Site icon Vistara News

Weather Report : ಅಲ್ಪ ವಿರಾಮ ಕೊಟ್ಟ ವರುಣ; ಬೆಂಗಳೂರಲ್ಲಿ ಕವಿದ ಮೋಡ

kids in rain boots and enjoying ice cream

ಬೆಂಗಳೂರು: ಕರಾವಳಿ ಭಾಗದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಮಲೆನಾಡು ಮತ್ತು ಉತ್ತರ ಒಳನಾಡಿನಲ್ಲಿ ಚದುರಿದಂತೆ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಸಾಧಾರಣ ಮಳೆಯಾಗುವ (Weather report) ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಜಿಲ್ಲೆಯಾದ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಬೆಂಗಳೂರು ನಗರ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಅತಿ ಕಡಿಮೆ ಮಳೆಯಾಗುವ ಸಂಭವವಿದೆ. ಉಳಿದ ಜಿಲ್ಲೆಗಳಲ್ಲಿ ಕೆಲವು ಕಡೆ ಲಘು ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೀದರ್, ವಿಜಯಪುರ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ತುಂಬಾ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಲ್ಲಿ ಗುಡುಗಿನ ಮಳೆ ಸಾಧ್ಯತೆ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಗುಡುಗು ಮುನ್ನೆಚ್ಚರಿಕೆ

ಮುಂದಿನ 48 ಗಂಟೆಯಲ್ಲಿ ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ. ಒಳನಾಡಿನಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರುವ ಸಾಧ್ಯತೆ ಇದೆ.

ಇದನ್ನೂ ಓದಿ: RTO news: ಡ್ರೈವಿಂಗ್‌ ಲೈಸೆನ್ಸ್, ಆರ್‌ಸಿ ಕಾರ್ಡ್‌ ಇನ್ನು ನಿಮ್ಮ ಮನೆಗೆ

ರಾಜ್ಯದಲ್ಲಿ ಶುಕ್ರವಾರ ನೈರುತ್ಯ ಮುಂಗಾರು ದುರ್ಬಲವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿರುವವರದಿ ಆಗಿದೆ. ಚನ್ನಪಟ್ಟಣದಲ್ಲಿ 5, ಮುಂಡಗೋಡ, ಶಿರಾಲಿ, ಕದ್ರಾ, ಗೋಕರ್ಣದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಬೆಳ್ತಂಗಡಿ, ಕ್ಯಾಸಲ್ ರಾಕ್, ಯಲ್ಲಾಪುರ ಕಿರವತ್ತಿ, ಸಿದ್ದಾಪುರ, ಕೋಟ, ಕುಂದಾಪುರ, ಸಂಕೇಶ್ವರ, ಗೋಕಾಕ, ಬೈಲಹೊಂಗಲ, ಪೊನ್ನಂಪೇಟೆ, ಭಾಗಮಂಡಲ, ಹುಣಸೂರು, ಹುಂಚದಕಟ್ಟೆ ತಲಾ 1ಸೆಂ.ಮೀ ಮಳೆಯಾಗಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಕಲಬುರಗಿ: 32 ಡಿ.ಸೆ – 23 ಡಿ.ಸೆ
ಗದಗ: 31 ಡಿ.ಸೆ – 20 ಡಿ.ಸೆ
ಚಿತ್ರದುರ್ಗ: 29 ಡಿ.ಸೆ – 21 ಡಿ.ಸೆ
ಬೆಳಗಾವಿ: 27 ಡಿ.ಸೆ – 21 ಡಿ.ಸೆ
ಕಾರವಾರ: 32 ಡಿ.ಸೆ – 25 ಡಿ.ಸೆ
ಮಂಗಳೂರು: 30 ಡಿ.ಸೆ – 24 ಡಿ.ಸೆ
ಹೊನ್ನಾವರ: 31 ಡಿ.ಸೆ- 24 ಡಿ.ಸೆ
ಬೆಂಗಳೂರು ನಗರ: 29 ಡಿ.ಸೆ – 20 ಡಿ.ಸೆ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version