Site icon Vistara News

Weather Report: ಬೆಂಗಳೂರು, ಕೋಲಾರ ಸೇರಿ ಏಪ್ರಿಲ್‌ 5ರ ವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ

Weather Forecast

ಬೆಂಗಳೂರು: ರಾಜ್ಯಾದ್ಯಂತ ಭಾನುವಾರ ಒಣಹವೆ ಮುಂದುವರಿದಿದ್ದು, ಏಪ್ರಿಲ್‌ 4, 5ರಂದು ಹಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ. ಈ ಬಗ್ಗೆ ಹವಾಮಾನ ಇಲಾಖೆ (Weather report) ಮುನ್ಸೂಚನೆ ನೀಡಿದ್ದು ಬೆಂಗಳೂರು ಸೇರಿ ನಾಲ್ಕು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆಯಿಂದ ಕೂಡಿರಲಿದೆ.

ಇದನ್ನೂ ಓದಿ: Krishnayya Shetty: ಫುಡ್‌ ಕಿಟ್‌ ಸಂಗ್ರಹ; ಗಾಂಧಿನಗರ ಟಿಕೆಟ್‌ ಆಕಾಂಕ್ಷಿ ಮಾಲೂರು ಕೃಷ್ಣಯ್ಯ ಶೆಟ್ಟಿ ಮೇಲೆ ಎಫ್‌ಐಆರ್‌

ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ/ರಾತ್ರಿಯ ವೇಳೆಗೆ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಭಾನುವಾರ ಕಲಬುರ್ಗಿಯಲ್ಲಿ ಗರಿಷ್ಠ ಉಷ್ಣಾಂಶ 39.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Exit mobile version