Site icon Vistara News

Weather report : ವಾರಾಂತ್ಯದಲ್ಲಿ ಬೆಂಗಳೂರು ಗಡಗಡ; ಉತ್ತರ ಕರ್ನಾಟಕದಲ್ಲಿ ಮಳೆಯ ಅಬ್ಬರ

Rain News

ಬೆಂಗಳೂರು: ಈ ವೀಕೆಂಡ್‌ನಲ್ಲಿ ಏನಾದರೂ ಔಟಿಂಗ್‌ ಪ್ಲ್ಯಾನ್ಸ್‌ ಹಾಕಿಕೊಂಡಿದ್ದರೆ ನಿಮಗೆ ಮಳೆ (Rain News) ಅಡ್ಡಿಯಾಗಲಿದೆ. ಯಾಕೆಂದರೆ ವಾರಾಂತ್ಯದಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ.

ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಧಾರಾಕಾರ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಯಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಉತ್ತರ ಒಳನಾಡಿನ ಜಿಲ್ಲೆಯಾದ ಬೆಳಗಾವಿಯಲ್ಲಿ ಗುಡುಗು ಸಹಿತ ಭರ್ಜರಿ ಮಳೆಯಾಗಲಿದ್ದು, ಉಳಿದಂತೆ ಬೀದರ್, ಕಲಬುರಗಿ, ಯಾದಗಿರಿ ಮತ್ತು ಧಾರವಾಡ ಅಬ್ಬರದ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಜಿಲ್ಲೆಯಾದ ದಾವಣಗೆರೆ, ಚಿತ್ರದುರ್ಗ, ತುಮಕೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸುತ್ತಮುತ್ತಲ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಈ ಜಿಲ್ಲೆಗಳಲ್ಲಿ ಮಳೆ ಅಬ್ಬರ

ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ, ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Emergency door: ಹಾರುತ್ತಿದ್ದ ವಿಮಾನದ ತುರ್ತು ದ್ವಾರ ತೆರೆಯಲು ಯತ್ನಿಸಿದ ವ್ಯಕ್ತಿಯ ಬಂಧನ

ಗುಡುಗು ಮುನ್ನೆಚ್ಚರಿಕೆ

ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಗುಡುಗಿನ ಸಾಧ್ಯತೆ ಇದೆ. ಬಿರುಗಾಳಿಯ ವೇಗವು ಒಳನಾಡಿನಲ್ಲಿ ಗಂಟೆಗೆ 40-50 ಕಿ.ಮೀ. ಮತ್ತು ಕರಾವಳಿಯಲ್ಲಿ 30-40 ಕಿ.ಮೀ. ಇರುವ ಸಾಧ್ಯತೆ ಇದೆ. ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಕಲಬುರಗಿ: 27 ಡಿ.ಸೆ – 23 ಡಿ.ಸೆ
ಗದಗ: 27 ಡಿ.ಸೆ – 20 ಡಿ.ಸೆ
ಚಿತ್ರದುರ್ಗ: 26 ಡಿ.ಸೆ – 21 ಡಿ.ಸೆ
ಬೆಳಗಾವಿ: 25 ಡಿ.ಸೆ – 21 ಡಿ.ಸೆ
ಕಾರವಾರ: 29 ಡಿ.ಸೆ – 25 ಡಿ.ಸೆ
ಮಂಗಳೂರು: 30 ಡಿ.ಸೆ – 24 ಡಿ.ಸೆ
ಹೊನ್ನಾವರ: 29 ಡಿ.ಸೆ- 24 ಡಿ.ಸೆ
ಬೆಂಗಳೂರು ನಗರ: 28 ಡಿ.ಸೆ – 21 ಡಿ.ಸೆ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version