ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ ತಿಂಗಳಲ್ಲಿ ವಾಡಿಕೆಗಿಂತಲೂ ಮಳೆ (Rain news) ಪ್ರಮಾಣ ತೀರಾ ಕಡಿಮೆ ಇದೆ. ಕರ್ನಾಟಕದ ಮುಕ್ಕಾಲು ತಾಲೂಕುಗಳಲ್ಲಿ ಬರ ಉಂಟಾಗಿದೆ. ಮಳೆಗಾಲದಲ್ಲೂ ರಣ ಬಿಸಿಲಿಗೆ ಜನರು ತತ್ತರಿಸಿ ಹೋಗಿದ್ದಾರೆ. ಆಗಸ್ಟ್‌ನಲ್ಲಿ 59 ಮಿ.ಮೀ ಮಳೆಯಾಗಿದ್ದು, ಉಷ್ಣಾಂಶದಲ್ಲಿ ಏರಿಕೆ ಆಗಿದೆ. ಇದರ ನಡುವೆಯೂ ಸೆಪ್ಟೆಂಬರ್‌ನಲ್ಲಿ ಭರ್ಜರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ.
ಆಗಸ್ಟ್ 31ರಂದು ಕರಾವಳಿ ಹಾಗೂ ಮಲೆನಾಡು ಸೇರಿದಂತೆ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ರಾಜ್ಯಾದ್ಯಂತ ಕೆಲವು ಆಯ್ದ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಬೆಂಗಳೂರಲ್ಲಿ ಕಣ್ಣಾಮುಚ್ಚಾಲೆ
ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಕೆಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಲ್ಲಿ ಮಳೆ ಮುನ್ಸೂಚನೆ ಇದೆ.
ಕರಾವಳಿಯ ಬಹುತೇಕ ಕಡೆಗಳಲ್ಲಿ ಮಳೆಯಾಗಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದೆ. ಮಲೆನಾಡಿನ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರಲ್ಲಿ ಜಿಟಿ ಜಿಟಿ ಮಳೆಯಾಗಬಹುದು. ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಹಾಗೂ ರಾಯಚೂರು, ವಿಜಯಪುರದಲ್ಲಿ ಅಲ್ಲಲ್ಲಿ ಲಘು ಮಳೆಯಾಗಲಿದೆ.
ಇದನ್ನೂ ಓದಿ: Shivamogga Airport : ಮಲೆನಾಡ ಆಗಸದಲ್ಲಿ ವಿಮಾನ ಹಾರಾಟ ಶುರು; ಬೆಂಗಳೂರಿನಿಂದ ಶಿವಮೊಗ್ಗಕ್ಕೆ ರೈತರ ಜತೆ ಹಾರಿದ BSY!
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 32 ಡಿ.ಸೆ – 22 ಡಿ.ಸೆ
ಮಂಗಳೂರು: 30 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 22 ಡಿ.ಸೆ
ಗದಗ: 32 ಡಿ.ಸೆ – 21 ಡಿ.ಸೆ
ಹೊನ್ನಾವರ: 31 ಡಿ.ಸೆ- 24 ಡಿ.ಸೆ
ಕಲಬುರಗಿ: 35 ಡಿ.ಸೆ – 24 ಡಿ.ಸೆ
ಬೆಳಗಾವಿ: 31 ಡಿ.ಸೆ – 21 ಡಿ.ಸೆ
ಕಾರವಾರ: 33 ಡಿ.ಸೆ – 25 ಡಿ.ಸೆ
ಆಗಸ್ಟ್ 31ರ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ
ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯದಲ್ಲಿ ಒಳಹರಿವು, ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಜಲಾಶಯ | ಗರಿಷ್ಠ ಮಟ್ಟ (ಅಡಿಗಳಲ್ಲಿ) | ಇಂದಿನ ಮಟ್ಟ (ಅಡಿಗಳಲ್ಲಿ) | ಒಳ ಹರಿವು (ಕ್ಯೂಸೆಕ್) | ಹೊರ ಹರಿವು (ಕ್ಯೂಸೆಕ್) |
ಕೆಆರ್‌ಎಸ್ ಜಲಾಶಯ (KRS Dam) | 38.04 | 24.08 | 2300 | 4448 |
ಆಲಮಟ್ಟಿ ಜಲಾಶಯ (Almatti Dam) | 519.6 | 121.78 | 0 | 827 |
ಮಲಪ್ರಭಾ ಜಲಾಶಯ (Malaprabha Dam) | 633.80 | 22.70 | 0 | 1594 |
ಘಟಪ್ರಭಾ ಜಲಾಶಯ (Ghataprabha Dam) | 662.91 | 41.07 | 807 | 1085 |
ತುಂಗಾಭದ್ರಾ ಜಲಾಶಯ (Tungabhadra Dam) | 497.71 | 77.80 | 0 | 8062 |
ಭದ್ರಾ ಜಲಾಶಯ (Bhadra Dam) | 657.73 | 47.19 | 352 | 3222 |
ಕಬಿನಿ ಜಲಾಶಯ (Kabini Dam) | 696.13 | 13.66 | 2594 | 2000 |
ಹಾರಂಗಿ (Harangi Dam) | 871.38 | 7.69 | 208 | 1700 |
ಲಿಂಗನಮಕ್ಕಿ (Linganamakki Dam) | 554.44 | 70.65 | 1549 | 8049 |
ಹೇಮಾವತಿ (Hemavathi Dam) | 890.58 | 25.27 | 951 | 6025 |
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ