ಬೆಂಗಳೂರು: ರಾಜ್ಯದಲ್ಲಿ ಸೋಮವಾರ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather Report) ನೀಡಿದೆ. ಈಗಾಗಲೇ ಮೈಸೂರು, ಕೊಡಗು ಭಾಗದಲ್ಲಿ ಬಿಟ್ಟೂ ಬಿಡದೆ ಮಳೆಯಾಗುತ್ತಿದ್ದು, ಇನ್ನೆರಡು ದಿನವೂ ಮಳೆ ರಗಳೆ ಮುಂದುವರಿಯಲಿದೆ.
ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭಾಗಗಳಲ್ಲಿ ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು ಹಾಗೂ ಮಂಡ್ಯ, ಮೈಸೂರು, ರಾಮನಗರ ಸೇರಿದಂತೆ ತುಮಕೂರು ಜಿಲ್ಲೆಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ.
ಬೆಂಗಳೂರು ನಗರದಲ್ಲಿ ಬೆಳಗಿನ ಜಾವ ಮಂಜಿನಿಂದ ಕೂಡಿದ, ಮೋಡ ಕವಿದ ವಾತಾವರಣ ಇರಲಿದೆ. ಅಲ್ಲದೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 24 ಹಾಗೂ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ | Siddaramaiah In Kolar | ವರುಣಾದಿಂದ CM, ಬಾದಾಮಿಯಿಂದ LOP; ಕೋಲಾರದಿಂದ ಯಾಕೆ CM ಆಗಬಾರದು?: ಕನಸು ಬಿಚ್ಚಿಟ್ಟ ಸಿದ್ದರಾಮಯ್ಯ