Site icon Vistara News

Weather report : ಬೆಂಗಳೂರಲ್ಲಿ ಇಂದೂ ಇದೆ ಮಳೆ; ಉತ್ತರ ಕರ್ನಾಟಕದಲ್ಲೂ ವರುಣನ ಅಬ್ಬರ!

Woman Walking on Street Under Black Umbrella rain news

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಪ್ರಭಾವ ಕಡಿಮೆಯಾಗಿದ್ದರೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಮೇಲಾಗಿದೆ. ಹೀಗಾಗಿ ಉತ್ತರ ಕರ್ನಾಟಕ (North Karnataka) ಭಾಗದಲ್ಲಿ ಮಾತ್ರ ಸುರಿಯುತ್ತಿದ್ದ ಮಳೆ ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಿಗೂ ವ್ಯಾಪಿಸಿದೆ. ಮುಂದಿನ ಮೂರು ದಿನಗಳ ಕಾಲ ಹಲವು ಕಡೆ ಭರ್ಜರಿ ಮಳೆಯಾಗಲಿದೆ (Rain News) ಎಂದು ಹವಾಮಾನ ಇಲಾಖೆ ಮುನ್ಸೂಚನಾ ವರದಿಯಲ್ಲಿ (Weather report) ಹೇಳಿದೆ.

ಮುಂದಿನ 24 ಗಂಟೆಯಲ್ಲಿ ಕರಾವಳಿ (Coastal Karnataka) ಹಾಗೂ ಉತ್ತರ ಒಳನಾಡಿನ (South Inland) ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಲ್ಲಿ (South Inland) ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಸುಳಿಗಾಳಿಯು ಎದ್ದಿದೆ. ಇದರ ಪ್ರಭಾವವೇ ಈಗ ಹೆಚ್ಚು ಮಳೆಯಾಗಲು ಕಾರಣ ಎಂದು ಹೇಳಲಾಗಿದೆ.

ದಕ್ಷಿಣ ಮತ್ತು ಉತ್ತರ ಕರ್ನಾಟಕದ ಸ್ಥಿತಿ ಹೀಗಿದೆ

ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಲ್ಲಿ ವ್ಯಾಪಕ ಮಳೆಯಾದರೆ ಕರಾವಳಿಯ ಪ್ರತ್ಯೇಕ ಕಡೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ರಾಯಚೂರು ಹಾಗೂ ಕೊಪ್ಪಳದಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಹೀಗಾಗಿ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಕರಾವಳಿ ಜಿಲ್ಲೆಗೆ ಯೆಲ್ಲೋ ಅಲರ್ಟ್!

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಸೆ. 6 ಮತ್ತು 7 ರಂದು ಸಾಧಾರಣ ಮಳೆಯಾದರೆ, 8-9ರಂದು ಭಾರಿ ಪ್ರಮಾಣದಲ್ಲಿ ಮಳೆಯಾಗಲಿದೆ. ಅಲ್ಲದೆ, ಗಾಳಿಯ ವೇಗವೂ ಹೆಚ್ಚಲಿರುವ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಮಲೆನಾಡಿನ ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಲಿದೆ. ಪ್ರತಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.

ಬೆಂಗಳೂರಿನಲ್ಲಿ ಸಂಜೆ ಮೇಲೆ ಮಳೆ

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದರೂ ಸಂಜೆ ಮೇಲೆ ರಾತ್ರಿವರೆಗೂ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗಲಿದೆ (Bangalore Rain) ಎಂದು ಹವಾಮಾನ ಇಲಾಖೆ ಹೇಳಿದೆ. ಕೆಲವೊಮ್ಮೆ ಭಾರಿ ಪ್ರಮಾಣದ ಗಾಳಿ ಸಹ ಬೀಸಲಿದೆ.

ಇದನ್ನೂ ಓದಿ: Gicchi Giligili : ಗಿಚ್ಚಿಗಿಲಿಗಿಲಿ ಖ್ಯಾತಿಯ ಚಂದ್ರಪ್ರಭಾಗೆ ಈಗ ಡಿಕ್ಕಿ ಗಲಿಬಿಲಿ!; Hit and Run ಮಾಡಿ ಪರಾರಿಯಾದ ಕಾಮಿಡಿ ಕಿಲಾಡಿ!

ಸೆಪ್ಟೆಂಬರ್‌ 6ರ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ

ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯದಲ್ಲಿ ಒಳಹರಿವು, ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗರಿಷ್ಠ ಮಟ್ಟ (ಅಡಿಗಳಲ್ಲಿ)ಇಂದಿನ ಮಟ್ಟ (ಅಡಿಗಳಲ್ಲಿ)ಒಳ ಹರಿವು (ಕ್ಯೂಸೆಕ್)ಹೊರ ಹರಿವು (ಕ್ಯೂಸೆಕ್)
ಕೆಆರ್‌ಎಸ್ ಜಲಾಶಯ (KRS Dam)38.0422.0839886199
ಆಲಮಟ್ಟಿ ಜಲಾಶಯ
(Almatti Dam)
519.6119.43537624937
ಮಲಪ್ರಭಾ ಜಲಾಶಯ (Malaprabha Dam)633.8021.7401560
ಘಟಪ್ರಭಾ ಜಲಾಶಯ
(Ghataprabha Dam)
662.9141.50562176
ತುಂಗಾಭದ್ರಾ ಜಲಾಶಯ (Tungabhadra Dam)497.7173.234036724
ಭದ್ರಾ ಜಲಾಶಯ (Bhadra Dam)657.7345.763993224
ಕಬಿನಿ ಜಲಾಶಯ (Kabini Dam)696.1313.53274604
ಹಾರಂಗಿ
(Harangi Dam)
871.387.11586550
ಲಿಂಗನಮಕ್ಕಿ (Linganamakki Dam) 554.4468.1116963819
ಹೇಮಾವತಿ
(Hemavathi Dam)
890.5822.677565750
Exit mobile version