Site icon Vistara News

Weather report : ಆ.15ರಂದು ಬೆಂಗಳೂರು, ಮೈಸೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ

happy smiling girl holding umbrella in Rain

ಬೆಂಗಳೂರು: ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ (Rain News) ಸಾಧ್ಯತೆಯಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ (Weather report) ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಜಿಲ್ಲೆಯಾದ ಕೋಲಾರ, ಬೆಂಗಳೂರು ನಗರ, ತುಮಕೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಜಿಲ್ಲೆಯಾದ ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ವಿಜಯಪುರ, ಬಾಗಲಕೋಟೆ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಚದುರಿದ ಮಳೆಯಾಗಲಿದೆ.

ಮಲೆನಾಡಿನ ಜಿಲ್ಲೆಯಾದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದರೆ, ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ.

ರಾಜ್ಯದಲ್ಲಿ ಭಾನುವಾರ ನೈರುತ್ಯ ಮುಂಗಾರು ದುರ್ಬಲವಾಗಿತ್ತು. ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿರುವ ವರದಿ ಆಗಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ 3 ಸೆಂ.ಮೀ ಮಳೆಯಾಗಿದೆ. ಉತ್ತರ ಕನ್ನಡದ ಕ್ಯಾಸಲ್ ರಾಕ್‌ನಲ್ಲಿ 2 ಸೆಂ.ಮೀ ಹಾಗೂ ಕಾರ್ಕಳ, ಸಿದ್ದಾಪುರ, ಮಂಗಳೂರು ವಿಮಾನ ನಿಲ್ದಾಣ, ಭಾಗಮಂಡಲದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version