖ ನಗರಗಳಲ್ಲಿನ ಪ್ರಸ್ತುತ ಹವಾಮಾನ ಹೀಗಿದೆ

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಕಲಬುರಗಿ: 42 ಡಿ.ಸೆ – 27 ಡಿ.ಸೆ
ಗದಗ: 38 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 36 ಡಿ.ಸೆ – 23 ಡಿ.ಸೆ
ಬೆಳಗಾವಿ: 37 ಡಿ.ಸೆ – 22 ಡಿ.ಸೆ
ಕಾರವಾರ: 37 ಡಿ.ಸೆ – 29 ಡಿ.ಸೆ
ಮಂಗಳೂರು: 34 ಡಿ.ಸೆ – 27 ಡಿ.ಸೆ
ಹೊನ್ನಾವರ: 33 ಡಿ.ಸೆ- 26 ಡಿ.ಸೆ
ಬೆಂಗಳೂರು ನಗರ: 33 ಡಿ.ಸೆ – 23 ಡಿ.ಸೆ

ರಾಜ್ಯದ ಪ್ರಮುಖ ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version