ಬೆಂಗಳೂರು: ನೈರುತ್ಯ ಮುಂಗಾರು (Rain News) ಕರಾವಳಿಯಲ್ಲಿ ಸಾಮಾನ್ಯವಾಗಿದ್ದರೆ, ಒಳನಾಡಿನಲ್ಲಿ ದುರ್ಬಲಗೊಂಡಿದೆ. ಶನಿವಾರ, ಭಾನುವಾರ ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ (Weather report) ಸಾಧ್ಯತೆ ಇದೆ. ಮುಂದಿನ 48 ಗಂಟೆಯಲ್ಲಿ ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಬೀಸಲಿದೆ. ಹೀಗಾಗಿ ಮರದಡಿ ನಿಲ್ಲುವುದು, ಸಮುದ್ರ ತೀರಕ್ಕೆ ಹೋಗುವವರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಿಕ್ಕಾಪಟ್ಟೆ ಮಳೆಯಾದರೆ, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆಯಾಗಲಿದೆ.
ಎಲ್ಲೆಲ್ಲಿ ಮಳೆಯ ಸಿಂಚನ?
ಕರಾವಳಿ ಭಾಗವಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲೂ ಕೆಲವೊಮ್ಮೆ ಜೋರಾಗಿ ಬಂದು ಜಿಟಿ ಜಿಟಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.
ಇದನ್ನೂ ಓದಿ: Tripura Hijab Row: ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ಶಾಲೆ ಪ್ರವೇಶಿಸಲು ನಕಾರ; ಭುಗಿಲೆದ್ದ ವಿವಾದ
ದಕ್ಷಿಣ ಒಳನಾಡಿನ ಜಿಲ್ಲೆಯಾದ ದಾವಣಗೆರೆ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮಂಡ್ಯ ಮತ್ತು ಕೋಲಾರ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಲಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಕಲಬುರಗಿ: 33 ಡಿ.ಸೆ – 24 ಡಿ.ಸೆ
ಗದಗ: 30 ಡಿ.ಸೆ – 21 ಡಿ.ಸೆ
ಚಿತ್ರದುರ್ಗ: 29 ಡಿ.ಸೆ – 21 ಡಿ.ಸೆ
ಬೆಳಗಾವಿ: 27 ಡಿ.ಸೆ – 21 ಡಿ.ಸೆ
ಕಾರವಾರ: 31 ಡಿ.ಸೆ – 25 ಡಿ.ಸೆ
ಮಂಗಳೂರು: 30 ಡಿ.ಸೆ – 24 ಡಿ.ಸೆ
ಹೊನ್ನಾವರ: 30 ಡಿ.ಸೆ- 24 ಡಿ.ಸೆ
ಬೆಂಗಳೂರು ನಗರ: 30 ಡಿ.ಸೆ – 20 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ