Site icon Vistara News

Weather report : ಥಂಡಾ ಹೊಡೆದ ಬೆಂಗಳೂರು; ಕರಾವಳಿಯಲ್ಲಿ ಮಳೆ ಜೋರು

rain on umbrella

ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ತಾಪಮಾನ ಕಡಿಮೆ ಆಗಿದ್ದು, ಸೋಮವಾರ ವಾತಾವರಣವು ಥಂಡಿಯಿಂದ (Cold weather) ಕೂಡಿದೆ. ಬೆಂಗಳೂರಲ್ಲಿ ತುಂತುರು ಮಳೆಯ (Rain News) ಜತೆಗೆ ಜೋರಾದ ಗಾಳಿಯು ಬೀಸುತ್ತಿದೆ. ಜು.24ರಂದು ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ. ಇತ್ತ ಕರಾವಳಿ, ಮಲೆನಾಡಿನ ಜಿಲ್ಲೆಗಳೆಲ್ಲವೂ (Weather report) ಮಳೆನಾಡಾಗಲಿದೆ.

ರಾಜ್ಯದಲ್ಲಿ ನೈರುತ್ಯ ಮುಂಗಾರು ತೀವ್ರಗೊಂಡಿದ್ದು,ಮುಂದಿನ 24 ಗಂಟೆಯಲ್ಲಿ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಭರ್ಜರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿಯಿಂದ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ ಮತ್ತು ದಕ್ಷಿಣ ಒಳನಾಡಿನ ಹಾಸನ, ಬಳ್ಳಾರಿಯಲ್ಲೂ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಬಿರುಗಾಳಿ ಮುನ್ನೆಚ್ಚರಿಕೆ

ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಇದನ್ನೂ ಓದಿ: Rain News : ಮಳೆ ಆರ್ಭಟಕ್ಕೆ ನಲುಗಿದ ಮುಕ್ಕಾಲು ಕರ್ನಾಟಕ; ಇಬ್ಬರ ಸಾವು!

ತಿಂಗಳಾಂತ್ಯದವರೆಗೆ ಭರ್ಜರಿ ಮಳೆ

ಜುಲೈ ತಿಂಗಳಾಂತ್ಯದವರೆಗೆ ಭರ್ಜರಿ ಮಳೆಯಾಗಲಿದೆ. ಪ್ರಮುಖವಾಗಿ ಮಲೆನಾಡಿನ ಜಿಲ್ಲೆಯಾದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಜಿಲ್ಲೆಯಾದ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಕಲಬುರಗಿ: 30 ಡಿ.ಸೆ – 23 ಡಿ.ಸೆ
ಗದಗ: 25 ಡಿ.ಸೆ – 21 ಡಿ.ಸೆ
ಚಿತ್ರದುರ್ಗ: 26 ಡಿ.ಸೆ – 21 ಡಿ.ಸೆ
ಬೆಳಗಾವಿ: 25 ಡಿ.ಸೆ – 21 ಡಿ.ಸೆ
ಕಾರವಾರ: 28 ಡಿ.ಸೆ – 25 ಡಿ.ಸೆ
ಮಂಗಳೂರು: 27 ಡಿ.ಸೆ – 24 ಡಿ.ಸೆ
ಹೊನ್ನಾವರ: 29 ಡಿ.ಸೆ- 24 ಡಿ.ಸೆ
ಬೆಂಗಳೂರು ನಗರ: 27 ಡಿ.ಸೆ – 21 ಡಿ.ಸೆ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version