Site icon Vistara News

Weather Report: ಸಿಡಿಲಿಗೆ ಹೊತ್ತಿ ಉರಿದ ತೆಂಗಿನ ಮರ; ಬೆಂಗಳೂರು ಆಯ್ತು ಕೂಲ್‌, ಕರಾವಳಿ ಫುಲ್‌ ರೈನ್‌

Rain News

ಬೆಂಗಳೂರು/ಕೊಪ್ಪಳ: ಬಿಪರ್‌ಜಾಯ್‌ ಚಂಡಮಾರುತ (Cyclone Biparjoy) ಎಫೆಕ್ಟ್‌ನಿಂದಾಗಿ ರಾಜಧಾನಿ ಬೆಂಗಳೂರಿನಲ್ಲಿ (Weather report) ಕಳೆದೆರಡು ದಿನಗಳಿಂದ ಸೂರ್ಯ ಮರೆಯಾಗಿದ್ದಾನೆ. ಇತ್ತ ಕರಾವಳಿ ಸೇರಿದಂತೆ ಒಳನಾಡಿನ ಜಿಲ್ಲೆಗಳಲ್ಲಿ ವರುಣ (Rain News) ಬಿಟ್ಟು ಬಿಡದೆ ಸುರಿಯುತ್ತಿದ್ದಾನೆ.

ಕೊಪ್ಪಳ ತಾಲೂಕಿನ ಮೈನಳ್ಳಿ ಗ್ರಾಮದಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಭಾನುವಾರ (ಜೂ.18) ತೆಂಗಿನ ಮರಕ್ಕೆ‌ ಸಿಡಿಲು ಬಡಿದಿದೆ. ಮಳೆಯ ಮಧ್ಯೆಯೇ ತೆಂಗಿನ ಮರಕ್ಕೆ ಸಿಡಿಲು ಬಡಿದ ಪರಿಣಾಮ ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದೆ. ಬೆಂಕಿಯಿಂದ ಸುಟ್ಟು ಕರಕಲಾದ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ಸೆರೆಯಿಡಿದಿದ್ದಾರೆ. ಅದೃಷ್ಟವಶಾತ್‌ ಮಳೆಯ ಕಾರಣಕ್ಕೆ ಸುತ್ತಮುತ್ತ ಯಾರು ಇರಲಿಲ್ಲ. ಹೀಗಾಗಿ ಯಾವುದೇ ಅನಾಹುತ ಸಂಭವಿಸಿಲ್ಲ.

ಬಿಪರ್‌ಜಾಯ್‌ ಚಂಡಮಾರುತ ಜತೆಗೆ ಮಾನ್ಸೂನ್‌ನಿಂದಾಗಿ ಕೆಲವು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಮಲೆನಾಡಿನ ಭಾಗಗಳಾದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗಿನಲ್ಲೂ ಧಾರಾಕಾರ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ

ಉತ್ತರ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ ಮತ್ತು ವಿಜಯನಗರದಲ್ಲಿ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವ ರಾತ್ರಿಯ ವೇಳೆಗೆ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಬೀಸಲಿದೆ ಬಿರುಗಾಳಿ, ಇರಲಿದೆ ಗುಡುಗು, ಮಿಂಚು

ಮುಂದಿನ 24 ಗಂಟೆಯಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ. ಕರಾವಳಿಯ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ. ಮಳೆಯ ನಡುವೆಯೂ ಗರಿಷ್ಠ ಉಷ್ಣಾಂಶವು ರಾಜ್ಯದ ಒಂದೆರಡು ಕಡೆಗಳಲ್ಲಿ 4-5 ಹಾಗೂ ಕೆಲವು ಕಡೆಗಳಲ್ಲಿ 3-4 ಡಿಗ್ರಿ ಸೆಲ್ಸಿಯಸ್ ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆ ಇದೆ.

ಮುಂದುವರಿದ ಮೀನುಗಾರರಿಗೆ ಎಚ್ಚರಿಕೆ

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಇದನ್ನೂ ಓದಿ: Mansoon 2023 : ಹವಾಮಾನ ಬದಲಾವಣೆಯಿಂದ ಮುಂಗಾರು ಪ್ರಬಲ; ಆದರೆ ಇದು ಒಳ್ಳೆಯದಲ್ಲ ಏಕೆಂದರೆ…

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಕಲಬುರಗಿ: 39 ಡಿ.ಸೆ – 24 ಡಿ.ಸೆ
ಗದಗ: 34 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 22 ಡಿ.ಸೆ
ಬೆಳಗಾವಿ: 32 ಡಿ.ಸೆ – 21 ಡಿ.ಸೆ
ಕಾರವಾರ: 34 ಡಿ.ಸೆ – 25 ಡಿ.ಸೆ
ಮಂಗಳೂರು: 31 ಡಿ.ಸೆ – 24 ಡಿ.ಸೆ
ಹೊನ್ನಾವರ: 33 ಡಿ.ಸೆ- 24 ಡಿ.ಸೆ
ಬೆಂಗಳೂರು ನಗರ: 29 ಡಿ.ಸೆ – 20 ಡಿ.ಸೆ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version