ಬೆಂಗಳೂರು: ನೈರುತ್ಯ ಮುಂಗಾರು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ದುರ್ಬಲಗೊಂಡಿದೆ. ರಾಜ್ಯಾದ್ಯಂತ ಇಂದು ಹಲವೆಡೆ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ.
ಮಲೆನಾಡಿನ ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ತುಂತುರ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆಯಾದರೆ, ಉಳಿದ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿಯಲ್ಲಿ ಮಳೆಯ ಸಿಂಚನವಾಗಲಿದೆ. ಇನ್ನುಳಿದ ಪ್ರದೇಶಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನ ಕೆಲವು ಕಡೆಗಳಲ್ಲಿ ಮಾತ್ರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೆಲವೊಮ್ಮೆ ಸೂರ್ಯನ ದರ್ಶನವಾದರೆ, ಮತ್ತೆ ಕೆಲವೊಮ್ಮೆ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ರಾಜ್ಯದಲ್ಲಿ ಭಾನುವಾರದಂದು ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಗೇರುಸೊಪ್ಪ, ಸುಳ್ಯ, ಶೃಂಗೇರಿಯಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ. ಕ್ಯಾಸಲ್ ರಾಕ್, ಜಯಪುರದಲ್ಲಿ ತಲಾ 4 ಸೆಂ.ಮೀ ಹಾಗೂ ಸಿದ್ದಾಪುರ, ಸುಬ್ರಹ್ಮಣ್ಯ, ಧರ್ಮಸ್ಥಳ ಸೇರಿದಂತೆ ತಾಳಗುಪ್ಪ, ಲಿಂಗನಮಕ್ಕಿ, ಕಳಸ, ಮಾಗಡಿ, ಸೋಮವಾರಪೇಟೆಯಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ.
ಪಣಂಬೂರು, ಲೋಂಡಾ, ಭಾಗಮಂಡಲ, ಕಮ್ಮರಡಿ, ಬಾಳೆಹೊನ್ನೂರು, ಕೊಪ್ಪ, ಕೊಟ್ಟಿಗೆಹಾರ, ಎನ್ ಆರ್ ಪುರದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಕುಂದಾಪುರ, ಕೋಟ, ಕೊಲ್ಲೂರು, ಕಾರ್ಕಳ, ಮಂಗಳೂರು ವಿಮಾನ ನಿಲ್ದಾಣ, ಮಂಗಳೂರು, ಉಪ್ಪಿನಂಗಡಿ , ಸಿದ್ದಾಪುರ, ಮಂಕಿ, ಮಂಚಿಕೆರೆ, ಜೋಯಿಡಾ, ಕದ್ರಾ, ಶಿರಾಲಿ, ಸಿಂಧನೂರು, ಜಾಲಹಳ್ಳಿ, ಸಕಲೇಶಪುರ, ಚಂದೂರಾಯನಹಳ್ಳಿ ಕೆವಿಕೆಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಕಲಬುರಗಿ: 34 ಡಿ.ಸೆ – 23 ಡಿ.ಸೆ
ಗದಗ: 31 ಡಿ.ಸೆ – 21 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 23 ಡಿ.ಸೆ
ಬೆಳಗಾವಿ: 27 ಡಿ.ಸೆ – 21 ಡಿ.ಸೆ
ಕಾರವಾರ: 32 ಡಿ.ಸೆ – 26 ಡಿ.ಸೆ
ಮಂಗಳೂರು: 29 ಡಿ.ಸೆ – 24 ಡಿ.ಸೆ
ಹೊನ್ನಾವರ: 30 ಡಿ.ಸೆ- 24 ಡಿ.ಸೆ
ಬೆಂಗಳೂರು ನಗರ: 30 ಡಿ.ಸೆ – 20 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ