ಬೆಂಗಳೂರು: ರಾಜ್ಯಾದ್ಯಂತ ನೈರುತ್ಯ ಮುಂಗಾರು ದುರ್ಬಲವಾಗಿದ್ದು, ಕರಾವಳಿಯ ಕೆಲವು ಕಡೆಗಳಲ್ಲಿ ಮಾತ್ರ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Weather Report) ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನಲ್ಲಿ ಮಳೆ ಪ್ರಮಾಣ ತಗ್ಗಿದ್ದು, ಒಣ ಹವೆ ಇರಲಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 18 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇನ್ನು ಉಡುಪಿ 2, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ, ಬೆಳಗಾವಿಯ ಗುಂಜಿ, ಕೊಡಗಿನ ಭಾಗಮಂಡಲ ತಲಾ 1 ಸೆ.ಮೀ ಮಳೆಯಾಗಿದೆ. ಉತ್ತರ ಕನ್ನಡದ ಶಿರಾಲಿಯಲ್ಲಿ ಗರಿಷ್ಠ ಉಷ್ಣಾಂಶ 34.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಬೀದರ್‌ನಲ್ಲಿ ಕಡಿಮೆ ಉಷ್ಣಾಂಶ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ | ಬೆಂಗಳೂರು ನಗರ ಪೊಲೀಸ್ ವೆಬ್‌ಸೈಟ್ ವಿಳಾಸ ಬದಲು