ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 16ರವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (Weather Report) ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಧಿಕ ಮಳೆಯಾಗಲಿದ್ದು, ಈ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣ ಜತೆ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ | Weather report : ಮಳೆಗೆ ಕರಾವಳಿ ತತ್ತರ; ಉತ್ತರ ಒಳನಾಡಿನಲ್ಲಿ ನಿರುತ್ತರ
ಸೋಮವಾರ ಸಂಜೆ ಬೆಂಗಳೂರಿನ ವಿವಿಧೆಡೆ ಭಾರಿ ಮಳೆ ಸುರಿಯಿತು. ಎಚ್ಎಎಲ್, ಮಾರತಹಳ್ಳಿ, ದೊಮ್ಮಲೂರು ಸೇರಿದಂತೆ ಹಲವೆಡೆ ಮಳೆಯಾಯಿತು. ನಗರದಲ್ಲಿ ಇನ್ನೂ ಎರಡ್ಮೂರು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.