Site icon Vistara News

Weather report : ವರಮಹಾಲಕ್ಷ್ಮಿ ಹಬ್ಬದ ಸಂಭ್ರಮಕ್ಕೆ ಮಳೆ ಅಡ್ಡಿ!

Rain alert in Varamahalakshmi Fest

ಬೆಂಗಳೂರು: ಹೆಣ್ಮಕ್ಕಳ ಹಬ್ಬ ವರಮಹಾಲಕ್ಷ್ಮಿ ಹಬ್ಬಕ್ಕೆ (varamahalakshmi festival) ಮಳೆ ಅಡ್ಡಿಯಾಗುವ (rain News) ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಚದುರಿದಂತೆ ಹಾಗೂ ಮಲೆನಾಡು, ಒಳನಾಡಿನಲ್ಲಿ ಪ್ರತ್ಯೇಕವಾಗಿ ಕಡಿಮೆ ಮಳೆಯಾಗುವ (Weather report) ಸಾಧ್ಯತೆಯಿದೆ. ರಾಜ್ಯದ ಕೆಲವು ಸ್ಥಳಗಳಲ್ಲಿ ಮಿಂಚು ಹಾಗೂ ಗುಡುಗಿನ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಕೋಲಾರ, ತುಮಕೂರು, ಬೆಂಗಳೂರು ನಗರ, ರಾಮನಗರ ಮತ್ತು ಹಾಸನ ಜಿಲ್ಲೆಗಳಲ್ಲಿ ಜಿಟಿಜಿಟಿ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಒಣಹವೆ ಮೇಲುಗೈ ಸಾಧಿಸಲಿದೆ. ಬೆಂಗಳೂರಲ್ಲೂ ಮಳೆ ಮುನ್ಸೂಚನೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇದನ್ನೂ ಓದಿ: Murder Case : ಪ್ರೇಯಸಿಯ ಕತ್ತು ಸೀಳಿದ ಪ್ರೇಮಿ; 4 ವರ್ಷದ ಪ್ರೀತಿ ಕೊಲೆಯಲ್ಲಿ ಅಂತ್ಯ

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ, ಕೊಪ್ಪಳ, ಕಲಬುರಗಿ, ವಿಜಯಪುರ ಮತ್ತು ಬೀದರ್ ಜಿಲ್ಲೆಗಳಲ್ಲಿ ಅತಿ ಕಡಿಮೆ ಮಳೆಯಾಗುವ ಸಂಭವವಿದೆ. ಉಳಿದ ಭಾಗಗಳಲ್ಲಿ ಶುಷ್ಕ ವಾತಾವರಣ ಇರಲಿದೆ.

ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಇತ್ತ ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ.

ಗೋಕರ್ಣದಲ್ಲಿ 2 ಸೆಂ.ಮೀ ಮಳೆ ದಾಖಲು

ರಾಜ್ಯದಲ್ಲಿ ಬುಧವಾರ ನೈರುತ್ಯ ಮುಂಗಾರು ದುರ್ಬಲವಾಗಿತ್ತು. ಕರಾವಳಿ ಹಾಗೂ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿರುವ ವರದಿ ಆಗಿದೆ. ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ 2 ಸೆಂ.ಮೀ ಮಳೆಯಾಗಿದ್ದರೆ, ಶಿರಾಲಿಯಲ್ಲಿ 1 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version