ಬೆಂಗಳೂರು: ಭಾನುವಾರದಿಂದ ಮತ್ತೆ ಜೋರು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ (Rain News) ಎಚ್ಚರಿಕೆ ಇದೆ. ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ (Weather report) ಸಾಧ್ಯತೆ ಇದೆ
ಒಳನಾಡಿನ ಅಲ್ಲಲ್ಲಿ ಮಳೆ
ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಜಿಲ್ಲೆಯಾದ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ವಿಜಯನಗರ, ಹಾವೇರಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಚದುರಿದ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Chitradurga Plane Crash: ಚಿತ್ರದುರ್ಗದಲ್ಲಿ ಡಿಆರ್‌ಡಿಒ ತಪಸ್ ವಿಮಾನ ಪತನ; ನೋಡಲು ಮುಗಿಬಿದ್ದ ಜನ
ಭಾರೀ ಮಳೆ ಮುನ್ನೆಚ್ಚರಿಕೆ
ಮುಂದಿನ 24 ಗಂಟೆಯಲ್ಲಿ ಕರಾವಳಿಯ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಒಳನಾಡಿನಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ. ಇನ್ನು ಮೀನುಗಾರರಿಗೆ ಎಚ್ಚರಿಕೆ ಇಲ್ಲ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಕಲಬುರಗಿ: 27 ಡಿ.ಸೆ – 23 ಡಿ.ಸೆ
ಗದಗ: 29 ಡಿ.ಸೆ – 21 ಡಿ.ಸೆ
ಚಿತ್ರದುರ್ಗ: 28 ಡಿ.ಸೆ – 22 ಡಿ.ಸೆ
ಬೆಳಗಾವಿ: 27 ಡಿ.ಸೆ – 21 ಡಿ.ಸೆ
ಕಾರವಾರ: 31 ಡಿ.ಸೆ – 25 ಡಿ.ಸೆ
ಮಂಗಳೂರು: 27 ಡಿ.ಸೆ – 24 ಡಿ.ಸೆ
ಹೊನ್ನಾವರ: 29 ಡಿ.ಸೆ- 24 ಡಿ.ಸೆ
ಬೆಂಗಳೂರು ನಗರ: 29 ಡಿ.ಸೆ – 20 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ