Site icon Vistara News

Weather Report | ನಾಳೆಯೂ ಇರಲಿದೆ ಮಳೆ ಅಬ್ಬರ, ಇರಲಿ ಎಚ್ಚರ; ಮೀನುಗಾರರಿಗೆ ಕಟ್ಟೆಚ್ಚರ

rain in karnataka

ಬೆಂಗಳೂರು: ರಾಜ್ಯಾದ್ಯಂತ ಬುಧವಾರವೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather Report) ನೀಡಿದೆ.

ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 40-45 ಕಿ.ಮೀ. ಇರಲಿದ್ದು, 55 ಕಿ.ಮೀ. ವರೆಗೂ ತಲುಪುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಜಿಟಿ ಜಿಟಿ ಮಳೆಯೊಂದಿಗೆ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 25 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ | Cyclone Mandous | ಮಳೆಗೆ ಕೃಷಿಕರ ಬದುಕು ದುಸ್ತರ; ಬೆಳೆ ಹಾನಿ, ಮಾರುಕಟ್ಟೆಗಳು ಕೆಸರುಮಯ

Exit mobile version